ಸರ್ ತಮ್ಮ ಹೆಸರು ಅರ್ಥವಾಗುತ್ತಿಲ್ಲ
ಪದ್ಯದ  ಸಾರಾಂಶಕ್ಕೆ   ತುಂಬಾ ಧನ್ಯವಾದಗಳು
ಸಮೀರ ( ಕನ್ನಡ ಭಾಷಾ ಶಿಕ್ಷಕಿ

On Jan 15, 2018 9:14 PM, "hayyali guled" <hayyalappa1...@gmail.com> wrote:

> *ರಾಮಧಾನ್ಯ ಚರಿತೆ ಪದ್ಯಭಾಗದ ಪದಶಃ ಅರ್ಥ ಮತ್ತು ಭಾವಾರ್ಥ*
>
> *ಕೆಲರು ಗೋದಿಯ ಸಾಮೆಯನು ಕೆಲ*
>
> *ಕೆಲರು ನವಣೆಯ ಕಂಬು ಜೋಳವ*
>
> *ಕೆಲವು ಹಾರಕವೆಂದು ಕೆಲವರು ನೆಲ್ಲನತಿಶಯವ*
>
> *ಕೆಲರು ನರೆದಲೆಗನನು ಪತಿಕರಿ*
>
> *ಸಲದ ನೋಡಿದ ನೃಪತಿಯದರೊಳು*
>
> *ಹಲವು ಮತವೇಕೊಂದನೇ ಪೇಳೆನಲು ಗೌತಮನು.    **|| **೧ **||*
>
> *ಪದವಿಭಾಗ ಮತ್ತು ಪದಶಃ ಅರ್ಥ:- *ಕೆಲರು(ಕೆಲವರು) ಗೋದಿಯ(ಗೋಧಿಯನ್ನು) ಸಾಮೆಯನು ಕೆಲ
> ಕೆಲರು ನವಣೆಯ ಕಂಬು ಜೋಳವ ಕೆಲವು ಹಾರಕ (ಶ್ರೇಷ್ಠ) + ಎಂದು ಕೆಲವರು ನೆಲ್ಲನು + ಅತಿಶಯವ
> (ಶ್ರೇಷ್ಠ/ಉತ್ಕೃಷ್ಠ) ಕೆಲವರು ನರೆದಲಗನನು(ರಾಗಿಯನ್ನು) ಪತಿಕರಿಸಲು
> (ಅಂಗೀಕರಿಸಲು/ಒಪ್ಪಲು) + ಅದ ನೋಡಿದ ನೃಪತಿಯು(ರಾಜನು) + ಅದರೊಳು (ಅದರಲ್ಲಿ) ಹಲವು ಮತವು
> + ಏಕೆ + ಒಂದನೇ ಪೇಳು(ಹೇಳು) + ಎನಲು(ಎನ್ನಲು) ಗೌತಮನು.
>
> *ಭಾವಾರ್ಥ:-* ಕೆಲವರು ಗೋದಿಯನ್ನು, ಕೆಲವರು ಸಾಮೆಯನ್ನು, ಕೆಲವರು ನವಣೆಯನ್ನು, ಕೆಲವರು
> ಕಂಬು,ಜೋಳವನ್ನು ಉತ್ತಮವೆಂದು ಹೇಳಿದರೆ ಕೆಲವರು ಭತ್ತವನ್ನು ಶ್ರೇಷ್ಠವೆಂದರೆ ಕೆಲವರು
> ರಾಗಿಯನ್ನು ಶ್ರೇಷ್ಠವೆಂದು ಹೇಳುವುದನ್ನು ನೋಡಿದ ಮಹಾರಾಜನು(ರಾಮನು) “ಅವುಗಳ ಶ್ರೇಷ್ಠತೆಯ
> ಬಗ್ಗೆ ಹಲವು ಅಭಿಪ್ರಾಯಗಳೇಕೆ?ಯಾವುದಾದರು ಒಂದನ್ನು ಹೇಳಿ” ಎಂದಾಗ ಗೌತಮನು ಹೀಗೆ
> ಹೇಳುತ್ತಾನೆ.....
>
> *ದಾಶರಥಿ ಚಿತ್ತೈಸು ನಮ್ಮಯ*
>
> *ದೇಶಕತಿಶಯ ನರೆದಲೆಗನೇ*
>
> *ವಾಸಿಯುಳ್ಳವನೀತ ಮಿಕ್ಕಿನ ಧಾನ್ಯವೇಕೆನಲು*
>
> *ಲೇಸನಾಡಿದೆ ಮುನಿಪ ಗೌತಮ*
>
> *ದೋಷರಹಿತನು ಪಕ್ಷಪಾತವ*
>
> *ನೀಸು ಪರಿಯಲಿ ಮಾಡುವರೆ ಶಿವಯೆಂದನಾವ್ರಿಹಿಗ     **|| **೨ **||*
>
> *ಪದವಿಭಾಗ ಮತ್ತು ಪದಶಃ ಅರ್ಥ:-  *ದಾಶರಥಿ ಚಿತ್ತೈಸು(ಮನಸ್ಸುಮಾಡು) ನಮ್ಮಯ ದೇಶಕೆ +
> ಅತಿಶಯ(ಶ್ರೇಷ್ಠ) ನರೆದಲಗನೇ(ರಾಗಿಯೇ) ವಾಸಿ (ಶಕ್ತಿ/ಸತ್ವ) + ಉಳ್ಳವನು + ಈತ ಮಿಕ್ಕಿನ
> (ಉಳಿದ) ಧಾನ್ಯವು + ಏಕೆ + ಎನಲು ಲೇಸನು(ಒಳ್ಳೆಯದನ್ನು) + ಆಡಿದೆ ಮುನಿಪ ಗೌತಮ ದೋಷರಹಿತನು
> ಪಕ್ಷಪಾತವನು + ಈಸು(ಇಷ್ಟ) ಪರಿಯಲಿ(ರೀತಿಯಲ್ಲಿ) ಮಾಡುವರೆ ಶಿವ + ಎಂದನು ಆ
> ವ್ರೀಹಿಗ(ಭತ್ತ).
>
> *ಭಾವಾರ್ಥ:- *“ದಶರಥ ಪುತ್ರನಾದ ಶ್ರೀರಾಮನೇ ಕೇಳು. ನಮ್ಮ ದೇಶದಲ್ಲಿ ಶ್ರೇಷ್ಠವೆಂದರೆ
> ರಾಗಿಯೇ ಸರಿ. ಇವನು ಶಕ್ತಿ(ಸತ್ವ) ಹೊಂದಿರುವವನು. ಉಳಿದ ಧಾನ್ಯಗಳೇಕೆ?” ಎಂಬ ಮಾತನ್ನು
> ಕೇಳಿದ ವ್ರಿಹಿಗ(ಭತ್ತ) “ಇದೇನು ಗೌತಮ ಮುನಿಯೇ ನೀನು ಒಳ್ಳೆಯ ಮಾತನಾಡಿದೆಯಲ್ಲ !
> ದೋಷರಹಿತನಾದ ನೀನು ಈ ರೀತಿಯಲ್ಲಿ ಪಕ್ಷಪಾತ ಮಾಡಬಹುದೇ? ಶಿವ ಶಿವಾ! ಎಂದನು.”
>
> *ಎಲ್ಲ ಧರ್ಮದ ಸಾರವನು ನೀವ್*
>
> *ಬಲ್ಲಿರರಿಯಿರೆ ಎಲ್ಲರನು ನೀ*
>
> *ವಿಲ್ಲಿ ನುಡಿವ ಉಪೇಕ್ಷೆಯುಂಟೇ ಸಾಕದಂತಿರಲಿ*
>
> *ನೆಲ್ಲು ನಾನಿರೆ ಗೋದಿ ಮೊದಲಾ*
>
> *ದೆಲ್ಲ ಧಾನ್ಯಗಳಿರಲು ಇದರಲಿ*
>
> *ಬಲ್ಲಿದನು ನರೆದಲೆಗನೆಂಬುದಿದಾವ ಮತವೆಂದ          **|| **೩ **||*
>
> *ಪದವಿಭಾಗ ಮತ್ತು ಪದಶಃ ಅರ್ಥ:- *ಎಲ್ಲ ಧರ್ಮದ ಸಾರವನು ನೀವ್ ಬಲ್ಲಿರಿ
> ಅರಿಯಿರೆ(ತಿಳಿದಿರುವಿರೆ) ಎಲ್ಲರನು ನೀವು + ಇಲ್ಲಿ ನುಡಿವ ಉಪೇಕ್ಷೆ(ಕಡೆಗಣನೆ) + ಉಂಟೇ
> ಸಾಕು + ಅದಂತಿರಲಿ (ಅದು ಹಾಗಿರಲಿ) ನೆಲ್ಲು (ಭತ್ತ) ನಾನು + ಇರೆ ಗೋದಿ ಮೊದಲಾದ + ಎಲ್ಲ
> ಧಾನ್ಯಗಳು + ಇರಲು ಇದರಲಿ ಬಲ್ಲಿದನು (ಶ್ರೀಮಂತ) ನರೆದಲಗನು (ರಾಗಿಯು) + ಎಂಬುದು + ಇದು +
> ಆವ ಮತ (ನ್ಯಾಯ) + ಎಂದ.
>
> *ಭಾವಾರ್ಥ:- *ಮುಂದುವರೆದು ಮಾತನಾಡುತ್ತಾ ಭತ್ತ ಗೌತಮ ಮುನಿಗೆ ಹೀಗೆ ಹೇಳುತ್ತದೆ:
> “ಎಲ್ಲಾ ಧರ್ಮಗಳ ಸಾರ ನಿಮಗೆ ತಿಳಿದಿದೆ. ನಿಮಗೆ ಎಲ್ಲರ ಬಗ್ಗೆ ತಿಳಿದಿಲ್ಲವೇ?ಹೀಗಿದ್ದೂ
> ಇಲ್ಲಿ ಈ ರೀತಿ ಕಡೆಗಣಿಸಿ ಮಾತನಾಡುವುದು ಸರಿಯೇ? ಸಾಕು. ಅದು ಹಾಗಿರಲಿ, ಭತ್ತ
> ನಾನಿರುವಾಗ;ಗೋದಿ ಮೊದಲಾದ ಧಾನ್ಯಗಳೆಲ್ಲಾ ಇಲ್ಲಿರುವಾಗ ಇವರಲ್ಲಿ ರಾಗಿಯೇ
> ಶ್ರೀಮಂತ(ಶ್ರೇಷ್ಠ/ಬಲ್ಲಿದ) ಎಂದು ಹೇಳುವುದು ಇದು ಯಾವ ನ್ಯಾಯ? ಎಂದಿತು.
>
> *ಏನೆಲವೊ ನರೆದಲಗ ನೀನು ಸ*
>
> *ಮಾನನೇ ಎನಗಿಲ್ಲಿ ನಮ್ಮನು*
>
> *ದಾನವಾಂತಕ ಬಲ್ಲನಿಬ್ಬರ ಹೆಚ್ಚು ಕುಂದುಗಳ*
>
> *ಜಾನಕೀ ಪತಿ ಸನಿಹದಲಿ ಕುಲ*
>
> *ಹೀನ ನೀನು ಪ್ರತಿಷ್ಠ ಸುಡು ಮತಿ*
>
> *ಹೀನ ನೀನೆಂದೆನುತ ಖತಿಯಲಿ ಬೈದು ಭಂಗಿಸಿದ       **|| **೪ **||*
>
> *ಪದವಿಭಾಗ ಮತ್ತು ಪದಶಃ ಅರ್ಥ:- *ಏನು + ಎಲವೊ ನರೆದಲಗ(ರಾಗಿ) ನೀನು ಸಮಾನನೇ ಎನಗೆ +
> ಇಲ್ಲಿ ನಮ್ಮನು ದಾನವಾಂತಕ (ವಿಷ್ಣು) ಬಲ್ಲನು + ಇಬ್ಬರ ಹೆಚ್ಚು
> ಕುಂದುಗಳ(ಕಡಿಮೆ/ಕೊರತೆಗಳು) ಜಾನಕೀ ಪತಿ ಸನಿಹದಲಿ(ಹತ್ತಿರದಲ್ಲಿ) ಕುಲಹೀನ ನೀನು ಪ್ರತಿಷ್ಠ
> (ಅಹಂಕಾರಿ) ಸುಡು ಮತಿಹೀನ (ಬುದ್ಧಿಗೇಡಿ) ನೀನು + ಎಂದು + ಎನುತ ಖತಿಯಲಿ (ಕೋಪದಿಂದ) ಬೈದು
> ಭಂಗಿಸಿದ (ಜರೆದನು).
>
> *ಭಾವಾರ್ಥ:-* ನಂತರ ರಾಗಿಯನ್ನು ಕುರಿತು ವ್ರೀಹಿಗನು(ಭತ್ತ) ಈ ರೀತಿ ಹೇಳುತ್ತಾನೆ:
> “ಎಲವೋ ನರೆದಲಗ, ಇಲ್ಲಿ ನೀನು ನನಗೆ ಸಮಾನನೇ?ದಾನವಾಂತಕನಾದ ಭಗವಂತನೇ ನಮ್ಮಿಬ್ಬರಲ್ಲಿ ಯಾರು
> ಹೆಚ್ಚು, ಯಾರು ಕಡಿಮೆ ಎಂಬುದನ್ನು. ಜಾನಕಿಯ ಪತಿಯಾದ ಶ್ರೀ ರಾಮನ ಸನಿಹದಲ್ಲಿ ನೀನು
> ಕುಲಹೀನ,ಅಹಂಕಾರಿ, ಬುದ್ಧಿಗೇಡಿಯಾದ ಹೀನ.” ಎಂದು ಕೋಪದಿಂದ ಬೈದು ಜರೆದನು.
>
> *ಕ್ಷಿತಿಯಮರರುಪನಯನದಲಿ ಸು*
>
> *ವ್ರತ ಸುಭೋಜನ ಪರಮ ಮಂತ್ರಾ*
>
> *ಕ್ಷತೆಗಳಲಿ ಶುಭಶೋಭನದಲಾರತಿಗೆ ಹಿರಿಯರಲಿ*
>
> *ಕ್ರತುಗಳೆಡೆಯೊಳಗರಮನೆಯಲಿ*
>
> *ಪ್ರತಿದಿನವು ರಂಜಿಸುತ ದೇವರಿ*
>
> *ಗತಿಶಯದ ನೈವೇದ್ಯ ತಾನಿಹೆನೆಂದನಾ ವ್ರಿಹಿಗ          **||**೫ **||*
>
> *ಪದವಿಭಾಗ ಮತ್ತು ಪದಶಃ ಅರ್ಥ:- *ಕ್ಷಿತಿಯ (ಭೂಮಿಯ) + ಅಮರರ (ದೇವತೆಗಳ) [ಕ್ಷಿತಿಯಮರರ=
> ಬ್ರಾಹ್ಮಣರ] + ಉಪನಯನದಲಿ ಸುವ್ರತ (ಒಳ್ಳೆಯ ವ್ರತ) ಸುಭೋಜನ (ಒಳ್ಳೆಯ ಊಟ) ಪರಮ (ಶ್ರೇಷ್ಠ)
> ಮಂತ್ರಾಕ್ಷತೆಗಳಲಿ ಶುಭ ಶೋಭನದಲಿ (ಸಮಾರಂಭಗಳಲ್ಲಿ) + ಆರತಿಗೆ ಹಿರಿಯರಲಿ ಕ್ರತುಗಳ + ಎಡೆಯ
> + ಒಳಗೆ + ಅರಮನೆಯಲಿ ಪ್ರತಿ ದಿನವು ರಂಜಿಸುತ ದೇವರಿಗೆ + ಅತಿಶಯದ (ಮಿಗಿಲು/ಶ್ರೇಷ್ಠ)
> ನೈವೇದ್ಯ ತಾನು + ಇಹೆನು + ಎಂದನು + ಆ ವ್ರಿಹಿಗ.
>
> *ಭಾವಾರ್ಥ:-* “ಬ್ರಾಹ್ಮಣರ(ಕ್ಷಿತಿಯ=ಭೂಮಿಯ;ಅಮರರು=ದೇವತೆಗಳು)
> ಉಪನಯನದಲ್ಲಿ,ವ್ರತಾಚರಣೆಯಲ್ಲಿ, ಒಳ್ಳೆಯ ಭೋಜನದಲ್ಲಿ, ಶ್ರೇಷ್ಠವಾದ
> ಮಂತ್ರಾಕ್ಷತೆಯಲ್ಲಿ, ಶುಭ ಸಮಾರಂಭಗಳಲ್ಲಿ, ಆರತಿಗೆ ಹಿರಿಯರಲ್ಲಿ, 
> ಯಜ್ಞಯಾಗಾದಿಗಳಲ್ಲಿ(ಕ್ರತು), ಅರಮನೆಯಲ್ಲಿ
> – ಹೀಗೆ ಪ್ರತಿದಿನವು ಎಲ್ಲೆಂದರಲ್ಲಿ ರಂಜಿಸುತ್ತ ದೇವರಿಗೆ ಅತಿಶಯವಾದ ನೈವೇದ್ಯದಲ್ಲಿ
> ತಾನಿರುವೆನು” ಎಂದು ವ್ರಿಹಿಗನು(ಭತ್ತ) ತನ್ನ ಶ್ರೇಷ್ಠತೆಯನ್ನು ಹೇಳಿಕೊಂಡನು.
>
> *ಸತ್ಯಹೀನನು ಬಡವರನು ಕ*
>
> *ಣ್ಣೆತ್ತಿನೋಡೆ ಧನಾಢ್ಯರನು ಬೆಂ*
>
> *ಬತ್ತಿ ನಡೆವ ಅಪೇಕ್ಷೆ ನಿನ್ನದು ಹೇಳಲೇನದನು*
>
> *ಹೆತ್ತ ಬಾಣಂತಿಯರು ರೋಗಿಗೆ*
>
> *ಪತ್ಯ ನೀನಹೆ ಹೆಣದ ಬಾಯಿಗೆ*
>
> *ತುತ್ತು ನೀನಹೆ ನಿನ್ನ ಜನ್ಮ ನಿರರ್ಥಕರವೆಂದ   **|| **೬ **||*
>
> *ಪದವಿಭಾಗ ಮತ್ತು ಪದಶಃ ಅರ್ಥ:-*ಸತ್ಯಹೀನನು ಬಡವರನು ಕಣ್ಣೆತ್ತಿ ನೋಡೆ
> ಧನಾಡ್ಯರನು(ಧನವಂತರನ್ನು) ಬೆಂಬತ್ತಿ (ಹಿಂಬಾಲಿಸಿ) ನಡೆವ ಅಪೇಕ್ಷೆ ನಿನ್ನದು ಹೇಳಲು + ಏನು
> + ಅದನು ಹೆತ್ತ ಬಾಣಂತಿಯರು ರೋಗಿಗೆ ಪತ್ಯ ನೀನು + ಇಹೆ (ಇರುವೆ) ಹೆಣದ ಬಾಯಿಗೆ ತುತ್ತು
> ನೀನು + ಇಹೆ (ಇರುವೆ) ನಿನ್ನ ಜನ್ಮ ನಿರರ್ಥಕರವು + ಎಂದ.
>
> *ಭಾವಾರ್ಥ:-* ವ್ರಿಹಿಗನ(ಭತ್ತದ) ಮಾತನ್ನು ಕೇಳಿದ ರಾಗಿ ಸುಮ್ಮನಿರದೆ ಅದಕ್ಕೆ ಹೀಗೆ
> ಪ್ರತ್ಯುತ್ತರ ನೀಡುತ್ತದೆ: “ನೀನು ಸತ್ಯಹೀನನಾಗಿರುವೆ, ಬಡವರನ್ನು ಕಣ್ಣೆತ್ತಿ
> ನೋಡುವುದಿಲ್ಲ, ಶ್ರೀಮಂತರನ್ನು ಮಾತ್ರ ಹಿಂಬಾಲಿಸಿ ಹೋಗುವ ಅಪೇಕ್ಷೆ ನಿನ್ನದು. ಹೆತ್ತ
> ಬಾನಂತಿಯರು ಹಾಗೂ ರೋಗಿಗಳಿಗೆ ನೀನು ಪತ್ಯವಾಗಿರುವೆ ಅಲ್ಲದೆ ಹೆಣದ ಬಾಯಿಗೆ ತುತ್ತಾಗುವೆ.
> ನಿನ್ನ ಜನ್ಮ ವ್ಯರ್ಥವಾದುದು.” ಎಂದು ರಾಗಿ ಭತ್ತವನ್ನು ಜರೆಯಿತು.
>
>
>
> *ಮಳೆದೆಗೆದು ಬೆಳೆಯಡಗಿ ಕ್ಷಾಮದ*
>
> *ವಿಲಯಕಾಲದೊಳನ್ನವಿಲ್ಲದೆ*
>
> *ಅಳಿವ ಪ್ರಾಣಿಗಳಾದರಿಸಿ ಸಲಹುವೆನು ಜಗವರಿಯೆ*
>
> *ಎಲವೊ ನೀನೆಲ್ಲಿಹೆಯೊ ನಿನ್ನಯ*
>
> *ಬಳಗವದು ತಾನೆಲ್ಲಿಹುದು ಈ*
>
> *ಹಲವು ಹುಲು ಧಾನ್ಯಗಳೆನಗೆ ಸರಿದೊರೆಯೆ ಕೇಳೆಂದ  **|| **೭ **||*
>
> *ಪದವಿಭಾಗ ಮತ್ತು ಪದಶಃ ಅರ್ಥ:- *ಮಳೆ + ತೆಗೆದು(ಹೋಗಿ/ಇಲ್ಲದಾಗಿ) ಬೆಳೆಯು + ಅಡಗಿ
> ಕ್ಷಾಮದ ವಿಲಯ ಕಾಲದೊಳ್(ವಿನಾಶ ಕಾಲದಲ್ಲಿ) + ಅನ್ನ + ಇಲ್ಲದೆ ಅಳಿವ ಪ್ರಾಣಿಗಳ + ಆದರಿಸಿ
> ಸಲಹುವೆನು ಜಗವು + ಅರಿಯೆ (ತಿಳಿಯಲು) ಎಲವೊ ನೀನು + ಎಲ್ಲಿ + ಇಹೆಯೊ (ಇರುವೆಯೊ) ನಿನ್ನಯ
> ಬಳಗವದು ತಾನು + ಎಲ್ಲಿ + ಇಹುದು (ಇರುವುದು) ಈ ಹಲವು ಹುಲು(ಹೀನ/ಅಲ್ಪ) ಧಾನ್ಯಗಳು + ಎನಗೆ
> ಸರಿದೊರೆಯೆ (ಸರಿಸಮಾನವೇ) ಕೇಳು + ಎಂದ.
>
> *ಸಾರಾಂಶ:-* ರಾಗಿಯು ಮುಂದುವರೆದು ವ್ರಿಹಿಗನನ್ನು ಕುರಿತು “ಈ ಜಗತ್ತಿಗೆಲ್ಲ
> ತಿಳಿದಿರುವಂತೆ; ಮಳೆ ಹೋಗಿ, ಬೆಳೆ ಇಲ್ಲದಂತಾಗಿ, ಘೋರ ಬರಗಾಲದಲ್ಲಿ ಅನ್ನವಿಲ್ಲದೆ
> ನಾಶವಾಗುವ ಪ್ರಾಣಿಗಳನ್ನು ನಾನು ಆದರಿಸಿ ಕಾಪಾಡುತ್ತೇನೆ. ಎಲವೋ ಆಗ ನೀನೆಲ್ಲಿರುವೆಯೋ
> ನಿನ್ನ ಬಳಗ ಎಲ್ಲಿರುವುದೋ. ಈ ಹಲವು ಹುಲು ಧಾನ್ಯಗಳು ನನಗೆ ಸರಿಸಮಾನವೇ? ಕೇಳು.” ಎಂದು
> ಹೇಳುತ್ತದೆ.
>
> *ಮಸೆದುದಿತ್ತಂಡಕ್ಕೆ ಮತ್ಸರ*
>
> *ಪಿಸುಣ ಬಲರತಿ ನಿಷ್ಠುರರು ವಾ*
>
> *ದಿಸಲು ಕಂಡನು ನೃಪತಿ ಮನದಲಿ ನೋಡಿ ನಸುನಗುತ*
>
> *ಹಿಸುಣರಿವದಿರ ಮತ್ಸರವ ಮಾ*
>
> *ಣಿಸುವ ಹದನೇನೆನುತ ಯೋಚಿಸಿ*
>
> *ದ ಸುರ ಮುನಿಪರ ನೋಡೆ ಗೌತಮ ಮುನಿಪನಿಂತೆಂದ **|| **೮**||*
>
> *ಪದವಿಭಾಗ ಮತ್ತು ಪದಶಃ ಅರ್ಥ:-* ೧. ಮಸೆದುದು (ತಿಕ್ಕಾಟವಾಯಿತು) + ಇತ್ತಂಡಕ್ಕೆ(ಎರಡು
> ತಂಡಕ್ಕೆ/ಗುಂಪಿಗೆ) ಮತ್ಸರ ಪಿಸುಣ(ಚಾಡಿಕೋರ) ಬಲರು + ಅತಿ ನಿಷ್ಠುರರು ವಾದಿಸಲು ಕಂಡನು
> ನೃಪತಿ ಮನದಲಿ ನೋಡಿ ನಸು ನಗುತ ಹಿಸುಣರ್ + ಇವದಿರ (ಇವರ) ಮತ್ಸರವ ಮಾಣಿಸುವ
> (ಕೊನೆಯಾಗಿಸುವ/ನಾಶಮಾಡುವ) ಹದನ(ರೀತಿ) + ಏನು + ಎನುತ ಯೋಚಿಸಿದ ಸುರ ಮುನಿಪರ(ದೇವತೆಗಳ
> ಮುನಿ/ಗೌತಮ) ನೋಡೆ ಗೌತಮ ಮುನಿಪನು + ಇಂತು + ಎಂದ.
>
> *ಸಾರಾಂಶ:- *ಚಾಡಿಕೋರರು, ಬಹಳ ನಿಷ್ಠುರ ಮನೋಭಾವದವರಾಗಿದ್ದ ಎರಡೂ ಗುಂಪುಗಳ ನಡುವೆ
> ಮಾತಿಗೆ ಮಾತು ಬೆಳೆದು ತಿಕ್ಕಾಟವಾಯಿತು. ಅದನನ್ನು ನೋಡಿದ ರಾಜನು ನಸುನಗುತ್ತಾ “ಇವರೆಲ್ಲಾ
> ಪಿಸುಣರು(ಚಾಡಿಕೋರರು). ಇವರೆಲ್ಲರ ಮತ್ಸರವನ್ನು ಕೊನೆಯಾಗಿಸುವುದು ಹೇಗೆ?” ಎಂದು
> ಯೋಚಿಸುತ್ತಾ ಗೌತಮ ಮುನಿಗಳ ಕಡೆ ನೋಡುತ್ತಾನೆ. ರಾಮನ ಪ್ರಶ್ನಾರ್ಥಕ ನೋಟವನ್ನು ನೋಡಿದ ಗೌತಮ
> ಮುನಿಯು ಈ ಮುಂದಿನಂತೆ ಹೇಳುತ್ತಾನೆ.
>
> *ಅರಸುಗಳು ನಾವೆಲ್ಲ ಭೂಮೀ*
>
> *ಸುರರುನೆರೆದಿಹ ದಾನವರು ವಾ*
>
> *ನರರು ನಮಗೀ ನ್ಯಾಯವನು ಪರಿಹರಿಸಲಳವಲ್ಲ*
>
> *ಕರಸುವೆವು ಹರಿಹರವಿರಂಚಾ*
>
> *ದ್ಯರನಯೋಧ್ಯೆಗೆ ಅವರ ಗುಣವಾ*
>
> *ಧರಿಸಿ ಪೇಳ್ವರು ನಯದೊಳೆಂದನುರಾಮ ನಸುನಗುತ            **|| **೯ **||*
>
> *          ಪದವಿಭಾಗ ಮತ್ತು ಪದಶಃ ಅರ್ಥ :- *ಅರಸುಗಳು ನಾವೆಲ್ಲ
> ಭೂಮೀಸುರರು(ಬ್ರಾಹ್ಮಣರು) ನೆರೆದಿಹ ದಾನವರು (ರಾಕ್ಷಸರು) ವಾನರರು ನಮಗೆ + ಈ ನ್ಯಾಯವನು
> ಪರಿಹರಿಸಲು(ಬಗೆಹರಿಸಲು) + ಅಳವಲ್ಲ(ಸಾಧ್ಯವಿಲ್ಲ) ಕರಸುವೆವು ಹರಿ(ವಿಷ್ಣು) ಹರ (ಈಶ್ವರ)
> ವಿರಂಚಿ (ಬ್ರಹ್ಮ) + ಆದ್ಯರನು (ಮೊದಲಾದವರನ್ನು) + ಅಯೋಧ್ಯೆಗೆ ಅವರ ಗುಣವ + ಆಧರಿಸಿ
> ಪೇಳ್ವರು (ಹೇಳುವರು) ನಯದೊಳ್ (ವಿವೇಕದಿಂದ/ನ್ಯಾಯವಾಗಿ) + ಎಂದನು ರಾಮ ನಸು ನಗುತ.
>
> *          ಭಾವಾರ್ಥ: “*ನಿಮ್ಮ ನ್ಯಾಯ ತೀರ್ಮಾನ ಮಾಡಲು,ಅರಸರಾದ ನಾವಾಗಲೀ ಭೂಸುರರು
> ಎನಿಸಿದ ಬ್ರಾಹ್ಮಣರಿಂದಾಗಲೀ ರಾಕ್ಷಸರಿಗಾಗಲೀ ವಾನರರಿಗಾಗಲೀ ಸಾಧ್ಯವಿಲ್ಲ. ಆದ್ದರಿಂದ
> ಬ್ರಹ್ಮ-ವಿಷ್ಣು-ಮಹೇಶ್ವರರೇ ಮೊದಲಾದವರನ್ನು ಕರೆಸುತ್ತೇವೆ. ಅವರಾದರೆ ಗುಣವನ್ನು ಆಧರಿಸಿ
> ವಿವೇಕದಿಂದ ನಿಮ್ಮ ನ್ಯಾಯ ತೀರ್ಮಾನ ಮಾಡುತ್ತಾರೆ” ಎಂದು ರಾಮನು ನಸುನಗುತ್ತ
> ಹೇಳಿದನು.(ವ್ಯಂಗವಾಗಿ)
>
> *ಪರಮ ಧಾನ್ಯದೊಳಿಬ್ಬರೇ ಇವ*
>
> *ರಿರಲಿ ಸೆರೆಯೊಳಗಾರು ತಿಂಗಳು*
>
> *ಹಿರಿದು ಕಿರಿದೆಂಬಿವರ ಪೌರುಷವರಿಯಬಹುದಿನ್ನು*
>
> *ಪುರಕೆ ಗಮನಿಸಿ ನಾವು ನಿಮ್ಮನು*
>
> *ಕರೆಸುವೆವು ಕೇಳೆನುತಯೋಧ್ಯಾ*
>
> *ಪುರಿಗೆ ಪಯಣವ ಮಾಡಹೇಳಿದನಾವಿಭೀಷಣಗೆ          **|| **೧೦ **||*
>
> *ಪದವಿಭಾಗ ಮತ್ತು ಪದಶಃ ಅರ್ಥ :-*ಪರಮ(ಶ್ರೇಷ್ಠ) ಧಾನ್ಯದೊಳ್ (ಧಾನ್ಯದಲ್ಲಿ) + ಇಬ್ಬರೇ
> ಇವರು + ಇರಲಿ ಸೆರೆಯೊಳಗೆ + ಆರು ತಿಂಗಳು ಹಿರಿದು ಕಿರಿದು + ಎಂಬ + ಇವರ ಪೌರುಷವ +
> ಅರಿಯಬಹುದು + ಇನ್ನು ಪುರಕೆ ಗಮನಿಸಿ ನಾವು ನಿಮ್ಮನು ಕರೆಸುವೆವು ಕೇಳು + ಎನುತ + ಅಯೋಧ್ಯಾ
> ಪುರಿಗೆ (ಪಟ್ಟಣಕ್ಕೆ) ಪಯಣವ (ಪ್ರಯಾಣವ) ಮಾಡ (ಮಾಡಲು) ಹೇಳಿದನು + ಆ + ವಿಭೀಷಣಗೆ.
>
> *ಭಾವಾರ್ಥ:* ಶ್ರೀರಾಮನು ಅಲ್ಲಿ ನೆರೆದಿದ್ದ ಧಾನ್ಯಗಳ ವಾದವಿವಾದಗಳನ್ನು ಗಮನಿಸಿದ ಮೇಲೆ
> ಹೀಗೆ ತೀರ್ಪು ನೀಡಿದನು. “ಕೇಳಿ, ಶ್ರೇಷ್ಠವಾದ ಧಾನ್ಯಗಳಲ್ಲಿ ಇವರಿಬ್ಬರೇ ಇರಲಿ. ಆರು
> ತಿಂಗಳು ಸೆರೆಯಲ್ಲಿ ಹಾಕಿದರೆ; ಹಿರಿದು ಕಿರಿದೆಂದು ವಾದಿಸುವ ಇವರ ಪೌರುಷವನ್ನು
> ತಿಳಿಯಬಹುದು. ಇನ್ನು ನಾವು ಅಯೋಧ್ಯಾ ಪಟ್ಟಣಕ್ಕೆ ಹೋಗುತ್ತೇವೆ. ಆ ನಂತರ ನಿಮ್ಮ
> ಸ್ಥಿತಿಯನ್ನು ಗಮನಿಸಿ ಕರೆಸಿಕೊಳ್ಳುತ್ತೇವೆ.” ಎಂದು ಹೇಳಿ ಅಯೋಧ್ಯಾ ಪಟ್ಟಣಕ್ಕೆ
> ಪ್ರಯಾಣಮಾಡಲು ವಿಭೀಷಣನಿಗೆ ಹೇಳಿದನು.
> On Jan 15, 2018 12:47 PM, "Sameera samee" <mehak.sa...@gmail.com> wrote:
>
>> ಪ್ರಕೃತ "ರಾಮಧಾನ್ಯ ಚರಿತ್ರೆ"ಯು ಕನಕದಾಸರಿಂದ ರಚಿತವಾದ ಒಂದು ಪುಟ್ಟ ವಿಡಂಬನ ಕಾವ್ಯ.
>> ಇದೊಂದು ಕಲ್ಪಿತ ಕಥೆ. ರಾಗಿ(ನರೆದಲೆಗ) ಹಾಗೂ ಭತ್ತ(ವ್ರಿಹಿಗ)- ಇವರಿಬ್ಬರ ನಡುವೆ ಯಾರು
>> ಹೆಚ್ಚು ಯಾರು ಕಡಿಮೆ ಎಂಬ ಜಗಳವು ಉದ್ಭವಿಸಲಾಗಿ, ರಾಮನು ಇವರಿಬ್ಬರ ವ್ಯಾಜ್ಯವನ್ನು
>> ಪರಿಹರಿಸಿ ನರೆದಲೆಗವೇ ಉತ್ತಮವೆಂದು ಸಾರಿ ತೀರ್ಪನ್ನು ನೀಡುವುದು ಇಲ್ಲಿನ ಕಥಾಹಂದರ.
>>
>> ಆ ಕಾಲಕ್ಕೆ ಇದ್ದಿರಬಹುದಾದ ವರ್ಗ-ವರ್ಣ ತಾರತಮ್ಯಗಳ ಪ್ರತೀಕವಾಗಿ - ಉಚ್ಛ ವರ್ಗಗಳ
>> ಪ್ರತಿನಿಧಿಯಾಗಿ ನೆಲ್ಲೂ, ಕೆಳವರ್ಗಗಳ ಪ್ರತಿನಿಧಿಯಾಗಿ ರಾಗಿಯೂ ಈ ಕಾವ್ಯದಲ್ಲಿ
>> ಕಂಡುಬರುತ್ತವೆ. ಹೀಗಾಗಿ ’ರಾಮಧಾನ್ಯ ಚರಿತ್ರೆ’ಯನ್ನು ರೂಪಕ ಕಾವ್ಯವೆಂದೂ ಹೇಳಬಹುದು.
>>
>>
>> ರಾವಣನನ್ನು ಸಂಹರಿಸಿದ ನಂತರ ರಾಮನು ಸೀತೆ, ಲಕ್ಷ್ಮಣ, ವಿಭೀಷಣ, ಹನುಮಂತ
>> ಮುಂತಾದವರೊಂದಿಗೆ ಅಯೋಧ್ಯೆಗೆ ಮರಳುತ್ತಿರುವಾಗ, ಮಾರ್ಗಮಧ್ಯದಲ್ಲಿ ಮುನಿಗಳೆಲ್ಲರೂ ಇವರಿಗೆ
>> ವಿವಿಧ ಧಾನ್ಯಗಳಿಂದ ಸಿದ್ಧಪಡಿಸಿದ ಭಕ್ಷ್ಯ-ಭೋಜನಗಳ ಔತಣವೊಂದನ್ನು ಏರ್ಪಡಿಸಿರುತ್ತಾರೆ. ಆಗ
>> ಅವರಲ್ಲಿ ಸಹಜವಾಗಿ ಧಾನ್ಯಗಳಲ್ಲಿ ಯಾವುದು ಶ್ರೇಷ್ಠ ಎಂಬ ಪ್ರಶ್ನೆಯು ಉದ್ಭವಿಸುತ್ತದೆ. ಈ
>> ಪ್ರಶ್ನೆಯೇ ’ರಾಮಧಾನ್ಯ ಚರಿತ್ರೆ’ಯ ಕಥಾಮೂಲ. ಇಲ್ಲಿಂದಲೇ ಭತ್ತ ಹಾಗೂ ರಾಗಿಯ ನಡುವೆ
>> ಜಗಳವೇರ್ಪಡುವುದು.
>>
>>
>> ಅವರಿಬ್ಬರ ನಡುವಿನ ಜಗಳವನ್ನು ನಿವಾರಿಸಿ ನ್ಯಾಯವನ್ನು ಹೇಳಲೆಂದು ರಾಮನು ಅವರಿಬ್ಬರನ್ನೂ
>> ಆರು ತಿಂಗಳುಗಳ ಕಾಲ ಬಂಧನದಲ್ಲಿರಿಸುವಂತೆ ಹೇಳುತ್ತಾನೆ. ಆರು ತಿಂಗಳ ನಂತರ ಇವರಿಬ್ಬರನ್ನೂ
>> ಸಭೆಗೆ ಕರೆಸಲಾಗಿ, ಆ ವೇಳೆಗೆ ಭತ್ತವು ಸೊರಗಿ ಟೊಂಕ ಮುರಿದು ಬಿದ್ದರೆ, ರಾಗಿಯು ಯಾವ
>> ಕ್ಲೇಶಕ್ಕೂ ಒಳಗಾಗದೆ ಗಟ್ಟಿಯಾಗಿ ನಿಲ್ಲುತ್ತದೆ. ಕೊನೆಗೆ, ಆರು ತಿಂಗಳುಗಳ ನಂತರವೂ
>> ಸ್ವಲ್ಪವೂ ಕಾಂತಿಗುಂದದ ರಾಗಿಗೇ ರಾಮನ ಸಭೆಯಲ್ಲಿ ಶ್ರೇಷ್ಠತೆಯ ಪಟ್ಟ ದೊರೆಯುತ್ತದೆ. ಇಡೀ
>> ಸಭೆಯು ರಾಗಿಯನ್ನು ಮೆಚ್ಚಿ ಹಾರೈಸುತ್ತದೆ.
>>
>> ------------------------------------------------------------
>> ------------------------------------------------
>>
>>
>> ರಾಮಧಾನ್ಯ ಚರಿತ್ರೆ
>>
>>
>>
>> ರಾಮಧಾನ್ಯದ ಕೃತಿಯನೀ ಜನ
>>
>> ದಾಮವೆಲ್ಲಾದರಿಸುವಂದದಿ
>>
>> ಭೂಮಿಗಚ್ಚರಿಯಾಗಿ ಪೇಳುವೆನೀ ಮಹಾಕಥೆಯ
>>
>> ಪ್ರೇಮದಿಂದಾದರಿಸಿ ಕೇಳ್ದ ಸ
>>
>> ನಾಮರಿಗೆ ಸತ್ಕರುಣದಲಿ
>>
>> ರಾಮ ಪಾಲಿಸಿಕೊಡುವ ಮನದಲಿ ಇಷ್ಟಸಂಪದವ               (೩)
>>
>>
>> ಧರೆಯನೆಲ್ಲವ ಸೋತು ಜೂಜಲಿ
>>
>> ಕುರುಪತಿಗೆ, ಕೈದಳಿಸಿ ತಮ್ಮಂ
>>
>> ದಿರು ಸಹಿತ ಧರ್ಮಜನು ಕಾಮ್ಯಕ ವನದೊಳಿರುತಿರಲು
>>
>> ಪರಮ ಋಷಿ ಶಾಂಡಿಲ್ಯ ಸ
>>
>> ತ್ಕರುಣದಲಿ ನಡೆತಂದನಲ್ಲಿಗೆ
>>
>> ವರ ತಪೋಧನರೊಡನೆ ಕಾಣಿಸಿಕೊಂಡನುಚಿತದಲಿ             (೪)
>>
>>
>> ಧರಣಿಪತಿ ಧರ್ಮಜನು ತಮ್ಮಂದಿರೊಡಗೂಡಿ ಶಾಂಡಿಲ್ಯ ಮುನಿಗೆ ವಂದಿಸಿ ಸತ್ಕರಿಸಿದನು. ಆಗ
>> ಶಾಂಡಿಲ್ಯ ಮುನಿಯು "ನೃಪಸಿರಿ - ದರಿದ್ರತೆ ನಿಲದು, ಪರಿಹಾರವಹುದು" ಎಂದು ನುಡಿಯುತ್ತಾನೆ.
>> ಆಗ ಧರ್ಮಜನು :
>>
>>
>> "ದೇವಋಷಿಗಳು ನಿಮ್ಮ ಕರುಣಾ
>>
>> ಭಾವವೆಮ್ಮಲ್ಲಿರಲು ನಮಗಿ
>>
>> ನ್ನಾವ ಕಷ್ಟದ ಬಳಕೆದೋರದು. ನಿಮ್ಮ ದರುಶನದಿ
>>
>> ಪಾವನರು ನಾವಾದೆವೆಮಗಿ
>>
>> ನ್ನಾವ ಬುದ್ಧಿಯನರುಹುವಿರಿಯದ
>>
>> ನೀವು ಪೇಳೆನೆ", ನಸುನಗುತ ಮುನಿನಾಥನಿಂತೆಂದ            (೬)
>>
>>
>> "ದೇವಋಷಿಗಳು ನಿಮ್ಮ ಕರುಣೆ ನಮ್ಮ ಮೇಲಿರುವಾಗ ನಮಗೆ ಯಾವ ಕಷ್ಟವೂ ಬರದು. ನಿಮ್ಮ
>> ದರ್ಶನದಿಂದ ನಾವು ಪಾವನರಾದೆವು ಸ್ವಾಮಿ, ನಮಗೆ ನೀವು ಯಾವ ವಿಷಯವನ್ನು ಅರುಹುವಿರಿ ಈಗ"
>> ಎಂದು ಕೇಳಲು, ಶಾಂಡಿಲ್ಯ ಮುನಿಯು "ಯುಧಿಷ್ಟಿರ, ಭೂಮಿಯಲ್ಲಿ ಅಧಿಕವಾದ ಖ್ಯಾತಿಯನ್ನು
>> ಹೊಂದಿರುವ ನಾಲ್ಕು ಅರಸುಗಳೆಂದರೆ - ನಳ, ರಾಮ, ಯುಧಿಷ್ಟಿರ ಹಾಗೂ ಹರಿಶ್ಚಂದ್ರ ಎಂದು
>> ಜಗವೆಲ್ಲ ಸಾರುತ್ತಿದೆ. ಅವರಲ್ಲಿ ರಾಮನು ಅತ್ಯಂತ ಗುಣಶೀಲನಾಗಿದ್ದಾನೆ. ಒಮ್ಮೆ
>> ನೆಲ್ಲು(ವ್ರಿಹಿಗ) ಹಾಗೂ ರಾಗಿ(ನರೆದಲೆಗ)ಗಳ ನಡುವೆ ಮೂಡಿದ್ದ ಜಗಳವನ್ನು ನಿವಾರಿಸಿ,
>> ಸರಿಯಾದ ನ್ಯಾಯವನ್ನು ಹೇಳಿ ಶ್ರೀರಾಮನು ಧರ್ಮವನ್ನು ಪಾಲಿಸಿದ" ಎಂದು ತಿಳಿಸುತ್ತಾನೆ.
>>
>>
>> ಆಗ ಧರ್ಮರಾಯನು ರಾಮಚರಿತೆಯನ್ನು ತಮಗೆ ಹೇಳಬೇಕೆಂದು ಶಾಂಡಿಲ್ಯ ಮುನಿಯನ್ನು ಬಿನ್ನವಿಸಲು,
>> ಆ ಮುನಿಪನು ಅಲ್ಲಿದ್ದವರಿಗೆಲ್ಲ ರಾಮನ ಕಥೆಯನ್ನು ವಿಸ್ತರಿಸಿ ಹೆಳುತ್ತಾನೆ. :
>>
>>
>> ಕೇಳು ಕುಂತೀ ತನಯ, ಗಂಗಾ ನದಿಯ ದಡದ ಉತ್ತರ ಭಾಗದಲ್ಲಿ ವಿಶಾಲವಾಗಿಯೂ, ವೈಭವಯುತವಾಗಿಯೂ
>> ಇರುವ ಅಯೋಧ್ಯಾಪುರ. ಆ ಪುರದ ಅರಸ ದಶರಥ. ಅವನಿಗೆ ಕೌಸಲ್ಯೆ, ಕೈಕೆ ಹಾಗೂ ಸುಮಿತ್ರೆ - ಈ
>> ಮೂವರು ಅರಸಿಯರು.
>>
>> ಆ ದಶರಥ ಹಾಗೂ ಕೌಸಲ್ಯೆಯರಿಗೆ ಜನಿಸಿದ ಗುಣನಿಧಿ ಆ ರಾಮ. ಅವನು ತಾಟಕಿಯೆಂಬ
>> ರಾಕ್ಷಸಿಯನ್ನು ಸಂಹರಿಸಿ, ಮಾರೀಚ-ಸುಬಾಹುಗಳನ್ನು ಕೊಂದು, ವಿಶ್ವಾಮಿತ್ರ ಮುನಿಯು
>> ನಡೆಸುತ್ತಿದ್ದ ಮಖ(ಯಾಗ)ವನ್ನು ಯಾವುದೇ ವಿಘ್ನ ಬಾರದಂತೆ ರಕ್ಷಿಸಿದನು. ಆ ನಂತರದಲ್ಲಿ
>> ರಾಮನು ಗೌತಮನ ಸತಿ ಅಹಲ್ಯೆಯ ಶಾಪವನ್ನು ನಿವಾರಿಸಿ, ತನ್ನ ತಮ್ಮ ಲಕ್ಷ್ಮಣ ಹಾಗೂ ಮುನಿ
>> ವಿಶ್ವಾಮಿತ್ರನೊಡಗೂಡಿ ಮಿಥಿಲಾನಗರಕ್ಕೆ ಬಂದನು.
>>
>> ಮುಂದೆ, ಅಲ್ಲಿನ ಅರಸನಾದ ಜನಕನ ಮಗಳು ಸೀತೆಯ ಸ್ವಯಂವರದಲ್ಲಿ ಶಿವಧನುಸ್ಸನ್ನು
>> ಹೆದೆಯೇರಿಸಿ ಮುರಿದು, ಶುಭಮುಹೂರ್ತದಲ್ಲಿ ರಾಮನು ಸೀತೆಯನ್ನು ವರಿಸಿದನು. ಆ ನಂತರದಲ್ಲಿ
>> ರಾಮನು ತನ್ನವರೊಡಗೂಡಿ ಅಯೋಧ್ಯೆಗೆ ಹೊರಟುಬಂದನು.
>>
>>
>> ಕೇಳು ಧರ್ಮಜ, ರಾಮನಿಗೆ ಕೂಡ ನಿಮ್ಮಂತೆಯೇ ವನವಾಸ ಮಾಡಬೇಕಾಗಿ ಬಂತು. ಪಿತೃವಚನ
>> ಪಾಲನೆಗೆಂದು ರಾಮನು ತನ್ನ ಮಡದಿ ಸೀತೆ ಹಾಗೂ ಲಕ್ಷ್ಮಣರೊಂದಿಗೆ ಘೋರವಾದ ಕಾನನದಲ್ಲಿ
>> ಇರಬೇಕಾಯಿತು.
>>
>> "ಭರತನನು ಸಂತೈಸಿ, ಕಾಕಾಸುರನ ಪ್ರಾಣವ ಕಾಯ್ದು, ದಾನವ ತರುಣಿ ನಾಸಿಕವರಿದು, ಮಾಯಾಮೃಗವ
>> ಸಂಹರಿಸಿ, ಸರಸಿಜಾಕ್ಷಿಯನಗಲಿ, ಮಾರ್ಗಾಂತರದಿ ಕಂಡ ಜಟಾಯುವನು - ಮನ ಮರುಗಿ ವೃತ್ತಾಂತವನು
>> ತಿಳಿದವನಲ್ಲಿ ಗತಗೊಳಿಸಿ..(೧೩)"
>>
>>
>> ಸೀತೆಯನ್ನು ಹುಡುಕಿ ಹೊರಟ ರಾಮಲಕ್ಷ್ಮಣರಿಗೆ ಸಾವಿನ ಅಂಚಿನಲ್ಲಿದ್ದ ಜಟಾಯುವು
>> ಕಾಣಿಸುತ್ತಾನೆ. ಅವನಿಂದ ರಾಮನು ನಡೆದ ವೃತ್ತಾಂತವನ್ನು(ಸೀತಾ ಅಪಹರಣ, ಹಾಗೂ ರಾವಣನನ್ನು
>> ಎದುರಿಸಿದ ಜಟಾಯುವನ್ನು ರಾವಣನು ಗಾಯಗೊಳಿಸಿದ್ದು) ಕೇಳಿ ತಿಳಿದುಕೊಳ್ಳುತ್ತಾನೆ. ಇಷ್ಟನ್ನೂ
>> ತಿಳಿಸುವ ವೇಳೆಗೆ ಜಟಾಯುವು ಮೃತನಾಗುತ್ತಾನೆ. ಅವನ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ
>> ನಂತರ ರಾಮಲಕ್ಷ್ಮಣರು ಸೀತೆಯನ್ನು ಹುಡುಕುತ್ತ ಹೊರಡುತ್ತಾರೆ.
>>
>> ಮಾರ್ಗ ಮಧ್ಯದಲ್ಲಿ ಹನುಮನನ್ನು ಕಂಡು, ಕಿಷ್ಕಿಂದೆಯನ್ನು ತಲುಪಿ, ಅಲ್ಲಿ ವಾಲಿಯನ್ನು
>> ಹರಿಸಿ, ಸುಗ್ರೀವನು ಕಳುಹಿಸಿದ ವಾನರ ಸೈನ್ಯವನ್ನು ಒಡಗೊಂಡು ರಾಮನು ದಕ್ಷಿಣಕ್ಕೆ ಹೊರಟನು.
>> ಸಮುದ್ರವನ್ನು ದಾಟಲು ಸೇತುಬಂಧವನ್ನು ನಿರ್ಮಿಸಿ, ಲಂಕೆಯನ್ನು ತಲುಪಿ, ರಾವಣ ಕುಂಭಕರ್ಣಾದಿ
>> ದಾನವ ವೀರರನ್ನು ಕೊಂದು, ರಾಮನು ನಂತರದಲ್ಲಿ ವಿಭೀಷಣನಿಗೆ ಪಟ್ಟವನ್ನು ಕಟ್ಟಿದನು.
>>
>>
>> ಆ ನಂತರ ರಾಮನು ಸೀತೆಯನ್ನು ಕೈಕೊಂಡು, ತಮ್ಮೊಡನೆ ಅಯೋಧ್ಯೆಗೆ ಬರಲು ವಿಭೀಷಣನನ್ನೂ
>> ಅಹ್ವಾನಿಸುತ್ತಾನೆ. ಅಗ ಅಗಣಿತ ದಾನವ ಸೇನೆಯು ಅವರೊಡನೆ ಅಯೋಧ್ಯೆಗೆ ಹೊರಡಲು ಸಿದ್ಧವಾಯ್ತು.
>>
>> ವಿಭೀಷಣನು ತನಗೆಂದು ಅರ್ಪಿಸಿದ ಕುಬೇರನ ರಥದಲ್ಲಿ ರಾಮನು ಸೀತೆ ಹಾಗೂ ಲಕ್ಷ್ಮಣರೊಡನೆ
>> ಕುಳಿತಿರಲು, ಅವರೊಡನೆ ಹನುಮ, ಜಾಂಬವಂತ, ವಿಭೀಷಣಾದಿಯಾಗಿ, ದಾನವ ಹಾಗೂ ವಾನರ ಸೈನ್ಯವೂ
>> ಅಯೋಧ್ಯೆಯೆಡೆಗೆ ಹೊರಡುತ್ತಾರೆ.
>>
>>
>> ಮಾರ್ಗ ಮಧ್ಯದಲ್ಲಿ ಇವರೆಲ್ಲ ವಾಲ್ಮೀಕಿ, ಮುಚುಕುಂದ ಮುಂತಾದ ಮುನಿಗಳ ಆಶ್ರಮಗಳನ್ನು
>> ಸಂದರ್ಶಿಸಿದರು. ನಂತರ ಮುಂದುವರೆದು ಇವರೆಲ್ಲ ಮಾಹವನವೊಂದರಲ್ಲಿ ಬೀಡುಬಿಟ್ಟಿರಲು ಹಲವಾರು
>> ಮುನಿವರರು ಬಂದು ರಾಮನನ್ನು ಕಂಡರು.
>>
>>
>> ಕೌಶಿಕನು, ಜಮದಗ್ನಿ, ಜನ್ಹು, ಪರಾಶರನು, ಜಾಬಾಲಿ, ಭೃಗು, ದೂರ್ವಾಸ, ಗೌತಮನಾದಿಯಾದ
>> ಸಮಸ್ತ ಮುನಿವರರು ಭಾಸುರದ ತೇಜದಲಿ ತಮ್ಮ ನಿವಾಸವನು ಹೊರವಂಟು ಬಂದರು, ದಾಶರಥಿಯನು ಕಂಡು
>> ಹರಸಿದರಕ್ಷತೆಯ ತಳಿದು (೨೩)
>>
>>
>> ಅವರೆಲ್ಲ ರಾಮನನ್ನು ಮನಸಾರೆ ಪ್ರಾರ್ಥಿಸಿ, ಹೊಗಳಿ, ವಿವಿಧ ಬಗೆಯಲ್ಲಿ ಸತ್ಕರಿಸಿದರು.
>>
>>
>> ಅಲ್ಲಿ ನೆರೆದ ಮಹಾಮುನೀಶ್ವರ
>>
>> ರೆಲ್ಲ ತರಿಸಿದರಖಿಳ ವಸ್ತುವ -
>>
>> ಬೆಲ್ಲ, ಸಕ್ಕರೆ, ಜೇನುತುಪ್ಪ, ರಸಾಯನಂಗಳಲಿ
>>
>> ಭುಲ್ಲವಿಸಿ ರಚಿಸಿದ ಸುಭಕ್ಷಗ
>>
>> ಳೆಲ್ಲವನು ತುಂಬಿದರು ಹೆಡಗೆಗ
>>
>> ಳಲ್ಲಿ. ಜೋಡಿಸಿ, ಹೊರಿಸಿ ತಂದರು ರಾಮನೋಲಗಕೆ           (೨೮)
>>
>>
>> ರಾಮನೊಡನೆ ಬಂದವರೆಲ್ಲ ಆ ರುಚಿರುಚಿಯಾದ ಭೋಜ್ಯಗಳೆಲ್ಲವನ್ನು ಮನಸಾರೆ ಸವಿದರು. ಅವರೆಲ್ಲ
>> ಮುನಿವರರನ್ನು ಆನಂದದಿಂದ ಕೊಂಡಾಡಿದರು. ಆಗ ರಾಮನು ಹನುಮನನ್ನು ಕರೆದು ಆ ಭಕ್ಷ್ಯಗಳ
>> ರುಚಿಯನ್ನು ಕುರಿತು ಪ್ರಶ್ನಿಸಿದನು -
>>
>>
>> ಅನಿಲಸುತ ಬಾರೆಂದು ರಘುನಂ
>>
>> ದನನು "ಕರುಣದೊಳಿವರ ರುಚಿಯೆಂ
>>
>> ತೆನಲು", ಕರಗಳ ಮುಗಿದು ಬಿನ್ನೈಸಿದನು ರಘುಪತಿಗೆ
>>
>> ’ಇನಕುಲಾನ್ವಯತಿಲಕ ಚಿತ್ತೈ
>>
>> ಸೆನಗೆ ಸವಿಯಹುದಿನ್ನು ಧಾನ್ಯದ
>>
>> ತನುವನೀಕ್ಷಿಸಬೇಕು, ದೇವರು ತರಿಸಿ ನೀವೆಂದ’                 (೨೯)
>>
>>
>> ಆಗ ಹನುಮನು ’ಭಕ್ಷ್ಯಗಳೇನೋ ಬಹಳ ರುಚಿಯಾಗಿವೆ. ಆದರೆ ಈ ಭಕ್ಷ್ಯಗಳನ್ನು ಯಾವ ಯಾವ
>> ಧಾನ್ಯಗಳಿಂದ ತಯಾರಿಸಿದ್ದಾರೋ ಆ ಧಾನ್ಯಗಳನ್ನೆಲ್ಲ ಒಮ್ಮೆ ತಾನು ನೋಡಬೇಕು. ದಯವಿಟ್ಟು ತಾವು
>> ಆ ಧಾನ್ಯಗಳನ್ನು ತರಿಸಿ’ ಎಂದು ರಾಮನನ್ನು ಕೇಳುತ್ತಾನೆ.
>>
>> ಹಾಗೇ ಆಗಲಿ ಎಂದು ರಾಮನು ಗೌತಮ ಮುನಿಯನ್ನು ’ಧಾನ್ಯಗಳನ್ನು ತರಿಸಬೇಕು’ ಎಂದು ವಿನಯದಿಂದ
>> ಕೇಳಿಕೊಳ್ಳುತ್ತಾನೆ. ಆಗ ಗೌತಮ ಮುನಿಯ ಶಿಷ್ಯರು ಎಲ್ಲ ತರದ ಧಾನ್ಯಗಳನ್ನೂ ಹೊತ್ತು ತಂದು
>> ಅಲ್ಲಿದ್ದವರೆಲ್ಲರ ಮುಂದಿಡುತ್ತಾರೆ.
>>
>>
>> "ನರೆದಲೆಗನಿದು, ನೆಲ್ಲು, ಹಾರಕ, ಬರಗು, ಜೋಳವು, ಕಂಬು, ಸಾಮೆಯು, ಉರುತರದ ನವಣೆಯಿದು
>> ನವಧಾನ್ಯ"ವೆಂದೆನಲು, ಮೆರೆವ ರಾಶಿಯ ಕಂಡು - ’ಇದರೊಳು ಪರಮಸಾರದ ಹೃದಯನಾರೆಂದರಸಿ’
>> ಕೇಳಿದನಲ್ಲಿರುತಿಹ ಮಹಾಮುನೀಶ್ವರರ                   (೩೨)
>>
>> (೧. ನರೆದಲೆಗ: ರಾಗಿ, ೨. ನೆಲ್ಲು: ಭತ್ತ. ೩. ಹಾರಕ, ಬರಗು, ಕಂಬು, ಸಾಮೆ, ನವಣೆ -
>> ಬಗೆಬಗೆಯ ಇತರ ಧಾನ್ಯಗಳು).
>>
>> ಎಲ್ಲ ಧಾನ್ಯಗಳ ಹೆಸರುಗಳನ್ನೂ ಒಂದೊಂದಾಗಿ ಹೇಳುತ್ತಿರಲು, ರಾಮನು - "ಈ ಧಾನ್ಯಗಳಲ್ಲಿ
>> ಉತ್ತಮವಾದದ್ದು ಯಾವುದು?" ಎಂದು ಅಲ್ಲಿದ್ದ ಮುನಿಗಳನ್ನು ಕೇಳುತ್ತಾನೆ. ಆಗ
>>
>>
>> ಕೆಲರು ಗೋದಿಯ, ಸಾಮೆಯನು ಕೆಲ
>>
>> ಕೆಲರು ನವಣೆಯ, ಕಂಬು, ಜೋಳವ
>>
>> ಕೆಲರು ಹಾರಕವೆಂದು, ಕೆಲವರು ನೆಲ್ಲನತಿಶಯವ,
>>
>> ಕೆಲರು ನರೆದಲಗನನು ಪತಿಕರಿ
>>
>> ಸಲದ ನೋಡಿದ ನೃಪತಿ"ಯದರೊಳು
>>
>> ಹಲವು ಮತವೇಕೊಂದನೇ ಪೇಳೆನಲು", ಗೌತಮನು:              (೩೩)
>>
>>
>> (ಅಲ್ಲಿದ್ದ ಕೆಲವರು ಗೋಧಿಯನ್ನೂ, ಕೆಲವರು ಸಾಮೆಯನ್ನೂ, ಕೆಲವರು ಇತರ ಧಾನ್ಯಗಳನ್ನೂ,
>> ಕೆಲವರು ಭತ್ತವನ್ನೂ, ಹಾಗೇ ಇನ್ನೂ ಕೆಲವರು ರಾಗಿಯನ್ನೂ ಪತಿಕರಿಸಿ(ಪತಿಕರಿಸು:
>> ಅಂಗೀಕರಿಸು/ಹೊಗಳು) ನುಡಿದರು. ಆಗ ರಾಮನು "ಹೀಗೆಹಲವು ಅಭಿಪ್ರಾಯಗಳೇಕೆ, ಯಾವುದಾದರೂ
>> ಒಂದನ್ನು ಒಪ್ಪಿ ಹೇಳಿ" ಎನ್ನಲು, ಗೌತಮನು..)
>>
>>
>> ದಾಶರಥಿ ಚಿತ್ತೈಸು ನಮ್ಮಯ
>>
>> ದೇಶಕತಿಶಯ ನರೆದಲೆಗನೇ
>>
>> ವಾಸಿಯುಳ್ಳವನೀತ ಮಿಕ್ಕಿನ ಧಾನ್ಯವೇಕೆನಲು
>>
>> "ಲೇಸನಾಡಿದೆ ಮುನಿಪ ಗೌತಮ
>>
>> ದೋಷರಹಿತನು ಪಕ್ಷಪಾತವ
>>
>> ನೀಸು ಪರಿಯಲಿ ಮಾಡುವರೆ ಶಿವ"ಯೆಂದನಾ ವ್ರಿಹಿಗ           (೩೪)
>>
>>
>> "ಎಲ್ಲ ಧರ್ಮದ ಸಾರವನು ನೀವ್
>>
>> ಬಲ್ಲಿರರಿಯಿರೆ ಎಲ್ಲರನು ನೀ
>>
>> ವಿಲ್ಲಿ ನುಡಿವ ಉಪೇಕ್ಷೆಯುಂಟೇ! ಸಾಕದಂತಿರಲಿ,
>>
>> ನೆಲ್ಲು ನಾನಿರೆ, ಗೋದಿ ಮೊದಲಾ
>>
>> ದೆಲ್ಲ ಧಾನ್ಯಗಳಿರಲು ಇದರಲಿ
>>
>> ಬಲ್ಲಿದನು ನರೆದಲೆಗನೆಂಬುದಿದಾವ ಮತ?"ವೆಂದ               (೩೫)
>>
>>
>> ಗೌತಮನು "ಕೇಳು ದಾಶರಥಿ, ನಮ್ಮ ದೇಶಕ್ಕೆ ಅತಿಶಯವಾದ ಈ ನರೆದಲೆಗನೇ(ರಾಗಿ)
>> ಮಿಕ್ಕೆಲ್ಲವುಗಳಿಗಿಂತ ಉತ್ತಮವಾದ ಧಾನ್ಯ. ಏಕೆಂದರೆ.." ಎಂದು ನುಡಿಯುತ್ತಿರುವಷ್ಟರಲ್ಲೇ
>> ಅಲ್ಲಿದ್ದ ನೆಲ್ಲಿಗೆ(ವ್ರಿಹಿಗ: ನೆಲ್ಲು) ರೋಷವುಕ್ಕುತ್ತದೆ.
>>
>> ಕೂಡಲೆ ನೆಲ್ಲು ಸಿಡಿದೆದ್ದು ಗೌತಮನನ್ನು ಕುರಿತು "ಆಹಾ! ಲೇಸನಾಡಿದಿರಿ ಗೌತಮರೇ,
>> ದೋಷರಹಿತರಾದ ನೀವೂ ಹೀಗೆ ಪಕ್ಷಪಾತದಿಂದ ನುಡಿಯಬಹುದೇ. ಶಿವಶಿವಾ!
>>
>> ಎಲ್ಲ ಧರ್ಮಗಳ ಸಾರವನ್ನೂ ಅರಿತ ನೀವು ಹೀಗೆ ಉಪೇಕ್ಷಿಸಿ ನುಡಿಯುವುದು ಸರಿಯೇ? ಅಲ್ಲ,
>> ನೆಲ್ಲು ನಾನಿರುವಾಗ, ಗೋಧಿ ಮುಂತಾದ ಎಲ್ಲ ಧಾನ್ಯಗಳೂ ಇಲ್ಲಿರುವಾಗ ಇವರೆಲ್ಲರಲ್ಲಿ ಈ
>> ರಾಗಿಯೇ ಶ್ರೇಷ್ಠ ಎಂದು ಹೇಳುವುದು ಎಷ್ಟು ಸರಿ. ಇದಾವ ನ್ಯಾಯ?" ಎಂದು ಗೌತಮನನ್ನು
>> ಪ್ರಶ್ನಿಸುತ್ತದೆ ನೆಲ್ಲು.
>>
>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to