g00d

On 11/16/16, yeriswamy a <swamyang...@gmail.com> wrote:
> ಕನಕದಾಸರುಜನನತಿಮ್ಮಪ್ಪ ನಾಯಕ
> 1509
> ಬಾಡ, ಹಾವೇರಿ ಜಿಲ್ಲೆ, ಕರ್ನಾಟಕ ರಾಜ್ಯ, ಭಾರತಮರಣ1609ವೃತ್ತಿಹರಿದಾಸರು,
> ಕೀರ್ತನಕಾರರು, ಕವಿಪ್ರಕಾರ/ಶೈಲಿಕೀರ್ತನೆ, ಉಗಾಭೋಗ, ಮುಂಡಿಗೆ, ಕಾವ್ಯ
>
> 
>
> ಶ್ರೀ ಕನಕ ದಾಸರು
>
> ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1509-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ
> ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ
> 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ
> ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ
> ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ
> ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು
> ಯುದ್ದವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ.
>
> ಜೀವನಸಂಪಾದಿಸಿ
>
> ಜನನಸಂಪಾದಿಸಿ
>
> ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ 1487ರಲ್ಲಿ ಕುರುಬ ಗೌಡ ಜನಾಂಗಕ್ಕೆ ಸೇರಿದ
> ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು.
>
> ಸಾಧನೆಸಂಪಾದಿಸಿ
>
> ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ ತತ್ವಶಾಸ್ತ್ರವನ್ನು
> ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. ಕಾಗಿನೆಲೆಯ ಆದಿಕೇಶವನ
> ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಇವರ ಕೀರ್ತನೆಗಳ ಅಂಕಿತ
> ಕಾಗಿನೆಲೆಯ ಆದಿಕೇಶವರಾಯ. ===ಕನಕನ ಕಿಂಡಿ
>
> ಅನೇಕರ ನಂಬಿಕೆಯಂತೆ ಉಡುಪಿಯ ದೇವಸ್ಥಾನದಲ್ಲಿ ಅವರಿಗೆ ಪ್ರವೇಶ ದೊರೆಯದೆ ಹೋದಾಗ ದೇವಸ್ಥಾನದ
> ಹಿಂದೆ ನಿಂತು ಹಾಡತೊಡಗಿದರಂತೆ ("ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ"). ಆಗ ಹಿಂಭಾಗದ
> ಗೋಡೆ ಒಡೆದು ಕೃಷ್ಣನ ವಿಗ್ರಹ ಹಿಮ್ಮುಖವಾಗಿ ತಿರುಗಿತಂತೆ. (ಈಗಲೂ ಉಡುಪಿ ಕೃಷ್ಣನ
> ದೇವಸ್ಥಾನದ ಹಿಂದುಗಡೆಯ ಗೋಡೆಯಲ್ಲಿರುವ ಬಿರುಕಿನಲ್ಲಿ ಶ್ರೀಕೃಷ್ಣನ ಕಾಣಬಹುದು. ಇಲ್ಲಿ
> ಒಂದು ಕಿಟಕಿಯನ್ನು ನಿರ್ಮಿಸಿ ಅದನ್ನು 'ಕನಕನ ಕಿಂಡಿ' ಎಂದು ಕರೆಯಲಾಗಿದೆ).
>
> ಉಡುಪಿಯ ಕನಕನ ಕಿಂಡಿಯ ಬಗ್ಗೆ ಸ್ವತಃ ಕನಕದಾಸರ ಕೃತಿಗಳಲ್ಲಾಗಲೀ ಇತರೆ ಕೃತಿಗಳಲ್ಲಾಗಲೀ ಮಠದ
> ದಾಖಲೆಗಳಲ್ಲಾಗಲೀ ಚರಿತ್ರೆಯ ಪುಟಗಳಲ್ಲಾಗಲೀ ಶಾಸನಗಳಲ್ಲಾಗಲೀ ಎಲ್ಲಿಯೂ
> ಪ್ರಸ್ತಾಪವಾಗಿಲ್ಲ.ಇನ್ನು ಉಡುಪಿಯ ಆ ದೇವಾಲಯವಾದರೋ ಆಗಮಾದಿಗಳಲ್ಲಿ ಹೇಳಿರುವ
> ವಾಸ್ತುವಿನ್ಯಾಸದನ್ವಯ ಕಟ್ಟಿಯೂ ಇಲ್ಲ. ಅಲ್ಲಿ ಬಲಿಕಲ್ಲು, ಧ್ವಜಸ್ತಂಭ, ಅಂತರಾಳ,
> ಅರ್ಧಮಂಟಪ, ಪ್ರದಕ್ಷಿಣಾಪಥಗಳೂ ಇಲ್ಲ. ಇನ್ನು ಪ್ರಾಣದೇವರ ಪ್ರತಿಷ್ಠಾಪನೆಯೂ
> ವಿಭಿನ್ನವೇ.ಉಡುಪಿಯ ಶ್ರೀಕೃಷ್ಣ ವಿಗ್ರಹವನ್ನು ಮಧ್ವಾಚಾರ್ಯರು ಕ್ರಿಸ್ತ ಶಕ ೧೨೩೮ (ಶಕವರ್ಷ
> ೧೧೬೦ ಹೇವಿಳಂಬಿ ಸಂವತ್ಸರ ಮಾಘ ಶುದ್ಧ ತದಿಗೆ) ನೇ ವರ್ಷದಲ್ಲಿ ಪಶ್ಚಿಮಾಭಿಮುಖಿಯಾಗಿ
> ಪ್ರತಿಷ್ಠೆ ಮಾಡಿದ್ದರಾಗಲೀ ಪೂರ್ವಾಭಿಮುಖವಾಗಿ ಅಲ್ಲ. ತಮಗೆ ಪಶ್ಚಿಮ ಸಮುದ್ರದಿಂದ ಲಭ್ಯವಾದ
> ಆ ಮೂರ್ತಿಯನ್ನು ಪಶ್ಚಿಮಕ್ಕೇ ಮುಖ ಮಾಡಿ ಪ್ರತಿಷ್ಠಾಪಿಸಿ ಪಶ್ಚಿಮ ಸಮುದ್ರಾಧೀಶ್ವರನನ್ನಾಗಿ
> ಕರೆದರೆನ್ನುವುದೇ ಸತ್ಯಸ್ಯ ಸತ್ಯ. ಇದಕ್ಕೆ ದಾಖಲೆಯಾಗಿ ಕನಕದಾಸರ ಸಮಕಾಲೀನರಾದ ಸುರೋತ್ತಮ
> ತೀರ್ಥರ ಹೇಳಿಕೆ.ಅದರ ತಾತ್ಪರ್ಯ ಹೀಗಿದೆ: 'ದೇವತಾ ವಿಗ್ರಹಗಳನ್ನು ಪೂರ್ವಾಭಿಮುಖಿಯಾಗಿಯೇ
> ಸ್ಥಾಪಿಸಬೇಕೆಂಬ ನಿಯಮ ಏನೂ ಇಲ್ಲ. ಆದ್ದರಿಂದಲೇ ಮಧ್ವರು ಈ ಕೃಷ್ಣನ ಪ್ರತಿಮೆಯನ್ನು
> ಪಶ್ಚಿಮಾಭಿಮುಖಿಯಾಗಿ ಸ್ಥಾಪಿಸಿದ್ದಾರೆ". ಮಧ್ವರು ಶ್ರೀಕೃಷ್ಣಪಾದಾಂಬುಜಾರ್ಚಕರಾಗಿ ತಮ್ಮ
> ಮತ್ತು ತಮ್ಮ ಎಂಟು ಮಂದಿ ಶಿಷ್ಯರು ಮತ್ತು ಅವರ ಪರಂಪರೆಯವರ ನಿತ್ಯಾರ್ಚನೆಗಾಗಿ ಸ್ಥಾಪಿಸಿದ
> ಮೂರ್ತಿ ಇದು. ಈ ಮೂರ್ತಿ ಮತ್ತು ಅದರ ಅರ್ಚನೆ ಮಠದ ಖಾಸಗಿ ಕ್ರಿಯೆಗಳಾಗಿದ್ದು
> ಸಾರ್ವಜನಿಕರಿಗೆ ತೆರೆದಿಟ್ಟದ್ದಲ್ಲ.ವಾದಿರಾಜರು, ಪುರಂದರದಾಸರು, ಕನಕದಾಸರು ತ್ರಿವೇಣೀ
> ಸಂಗಮದಂತೆ. ಅವರು ಮೂರು ಮಂದಿಯೂ ಒಂದೇ ಓರಗೆಯವರು, ಒಂದೇ ಮನಸ್ಸಿನವರು, ಸಮಕಾಲೀನರು,
> ಪರಸ್ಪರ ಗೌರವಾದರಗಳನ್ನು ಹೊಂದಿದ್ದವರು. ಪ್ರತಿಯೊಬ್ಬರಿಗೂ ಇನ್ನಿಬ್ಬರ ಪ್ರೌಢಿಮೆ
> ಔನ್ನತ್ಯಗಳ ಅರಿವಿ ತ್ತು. ೧೨೦ ವರ್ಷಗಳ ಕಾಲ ಬದುಕಿದ್ದ ವಾದಿರಾಜ(೧೪೮೦-೧೬೦೦)ರಿಗೆ ತಮ್ಮ
> ಮಠದಲ್ಲಿ ಸರ್ವಾಂಗೀಣ ಸುಧಾರಣೆ ತರುವ ತವಕ ಇತ್ತಾದರೂ ಅಲ್ಲಿ ಭದ್ರವಾಗಿ ಬೇರೂರಿದ್ದ
> ಮಡಿವಂತಿಕೆಯನ್ನು ಹೋಗಲಾಡಿಸಲು ಅವರಿಂದಾಗಿರಲಿಲ್ಲ. ವಾದಿರಾಜರೊಂದಿಗೆ ತಮಗಿದ್ದ
> ಸ್ನೇಹವನ್ನು ದುರುಪಯೋಗ ಪಡಿಸಿಕೊಂಡು ಮಠದಲ್ಲಿ ಪ್ರವೇಶ ಪಡೆಯುವ ಧಾರ್ಷ್ಟ್ಯವೂ
> ಕನಕರಿಗಿರಲಿಲ್ಲ.ಹೀಗೆ ಕನಕದಾಸರ ಸಾಹಿತ್ಯಕೃತಿಗಳು, ಅವರ ಬಗೆಗಿನ ಐತಿಹ್ಯಗಳು, ಅವರ ಕುರಿತು
> ಇತರೇ ಸಾಹಿತ್ಯಗಳಲ್ಲಿ ಅಥವಾ ಶಾಸನಗಳಲ್ಲಿನ ಮಾಹಿತಿಗಳನ್ನು ಕ್ರೋಢೀಕರಿಸಿ ಕನಕದಾಸರ ಸ್ಥೂಲ
> ಜೀವನ ಚಿತ್ರಣವನ್ನು ರಚಿಸಬಹುದಲ್ಲದೆ ಪರಿಪೂರ್ಣ ಜೀವನಚರಿತ್ರೆಯ ನಿರೂಪಣೆ ಸಾಧ್ಯವಿಲ್ಲದ
> ಮಾತು. ಆದರೆ ವಿದ್ವತ್ ನೆಲೆಯಲ್ಲಿ ವಿದ್ವತ್ಸಂಪನ್ನ ಕನಕದಾಸರು ಕುಲಾತೀತರಾಗಿ ಕಾಲಾತೀತರಾಗಿ
> ಕನ್ನಡ ಸಾರಸ್ವತ ಲೋಕದಲ್ಲಿ ಅದ್ವೀತಿಯ ಸ್ಥಾನಗಳಿಸಿ, ಚಿರಸ್ಮರಣೀಯರಾಗಿದ್ದಾರೆ.
>
> ಸಾಹಿತ್ಯ ರಚನೆಸಂಪಾದಿಸಿ
>
> ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ
> ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ
> ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ
> ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ
> ಕಾವ್ಯಕೃತಿಗಳು ಇಂತಿವೆ:
>
> ಮೋಹನತರಂಗಿಣಿನಳಚರಿತ್ರೆರಾಮಧಾನ್ಯ ಚರಿತೆಹರಿಭಕ್ತಿಸಾರನೃಸಿಂಹಸ್ತವ (ಉಪಲಬ್ದವಿಲ್ಲ)
>
> ಮೋಹನತರಂಗಿಣಿಸಂಪಾದಿಸಿ
>
> ಮೋಹನತರಂಗಿಣಿಯು 42 ಸಂಧಿಗಳಿಂದ ಕೂಡಿದ್ದು ಸಾಂಗತ್ಯದಲ್ಲಿ ರಚಿತವಾಗಿರುವ 2700
> ಪದ್ಯಗಳಿವೆ. ಮೋಹನತರಂಗಿಣಿಯಲ್ಲಿ ಕನಕದಾಸರು ಕೃಷ್ಣಚರಿತ್ರೆಯನ್ನು ಹೇಳುತ್ತಾ ತಮ್ಮ ಅಧಿರಾಜ
> ಕೃಷ್ಣದೇವರಾಯನನ್ನೇ ಕೃಷ್ಣನಿಗೆ ಹೋಲಿಸುತ್ತಾರೆ. ಅವರ ದ್ವಾರಕಾಪುರಿ ಸ್ವಯಂ ವಿಜಯನಗರವೇ
> ಆಗಿರುವುದು ಇತಿಹಾಸದಿಂದ ತಿಳಿದು ಬರುತ್ತದೆ. ಮೋಹನತರಂಗಿಣಿ ಅಥವಾ ಕೃಷ್ಣಚರಿತೆ ಎಂಬ ಈ
> ಕಾವ್ಯದಲ್ಲಿ ಕನಕದಾಸರ ಸಮಕಾಲೀನ ಜೀವನ ಚಿತ್ರಗಳು ಹಾಗೂ ಪೌರಾಣಿಕ ಕಥೆಗಳು ಅಚ್ಚಗನ್ನಡದಲ್ಲಿ
> ನಿರೂಪಿತವಾಗಿವೆ. ದಣ್ಣಾಯಕನಾಗಿ ಕನಕ ಆಗಾಗ್ಗೆ ರಾಜಧಾನಿ ವಿಜಯನಗರಕ್ಕೆ
> ಹೋಗಬೇಕಾಗಿತ್ತು. ವಿಜಯನಗರ ಸಾಮ್ರಾಜ್ಯದ ರಾಜವೈಭವ, ರಾಜಸಭೆ, ರಾಜಪರಿವಾರದ ಸರಸ ಸುಮ್ಮಾನ,
> ಶೃಂಗಾರ ಜೀವನ, ಜಲಕ್ರೀಡೆ, ಓಕುಳಿಯಾಟ, ನವರಾತ್ರಿ, ವಿಜಯನಗರದ ಪುರರಚನೆ, ಉದ್ಯಾನವನ,
> ಪ್ರಜೆಗಳ ವೇಷಭೂಷಣ, ರಾಜ್ಯದ ಯುದ್ಧ ವಿಧಾನ ಇತ್ಯಾದಿಗಳು ಅವನ ಮನಸೂರೆಗೊಂಡಿದ್ದವು. ಕವಿ
> ಮನಸಿನ ಕನಕ ತನ್ನ ಅನುಭವವನ್ನೆಲ್ಲ ಬರಹ ರೂಪಕ್ಕೆ ತಂದ. ಆ ಬರಹವೇ ಇಂದು ನಮಗೆ ಲಭ್ಯವಿರುವ
> ಮೋಹನತರಂಗಿಣಿ. ಕನಕನ ಯೌವನ ಕಾಲದಲ್ಲಿ ರಚಿತವಾದ ತರಂಗಿಣಿಯ ಒಡಲಲ್ಲಿ ಯುದ್ಧದ ವರ್ಣನೆಗಳು
> ಹೆಚ್ಚೆನ್ನಬಹುದು. ಏಕೆಂದರೆ ಕನಕ ಸ್ವತಃ ಕಲಿಯಾಗಿದ್ದವನೇ ತಾನೇ? ಶಂಬರಾಸುರ ವಧೆ, ಬಾಣಾಸುರ
> ವಧೆ, ಹರಿಹರ ಯುದ್ಧ ಹೀಗೆ ವೀರರಸ, ರೌದ್ರರಸ ಕಾವ್ಯದಲ್ಲಿ ಮೇಳೈಸಿವೆ.
>
> ಸೋಮಸೂರಿಯ ವೀಥಿಯ ಇಕ್ಕೆಗಳಲಿಹೇಮ ನಿರ್ಮಿತ ಸೌಧದೋಳಿರಮಣೀಯತೆವೆತ್ತ ಕಳಸದಂಗಡಿಯಿರ್ದುಂವಾ
> ಮಹಾ ದ್ವಾರಕಾಪುರದೇಓರಂತೆ ಮರಕಾಲರು ಹಡಗಿನ ವ್ಯವಹಾರದಿ ಗಳಿಸಿದ ಹಣವಭಾರ ಸಂಖ್ಯೆಯಲಿ
> ತೂಗುವರು ಬೇಡಿದರೆ ಕುಬೇರಂಗೆ ಕಡವ ಕೊಡುವರು
>
> ನಳಚರಿತ್ರೆಸಂಪಾದಿಸಿ
>
> ನಳಚರಿತ್ರೆಯು 9 ಸಂಧಿಗಳಿಂದ ಕೂಡಿದ್ದು ಭಾಮಿನೀ ಷಟ್ಪದಿಯಲ್ಲಿ ರಚನೆಯಾಗಿರುವ 481
> ಪದ್ಯಗಳಿವೆ. ಮಹಾಭಾರತದಂತಹ ರಾಷ್ಟ್ರ ಮಹಾಕಾವ್ಯಕ್ಕೆ ಪ್ರೇರಣೆಯಾದ ಉಜ್ವಲ ಆರ್ಯೇತರ
> ಪ್ರೇಮಕಥೆ ನಳ ದಮಯಂತಿಯರ ಕಥೆ. ೧೩ನೇ ಶತಮಾನದ ನಳ ಚಂಪೂವಿಗಿಂತ ಈ ನಳಚರಿತ್ರೆ
> ಹೃದಯಸ್ಪರ್ಶಿಯಾದ ಚಿತ್ರಣಗಳಿಂದ ಚಿರಂತನ ಪ್ರೇಮದ ಕಥನದಿಂದ ಅಶ್ಲೀಲತೆಯ ಸೋಂಕಿಲ್ಲದ ಶೃಂಗಾರ
> ವರ್ಣನೆಯಿಂದ ಶೋಭಿಸುತ್ತಾ ಇಂದಿಗೂ ಅತ್ಯಂತ ಜನಪ್ರಿಯವಾಗಿದೆ. ನಳ ಮತ್ತು ದಮಯಂತಿಯರು ಹಂಸದ
> ಮೂಲಕ ಪ್ರೇಮ ಸಂದೇಶಗಳನ್ನು ಕಳಿಸುವುದು, ಅವರ ಸಂತೋಷ-ಆಮೋದ-ಪ್ರವೋದ ನಂತರದ ಕಷ್ಟಕಾಲ ಹಾಗೂ
> ಅದರ ನಂತರದ ಪುನರ್ಮಿಲನ ಹೀಗೆ ಎಲ್ಲರಿಗೂ ಈ ಕಥೆ ಚಿರಪರಿಚಿತ. ಕಷ್ಟ ಕಾಲದಲ್ಲಿ ಕಾಡಿನಲ್ಲಿ
> ಮಲಗಿರುವಾಗ ದಮಯಂತಿಯನ್ನು ಕುರಿತು ನಳ:
>
> ಲಲಿತ ಹೇಮದ ತೂಗಮಂಚದಹೊಳೆವ ಮೇಲ್ವಾಸಿನಲಿ ಮಲಗುಲಲನೆಗೀ ವಿಧಿ ಬಂದುದೇ ಹಾ! ಎನುತ
> ಬಿಸುಸುಯ್ದ (೫-೨)
>
> ಹೀಗೆ ನಳಚರಿತ್ರೆಯಲ್ಲಿ ಕರುಣರಸಕ್ಕೇ ಪ್ರಾಧಾನ್ಯತೆ ಇದೆ. ಇನ್ನು ನಳಚರಿತ್ರೆಯಲ್ಲಿನ
> ಶೃಂಗಾರರಸದ ಬಗ್ಗೆ ಹೇಳುವುದಾದರೆ ಅದು ಪ್ರೌಢಶೃಂಗಾರ ಎನ್ನಬಹುದೇನೋ? ಅಲ್ಲಿ ಮೋಹನ
> ತರಂಗಿಣಿಯಲ್ಲಿ ಅದು ಕಣ್ಣು ಕುಕ್ಕುವ ಶೃಂಗಾರ, ಆದರೂ ಅದು ಹುಳಿಮಾವಿನಂತೆ ಹಂಚಿ
> ತಿನ್ನಲಾಗದು. ಮುಕ್ತವಾಗಿ ಚರ್ಚಿಸಲಾಗದು. ನಳಚರಿತ್ರೆಯ ಶೃಂಗಾರವಾದರೆ ಮಲ್ಲಿಗೆ ಮಾವಿನ
> ಹಾಗೆ, ಮಧುರ ರುಚಿ, ಮಧುರ ಸುವಾಸನೆ.
>
> ರಾಮಧಾನ್ಯಚರಿತೆಸಂಪಾದಿಸಿ
>
> ರಾಮಧಾನ್ಯಚರಿತ್ರೆ ಭಾಮಿನೀ ಷಟ್ಪದಿಯಲ್ಲಿ ರಚಿತವಾಗಿರುವ 156 ಪದ್ಯಗಳನ್ನು ಒಳಗೊಂಡಿದೆ. ಈ
> ಕೃತಿಯಲ್ಲಿ ಧನಿಕರ ಆಹಾರಧಾನ್ಯ ಅಕ್ಕಿ ಹಾಗೂ ಕೆಳವರ್ಗದವರ ಆಹಾರಧಾನ್ಯವೆಂದು
> ಪರಿಭಾವಿಸಲಾಗಿರುವ ರಾಗಿಯ ನಡುವಿನ ಸಂಭಾಷಣೆಯ ಮೂಲಕ ರಾಗಿ ಹೇಗೆ ತನ್ನ ಔನ್ನತ್ಯವನ್ನು
> ಸಾಬೀತು ಪಡಿಸುತ್ತದೆ ಹಾಗೂ ರಾಮಧಾನ್ಯವೆಂಬ ಹೆಸರು ಪಡೆಯುತ್ತದೆ ಎಂಬುದನ್ನು
> ನಿರೂಪಿಸಲಾಗಿದೆ. ಇದರಲ್ಲಿ ಯುದ್ಧದ ಸನ್ನಿವೇಶ ಇಲ್ಲವಾದರೂ ವೀರರಸದ ಮಾತುಗಳಿಗೇನೂ
> ಕೊರತೆಯಿಲ್ಲ.
>
> ನುಡಿಗೆ ಹೇಸದ ಭಂಡ ನಿನ್ನೊಳು ಕೊಡುವರೇ ಮಾರುತ್ತರವ ಕಡುಜಡವಲಾ, ನಿನ್ನೊಡನೆ ಮಾತೇಕೆ?ಹೆಣದ
> ಬಾಯಿಗೆ ತುತ್ತು ನೀನಹೆ ನಿನ್ನ ಜನ್ಮ ನಿರರ್ಥಕವಲಾಎಲವೂ ನೀನೆಲ್ಲಿಹೆಯೋ ನಿನ್ನಯ ಬಳಗವದು..
>
> ಮುಂತಾದ ಮಾತುಗಳಲ್ಲಿ ಕನಕದಾಸರು ರಾಗಿಯ ನೆಪ ಹಿಡಿದು ತಮ್ಮದೇ ಆತ್ಮಕಥೆಯನ್ನು
> ಹೇಳುತ್ತಿರುವಂತೆ ತೋರುತ್ತದೆ. ಸಮಾಜದ ಮೇಲ್ವರ್ಗದವರ ಆಹಾರ ಧಾನ್ಯ ಭತ್ತ ಹಾಗೂ ಕೆಳವರ್ಗದವರ
> ಆಹಾರ ಧಾನ್ಯ ರಾಗಿಯ ನಡುವಿನ ಸಂಭಾಷಣೆಯನ್ನು ನಿರೂಪಿಸುವ ಕನಕದಾಸರ ಸೃಜನಶೀಲತೆ ಅತಿಶಯ.
> ಒಂದು ರೀತಿಯಲ್ಲಿ ರಾಮಧಾನ್ಯಚರಿತ್ರೆ ಇಂದಿನ ಬಂಡಾಯ ಸಾಹಿತ್ಯದ ಬೇರು, ನವ್ಯೋತ್ತರದ ಸೂರು
> ಎಂದರೆ ಬಹುಶ: ತಪ್ಪಾಗಲಾರದು.
>
> ಹರಿಭಕ್ತಿಸಾರಸಂಪಾದಿಸಿ
>
> ಹರಿಭಕ್ತಿಸಾರ ೧೧೦ ಭಕ್ತಿಪದ್ಯಗಳಿರುವ ಗ್ರಂಥ. ಭಾಮಿನೀ ಷಟ್ಪದಿಯಲ್ಲಿ ಸರಳಗನ್ನಡದಲ್ಲಿ
> ರಚಿತವಾಗಿರುವ ಈ ಗ್ರಂಥ ಕನ್ನಡದ ಭಗವದ್ಗೀತೆಯಂತಿದೆ. ಒಟ್ಟಿನಲ್ಲಿ ಕನಕದಾಸರ ಎಲ್ಲ
> ಕಾವ್ಯಗಳೂ ಕವಿ ಸಹಜವಾದ ವರ್ಣನೆಗಳಿಂದಲೂ ಉಪಮೆಗಳಿಂದಲೂ ಶ್ರೀಮಂತವಾಗಿದ್ದು ಅವರ ಕಾವ್ಯ
> ಕೌಶಲಕ್ಕೆ ಎಲ್ಲರೂ ಬೆರಗಾಗುವಂತೆ ಮಾಡಿದೆಯೆಂದರೆ ಉತ್ಪ್ರೇಕ್ಷೆಯಲ್ಲ.
>
> ಕೀರ್ತನೆಗಳುಸಂಪಾದಿಸಿ
>
> ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಕನಕದಾಸರ ಭಕ್ತಿ ಪಾರಮ್ಯವನ್ನು
> ಅವರ ಕೀರ್ತನೆಗಳಲ್ಲಿ ಕಾಣಬಹುದು. ಶ್ರೀಹರಿಯನ್ನು ತಮ್ಮ ಧಣಿಯಾಗಿ, ಇನಿಯನಾಗಿ,
> ಅಣೋರಣೀಯನಾಗಿ, ಮಹತೋಮಹೀಮನಾಗಿ ಅವರು ಕಂಡಿದ್ದಾರೆ. 'ಬಾ ರಂಗ ಎನ್ನ ಮನಕೆ ಎಂದು ಹೃದಯ
> ಸದನಕ್ಕೆ 'ಎಂದು ಕರೆದು ನೆಲೆ ನಿಲ್ಲಿಸಿಕೊಂಡ ಅನುಭಾವ ಅವರದು. ಒಳಗಣ್ಣಿನಿಂದ ಅವನ ಕಂಡು-
> 'ಕಂಡೆ ನಾ ತಂಡ ತಂಡ ಹಿಂಡು ದೈವ ಪ್ರಚಂಡ ರಿಪು ಗಂಡ ಉದ್ಧಂಡ ನರಸಿಂಹನ' ಎಂದು
> ಸಂತೋಷಪಟ್ಟಿದ್ದಾರೆ. 'ಎಲ್ಲಿ ನೋಡಿದರಲ್ಲಿ ರಾಮ' ಎಂಬ ಅನುಭೂತಿಯಲ್ಲಿ ಹರಿಯನ್ನು ಕಂಡ ಬಳಿಕ
> 'ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು' ಎಂಬ ಧನ್ಯತಾಭಾವ. 'ದಾಸದಾಸರ ಮನೆಯ ದಾಸಿಯರ
> ಮಗ ಮಂಕುದಾಸ ಮರುಳುದಾಸ ನರಜನ್ಮಹುಳು ಪರಮಪಾಪಿ' ಎಂದು ಕರೆದುಕೊಂಡಿದ್ದ ಅವರು ಜೀವ ಮಾಗಿ
> ಹಣ್ಣಾದಂತೆ ಪರಮಾತ್ಮನ ಸಾಕ್ಷಾತ್ಕಾರವಾದಂತೆ 'ಆತನೊಲಿದ ಮೇಲೆ ಇನ್ಯಾತರ ಕುಲವಯ್ಯಾ'
> ಎಂದುಕೊಳ್ಳುತ್ತಾರೆ.
>
> ಜೈನ, ವೀರಶೈವರ ಕಿತ್ತಾಟ, ಮುಸಲ್ಮಾನ ಪ್ರಾಬಲ್ಯ ಇವುಗಳಿಂದ ಸೊರಗಿ ಹೋಗಿದ್ದ ವೈದಿಕ
> ಧರ್ಮಕ್ಕೆ ಪುನಶ್ಚೇತನ ನೀಡಲು ವ್ಯಾಸರಾಯರಂಥವರು ಶ್ರಮಿಸುತ್ತಿದ್ದ ಕಾಲವದು. ವೈದಿಕ
> ಸಂಸ್ಕೃತಿಯ ಉತ್ಥಾನಕ್ಕೆಂದು ಹುಟ್ಟು ಹಾಕಲಾದ ವಿಜಯನಗರ ಸಾಮ್ರಾಜ್ಯ ಕೃಷ್ಣದೇವರಾಯನ ಅಳಿವಿನ
> ನಂತರ ಪತನದ ಹಾದಿ ಹಿಡಿದಿತ್ತು. ಇಂಥಲ್ಲಿ ಕನಕದಾಸರಂಥವರ ಕಾವ್ಯಕೃಷಿ ಹಾಗೂ ಸಾರ್ವಜನಿಕ
> ಜೀವನ ವ್ಯಾಸರಾಯರಿಗೆ ಬೆಂಬಲದ ಶ್ರೀರಕ್ಷೆಯಾಗಿದ್ದವು.
>
> 'ನಾವು ಕುರುಬರು ನಮ್ಮ ದೇವರು ಬೀರಯ್ಯ ಕಾವ ನಮ್ಮಜ್ಜ ನರಕುರಿ ಹಿಂಡುಗಳ' ಎಂದು ವಿನೀತ ಜಾತಿ
> ಭಾವನೆ ತೋರಿದ್ದ ಕನಕದಾಸರು ವ್ಯಾಸರಾಯರ ಸಂಪರ್ಕದ ನಂತರ 'ಕುಲಕುಲಕುಲವೆಂದು ಹೊಡೆದಾಡದಿರಿ'
> ಎಂದು ಜಂಕಿಸಿ ಕೇಳುವ ಹಾಗಾದರು.
>
> ಇಂಥ ನಡವಳಿಕೆಗಳಿಂದ ವೈದಿಕ ಧರ್ಮದ ಗುತ್ತಿಗೆ ತಮ್ಮದು ಎಂದು ಭಾವಿಸಿದ್ದ ಬ್ರಾಹ್ಮಣರಿಗೆ
> ಕನಕದಾಸರು ಬಿಸಿ ತುಪ್ಪವಾದರು. ಹಿಂದೂ ಸಮಾಜದಲ್ಲಿ ಈ ಬ್ರಾಹ್ಮಣಬ್ರಾಹ್ಮಣೇತರ ಕಂದರ/ಕ
> ದೊಡ್ಡದಾಗುತ್ತಾ ಹೋದಂತೆ ವ್ಯಾಸಪೀಠದ ಜೊತೆಗೆ ದಾಸಕೂಟದ ರಚನೆಯೂ ಆಗಬೇಕಾದಂತಹ ಅನಿವಾರ್ಯತೆ
> ಮೂಡಿತು. ಉಚ್ಚಕುಲದ ಮಾಧ್ವ ಬ್ರಾಹ್ಮಣರು ಶಾಸ್ತ್ರಾಧ್ಯಯನ-ತರ್ಕ-ವ್ಯಾಕರಣಾದಿ ವಿಶಿಷ್ಟ
> ಜ್ಞಾನಸಂಪನ್ನರಾಗಿ ಶಬ್ದ ಶಬ್ದಗಳನ್ನು ತಿಕ್ಕಿ ತೀಡಿ ನಿಷ್ಪತ್ತಿ ಹಿಡಿದು ಸಿದ್ಧಾಂತ
> ಪ್ರಮೇಯಗಳನ್ನು ಮಂಡಿಸುವುದೇ ಮುಂತಾದ ಪ್ರಕ್ರಿಯೆಗಳನ್ನು ವ್ಯಾಸಪೀಠದಲ್ಲಿ
> ನಡೆಯಿಸುತ್ತಿದ್ದರು. ಪುರಂದರದಾಸ, ಕನಕದಾಸ, ಜಗನ್ನಾಥದಾಸ ಮೊದಲಾದವರ ಪ್ರಾತಿನಿಧಿಕ
> ಸಂಘಟನೆಯೇ ದಾಸಕೂಟ. ಇವರೂ ಮಾಧ್ವ ಮತ ಪ್ರಮೇಯಗಳನ್ನೇ ಪಸರಿಸುತ್ತಾ ಆಚರಿಸುತ್ತಿದ್ದರಾದರೂ
> ಅವುಗಳನ್ನು ಅರಿಯಲು ಸಂಸ್ಕೃತ ಜ್ಞಾನದ ಅನಿವಾರ್ಯತೆಯನ್ನು ನಿರಾಕರಿಸಿ, ಜಾತಿ ಮತಗಳ ಕಟ್ಟು
> ಪಾಡಿಲ್ಲದ ಇವರು ಶಾಸ್ತ್ರಾಧ್ಯಯನದ ಅನಿವಾರ್ಯತೆ ಇಲ್ಲದೆ ತಮ್ಮ ಅನುಭಾವದಿಂದ ಹೊರಹೊಮ್ಮುವ
> ಭಕ್ತಿಭಾವನೆಗಳನ್ನು ತಮ್ಮ ತಾಯ್ನುಡಿಯಲ್ಲಿ ಹಾಡಿ ಲೋಕಪಾವನವನ್ನೂ ಆತ್ಮೋದ್ಧಾರವನ್ನೂ ಮಾಡ
> ಬೇಕೆನ್ನುವವರು. ಇಂಥಾ ದಾಸಕೂಟವನ್ನು ಹುಟ್ಟುಹಾಕಿ ಪೋಷಿಸಿ ಬೆಳೆಸಿದವರು ವ್ಯಾಸರಾಯರು
> ಹಾಗೂ ವಾದಿರಾಜರು. ಇಷ್ಟಿದ್ದರೂ ದಾಸಕೂಟ ವ್ಯಾಸಪೀಠಗಳ ನಡುವೆ ಆಗಿಂದಾಗ್ಗೆ ಘರ್ಷಣೆಗಳು
> ನಡೆದೇ ಇದ್ದವು. ಈ ಕುರಿತು ಕನಕ ಪುರಂದರರ ಕೀರ್ತನೆಗಳೇ ನಮಗೆ ಸೂಚ್ಯವಾಗಿ ಹೇಳುತ್ತವೆ.
>
> ಕುಲಕುಲವೆನ್ನುತಿಹರು ಕುಲವಾವುದು ಸತ್ಯ ಸುಖವುಳ್ಳ ಜನರಿಗೆ .ತೀರ್ಥವನು ಪಿಡಿದವರು
> ತಿರುನಾಮಧಾರಿಗಳೇಜನ್ಮ ಸಾರ್ಥಕವಿರದವರು ಭಾಗವತರಹುದೇಆವ ಕುಲವಾದರೇನು ಆವನಾದರೇನು
> ಆತ್ಮಭಾವವರಿತ ಮೇಲೆ .
>
> ಅವರ ಕೀರ್ತನೆಗಳಲ್ಲಿ ಅವರ ಸಂದೇಶ ನೇರ ಮತ್ತು ಖಚಿತ. ಹಾಗೆಯೇ ಅಮೂರ್ತವಾದ ಪ್ರತಿಮಾ
> ನಿರೂಪಣೆಯಲ್ಲಿ ಪರಿಣತಿ, ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತ ಸಾಹಿತ್ಯಗಳ ಪರಿಚಯವನ್ನು
> ಅವರ ಸಾಹಿತ್ಯದಲ್ಲಿ ಕಾಣಬಹುದು.
>
> ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋಸಂಪಾದಿಸಿ
>
> ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊನೀ ದೇಹದೊಳಗೊ, ನಿನ್ನೊಳು ದೇಹವೂಬಯಲು ಆಲಯದೊಳಗೊ,
> ಆಲಯವು ಬಯಲೊಳಗೊಬಯಲು ಆಲಯವೆರಡು ನಯನದೊಳಗೊನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊನಯನ
> ಬುದ್ಧಿಗಳೆರಡು ನಿನ್ನೊಳಗೊ ಹರಿಯೆಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊಸವಿಯು
> ಸಕ್ಕರೆಯೆರಡು ಜಿಹ್ವೆಯೊಳಗೊಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊಜಿಹ್ವೆ ಮನಸುಗಳೆರಡು
> ನಿನ್ನೊಳಗೊ ಹರಿಯೆಕುಸುಮದೊಳು ಗಂಧವೊ, ಗಂಧದೊಳು ಕುಸುಮವೊಕುಸುಮ ಗಂಧಗಳೆರಡು
> ಘ್ರಾಣದೊಳಗೊಅಸಮಭವ ಕಾಗಿನೆಲೆಯಾದಿಕೇಶವರಾಯಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೆ
>
> ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳಸಂಪಾದಿಸಿ
>
> ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ
>
> ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ
>
> ಒಡಲು ಹಸಿಯಲು ಅನ್ನವಿಲ್ಲದಲೇ ಇರಬಹುದು
>
> ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು
>
> ಮಡದಿ ಮಕ್ಕಳನೆಲ್ಲಾ ತೊಲಗಿಸಿ ಬಿಡಬಹುದು
>
> ಕಡಲೊಡೆಯ ನಿನ್ನ ಅರೆಘಳಿಗೆ ಬಿಡಲಾಗದು /೧/
>
> ತಾಯಿ ತಂದೆಯ ಬಿಟ್ಟು ತಪವ ಮಾಡಲೂ ಬಹುದು
>
> ದಾಯಾದಿ ಬಂಧುಗಳ ಬಿಡಲೂ ಬಹುದು
>
> ರಾಯ ತಾ ಮುನಿದರೆ ರಾಜ್ಯವನೇ ಬಿಡಬಹುದು
>
> ಕಾಯಜ ಪಿತ ನಿನ್ನ ಅರೆಘಳಿಗೆ ಬಿಡಲಾಗದು /೨/
>
> ಪ್ರಾಣವ ಪರರು ಬೇಡಿದರೆತ್ತಿ ಕೊಡಬಹುದು
>
> ಮಾನದಲಿ ಮನವ ತಗ್ಗಿಸಬಹುದು
>
> ಜಾಣ ನಾಯಕನಾದ ಆದಿಕೇಶವರಾಯ
>
> ಜಾಣ ಶ್ರೀಕೃಷ್ಣಾ ನಿನ್ನ ಅರೆಘಳಿಗೆ ಬಿಡಲಾಗದು /೩/
>
> ಕನಕದಾಸರ ಕೃತಿಗಳ ಅನುವಾದ
>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software ಸಾರ್ವಜನಿಕ
>  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send an email to kannadastf@googlegroups.com.
> Visit this group at https://groups.google.com/group/kannadastf.
> To view this discussion on the web, visit
> https://groups.google.com/d/msgid/kannadastf/CANbopR%3DWrESCGQzvBVrydPo7gnBgBN2yrMFRLRuFa5%2BsoKfiJA%40mail.gmail.com.
> For more options, visit https://groups.google.com/d/optout.
>


-- 
paramanand galagali
                 asst teacher
g h s kankanawadi
tq raibag 591220
mobil no 9986475696

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/CAPW75SKiH%3Dz0U42PuPfUngp6V8yksX%3DqHj1gWSDEAW_vfckFUA%40mail.gmail.com.
For more options, visit https://groups.google.com/d/optout.

Reply via email to