*268ನೇ ಟಿಪ್ಪು ಸುಲ್ತಾನ್ ಜಯಂತಿಯ ಶುಭಾಶಯಗಳು*
🌹🌹🌹🌹🌹🌹🌹
ಮಾಹಿತಿ ಸಂಗ್ರಹ:- *ಹೈದರಅಲಿ.ಕೆ.ತಹಶೀಲ್ದಾರ*
         *ಗಂಗಾವತಿ*

*ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟೀಪು ಸುಲ್ತಾನ್*
  *(1735 ಮೇ4, 1799),  1782 ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿಬ್ರಿಟೀಷ್
ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ
ಪರಿಣಾಮವಾಗಿ ಟೀಪುವಿಗೆ ಶೇರ್-ಎ-ಮೈಸೂರ್(ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ
ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.*

*ಬಾಲ್ಯ*

*ಟಿಪ್ಪು ಸುಲ್ತಾನ್ ಹುಟ್ಟಿದ್ದು (2೦ ನವಂಬರ್ 1750), ಇಂದಿನ ಬೆಂಗಳೂರು ಗ್ರಾಮಾಂತರ
ಜಿಲ್ಲೆಯ ದೇವನಹಳ್ಳಿಯಲ್ಲಿ (ಬೆಂಗಳೂರು ನಗರದಿಂದ ಸುಮಾರು 33 ಕಿ.ಮೀ. ದೂರ)*

*ವ್ಯಕ್ತಿತ್ವ*

ಟಿಪ್ಪು ತನ್ನನ್ನು ನಾಗರಿಕ ಟೀಪು ಸುಲ್ತಾನ್ ಎಂದು ಕರೆದುಕೊಳ್ಳುತ್ತಿದ್ದ. ಆ ಕಾಲದ ಇತರ
ಯಾವುದೇ ಸಾಮ್ರಾಜ್ಯಶಾಹಿ ಅಥವಾ ಸ್ವಾತಂತ್ರ್ಯಪೂರ್ಣ ವಿಚಾರಗಳನ್ನು ಒಪ್ಪದ ರಾಜರ
ಅಭಿಪ್ರಾಯಗಳಿಗೆ ಇದು ಸಂಪೂರ್ಣ ವಿರುದ್ಧವಾದದ್ದು. ಅನೇಕ ಹಿಂದೂ ದೇವಾಲಯಗಳಿಗೆ ದಾನ
ದತ್ತಿಗಳನ್ನು ಕೊಟ್ಟಿದ್ದನು.

*ಸಾಧನೆ*

ಮೈಸೂರನ್ನು ರಕ್ಷಿಸಲು ಬ್ರಿಟಿಷರೊಂದಿಗೆ ಹೋರಾಡಿದನು.ಬ್ರಿಟಿಷರೊಂದಿಗೆ ಹೋರಾಡಲು
ನೆಪೋಲಿಯನ್ನನ ನೆರವನ್ನು ಪಡೆಯಲು ಪ್ರಯತ್ನಿಸಿದನು.ಯುದ್ಧದಲ್ಲಿ ರಾಕೆಟ್ ತಂತ್ರಜ್ಞಾನ
ಪರಿಚಯಿಸಿದ ಮೊದಲ ವ್ಯಕ್ತಿ.ಮೈಸೂರು ರಾಜ್ಯಕ್ಕೆ ರೇಷ್ಮೆಯನ್ನು
ಪರಿಚಯಿಸಿದನು.ಕುಣಿಗಲ್‍‍ನಲ್ಲಿ ಕುದುರೆ ಫಾರಂ ಸ್ಥಾಪಿಸಿದನು.

*ಬ್ರಿಟಿಷರೊಂದಿಗೆ ಯುದ್ಧಗಳು*

*ಒಂದನೆಯ ಮೈಸೂರು ಯುದ್ಧ*
(1766-1769)

*ಮೈಸೂರು ರಾಜ್ಯಕ್ಕೂ ಬ್ರಿಟೀಷರಿಗೂ ನಡೆದ ಯುದ್ಧ. ಈ ಯುದ್ಧ ಸರಣಿಯಲ್ಲಿ ಮೊದಲನೆಯದು.
ಮೈಸೂರಿನ ಆಡಳಿತಾಧಿಕಾರಿ ಹೈದರಾಲಿಯ ಚಟುವಟಿಕೆಗಳನ್ನು ಮದರಾಸು ಪ್ರಾಂತದ ಬ್ರಿಟೀಷರು
ಗಂಭೀರವಾಗಿ ಪರಿಗಣಿಸಿದರು. 1766ರಲ್ಲಿ ಬ್ರಿಟೀಷರು ಹೈದರಾಬಾದಿನ ನಿಜಾಮನೊಂದಿನ ಒಪ್ಪಂದ
ಮಾಡಿಕೊಂಡು, ಅದರ ಪ್ರಕಾರ, ತಮ್ಮಿಬ್ಬರ ಸಮಾನ ಶತ್ರುವಾಗಿದ್ದ ಹೈದರಾಲಿಯ ವಿರುದ್ಧ
ಬಳಸಲಿಕ್ಕಾಗಿ ಸೈನ್ಯವನ್ನು ಪೂರೈಸಿದರು.ಆದರೆ, ಈ ಒಪ್ಪಂದವಾದ ಸ್ವಲ್ಪ ಸಮಯದಲ್ಲಿಯೇ,
ಹೈದರಾಲಿ ಮತ್ತು ನಿಜಾಮ ರಹಸ್ಯ ಒಪ್ಪಂದಕ್ಕೆ ಬಂದು, ಬ್ರಿಟೀಷರ ಕರ್ನಲ್ ಸ್ಮಿತ್‍ನ ಸಣ್ಣ
ಸೇನೆಯ ಮೇಲೆ ತಮ್ಮ ಒಕ್ಕೂಟದ 5೦,೦೦೦ ಸಿಪಾಯಿಗಳು ಮತ್ತು 1೦೦ ತುಪಾಕಿಗಳ ಸೇನೆಯನ್ನು
ನುಗ್ಗಿಸಿದರು. ಸಂಖ್ಯೆಯಲ್ಲಿ ಸಣ್ಣದಿದ್ದರೂ, ಬ್ರಿಟೀಷ್ ಪಡೆಗಳು,ಶಿಸ್ತು ಮತ್ತು ಉತ್ತಮ
ತರಬೇತಿಯಿಂದಾಗಿ, ಒಕ್ಕೂಟದ ಸೇನೆಯನ್ನು ಮೊದಲು ಚೆಂಗಮ್ ಎಂಬಲ್ಲಿಯೂ ( ಸೆಪ್ಟೆಂರ್‍ 3,
1767)ಮತ್ತೆ , ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ, ತಿರುವಣ್ಣಾಮಲೈಯಲ್ಲಿಯೂ
ಹಿಮ್ಮೆಟ್ಟಿಸಿದರು.ಪಶ್ಚಿಮ ತೀರದ ತನ್ನ ನವೀನ ನೌಕಾಪಡೆ ಮತ್ತು ಕೋಟೆಗಳನ್ನು ಕಳೆದುಕೊಂಡ
ನಂತರ ಹೈದರಾಲಿಯು ಸಂಧಾನಕ್ಕೆ ಬಂದನು. ಈ ಸಂಧಾನದ ಕೋರಿಕೆ ತಿರಸ್ಕೃತವಾಗಲು, ಹೈದರಾಲಿಯು
ತನ್ನೆಲ್ಲ ಅಳಿದುಳಿದ ಸೈನ್ಯವನ್ನು ಒಗ್ಗೂಡಿಸಿ ಬ್ರಿಟೀಷರ ಮೇಲೇರಿ ಹೋದನು. ಕರ್ನಲ್ ಸ್ಮಿತ್
ಬೆಂಗಳೂರಿಗೆ ಹಾಕಿದ್ದ ಮುತ್ತಿಗೆಯನ್ನು ಹಿಂತೆಗೆದುಕೊಳ್ಳುವಂತೆ ಮಾಡಿದ್ದಲ್ಲದೆ, ತನ್ನ
ಸೇನೆಯೊಡನೆಮದರಾಸು ನಗರದ ಐದು ಮೈಲಿಯಷ್ಟು ಸಮೀಪದವರೆಗೂ ಬಂದು ತಲುಪಿದನು.ಈ ಯುದ್ಧದ
ಪರಿಣಾಮವಾಗಿ ಏಪ್ರಿಲ್ 1769ರಲ್ಲಿ, ಎರದೂ ಪಕ್ಷಗಳೂ ತಾವು ಆಕ್ರಮಿಸಿದ ಪ್ರದೇಶಗಳನ್ನು
ವಾಪಸು ಮಾಡಬೇಕೆಂದು ಮತ್ತು ಯುದ್ಧಗಳಲ್ಲಿ ಪರಸ್ಪರರ ಸಹಾಯಕ್ಕೆ ಬರುವಂತೆಯೂ ಒಪ್ಪಂದವಾಯಿತು.
ಈ ಒಪ್ಪಂದವನ್ನು "ಮದ್ರಾಸ್ ಒಪ್ಪಂದ" ಎಂದು ಕರೆಯುತ್ತಾರೆ.*

*ಎರಡನೆಯ ಮೈಸೂರು ಯುದ್ಧ*
(1780-1784)

*ಮೈಸೂರು ಸಂಸ್ಥಾನಕ್ಕೂ ಬ್ರಿಟಷರಿಗೂ ನಡೆದ ಯುದ್ಧದ ಸರಣಿಯಲ್ಲಿ ಎರಡನೆಯದು. ಅಮೆರಿಕದಲ್ಲಿ
ನಡೆಯುತ್ತಿದ್ದ ಕ್ರಾಂತಿಕಾರಿ ಹೋರಾಟದ ಫಲವಾಗಿ ಬ್ರಿಟಷರು ಮತ್ತು ಫ್ರೆಂಚರ ನಡುವೆ ನಡೆದ
ಕದನದ ಸುಳಿಯಲ್ಲಿ ಫ್ರೆಂಚರ ಸ್ನೇಹದಲ್ಲಿದ್ದ ಮೈಸೂರು ಕೂಡಾ ಸಿಕ್ಕಿತು. ಆ ಕಾಲದಲ್ಲಿ
ಮೈಸೂರನ್ನು ಆಳುತ್ತಿದ್ದವನು ( ರಾಜಾ ಎಂಬ ಗೌರವನಾಮ ಇಲ್ಲದಿದ್ದರೂ) ಹೈದರ್‍
ಆಲಿ.ಹಿಂದೊಮ್ಮೆ ಮರಾಠರ ವಿರುದ್ಧದ ಯುದ್ಧದಲ್ಲಿ ಬ್ರಿಟಿಷರ ವಿಶ್ವಾಸಘಾತುಕತನವನ್ನು ಕಂಡು
ಕಿಡಿಕಿಡಿಯಾಗಿದ್ದ ಹೈದರ್‍ ಆಲಿ ಬ್ರಿಟಿಷರೊಂದಿಗೆ ಸೇಡು ತೀರಿಸಿಕೊಳ್ಳಲು, ಫ್ರೆಂಚರ
ಸಹಾಯಕ್ಕೆ ಒಮ್ಮನಸ್ಸಿನಿಂದ ಧುಮುಕಿದ. 1778ರಲ್ಲಿ ಬ್ರಿಟನ್ ಮೇಲೆ ಯುದ್ಧ ಸಾರಿದಾಗ,
ಈಗಾಗಲೇ ಮದರಾಸಿನಲ್ಲಿ ಬಲವಾಗಿ ಬೇರು ಬಿಟ್ಟಿದ್ದ ಬ್ರಿಟೀಷರು, ಫ್ರೆಂಚರನ್ನು ಭಾರತದಿಂದ
ಓಡಿಸುವ ಪಣ ತೊಟ್ಟರು.ಮಲಬಾರ್‍ ತೀರದ ಮಾಹೆಯನ್ನು ಗೆದ್ದುಕೊಂಡ ಬ್ರಿಟೀಷರು, ಹೈದರನ
ಆಶ್ರಿತನೊಬ್ಬನ ಕೆಲ ಭೂಭಾಗಗಳನ್ನೂ ಸ್ವಾಧೀನಕ್ಕೆ ತೆಗೆದುಕೊಂಡರು. ಸೇಡು ತೀರಿಸಿಕೊಳ್ಳಲು
ಅವಕಾಶಕ್ಕಾಗಿ ಕಾಯುತ್ತಿದ್ದ ಹೈದರಾಲಿಯು, ಮರಾಠರು ತನ್ನಿಂದ ಕಿತ್ತುಕೊಂಡ ಪ್ರದೇಶಗಳನ್ನು
ಮರುಪಡೆಯುವುದರಲ್ಲಿ ಯಶಸ್ವಿಯಾದನು.ಕೃಷ್ಣಾ ನದಿಯವರೆಗೆ ಹರಡಿದ್ದ ತನ್ನ ರಾಜ್ಯದಿಂದ, ಬೆಂಕಿ
ಹೊತ್ತಿ ಉರಿಯುತ್ತಿದ್ದ ಗ್ರಾಮಗಳ ಮಧ್ಯೆ, ಕಣಿವೆ, ಘಟ್ಟಗಳನ್ನು ಬಳಸಿಕೊಂಡು, ಮದರಾಸಿನಿಂದ
ಕೇವಲ 45 ಮೈಲಿ ( 72 ಕಿ.ಮೀ.) ದೂರದ ಕಾಂಜೀವರವನ್ನು ಒಂದಷ್ಟೂ ಪ್ರತಿರೋಧ ವಿಲ್ಲದೆ
ತಲುಪಿದನು. ಮದರಾಸಿನ ಸೈಂಟ್ ಥಾಮಸ್ ಮೌಂಟಿನಲ್ಲಿ 5200 ಸೈನಿಕರೊಂದಿಗೆ ಬೀಡುಬಿಟ್ಟಿದ್ದ,
ಸರ್‍ ಹೆಕ್ಟರ್‍ ಮನ್ರೋಗೆ ಬೆಂಕಿಯ ಜ್ವಾಲೆಗಳು ಕಾಣಿಸಿದ ನಂತರವೇ ಬ್ರಿಟೀಷರ
ಪ್ರತಿಕ್ರಿಯೆಗೆ ಚಾಲನೆ ಸಿಕ್ಕಿತು.ಗುಂಟೂರಿಂದ ವಾಪಸು ಕರೆಸಿದ್ದ ಕರ್ನಲ್ ಬೈಲೀಯ ಕೈಕೆಳಗಿನ
ಸಣ್ಣ ಸೈನ್ಯವನ್ನು ಹೈದರಾಲಿಯನ್ನು ಎದುರಿಸಲು ಕಳುಹಿಸಲಾಯಿತು. ಅಪ್ರತಿಮ ಧೈರ್ಯದಿಂದ
ಕಾದಾಡಿದರೂ, ಬೈಲಿಯ 2800ಜನರ ಸೇನೆ ಸಂಪೂರ್ಣ ಸೋಲಪ್ಪಿತು. ಆದಿನ 1780ರ ಸೆಪ್ಟೆಂಬರ್‍ ೧೦,
1982ರಲ್ಲಿ ಹೈದರಾಲಿ ಬೆನ್ನುಮೊಳೆ ರೋಗದಿಂದ ಮರಣ ಹೊಂದಿದನು. 1984ರಲ್ಲಿ ಮಂಗಳೂರು
ಒಪ್ಪಂದದೊಂದಿಗೆ ಯುದ್ದ ಮುಕ್ತಾಯವಾಯಿತು.*

🌹🌹 *ಹೈದರಅಲಿ.ಕೆ.ತಹಶೀಲ್ದಾರ*
         *ಗಂಗಾವತಿ*🌹🌹

*ಮೂರನೆಯ ಮೈಸೂರು ಯುದ್ಧ*
(1789-1792)

*ಮೈಸೂರು ರಾಜ್ಯಕ್ಕೂ ಬ್ರಿಟಿಷರಿಗೂ ನಡೆದ ಯುದ್ಧ. ನಾಲ್ಕು ಬಾರಿ ನಡೆದ ಯುದ್ಧ ಸರಣಿಯಲ್ಲಿ
ಇದು ಮೂರನೆಯದು. ಫ್ರೆಂಚರೊಂದಿಗೆ ಮೈತ್ರಿಯಿದ್ದ ಮೈಸೂರಿನ ರಾಜ ಟಿಪ್ಪು ಸುಲ್ತಾನನು
ಬ್ರಿಟಿಷ್ ಅಧೀನದಲ್ಲಿದ್ದ ಟ್ರಾವಂಕೂರಿನ ಮೇಲೆ 1786ರಲ್ಲಿ ದಂಡೆತ್ತಿ ಹೋದನು. ಆಗ
ಪ್ರಾರಂಭವಾದ ಯುದ್ಧ ಮುಂದಿನ ಮೂರು ವರ್ಷಗಳವರೆಗೆ ಮುಂದುವರೆದು ಟಿಪ್ಪೂ ಸುಲ್ತಾನನ
ಪರಾಭವದೊಂದಿಗೆ ಪರ್ಯವಸಾನಗೊಂಡಿತು.ತಮ್ಮದೇ ದೇಶದ ಫ್ರೆಂಚ್ ಕ್ರಾಂತಿಯನ್ನು
ಎದುರಿಸುವುದರಲ್ಲಿ ಮಗ್ನರಾದ ಫ್ರೆಂಚರು, ಬ್ರಿಟಿಷರ ನೌಕಾದಳದಿಂದಲೂ
ಹಿಮ್ಮೆಟ್ಟಿಸಲ್ಪಟ್ಟುದರಿಂದ, ಟಿಪ್ಪು ಸುಲ್ತಾನನ ನಿರೀಕ್ಷೆಯಂತೆ ಬೆಂಬಲ ನೀಡಲಿಲ್ಲ.
ಟಿಪ್ಪು ಸುಲ್ತಾನ ರಾಕೆಟ್ಟುಗಳ ಪಡೆಯಿಂದ ಧಾಳಿ ಮಾಡಿದ್ದು ಈ ಯುದ್ಧದ ಹೆಗ್ಗಳಿಕೆ. ಈ ಧಾಳಿಯ
ಪರಿಣಾಮ ನೋಡಿ ಮಾರುಹೋದ ಬ್ರಿಟಿಷ್ ವಿಜ್ಞಾನಿ ವಿಲಿಯಮ್ ಕಾಂಗ್ರೀವನು ಮುಂದೆ ಕಾಂಗ್ರೀವ್
ರಾಕೆಟುಗಳನ್ನು ಸಂಶೋಧಿಸಿದನು.ಈ ಯುದ್ಧದ ಪರಿಣಾಮವಾಗಿ ಟಿಪ್ಪುವು ತನ್ನ ರಾಜ್ಯದ ಕೆಲ
ಭಾಗಗಳನ್ನು ಬ್ರಿಟಿಷರ ಬೆಂಬಲಿಗರೋ, ಏಜಂಟರೋ ಆಗಿದ್ದ ಮರಾಠರು, ಹೈದರಾಬಾದಿನ ನಿಜಾಮ ಮತ್ತು
ಮದ್ರಾಸ್ ಪ್ರೆಸಿಡೆನ್ಸಿಗಳವರಿಗೆ ಹಂಚಿಕೊಡಬೇಕಾಗಿ ಬಂದು, ಇದರಿಂದ ಮೈಸೂರು ರಾಜ್ಯದ
ವಿಸ್ತೀರ್ಣ ತೀವ್ರವಾಗಿ ಕುಸಿಯಿತು.ಮಲಬಾರ್‍, ಸೇಲಂ, ಬಳ್ಳಾರಿ ಮತ್ತು ಅನಂತಪುರ ಜಿಲ್ಲೆಗಳು
ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿಹೋದವು. ಈ ಯುದ್ಧದ ಕೊನೆಯಲ್ಲಿ ಶ್ರೀರಂಗಪಟ್ಟಣದ
ಒಪ್ಪಂದವಾಗಿ, ಅದರ ಪ್ರಕಾರ ಟಿಪ್ಪು ತನ್ನ ಅರ್ಧ ರಾಜ್ಯವನ್ನು ಬ್ರಿಟಿಷರಿಗೆ
ಒಪ್ಪಿಸಿದ್ದಷ್ಟೇ ಅಲ್ಲದೇ, ತನ್ನಿಬ್ಬರು ಮಕ್ಕಳನ್ನು ಬ್ರಿಟಿಷರಲ್ಲಿ ಒತ್ತೆ ಇಡಬೇಕಾಗಿ
ಬಂದಿತು.*

*ನಾಲ್ಕನೆಯ ಮೈಸೂರು ಯುದ್ಧ*
(1779 – 1799)

*ಬ್ರಿಟೀಷರಿಗೂ ಮೈಸೂರು ರಾಜ್ಯಕ್ಕೂ ನಡೆದ ಯುದ್ಧ ಸರಣಿಯಲ್ಲಿ ನಾಲ್ಕನೆಯ ಹಾಗೂ ಕಡೆಯ
ಯುದ್ಧ. ಆಗಿನ ಬ್ರಿಟೀಶ್ ಈಸ್ಟ್ ಇಂಡಿಯಾ ಕಂಪನಿಯ ಗವರ್ನರ್ ಜನರಲ್ ಪದವಿಯು ಲಾರ್ಡ್
ಕಾರ್ನವಾಲೀಸನಿಂದ ಜನರಲ್ ಹ್ಯಾರಿಸನಿಗೆ ಹಸ್ತಾಂತರ ಗೊಂಡಿತ್ತು. 1797ರಲ್ಲಿ ನೆಪೋಲಿಯನ್,
ಭಾರತವನ್ನು ಹೆದರಿಸುವ ಉದ್ದೇಶದಿಂದ, ಈಜಿಪ್ಟಿನಲ್ಲಿ ಬಂದಿಳಿದ. ಈ ಉದ್ದೇಶ ಸಾಧನೆಗೆ,
ಫ್ರಾನ್ಸಿನ ಮಿತ್ರನಾಗಿದ್ದ, ಮೈಸೂರಿನ ದೊರೆ ಟಿಪ್ಪು ಸುಲ್ತಾನ ಮುಖ್ಯವಾಗಿದ್ದ.ಹೊರಾಷಿಯೋ
ನೆಲ್ಸನ್ನನು ನೆಪೋಲಿಯನ್ನನನ್ನು ನೈಲ್ ಯುದ್ಧದಲ್ಲಿ ಸೋಲಿಸಿ, ಈ ಆಸೆಯನ್ನು ಭಂಗಗೊಳಿಸಿದರೂ,
ಮೂರು ಸೇನೆಗಳು ( ಒಂದು ಬಾಂಬೆ, ಎರಡು ಬ್ರಿಟೀಶ್ ) ಅಷ್ಟಕ್ಕೆ ನಿಲ್ಲದೆ ಮುನ್ನುಗ್ಗಿ
೧೭೯೯ರಲ್ಲಿ ಮೈಸೂರಿನ ರಾಜಧಾನಿ ಶ್ರೀರಂಗಪಟ್ಟಣಕ್ಕೆ ಮುತ್ತಿಗೆ ಹಾಕಿದವು. ಮೇ ನಾಲ್ಕರಂದು ಈ
ಸೇನೆಗಳು ಕೋಟೆಯ ಭಾಗವೊಂದನ್ನು ಭಗ್ನಮಾಡಿ, ಒಳನುಗ್ಗತೊಡಗಿದರು. ಅಲ್ಲಿಗೆ ಧಾವಿಸಿದ ಟಿಪ್ಪು
ಸುಲ್ತಾನ ಗುಂಡೇಟಿನಿಂದ ಅಸುನೀಗಿದ.ಈ ಕಾರ್ಯದಲ್ಲಿ ಟಿಪ್ಪುವಿನ ಸೇನಾಧಿಕಾರಿ ಮೀರ್ ಸಾದಕ್
ಎಂಬಾತ, ಬ್ರಿಟೀಷರೊಂದಿಗೆ ಶಾಮೀಲಾಗಿ, ಟಿಪ್ಪುವಿಗೆ ಎರಡು ಬಗೆದನು. ಯುದ್ಧದ ತೀವ್ರವಾಗಿದ್ದ
ಸಮಯದಲ್ಲಿ ಮೀರ್ ಸಾದಕನು, ತನ್ನ ಸೇನಾ ತುಕಡಿಯನ್ನು ಸಂಬಳ ಪಡೆದುಕೊಳ್ಳಲು ಕಳುಹಿಸಿ, ಆ
ಮೂಲಕ, ಬ್ರಿಟೀಷರು ಗೋಡೆ ಒಡೆದು ಒಳಬರಲು ಅನುವುಮಾಡಿಕೊಟ್ಟನು. ಅಷ್ಟೇ ಅಲ್ಲ,
ನೆಲಮಾಳಿಗೆಯಲ್ಲಿ ಶೇಖರಿಸಿದ್ದ ಮದ್ದುಗುಂಡುಗಳ ಮೇಲೆ ನೀರು ಹೊಯ್ದು, ಅವು
ನಿರುಪಯುಕ್ತವಾಗುವಂತೆ ಮಾಡಿದನು.ಈ ಯುದ್ಧದಲ್ಲಿ ಟಿಪ್ಪು ಸುಲ್ತಾನನು ರಾಕೆಟ್ಟುಗಳ ಉಪಯೋಗ
ಮಾಡಿದ್ದು ಗಮನಾರ್ಹವಾಗಿತ್ತು. ಮೂರನೆಯ ಮತ್ತು ನಾಲ್ಕನೆಯ ಮೈಸೂರು ಯುದ್ಧಗಳಲ್ಲಿ ಈ
ರಾಕೆಟ್ಟುಗಳ ಪರಿಣಾಮದಿಂದ ಪ್ರಭಾವಿತನಾದ ವಿಲಿಯಮ್ ಕಾಂಗ್ರೀವನು ಮುಂದೆ ಕಾಂಗ್ರೀವ್
ರಾಕೆಟ್ಟುಗಳನ್ನು ಸಂಶೋಧಿಸಿದನು. ಈ ಯುದ್ಧದ ಪರಿಣಾಮವಾಗಿ ಮೈಸೂರು ಬ್ರಿಟೀಷರ ವಶಕ್ಕೆ
ಬಂದಿತು.ಒಡೆಯರ್ ವಂಶಕ್ಕೆ ಮರಳಿ ಅಧಿಕಾರ ದೊರೆತು, ಅವರಿಗೆ ಸಲಹಾಕಾರರಾಗಿ ಬ್ರಿಟೀಷ್
ಕಮೀಷನರು ನೇಮಿಸಲ್ಪಟ್ಟರು. ಟಿಪ್ಪುವಿನ ಎಳೆಯ ಮಗ ಮತ್ತು ಉತ್ತರಾಧಿಕಾರಿ ಫತೇ ಆಲಿಯನ್ನು
ಗಡೀಪಾರು ಮಾಡಲಾಯಿತು. ಮೈಸೂರು ರಾಜ್ಯವು ಬ್ರಿಟೀಷ್ ಅಧೀನ ಸಂಸ್ಥಾನವಾಯಿತು. ಕೊಯಮತ್ತೂರು,
ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಬ್ರಿಟೀಷ್ ಭಾರತದ ಭಾಗವಾದವು.*

🌹🌹🌹 *ಹೈದರಅಲಿ.ಕೆ.ತಹಶೀಲ್ದಾರ*
   *ಗಂಗಾವತಿ*🌹🌹🌹

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to