*ನೀತಿ ಕಥೆ:~*

*(For ur personality development)*

*ಒಬ್ಬ ಮರದ ಕೆಲಸದವನು ರಾತ್ರಿ ತನ್ನ ಕೆಲಸವನ್ನು ಮುಗಿಸಿ ಎಂದಿನಂತೆ ತನ್ನ ಅಂಗಡಿಯನ್ನು
ಮುಚ್ಚಿ ಮನೆಗೆ ಹೊರಡುತ್ತಾನೆ. ಆ ಹೊತ್ತಿನಲ್ಲಿ ಒಂದು ದೊಡ್ಡ ಹಾವೊಂದು ಅಂಗಡಿಗೆ
ನುಗ್ಗುತ್ತದೆ. ಅಲ್ಲಿ ತನಗೆ ಏನಾದರೂ ಆಹಾರ ಸಿಗಬಹುದೆಂದು ಅತ್ತ ಇತ್ತ ತಿರುಗುತ್ತದೆ. ಹಾವು
ಹಾಗೆ ತಿರುಗುತ್ತಿರುವಾಗ,  ಅಲ್ಲಿರುವ ಎರಡು ಬದಿಯಲ್ಲಿಯೂ ಹರಿತವಾಗಿರುವ ಒಂದು ಗರಗಸಕ್ಕೆ
ತಾಗಿ ಅದಕ್ಕೆ ಸಣ್ಣದಾದ ಗಾಯವಾಗುತ್ತದೆ. ಹಾವಿಗೆ ಸಿಟ್ಟು ಬಂದು ಆ ಗರಗಸಕ್ಕೆ ಕಚ್ಚುತ್ತದೆ.
ಆಗ ಅದರ ಬಾಯಿಗೆ  ಕೂಡ ಗಾಯವಾಗುತ್ತದೆ. ಇದರಿಂದ ಹಾವಿನ ಸಿಟ್ಟು ಮತ್ತಷ್ಟು
ಹೆಚ್ಚಾಗುತ್ತದೆ. ಕೂಡಲೇ ಅದು ಆ ಗರಗಸಕ್ಕೆ ಗಟ್ಟಿಯಾಗಿ ಸುತ್ತಿಕೊಂಡು ತನ್ನ ಹಿಡಿತವನ್ನು
ಬಲಪಡಿಸುತ್ತದೆ. ಮರುದಿನ ಬೆಳಿಗ್ಗೆ ಮರದ ಕೆಲಸದವನು ತನ್ನ ಅಂಗಡಿಯನ್ನು ತೆರೆದಾಗ ಅವನಿಗೆ
ಗರಗಸದಲ್ಲಿ ಸುತ್ತಿಕೊಂಡು ಸತ್ತಿದ್ದ ಹಾವು ಕಾಣುತ್ತದೆ.*

*ಆದರೆ ಹಾವು ಬೇರೆಯವರ ಆಕ್ರಮಣದಿಂದ ಸಾಯಲಿಲ್ಲ, ಬದಲಿಗೆ ತನ್ನದೇ ಆದ ಸಿಟ್ಟು ಮತ್ತು
ಹಠದಿಂದ ಸತ್ತಿತ್ತು.*


*ನಮಗೂ ಕೂಡ ಸಿಟ್ಟು ಬಂದಾಗ ನಾವು ಸಹಿತ ಆ ಹಾವಿನ ಹಾಗೆ,* *ಸಿಟ್ಟು ಮತ್ತು ಹಗೆಯಿಂದ
ಎದುರಾಳಿಗೆ ನಷ್ಟ ಮಾಡಲು ಪ್ರಯತ್ನ ಪಡುತ್ತೇವೆ.*

*ಆದರೆ ಸ್ವಲ್ಪ ಸಮಯದ ನಂತರ ಅದರಿಂದಾಗಿ ನಮಗೆ ಹೆಚ್ಚು ಹಾನಿಯಾದದ್ದು ಗಮನಕ್ಕೆ ಬರುತ್ತದೆ.
 ಕೆಲವೊಂದು ವಸ್ತು, ಜನರು, ಘಟನೆ ಹಾಗು ವಿಷಯಗಳನ್ನು ಕಡೆಗಣಿಸಬೇಕಾಗುತ್ತದೆ.*

*ನಾವು ಪ್ರತಿಕ್ರಿಯೆ ತೋರಿಸುವ ಅಗತ್ಯತೆ ಇದ್ದಲ್ಲಿ ಮಾತ್ರ ಪ್ರತಿಕ್ರಿಯೆ ತೋರಿಸಬೇಕೆ ವಿನಹ
ಎಲ್ಲದಕ್ಕೂ ಪ್ರತಿಕ್ರಿಯೆ ತೋರಿಸಲು ಹೋದಲ್ಲಿ ಅನವಶ್ಯಕವಾಗಿ ನಾವು ಹಾನಿಗೊಳಬೇಕಾಗುವ
ಪ್ರಸಂಗವೂ ಬರಬಹುದು.*

 ✨🌼🌸🌷

ಸಮೀರ ( ಕನ್ನಡ ಭಾಷಾ ಶಿಕ್ಷಕಿ

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to