ಬಹಳ ಚೆನ್ನಾಗಿದೆ ಧನ್ಯವಾದಗಳು.

On 18-Jan-2018 9:00 PM, "Sameera samee" <[email protected]> wrote:

> ತುಂಬಾ ಸುಂದರವಾದ ಮತ್ತು ಅಥ೯ಗಭಿ೯ತವಾದ ಕಥೆ ದಯವಿಟ್ಟು ಪ್ರತಿಯೊಬ್ಬ ಶಿಕ್ಷಕರು ಓದಿ,
> 1000 ರುಪಾಯಿ ಕೊಡುವಿರಾ ಟೀಚರ್?
>
> ಕ್ಲಾಸಿನಲ್ಲಿ ಅತಿ ಹೆಚ್ಚು ರಜೆ ಮಾಡುವ  ಹುಡುಗ...
> ಈ  ಹುಡುಗ ನನ್ನತ್ರ ಯಾಕೆ ದುಡ್ಡು ಕೇಳುತ್ತಿದ್ದಾನೆ..? ಆ ಟೀಚರ್ ಮನಸಲ್ಲಿ ಕೇಳಿಕೊಂಡರು.
> ಕೊಡಬೇಡಿ ಟೀಚರ್... ಮತ್ತೆ ಅವನು ಕ್ಲಾಸಿಗೂ ಬರಲ್ಲಾ... ನಿಮ್ಮ ಹಣವನ್ನೂ ಕೊಡಲ್ಲ...
> ಆ ಹುಡುಗ ಶಾಂತಾ ಟೀಚರತ್ರ ದುಡ್ಡು ಕೇಳುತ್ತಿರುವುದನ್ನು ಕೇಳಿಸಿಕೊಂಡ ಆಶಾ ಟೀಚರ್
> ಹೇಳಿದರು.
> ಖಂಡಿತವಾಗಿಯೂ ವಾಪಾಸ್ ಕೊಡುವೆ ಟೀಚರ್. ಬೇರೆ ಯಾರೂ ಸಹಾಯ ಮಾಡಲಿಲ್ಲ ಟೀಚರ್. ಆ ಹುಡುಗ
> ಪುನಃ ಬೇಡಿದ.
> ಯಾಕೆ ಅಂತ ಕೂಡಾಕೇಳದೆ ಶಾಂತಾ ಟೀಚರ್ ಬ್ಯಾಗ್ ನಿಂದ ಸಾವಿರ ರುಪಾಯಿಗಳನ್ನು ತೆಗೆದು
> ಕೊಟ್ಟರು.
> ಖಂಡಿತವಾಗಿಯೂ ಈ ಹಣ ವಾಪಸ್ ಕೊಡುತ್ತೇನೆ ಟೀಚರ್ ಅಂತ ಹೇಳಿ ಆ ಹುಡುಗ ಓಡಿ ಮರೆಯಾದ.
> ಕೆಲವು ದಿನಗಳು ಕಳೆದವು. ಆ ಹುಡುಗ ಕ್ಲಾಸಿಗೆ ಬರಲೇ ಇಲ್ಲ.
> ಶಾಂತ ಟೀಚರ್ ಯೋಚಿಸಿದರು.
> ಆ ಹುಡುಗ ನನಗೆ ಮೋಸ ಮಾಡಿದನೇ? ಯಾಕೆ ಅಂತಾದರೂ ಕೇಳಿ ದುಡ್ಡು ಕೊಡಬಹುದಿತ್ತು..
> ಹೋಗಲಿ ಪರವಾಗಿಲ್ಲ... ಆಕೆ ಸ್ವತಃ ಹೇಳಿಕೊಂಡರು.
> ಒಂದು ದಿನ ಶಾಂತಾ ಟೀಚರ್ ಮಾರ್ಕೆಟ್ ನಲ್ಲಿ ಆ ಹುಡುಗನನ್ನು ನೋಡಿದರು. ಹೊರೆ ಹೋರುವ ಕೆಲಸ
> ಮಾಡುತ್ತಿದ್ದ. ಟೀಚರನ್ನು ನೋಡಿದ ಕೂಡಲೆ ಮುಗುಳ್ನಗುತ್ತಾ ಟೀಚರ್ ನ ಹತ್ತಿರ ಬಂದ.
> ಟೀಚರ್ ಯಾಕೆ ಇಲ್ಲಿ ಬಂದಿದ್ದು? ನನ್ನನ್ನು ಹುಡುಕುತ್ತಾ ಹೊರಟಿದ್ದೀರಾ ಹೇಗೆ? ನಾಳೆ ಒಂದು
> ದಿನ ಕೂಡಾ ಕೆಲಸ ಮಾಡಿದರೆ ನಿಮ್ಮ ಹಣವನ್ನು ಕೊಡುವೆ. ತಡವಾಗಿದ್ದಕ್ಕೆ ಕ್ಷಮಿಸಿ.
>
> ಏನು ಹೇಳಬೇಕೆಂದು ತೋಚದೆ ಟೀಚರ್ ಹಾಗೇ ನಿಂತುಬಿಟ್ಟರು.
>
> ಆ ಹುಡುಗನ ಹೆಸರು ರಾಜು.
> ಸ್ವಲ್ಪ ಹೊತ್ತಿನ ಮೌನದ ಬಳಿಕ ಟೀಚರ್ ಕೇಳಿದರು - ಯಾಕೆ ರಾಜು ಶಾಲೆಗೆ ಬರುತ್ತಾ ಇಲ್ಲ?
> ರಾಜು - ಇನ್ನು ಬರಲ್ಲಾ ಟೀಚರ್. ಮನೆಯಲ್ಲಿ ಅಕ್ಕ ಒಬ್ಬಳೇ ಇರೋದು. ಅವತ್ತು ಅಮ್ಮನಿಗೆ
> ಸೌಖ್ಯವಿಲ್ಲದ ಕಾರಣ ಟೀಚರ್ ನಿಂದ ಹಣ ಪಡೆದದ್ದು. ಆದರೆ... ಅಮ್ಮ ನಮ್ಮನ್ನು ಅಗಲಿದರು. ಆಕೆ
> ಬದುಕಬಹುದೆಂಬ ಚಿಕ್ಕ ಆಸೆಯಿತ್ತು.. ಹಲವರತ್ರ ಅಮ್ಮನಿಗೆ ಔಷಧ ತರಲು ದುಡ್ಡನ್ನು ಸಾಲ
> ಕೇಳಿದೆ.. ಎಲ್ಲೂ ಸಿಗದಾದಾಗ ಬೇರೆ ದಾರಿ ಕಾಣದೆ ಟೀಚರ್ ಬಳಿ ಬಂದು ಹಣ ಪಡೆದು ಅಮ್ಮನನ್ನು
> ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ನಮ್ಮನ್ನು ಬಿಟ್ಟು ಹೊರಟೋದರು...
> ಹೇಳುವಾಗ ರಾಜುವಿನ ಕಂಠ ಗದ್ಗರಿಸಿತು... ರಾಜು ಮುಂದುವರಿಸುತ್ತಾ ಹೇಳಿದ. ಒಂದು
> ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡೆ ಟೀಚರ್. ಅಕ್ಕನನ್ನು ಚೆನ್ನಾಗಿ ನೋಡಿಕೊಳ್ಳಬೇಕು....
> ಅಲ್ಲಿ ಸಿಗುವ ಸಂಬಳದ ಜೊತೆಗೆ ಹೀಗೆ ಹೊರೆಹೋರುವ ಕೆಲಸದಲ್ಲೂ ಒಂದಿಷ್ಟು ದುಡ್ಡು ಖರ್ಚಿಗೆ
> ಅಂತ ಸಿಗುತ್ತಿದೆ... ಹೇಗಾದರೂ ಬದುಕಬೇಕಲ್ಲ ಟೀಚರ್...
> ಟೀಚರ್ - ರಾಜು ನೀನು ಕಲಿಯಬೇಕು.
> ಆತ ಆಶ್ಚರ್ಯ ದಿಂದ ಇನ್ನು ಅದೆಲ್ಲ ಆಗಲ್ಲ ಟೀಚರ್...
> ಟೀಚರ್ - ಯಾಕೆ ಆಗಲ್ಲ ರಾಜು ? ಆಗಬೇಕು. ನೀನು ನಾಳೆ ಸಂಜೆ ಮನೆಗೆ ಬರಬೇಕು. ನೀನು ಮಿಸ್
> ಮಾಡಿಕೊಂಡ ಪಾಠಗಳನ್ನು ನಾನು ಹೇಳಿಕೊಡುತ್ತೇನೆ... ನಿನಗೆ ಕಲಿಯಲು ಒಳ್ಳೆಯ ಬುದ್ದಿ ಇದೆ.
> ಸ್ವಲ್ಪ ನಿನ್ನ ಮನಸಿನ ಒತ್ತಡವನ್ನೆಲ್ಲಾ ಕಡಿಮೆ ಮಾಡಿ ಕಲಿಯಬೇಕು. ಒಳ್ಳೆಯ ಮಾರ್ಕ್ ಗಳಿಸಿ
> ಪಾಸಾಗಬೇಕು.
> ಅಷ್ಟು ಹೇಳಿ ರಾಜುವಿನ ರಿಪ್ಲೈ ಗೆ ಕಾಯದೆ ಟೀಚರ್ ನಡೆದು ಸಾಗಿದರು..
>
> ಮರುದಿನ ಸಂಜೆ ರಾಜು ತನಗೆ ಸಿಕ್ಕಿದ ಸಂಬಳದೊಂದಿಗೆ ಟೀಚರ್ ನ ಮನೆ ತಲುಪಿದ‌.
> ರಾಜು ಟೀಚರಿಗೆ ಸಾವಿರ ರುಪಾಯಿಗಳನ್ನು ಮೊದಲು ಕೊಡಲು ಲೆಕ್ಕ ಮಾಡುತ್ತಿರುವಾಗ ಟೀಚರ್
> ತಡೆದು ಇದು ಈಗ ನಿನ್ನತ್ರ ಇರಲಿ. ನಾನು ಮತ್ತೆ ನಿನ್ನಿಂದ ಕೇಳಿ ಪಡೆಯುವೆ ಅಂದರು.
> ರಾಜು - ಟೀಚರ್ ನನಗೋಸ್ಕರ ಯಾಕೆ ಕಷ್ಟಪಡುತ್ತಿದ್ದೀರಾ...? ನಾನು ನನ್ನ ಕೆಲಸದಲ್ಲಿ
> ಹೊಂದಿಕೊಂಳ್ಳುತ್ತಿದ್ದೇನೆ..
> ಟೀಚರ್ - ನನಗೆ ಕಷ್ಟವಾ..?? ಹಾಗಂತ ಯಾರು ಹೇಳಿದ್ದು??  ಜ್ಞಾನವನ್ನು ಹಂಚಿಕೊಡುವುದು
> ಒಬ್ಬ ಗುರುವಿನ ಕರ್ತವ್ಯವಾಗಿದೆ... ನೋಡು ರಾಜು ನೀನು ಹಾಗೇನೂ ಚಿಂತಿಸಬಾರದು. ಕಲಿತು
> ಒಳ್ಳೆಯ ನೆಲೆಯನ್ನು ಕಂಡುಕೊಳ್ಳಬೇಕು...
> ರಾಜು - ಆಸೆಯಿದೆ ಟೀಚರ್... ಆದರೆ , ನನ್ನ ಅವಸ್ಥೆ.... ಅದಕಾರಣವೇ ಕಲಿಕೆ ಬೇಡ ಅಂತ
> ನಿರ್ಧರಿಸಿರೋದು... ಈಗ ತಾವು ಹೇಳುವಾಗ ಏನೋ ಒಂದು ಭರವಸೆ ಮೂಡುತ್ತಿದೆ.. ಯಾರಾದರೂ ನನಗೆ
> ಸಹಾಯ ಮಾಡಿಯಾರು ಅಂತ ಅನಿಸುತ್ತಿದೆ...
> ಟೀಚರ್ - ನಿನ್ನಿಂದ ಖಂಡಿತವಾಗಿಯೂ ಸಾಧ್ಯ. ನಿನ್ನ ಮೇಲೆ ನನಗೆ ನಂಬಿಕೆಯಿದೆ. ಕಲಿತು
> ಒಳ್ಳೆಯ ಮಾರ್ಕ್ ನೊಂದಿಗೆ ಪಾಸಾಗಿ, ಜೀವನದಲ್ಲಿ ಒಳ್ಳೆಯ ನೆಲೆಯನ್ನು ಕಂಡುಕೊಳ್ಳಬೇಕು.
> ಅದುವೇ  ನೀನು ನನಗೆ ಕೊಡುವ ಗುರುದಕ್ಷಿಣೆ....
>
> ಹಾಗೇ ರಾಜು ಕಲಿಯಲಾರಂಬಿಸಿದ.. ಬಹಳ ಬೇಗನೇ ಒಂದು ಛಲದೊಂದಿಗೆ ಪಾಠಗಳನ್ನು
> ಅರ್ಥಮಾಡಿಕೊಂಡು, ಪರೀಕ್ಷೆಯಲ್ಲಿ ಉಳಿದ ವಿದ್ಯಾರ್ಥಿಗಳನ್ನು ಹಿಂದಿಕ್ಕಿ ಕ್ಲಾಸಿನಲ್ಲಿ
> ಮೊದಲ  ಸ್ಥಾನವನ್ನು ಗಿಟ್ಟಿಸಿಕೊಂಡ... ಶಾಂತಾ ಟೀಚರ್ ನ ಪ್ರೀತಿಯ ಶಿಷ್ಯನಾಗಿ ಬದಲಾದ..
> ರಾಜುವಿಗೆ ಶಾಂತಾ ಟೀಚರ್ ಕೇವಲ ಟೀಚರ್ ಆಗಿರಲಿಲ್ಲ... ಅಮ್ಮನೂ ಆಗಿದ್ದರು.
> ಹೀಗಿರುವಾಗ ಟೀಚರ್ ನ ಪತಿ ವಿದೇಶದಲ್ಲಿದ್ದು ಪತಿಯ ಒತ್ತಾಯದ ಮೇರೆಗೆ ಶಾಂತಾಟೀಚರ್ ಮತ್ತು
> ಮಕ್ಕಳು ವಿದೇಶಕ್ಕೆ ಹೋಗಲು ನಿರ್ಧರಿಸಿದರು.
> ವಿಷಯ ತಿಳಿದ ರಾಜು ಟೀಚರ್ ನ ಮನೆಗೆ ಓಡೋಡಿ ಬಂದ.
> ರಾಜು - ಟೀಚರ್... ತಾವು ಕೂಡಾ ನನ್ನನ್ನು ಒಂಟಿಯಾಗಿಸಿ ಹೊರಟಿದ್ದೀರಾ...? ರಾಜುವಿನ
> ಕಣ್ಣುಗಳು ತುಂಬಿತು...
> ಟೀಚರ್ - ಹೋಗಲೇಬೇಕಾದ ಅನಿವಾರ್ಯತೆ ಇದೆ ರಾಜೂ. ನೀನು ಯಾವತ್ತೂ ಒಂಟಿಯಾಗಲಾರ... ನನ್ನ
> ಪ್ರಾರ್ಥನೆ ಎಂದೆಂದಿಗೂ ನಿನ್ನ ಜೊತೆ ಇರುತ್ತದೆ. ಚೆನ್ನಾಗಿ ಕಲಿಯಬೇಕು ಆಯಿತಾ... ಶಾಂತಾ
> ಟೀಚರಿನ ದುಃಖದ ಕಟ್ಟೆ ಒಡೆಯಿತು. ಬೇರೇನೂ ರಾಜುವಿನತ್ರ ಹೇಳಲು ಟೀಚರಿಗೆ ಇರಲಿಲ್ಲ.
> ರಾಜುವಿನ ಮನೆಯ ಖರ್ಚು ಮತ್ತು ವಿದ್ಯಾಭ್ಯಾಸದ ಖರ್ಚುಗಳಿಗಾಗಿ ಟೀಚರ್ ತನ್ನ ಗೆಳತಿಯೊಬ್ಬಳ
> ಹತ್ತಿರ ಒಂದಿಷ್ಟು ದುಡ್ಡನ್ನು ಕೊಟ್ಟು ಹೋಗಿದ್ದರು..
>
> ಕಾಲಚಕ್ರವು ಉರುಳಿತು. ಶಾಂತಾ ಟೀಚರ್ ನ ಪತಿಯ ವಿಯೋಗವು ಟೀಚರ್ ನ ಬದುಕಿನಲ್ಲಿ ದೊಡ್ಡ
> ಬಿರುಗಾಳಿಯನ್ನೇ ಸೃಷ್ಟಿಮಾಡಿತು...
> ಕಷ್ಟಗಳು ಏನೆಂದು ಅರಿಯದೆ ಬದುಕಿದ ತನ್ನ ಮಕ್ಕಳಿಗೆ ಟೀಚರ್ ಬಾರವಾಗತೊಡಗಿದರು...
> ಅಮ್ಮನನ್ನು ನೋಡಿಕೊಳ್ಳುವವರು ಯಾರು ಎಂಬ ವಿಷಯದಲ್ಲಿ ಮಕ್ಕಳು ಪರಸ್ಪರ ಜಗಳಾಡತೊಡಗಿದರು...
> ಕೊನೆಗೆ ಅಮ್ಮನನ್ನು ಊರಿನಲ್ಲಿರುವ ವೃದ್ಧಾಶ್ರಮದಲ್ಲಿ ಬಿಡಲು ನಿರ್ಧರಿಸಿದರು...
> ಶಾಂತಾ ಟೀಚರ್ ಮನಸಲ್ಲಿ ಅಂದುಕೊಂಡರು. ಹುಟ್ಟಿದ ಊರಲ್ಲೇ ಸಾಯಬಹುದಲ್ಲಾ ಅಂತ ತನ್ನನ್ನು
> ತಾನೇ ಸಂತೈಸಿಕೊಂಡರು.... ಮಕ್ಕಳ ಮಾತುಗಳನ್ನು ಅನುಸರಿಸದೆ ಬೇರೆ ದಾರಿಯೂ ಇರಲಿಲ್ಲ....
> ವರ್ಷಗಳ ನಂತರ ವಿದೇಶದಿಂದ ವಾಪಾಸಾದ ಶಾಂತಾ ಟೀಚರ್ ವೃದ್ದಾಶ್ರಮದಲ್ಲಿ ಇತರ ಅಮ್ಮಂದಿರ
> ಜೊತೆ ಬಹು ಬೇಗ ಹೊಂದಿಕೊಂಡರು....
> ಒಂದು ದಿನ ಅಲ್ಲಿನ ಕೆಲಸದಾಕೆ ಅಮ್ಮು ಬಂದು ಹೇಳಿದಳು - ಶಾಂತಾ ಟೀಚರಿಗೆ ಒಬ್ಬರು ವಿಸಿಟರ್
> ಇದ್ದಾರೆ...
> ಯಾರು ಅಂತ ನೋಡಲು ಅಮ್ಮುವಿನ ಜೊತೆ ವರಾಂಡಾಕ್ಕೆ ಹೋದರು...
> ಟೀಚರ್..... ಆತ ಮುಗುಳ್ನಗುತ್ತಾ ಕರೆದ.
> ರಾಜು.....!! ಎಷ್ಟು ದೊಡ್ಡವನಾಗಿಬಿಟ್ಟಿದ್ದೀಯಾ...!!
> ರಾಜು - ಟೀಚರ್ ನಿಮ್ಮ ರಾಜು ಈಗ ಕೇವಲ ರಾಜು ಅಲ್ಲಾ...  ಡಾಕ್ಟರ್ ರಾಜುವಾಗಿದ್ದಾನೆ...
> ಆತ ಟೀಚರ್ ನ ಕೈಗಳನ್ನು ಹಿಡಿದು ಒತ್ತುತ್ತಾ ಹೇಳಿದ.
> ಸಂತೋಷದಿಂದ ಟೀಚರ್ ನ ಕಣ್ಣುಗಳಲ್ಲಿ ಆನಂದಬಾಷ್ಪವು ತುಂಬಿತು...
> ರಾಜು - ಯಾಕೆ ಟೀಚರ್ ಅಳುತ್ತಿದ್ದೀರಾ...? ಆತ ಟೀಚರ್ ನ ಕಣ್ಣುಗಳನ್ನು ಒರೆಸಿದ.
> ಟೀಚರ್ - ಸಂತೋಷದಿಂದ ಕಣ್ಣುಗಳು ತುಂಬಿದ್ದು ರಾಜೂ... ಸಾಯೋದಕ್ಕೆ ಮುಂಚೆ ನಿನ್ನನ್ನು
> ನಾನು ಅಂದುಕೊಂಡ ಹಾಗೇ ಒಳ್ಳೆಯ ನೆಲೆಯಲ್ಲಿ ನೋಡಲು ಸಾಧ್ಯವಾಯಿತಲ್ಲಾ.... ಟೀಚರ್ ಆತನ
> ತಲೆಯನ್ನು ಪ್ರೀತಿಯಿಂದ ಸವರಿದರು....
>
> ರಾಜು - ನಾನು ಬಂದದ್ದು ನಿಮ್ಮನ್ನು ಕರಕ್ಕೊಂಡು ಹೋಗೋಕೆ... ನೀವು ಇರಬೇಕಾದದ್ದು ಇಲ್ಲಿ
> ಅಲ್ಲ....
> ಅನಾಥತ್ವದ ನಡುವಿನಲ್ಲಿ ಬೆಳೆದು, ಒಬ್ಬಳು ತಾಯಿಗೆ ಕೊಡಬೇಕಾದ ಎಲ್ಲಾ ಸ್ನೇಹವನ್ನೂ
> ಕೂಡಿಟ್ಟು ನನ್ನ ಪತ್ನಿ ನಿಮಗಾಗಿ ಕಾಯುತ್ತಿದ್ದಾಳೆ... ಅಜ್ಜಿ ಕಥೆಗಳನ್ನು ಕೇಳುತ್ತಾ ಮಲಗಿ
> ನಿದ್ರಿಸಲು ಕಾತುರದಿಂದ ಕಾಯುತ್ತಿದ್ದಾರೆ ನನ್ನ ಮುದ್ದು ಮಕ್ಕಳು.... ಹೋಗೋಣ ಹೊರಡಿರಿ....
> ಟೀಚರ್ - ಕಂದಾ.... ಟೀಚರ್ ನ ಕಣ್ಣುಗಳು ತುಂಬಿ ತುಳುಕಿದವು...
> ರಾಜು - ಇನ್ನು ಈ ಮಗ ಇರುವಷ್ಟು ದಿನ ನಿಮ್ಮ ಈ ಕಣ್ಣುಗಳು ಒದ್ದೆಯಾಗಲು ಬಿಡಲಾರೆ.... ಆತ
> ಟೀಚರ್ ನ ಕೈಯನ್ನು ಜೋರಾಗಿ ಒತ್ತಿ ಹಿಡಿದು ಹೇಳಿದ... ಆ ಹಿಡಿತದಲ್ಲಿ ಸ್ನೇಹ, ನಂಬಿಕೆ,
> ಆಶ್ರಯ, ಧೈರ್ಯ, ಆತ್ಮವಿಶ್ವಾಸ  ಎಲ್ಲವೂ ಅಡಗಿತ್ತು....
> ಒಬ್ಬಳು ಅಮ್ಮನಿಗೆ ಕೊಡುವುದಕ್ಕೆ ಕೂಡಿಟ್ಟ ಸ್ನೇಹವೆಲ್ಲಾ ಆತನ ಕಣ್ಣುಗಳಲ್ಲಿ ಆ ಟೀಚರ್
> ಕಂಡರು.........( ಫಾರ್ವರ್ಡ್ )
>
> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to