Super mam

On Feb 13, 2018 3:58 PM, "Sangamma Katti" <sangammaka...@gmail.com> wrote:

> ಅನಂತ ಧನ್ಯವಾದಗಳು ಮೇಡಂ.
>
> On 13-Feb-2018 2:47 PM, "Sameera samee" <mehak.sa...@gmail.com> wrote:
>
>> 💠ಮಹಾ ಶಿವರಾತ್ರಿಯ ಮಹತ್ವ ಮತ್ತು ಆಚರಣೆ💠
>> 🍃🍃🍃🍃🍃🍃🍃🍃🍃🍃🍃🍃🍃🍃🍃
>>
>> 🙏ಆತ್ಮೀಯ ಸನ್ಮಿತ್ರರಿಗೆ ಮಹಾ ಶಿವರಾತ್ರಿ ಹಬ್ಬದ ಭಕ್ತಿಯ ಹಾರ್ದಿಕ ಹೃತ್ಪೂರ್ವಕ
>> ಶುಭಾಶಯಗಳು🙏
>>
>> 👉ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದು. ಈ ಹಬ್ಬವನ್ನು ಶಿಶಿರ ಋತುವಿನ ಮಾಘ ಮಾಸದ ಬಹುಳ
>> ಚತುರ್ದಶಿಯಂದು ಆಚರಿಸಲಾಗುತ್ತದೆ. ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ, ೪ ಯಾಮಗಳಲ್ಲೂ
>> ಶಿವ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ. ಇದರ ಮುಂದಿನ ದಿನ ವಿವಿಧ ರೀತಿಯ ಸಿಹಿ
>> ತಿನಿಸುಗಳನ್ನು ತಯಾರಿಸುವರು. ತಂಬಿಟ್ಟು ಈ ಹಬ್ಬದ ಪ್ರಮುಖ ತಿನಿಸು.
>>
>> 👉ಶಿವರಾತ್ರಿ, ಈ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ
>> ಪೂಜಿಸುತ್ತಾರೆ. ಶಿವರಾತ್ರಿಯ ದಿನ ಭಕ್ತಾದಿಗಳು ಶಂಭೋ ಶಂಕರನನ್ನು ನೆನೆದು,
>> ಪುನೀತರಾಗುತ್ತಾರೆ. ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ
>> ದಯಾಮಯಿ ಶಿವನಿಗೆ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ
>> ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು. ಈ ಹಬ್ಬದಂದು ದಿನವಿಡೀ
>> ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ.
>>
>> 💐🕉️ ಮಹಾ ಶಿವರಾತ್ರಿಯ ಹಬ್ಬದ ಆಚರಣೆಯ ಪುರಾಣ ಕಥೆ🕉️💐
>>
>> 👉ಶಿವಪುರಾಣದಲ್ಲಿ ಶಿವಾರಾತ್ರಿಯ ಆಚರಣೆ ಬಂದಿರುವ ಬಗ್ಗೆ ಒಂದು ಸಣ್ಣ ಕಥೆ ಇದೆ....
>> ದೇವಲೋಕದಲ್ಲಿ ಒಮ್ಮೆ ಬ್ರಹ್ಮ ಹಾಗೂ ವಿಷ್ಣುವಿನ ನಡುವೆ ಯಾರು ಶ್ರೇಷ್ಠರು ಎಂಬ ವಿಷಯಕ್ಕೆ
>> ವಾಗ್ವಾದಗಳು ನಡೆಯುತ್ತಿದ್ದವು. ಮಹಾ ದೇವತೆಗಳಿಬ್ಬರನ್ನೂ ಸಮಾಧಾನ ಮಾಡುವುದು ದುರ್ಲಭ
>> ಎನಿಸಿದಾಗ, ದೇವತೆಗಳೆಲ್ಲ ಹೋಗಿ ಪರಶಿವನನ್ನು ಬೇಡಿಕೊಳ್ಳುತ್ತಾರೆ. ವಿಷ್ಣು ಹಾಗೂ ಬ್ರಹ್ಮರ
>> ಜಗಳವನ್ನು ಶಮನ ಮಾಡುವಂತೆ ಕೋರಿಕೊಳ್ಳುತ್ತಾರೆ. ಆಗ ವಿಷ್ಣು ಮತ್ತು ಬ್ರಹ್ಮರ ನಡುವೆ ಶಿವ,
>> ಅಗ್ನಿಕಂಭದ ರೂಪದಲ್ಲಿ ಬಂದು ನಿಂತು ತನ್ನ ಮೂಲವನ್ನು ಕಂಡುಹಿಡಿಯಲು ಸೂಚಿಸುತ್ತಾನೆ.
>>
>> 👉ಆಗ ಹಂಸದ ರೂಪ ತಾಳಿದ ಬ್ರಹ್ಮ ಅಗ್ನಿ ಕಂಭದ ಶಿರವನ್ನು ಹುಡುಕಲು ಮೇಲ್ಮುಖವಾಗಿ
>> ಹೊರಡುತ್ತಾನೆ. ವಿಷ್ಣು ವರಾಹವತಾರ ತಾಳಿ ಕಂಭದ ತಳವನ್ನು ನೋಡುವುದಕ್ಕಾಗಿ ಪಾತಾಳಕ್ಕೆ
>> ಇಳಿಯುತ್ತಾನೆ. ಎಷ್ಟೇ ಮುಂದೆ ಸಾಗಿದರೂ ಬ್ರಹ್ಮ ಹಾಗೂ ವಿಷ್ಣು ಇವರಿಬ್ಬರಿಗೂ ಕಂಭದ
>> ಅಂತ್ಯವೇ ಕಾಣುವುದಿಲ್ಲ. ಅನಂತವಾಗಿರುವ ಶಿವನ ಶಕ್ತಿಯನ್ನು ನೋಡಿದ ವಿಷ್ಣು ಹಾಗೂ
>> ಬ್ರಹ್ಮರಿಗೆ ಸತ್ಯದ ಅರಿವಾಗುತ್ತದೆ.
>>
>> 👉ಆದರೆ ಶಿವನ ಜಡೆಯಿಂದ ಕೆಳಗೆ ಬೀಳುತ್ತಿದ್ದ ಕೇತಕಿ ಪುಷ್ಫದ ಬಳಿ ಬ್ರಹ್ಮ , ನೀನು
>> ಎಲ್ಲಿಂದ ಬೀಳುತ್ತಿದ್ದೀಯ ಎಂದು ಪ್ರಶ್ನಿಸುತ್ತಾನೆ. ಆಗ ಆ ಪುಷ್ಪವು ನಾನು ಅಗ್ನಿ ಕಂಭದ
>> ಶಿರದಿಂದ ಬೀಳುತ್ತಿದ್ದೇನೆ ಎಂಬ ಉತ್ತರ ನೀಡುತ್ತದೆ. ಆಗ ಬ್ರಹ್ಮ ಶಿವನಲ್ಲಿಗೆ ಬಂದು ಕೇತಕಿ
>> ಪುಪ್ಪವನ್ನು ತೋರಿಸಿ, ತಾನು ಅಗ್ನಿ ಕಂಭದ ಶಿರಭಾಗವನ್ನು ನೋಡಿರುವುದಾಗಿಯೂ ಅಲ್ಲಿಂದಲೇ
>> ಕೇತಕಿ ಪುಷ್ಪವನ್ನು ತಂದಿರುವುದಾಗಿಯೂ ಹೇಳುತ್ತಾನೆ. ಇವರಿಬ್ಬರ ಮೋಸವನ್ನು ಅರಿತ ಶಿವ,
>> ಬ್ರಹ್ಮನನ್ನು ಯಾರೂ ಪೂಜಿಸಕೂಡದು ಎಂದು ಶಾಪ ನೀಡಿ ಲಿಂಗರೂಪ ತಾಳುತ್ತಾನೆ. ಅಂದು ಮಾಘ ಮಾಸದ
>> ಬಹುಳ ಚತುರ್ದಶಿಯಾಗಿರುತ್ತದೆ. ಹೀಗಾಗಿ, ಶಿವ ಲಿಂಗರೂಪ ತಾಳಿದ ಮಾಘ ಮಾಸದ ಬಹುಳ
>> ಚತುರ್ದಶಿಯಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ.
>>
>> 👉ಶಿವರಾತ್ರಿಯ ದಿನ ರಾತ್ರಿ ಪೂಜೆಯೇ ವಿಶೇಷ. ಸಾಮಾನ್ಯವಾಗಿ ಎಲ್ಲ ಹಬ್ಬಗಳಲ್ಲಿಯೂ
>> ದೇವರಿಗೆ ಹಗಲು ಪೂಜೆ ನಡೆಯುತ್ತದೆ. ಆದರೆ ಶಿವರಾತ್ರಿ ಮಾತ್ರ ರಾತ್ರಿಯ ಹೊತ್ತು ಪೂಜೆ,
>> ಭಜನೆ ನಡೆಸುವ ವಿಶೇಷ ಆಚರಣೆ. ರಾತ್ರಿ ಎಂದರೆ ಕತ್ತಲು, ಕತ್ತಲು ಎಂದರೆ ಅಜ್ಞಾನ.
>> ಅಜ್ಞಾನವನ್ನು ಕಳೆದು ಸುಜ್ಞಾನ ಬೆಳಗಿಸು ಎಂದು ಆ ಶಿವನನ್ನು ಬೇಡುವ ಶುಭ ದಿನವೇ
>> ಶಿವರಾತ್ರಿ. ಅಜ್ಞಾನ ತುಂಬಿರುವಲ್ಲಿ ಶಿವ ಸಂಚರಿಸಿ ಜ್ಞಾನ ದೀವಿಗೆಯನ್ನು ಬೆಳಗುತ್ತಾನೆ
>> ಎಂಬ ನಂಬಿಕೆ ಇದೆ.
>>
>> 👉ಶಿವನಿಗೆ ಅತೀ ಶ್ರೇಷ್ಠವಾಗಿರುವ ಬಿಲ್ವ ಪತ್ರೆಯನ್ನು ಅರ್ಪಿಸಿ, ತಿಲಗಿ ಪುಷ್ಪ,
>> ತುಳಸಿಯಿಂದ ಶಿವಲಿಂಗವನ್ನು ಅಲಂಕಾರ ಮಾಡಿ ಶಿವನ್ನು ಭಜಿಸಿದರೆ, ಪಾಪಗಳು
>> ಪರಿಹಾರವಾಗುತ್ತವೆ, ಮೋಡಗಳೇ ಇಲ್ಲದ ಶುಭ್ರ ಆಕಾಶದಲ್ಲಿ ಬಂದಿರುವ ಚಂದ್ರನ ಬೆಳಕಿನಲ್ಲಿ
>> ಶಿವನಿಗೆ ಅಭಿಷೇಕ ಮಾಡಿ ಆರಾಧಿಸಿದರೆ ಅತ್ಯಂತ್ರ ಶ್ರೇಷ್ಠ ಎಂಬ ನಂಬಿಕೆಗಳಿವೆ. ಶಿವರಾತ್ರಿಯ
>> ದಿನವಿಡೀ ಉಪವಾಸ ಮಾಡಿ, ಜಾಗರಣೆ ಮಾಡಿ ಶಿವನನ್ನು ಆರಾಧಿಸಿದರೆ ಸಕಲ ಪಾಪಗಳೂ ಕಳೆಯುತ್ತವೆ
>> ಎಂದು ನಂಬಲಾಗಿದೆ.
>>
>> 👉ಎಲ್ಲಾ ಜೀವರಾಶಿಗಳನ್ನು ಪೊರೆಯುವ ಶಿವ ಎಲ್ಲಾ ಆಡಂಬರಗಳಿಂದ ಮುಕ್ತ. ಆತ
>> ಆಭರಣಪ್ರಿಯನಲ್ಲ, ಅಲಂಕಾರ ಪ್ರಿಯನೂ ಅಲ್ಲ. ಭಸ್ಮವನ್ನು ಬಳಿದುಕೊಂಡು, ಹುಲಿಯ ಚರ್ಮವನ್ನು
>> ಉಟ್ಟು, ಸ್ಮಶಾನದಲ್ಲಿರುವ ಸರಳ ಮತ್ತು ಅಮೋಘ ಶಕ್ತಿ.
>>
>> 👉ಶಿವನು ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಕಲ್ಮಶ ಮನಸ್ಸುಗಳ ಪ್ರತೀಕ. ಛಲಬಿಡದ ಸಾಧನೆಯ
>> ದ್ಯೋತಕ. ಧ್ಯಾನಪ್ರಿಯ ಶಿವ ಭಕ್ತರಿಂದ ಬಯಸುವುದು ನಿಶ್ಕಲ್ಮಶ ಮತ್ತು ಪ್ರಾಮಾಣಿಕ ಭಕ್ತಿ
>> ಮಾತ್ರ. ತೋರಿಕೆಯ ಮತ್ತು ಆಡಂಬರದ ಪೂಜೆಯನ್ನು ಬಯಸದ ಮಹಾದೇವನನ್ನು ಇಂದ್ರಿಯ ನಿಗ್ರಹ,
>> ಧ್ಯಾನ, ಸಂಯಮ ಮತ್ತು ವಿಶ್ವಾಸ ಭರಿತರಾಗಿ ಶಿವರಾತ್ರಿ ಯಂದು ಧ್ಯಾನಿಸಿದರೆ ಆತ
>> ಪ್ರಸನ್ನಗೊಳ್ಳುತ್ತಾನೆ.
>>
>> 👉ಎಲ್ಲ ಆಡಂಬರಗಳಿಂದ ಮುಕ್ತರಾಗಿ, ಸರಳ ಮನಸ್ಸಿನಿಂದ ಪರಶಿವನನ್ನು ನೆನದು, ಭಜಿಸಿ
>> ಶಿವರಾತ್ರಿಯನ್ನು ಆಚರಿಸೋಣ... ಸರಳತೆ, ಪ್ರಾಮಾಣಿಕತೆ, ಸತ್ಯ ಮತ್ತು ಶಕ್ತಿಯ ದೇವತೆ ಈಶ್ವರ
>> ಲೋಕದಲ್ಲಿರುವ ಸಕಲ ಸಂಕಷ್ಟಗಳಿಗೆ ಪರಿಹಾರ ನೀಡಲಿ ಎಂಬುದು ಎಲ್ಲರ ಕೋರಿಕೆ.. ಎಲ್ಲರಿಗೂ ಮಹಾ
>> ಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು.
>>
>> 🌹ಮಹಾ ಶಿವರಾತ್ರಿ, ರುದ್ರನ ಮಂಗಳಕರ ರಾತ್ರಿ 🌹
>>
>> 👉ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ
>> ಮಂಗಳಕರ ರಾತ್ರಿ. ಹಗಲು ಉಪವಾಸವಿದ್ದು, ರಾತ್ರಿ ವೇಳೆ ಜಾಗರಣೆ ಮಾಡಿ, ಶಿವಧ್ಯಾನ ಮಾಡಿ
>> ಶಿವನ ಕೃಪೆಗೆ ಪಾತ್ರವಾಗುವ ಶುಭ ದಿನ. ಈ ದಿನ ಶಿವನನ್ನು ಭಕ್ತಿಯಿಂದ ಪೂಜಿಸಿದರೆ, ತಾವು
>> ಮಾಡಿದ ಪಾಪಗಳೆಲ್ಲವೂ ಪರಿಹಾರವಾಗಿ, ಮೋಕ್ಷ ಪ್ರಾಪ್ತವಾಗುತ್ತದೆ ಎಂಬುದು ಭಕ್ತರ ಬಲವಾದ
>> ನಂಬಿಕೆ. ಮದುವೆಯಾಗದ ಹೆಣ್ಣುಮಕ್ಕಳು ಶಿವಗುಣರೂಪಿಯಾದ ಅನುರೂಪ ಪತಿಗಾಗಿ ಪ್ರಾರ್ಥಿಸಿದರೆ,
>> ಮುತ್ತೈದೆಯರು ಪತಿಯ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸುವುದು ಸಂಪ್ರದಾಯ. ಶಿವರಾತ್ರಿಯಂದು
>> ಶಿವನನ್ನು ಪೂಜಿಸಿದರೆ, ಸುಖ, ಶಾಂತಿ, ಸಮೃದ್ಧಿ ದೊರೆಯುವುದೆಂಬ ನಂಬಿಕೆ ಆಸ್ತಿಕರದು.
>>
>> 🌼 ಮಹಾ ಶಿವರಾತ್ರಿಯ ಆಚರಣೆ🌼
>>
>> 👉ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು
>> ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ
>> ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಶಿವ-ಪಾರ್ವತಿಯರ ವಿವಾಹ ಮಹೋತ್ಸವದ ದಿನವಿದು
>> ಎಂಬುದು ವಿಶೇಷ. ಹಿಮವಂತನ ಮಗಳು ಪಾರ್ವತಿ ಈ ದಿನದಂದು ರಾತ್ರಿಯಿಡಿ ಶಿವನಾಮ ಪಠಿಸುತ್ತಾ,
>> ತಪಸ್ಸು ಮಾಡಿ, ಶಿವನನ್ನು ಮೆಚ್ಚಿಸಿ, ವಿವಾಹವಾದಳೆಂಬುದು ಪ್ರತೀತಿ.
>>
>> 👉ಶಿವ ರುದ್ರತಾಂಡವನಾಡಿದ ರಾತ್ರಿಯೂ ಇಂದೇ ಎನ್ನಲಾಗುತ್ತದೆ. ದೇವತೆಗಳು ಹಾಗೂ ಅಸುರರ
>> ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ
>> ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ.
>> ಹಾಗಾಗಿ, ಭಕ್ತರು ಇಡೀ ರಾತ್ರಿ ಎಚ್ಚರವಿದ್ದು, ನೀಲಕಂಠನನ್ನು ಸ್ತುತಿಸುತ್ತಾರೆ.
>>
>> 👉ಭಗೀರಥನ ತಪಸ್ಸಿಗೆ ಮೆಚ್ಚಿ ಇಳೆಗೆ ಇಳಿದು ಬಂದ ಗಂಗೆಯನ್ನು ಶಿವ ತನ್ನ ಜಡೆಯಲ್ಲಿ
>> ತುಂಬಿಸಿಕೊಂಡಿದ್ದ. ಇದರಿಂದ ವಿಚಲಿತನಾದ ಭಗೀರಥ ಗಂಗೆಯನ್ನು ಭೂಮಿಗೆ ಹರಿಸುವಂತೆ ಶಿವನನ್ನು
>> ಪ್ರಾರ್ಥಿಸಿದ. ಆತನ ಭಕ್ತಿಗೆ ಮೆಚ್ಚಿ ಶಿವ ಗಂಗೆಯನ್ನು ಹರಿಯಬಿಟ್ಟಿದ್ದು ಇದೇ ದಿನ
>> ಎನ್ನುತ್ತದೆ ಪುರಾಣ. ಲಿಂಗಪುರಾಣದ ಪ್ರಕಾರ, ಲಿಂಗ ರೂಪಿಯಾಗಿ ಭಕ್ತರಿಗೆ ಅನುಗ್ರಹ ನೀಡಿದ
>> ದಿನವಿದು. ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ,
>> ಶಿವರಾತ್ರಿಯಂದು ಶಿವ ಲಿಂಗರೂಪಿಯಾಗಿ ದರ್ಶನ ನೀಡಿದ ಎಂಬುದು ಪ್ರತೀತಿ.
>>
>> 🔯🙏ಬೇಡನ ಶಿವಭಕ್ತಿ🙏🔯
>>
>> 👉ಶಿವರಾತ್ರಿ ಆಚರಣೆಯ ಕುರಿತಾಗಿ ಪ್ರಚಲಿತದಲ್ಲಿರುವ ಕಥೆಯಿದು. ಹಿಂದೆ ಬೇಡನೊಬ್ಬ
>> ಕಾಡಿನಲ್ಲಿ ಬೇಟೆಗಾಗಿ ತೆರಳಿದ್ದ. ದಿನವಿಡಿ ಅಲೆದರೂ ಆತನಿಗೆ ಯಾವುದೇ ಬೇಟೆ ಸಿಗಲಿಲ್ಲ.
>> ಬೇಟೆ ಅರಸಿ ಹೊರಟ ಬೇಡ ದಾರಿ ತಪ್ಪಿ ಅರಣ್ಯದಲ್ಲೇ ಅಲೆಯತೊಡಗಿದ. ಅದಾಗಲೇ ಸಂಜೆಯಾಗಿತ್ತು.
>> ಕ್ರೂರ ಪ್ರಾಣಿಗಳು ಆತನನ್ನು ಸುತ್ತುವರಿಯತೊಡಗಿದವು. ಭಯಗ್ರಸ್ತನಾದ ಬೇಡ ಮರವೇರಿದ.
>> ಮನದಲ್ಲೇ ಶಿವನನ್ನು ಧ್ಯಾನಿಸುತ್ತಾ ಮರದ ಎಲೆಗಳನ್ನು ಕಿತ್ತು ಕೆಳಗಡೆ ಹಾಕತೊಡಗಿದ. ಆ
>> ಎಲೆಗಳು ಅವನಿಗರಿವಿಲ್ಲದಂತೆಯೇ ಕೆಳಗಡೆಯಿದ್ದ ಶಿವಲಿಂಗದ ಮೇಲೆ ಬೀಳತೊಡಗಿದವು.
>>
>> 👉ಕಾಕತಾಳೀಯವೆಂದರೆ ಆತ ಏರಿದ್ದ ಮರ ಬಿಲ್ವಮರವಾಗಿತ್ತು. ಶಿವರಾತ್ರಿಯಂದು ಪೂರ್ತಿ
>> ಜಾಗರಣೆಯಿದ್ದು, ಬಿಲ್ವಪತ್ರೆಯನ್ನು ಶಿವನಿಗೆ ಅರ್ಪಿಸಿದ ಬೇಡನಿಗೆ ಶಿವ ಅಭಯ ನೀಡಿದ. ಶಿವನೇ
>> ಆತನನ್ನು ರಕ್ಷಿಸಿದ ಎಂಬ ಸುದ್ದಿ ಹರಡಿ ಭಕ್ತರು ಶಿವರಾತ್ರಿಯಂದು ಶಿವನನ್ನು ಪೂಜಿಸಲು
>> ಆರಂಭಿಸಿದರು. ಪುಣ್ಯದ ಲವಾಗಿ ಬೇಡ ಮುಂದಿನ ಜನ್ಮದಲ್ಲಿ ರಾಜಾ ಚಿತ್ರಭಾನುವಾಗಿ ಜನಿಸಿದ
>> ಎಂಬುದು ಕಥೆ. ಮಹಾಭಾರತದಲ್ಲಿ ಬರುವ ಈ ಕಥೆಯನ್ನು ಮರಣಶಯ್ಯೆಯಲ್ಲಿ ಮಲಗಿದ್ದ ಭೀಷ್ಮ
>> ಹೇಳಿದನೆಂಬುದು ಪ್ರತೀತಿ.
>>
>> 💥🌷 ಮಹಾ ಶಿವರಾತ್ರಿ ಆಚರಣೆ ಹಿನ್ನೆಲೆ🌷💥
>>
>> ೧. ಪ್ರತಿ ಸಂವತ್ಸರದಲ್ಲಿ.. ಶಿಶಿರ ಋತುವಿನ ಮಾಘ ಮಾಸದ ಕೃಷ್ಣಪಕ್ಷ ಚತುರ್ದಶಿಯಂದು...
>> ರಾತ್ರಿ ಸಮಯದಲ್ಲಿ ಶಿವ ಪಾರ್ವತಿ ಜೊತೆಯಲ್ಲಿ ಭೂಮಿಗೆ ಬರುತ್ತಾನೆ.. ಭೂಮಿಯಲ್ಲಿ
>> ಸಂಚರಿಸುತ್ತ ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣ ಗೊಳ್ಳುತ್ತಾನೆ.. ಆ ಸಮಯದಲ್ಲಿ
>> ಅಂದ್ರೆ ಶಿವರಾತ್ರಿ ರಾತ್ರಿ ವೇಳೆಯಲ್ಲಿ ತನ್ನನ್ನು ಯಾರು ಪೂಜಿಸುವರೋ ಅವರ ಪಾಪಗಳು
>> ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ ತಿಳಿಸಿದ್ದಾನೆ ಎಂಬುದರ ಬಗ್ಗೆ ಶಾಸ್ತ್ರೋಕ್ತಿ ಯೂ
>> ಇದೆ.
>>
>> ೨. ಸ್ಕಂದ ಪುರಾಣ ದಲ್ಲಿ ಶಿವರಾತ್ರಿ ಹಬ್ಬದ ಬಗ್ಗೆ ಉಲ್ಲೇಖವಿದೆ.. ಶಿವರಾತ್ರಿಯು ಸಮಯ
>> ಪೂಜೆಗೆ ಬಹು ಪ್ರಾಶಸ್ತ್ಯವಾದ ಸಮಯ... ಆ ದಿನ ರಾತ್ರಿಯಲ್ಲಿ ಮೋಡಗಳಿಲ್ಲದ ಶುಭ್ರ ಆಕಾಶ,
>> ಮಂಗಳಕರ ನಾದ ಶುಭ್ರ ಚಂದ್ರ ಸ್ಪೂರ್ತಿ ಹುಟ್ಟಿಸುವ ಸಂವೇದನಾಶೀಲ ವಾತಾವರಣವನ್ನು
>> ಕಾಣಬಹುದು.. ಈ ಪರ್ವಕಾಲವು ಪೂಜೆಗೆ ಪ್ರಶಸ್ತವಾದ ಕಾಲವಾಗಿದ್ದು ಶಿವನ ಆರಾಧನೆ ಮಾಡಿದರೆ
>> ಪಾಪ ಕರ್ಮಗಳನ್ನು ಕಳೆಯುತ್ತಾನೆ ಎಂಬ ಪ್ರತೀತಿ ಇದೆ.
>>
>> ೩. ತ್ರಯೋದಶಿಯು ಶಕ್ತಿರೂಪವಾದರೆ,, ಚತುರ್ದಶಿಯು ಶಿವರೂಪ. ತ್ರಯೋದಶಿಯು ಚತುರ್ದಶಿಯಲ್ಲಿ
>> ಅಂತರ್ಗತ ವಾಗಿದ್ದರೆ ಅದು ಶಿವಶಕ್ತಿಯೋಗ ವಾಗುತ್ತದೆ. ಅದೆ ಶಿವರಾತ್ರಿಯ ಸಮಯವೆಂದು
>> ಉಕ್ತಿಯೊಂದರಲ್ಲಿ ಉಲ್ಲೇಖವಿದೆ. ಈ ಶುಭ ಪುಣ್ಯದಿನದಂದು ಬ್ರಹ್ಮ ವಿಷ್ಣು ಆದಿಯಾಗಿ
>> ಶಿವನನ್ನು ಪೂಜಿಸಿದ್ದು ಶಿವನೆ ತನಗೆ ಶಿವರಾತ್ರಿ ಪ್ರಿಯವಾದ ದಿನವೆಂದು ಹೇಳಿರುವನೆಂದು
>> ಪ್ರತೀತಿ ಇದೆ.
>>
>> ೪. 'ಶಿವ ಪುರಾಣ ' ದಲ್ಲಿ ಬರುವ ಬೇಡರ ಕಣ್ಣಪ್ಪನ ಕಥೆ....., ' ಸ್ಕಂದ ಪುರಾಣ 'ದ ಬೇಡ
>> ಚಂದನನ ಕಥೆ..., 'ಗರುಡ ಮತ್ತು ಅಗ್ನಿ ಪುರಾಣ' ಗಳ ಬೇಡ ಸುಂದರ ಸೇನನ ಕಥೆ... ಈ ಎಲ್ಲ
>> ಕಥೆಗಳಲ್ಲೂ ಒಂದು ವಿಶೆಷವಾದ ಸಾಮ್ಯತೆಯನ್ನು ಕಾಣಬಹುದು.. ಮಹಾ ಶಿವರಾತ್ರಿಯಂದು ಉಪವಾಸ
>> ಮಾಡಿ ಶಿವನಿಗೆ ಅಭಿಷೇಕ ಮಾಡಿ ಬಿಲ್ವ ಪತ್ರೆಗಳನ್ನು ಅರ್ಪಿಸಿದ್ದರಿಂದ ಅವರೆಲ್ಲರಿಗೂ
>> ಸದ್ಗತಿ ಪ್ರಾಪ್ತವಾಯಿತು. ಇದು ಶಿವರಾತ್ರಿ ಪೂಜೆಯ ಫಲದ ಮಹಿಮೆಯನ್ನು ಎತ್ತಿ ತೋರಿಸುತ್ತದೆ.
>>
>> ೫. ದೇವತೆಗಳು ಮತ್ತು ಅಸುರು ಅಮೃತಕ್ಕಾಗಿ ಸಮುದ್ರ ಮಂಥನ ಮಾಡ್ತಿರಬೇಕಾದ್ರೆ ಮೊದ್ಲು
>> ಮಡಿಕೆ ತುಂಬ ಹಾಲಾಹಲ ಉತ್ಪತ್ತಿಯಾಯಿತು.. ಆದ್ರೆ ದೇವತೆಗಳು... ಅಸುರರು ಯಾರೂ ಆ
>> ಹಾಲಾಹಲವನ್ನು ಕುಡಿಯೋಕೆ ಮುಂದಗಲಿಲ್ಲ.. ಆ ಹಾಲಾಹಲ ಇಡೀ ನಭೋಮಂಡಲವನ್ನೇ ನಾಶಮಾಡಬಲ್ಲ
>> ಸಾಮರ್ಥ್ಯವನ್ನು ಹೊಂದಿತ್ತು.. ಹೀಗಾಗಿ ಲೋಕ ಕಲ್ಯಾಣಕ್ಕಾಗಿ ಪರಶಿವನೇ ಆ ಹಾಲಾಹಲವನ್ನು
>> ಕುಡಿದುಬಿಟ್ಟ.. ಅದೇ ಸಮಯಕ್ಕೆ ಪತ್ನಿ ಪಾರ್ವತಿ ದೇವಿ ಬಂದು ಆ ವಿಷ ಶಿವನ ಹೊಟ್ಟೆ ಸೇರದಂತೆ
>> ಗಂಟಲಲ್ಲೇ ತಡೆ ಹಿಡಿದಳು... ವ್ಯಕ್ತಿಗಳು ನಿದ್ರಿಸುತ್ತಿದ್ದರೆ ವಿಷವು ಬೇಗನೆ ದೇಹದ ತುಂಬ
>> ಹರಡುತ್ತದೆ.. ಹೀಗಾಗಿ ದೇವತೆಗಳೆಲ್ಲರೂ ಶಿವನ ಭಜನೆ ಮಾಡಿ ಶಿವನನ್ನು ಎಚ್ಚರವಿರಿಸಿದರು..
>> ಹೀಗಾಗಿ ಈ ಪವಿತ್ರ ದಿನವನ್ನು ಶಿವರಾತ್ರಿ ಎಂದು ಆಚರಿಸಲಾಗುತ್ತದೆ.
>>
>> 💐ಮಹಾಶಿವರಾತ್ರಿಯ ಉಪವಾಸ ಮತ್ತು ಜಾಗರಣೆಯ ಮಹತ್ವ💐
>>
>> ೧. ಶಿವನನ್ನು ಪೂಜಿಸುವುದರಿಂದ ಕರುಣಾಮಯಿಯಾದ ಶಿವನು ಸರ್ವರನ್ನು ಅನುಗ್ರಹಿಸುತ್ತಾನೆ
>> ಎಂಬ ಪ್ರತೀತಿ ಇದೆ.. ಬೇಡರ ಕಣ್ಣಪ್ಪನು ಶಿವನನ್ನು ಪೂಜಿಸಿದ್ದರಿಂದ ಅವನನ್ನು ನುಗ್ರಹಿಸಿ
>> ಮುಕ್ತಿ ಮಾರ್ಗ ತೋರಿಸಿದನು.. ' ಸ್ಕಂದ ಪುರಾಣ 'ದ ಪ್ರಕಾರ ಬೇಡ ಚಂದನನಿಗೂ ಶಿವನು ಅನುಗ್ರ
>> ನೀಡಿದ್ದಾನೆ... ' ಗರುಡ ಮತ್ತು ಅಗ್ನಿ ಪುರಾಣ ' ಗಳಲ್ಲಿ ಉಲ್ಲೇಖವಿರುವಂತೆ, ಬೇಡ ಸುಂದರ
>> ಸೇನನಿಗೂ ಶಿವನು ಆಶೀರ್ವಾದಿಸಿದ್ದಾನೆ.. ಹೀಗಾಗಿ ಮಹಾ ಶಿವರಾತ್ರಿಯಂದು ಉಪವಾಸ ಮಾಡಿ
>> ಶಿವನಿಗೆ ಅಭಿಷೇಕ ಮಾಡಿ, ಬಿಲ್ವ ಪತ್ರೆಗಳನ್ನು ಅರ್ಪಿಸುವುದರಿಂದ ಎಲ್ಲರಿಗೂ ಸದ್ಗತಿ
>> ಪ್ರಾಪ್ತವಾಯಿತು.
>>
>> ೨. ಪ್ರತಿ ವರ್ಷದ ಶಿವರಾತ್ರಿಯ ಸಮಯದಲ್ಲಿ ಶಿವನು, ಪಾರ್ವತಿಯ ಜೊತೆಯಲ್ಲಿ ಭೂಮಿಗೆ
>> ಆಗಮಿಸುತ್ತಾನೆ.. ಭೂ-ಸಂಚಾರ ಮಾಡುತ್ತಾನೆ.. ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ
>> ಸಂಕ್ರಮಣಗೊಳ್ಳುತ್ತಾನೆ.. ಹೀಗಾಗಿ ಶಿವರಾತ್ರಿಯ ಶಿವನನ್ನು ಯಾರು ಪೂಜಿಸುವರೋ ಅವರ ಪಾಪಗಳು
>> ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ ತಿಳಿಸಿದ್ದಾನೆ ಎಂಬುದರ ಬಗ್ಗೆ ಶಾಸ್ತ್ರೋಕ್ತಿ ಇದೆ.
>>
>> ೩. ಮದುವೆಯಾಗದ ಹೆಣ್ಣುಮಕ್ಕಳು ಶಿವಗುಣರೂಪಿಯಾದ ಅನುರೂಪ ಪತಿಗಾಗಿ ಪ್ರಾರ್ಥಿಸಿದರೆ,
>> ಮುತ್ತೈದೆಯರು ಪತಿಯ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸುವುದು ಸಂಪ್ರದಾಯ. ಶಿವರಾತ್ರಿಯಂದು
>> ಶಿವನನ್ನು ಪೂಜಿಸಿದರೆ, ಸುಖ, ಶಾಂತಿ, ಸಮೃದ್ಧಿ ದೊರೆಯುವುದೆಂಬ ನಂಬಿಕೆ ಆಸ್ತಿಕರದು.
>>
>> ೪. ಕರುಣಾಮಯಿಯಾದ ಶಿವನನ್ನು ಭಕ್ತಿ ಪೂರಕವಾಗಿ ಯಾರೇ ಪೂಜಿಸಿದರೂ ಅವರನ್ನು
>> ಅನುಗ್ರಹಿಸುತ್ತಾನೆ.. ಹಿಂದು ಮುಂದು ನೋಡದೇ ಅವರಿಗೆ ಬೇಡಿದ ವರಗಳನ್ನು ನೀಡುತ್ತಾನೆ..
>> ಭಕ್ತಿಗೆ ಮರುಳಾಗುವ ಶಿವನು ಹೀಗೆ ತನ್ನ ಭಕ್ತರಿಗೆ ಬೇಡಿದ ವರವನ್ನು ನೀಡುವುದರ ಮೂಲಕ ಎಷ್ಟೋ
>> ಸಲ ಸಂಕಟಕ್ಕೆ ಸಿಲುಕಿದ್ದೂ ಇದೆ.. ಆದರೆ ಎಂಥದ್ದೇ ಸಂಕಟವಿದ್ದರೂ ಶಿವನು ಭಕ್ತರನ್ನು ಸದಾ
>> ಅನುಗ್ರಹಿಸುತ್ತಲೇ ಇರುತ್ತಾನೆ.. ಅದಕ್ಕೆ “ಶಿವ ಭಕ್ತನಿಗೆ ನರಕಾ ಇಲ್ಲ” ಅನ್ನೋ ಮಾತಿದೆ.
>>
>> ೫. ಶಿವರಾತ್ರಿಯ ಮತ್ತೊಂದು ವಿಶೆಷವೆಂದರೆ, ಶಿವನು ಪಾರ್ವತಿ ಹಿಮವಂತನ ಮಗಳಾದ
>> ಗಿರಿಜೆಯನ್ನು ಅಂದರೆ ಪಾರ್ವತಿ ದೇವಿಯನ್ನು ವಿವಹವಾಗಿದ್ದು ಶಿವರಾತ್ರಿಯ ದಿನವೇ.. ಪಾರ್ವತಿ
>> ದೇವಿಯು ಶಿವರಾತ್ರಿಯ ಸಮಯದಲ್ಲಿ ಶಿವನನ್ನು ಪ್ರಾರ್ಥಿಸಿ..ಶಿವನ ಜಪ ಮಾಡಿ ಶಿವನನ್ನು
>> ವಲಿಸಿಕೊಂಡು ವಿವಾಹಳಾದಳು... ಅಷ್ಟೇ ಅಲ್ಲ, ಶಿವನು ಸಮುದ್ರ ಮಂಥನದಿಂದ ಉದ್ಭವಿಸಿದ
>> ವಿಷವನ್ನು ಸೇವಿಸಿ, ಜಗತ್ತನ್ನು ವಿನಾಶದಿಂದ ಪಾರು ಮಾಡಿದ್ದು ಕೂಡ ಇದೇ ಸಮಯದಲ್ಲಿ.. ಹೀಗೆ
>> ಹಿಂದೂ ಪುರಾಣಗಳಲ್ಲಿ ಶಿವರಾತ್ರಿಗೆ ಮಹತ್ವದ ಹಿನ್ನೆಲೆ ಇದೆ..
>>
>> 🥀🍃ವೇದೋಕ್ತ ಪೂಜೆ ಮತ್ತು ಆಚರಣೆ🍃🥀
>>
>> 👉ಬಿಲ್ವದ ಎಲೆ ಹೃದಯವನ್ನು ಹೋಲುತ್ತದೆ ಮತ್ತು ಲಿಂಗ ಪರಮಾತ್ಮನ ಪ್ರತೀಕ. ಆದ್ದರಿಂದ
>> ಇವೆರಡರ ಜೊತೆಗೂಡಿಕೆ ಆತ್ಮ ಪರಮಾತ್ಮಗಳ ಮಿಲನ. ರಾತ್ರಿಯು ಅಜ್ಞಾನದ ಸಂಕೇತ ಮತ್ತು ಆ
>> ವೇಳೆಯಲ್ಲಿ ನಿದ್ರೆ ಮಾಡದೇ ಎಚ್ಚರವಾಗಿರುವುದು ತಿಳುವಳಿಕೆಯ ಕಡೆಗೆ ಹೋಗುತ್ತಿರುವ ಸಂಕೇತ.
>> ಹೀಗೆ ಶಿವರಾತ್ರಿಯ ರಾತ್ರಿ ಜಾಗರಣೆ ಮಾಡುವುದು ಮೋಕ್ಷದ ಕಡೆಗೆ ಹೊಗುವುದು ಎಂದು ತತ್ವಗಳು
>> ತಿಳಿಸುತ್ತವೆ.
>>
>> 👉ಉಪವಾಸ ಮಾಡುವುದು ಎಂದರೆ, ದೇವರಿಗೆ ಹತ್ತಿರವಾಗಿರುವುದು/ದೇವರ ಬಗ್ಗೆ
>> ಚಿಂತಿಸುತ್ತಿರುವುದು ಎಂದು ಅರ್ಥ. ಹೀಗೆ ಆತನ ಧ್ಯಾನದಲ್ಲಿ ಇರುವಾಗ ಊಟ/ತಿಂಡಿಯ ಕಡೆ ಗಮನ
>> ಹೋಗುವುದಿಲ್ಲ.
>>
>> 👉ಜಾಗರಣೆ ಎಂದರೆ, ಜಾಗೃತರಾಗಿರೋದು ಎಂದು. ರಾತ್ರಿಯಲ್ಲಿ ಜಾಗರಣೆ ಮಾಡುವುದರ ಅರ್ಥವೇನು?
>> ರಾತ್ರಿ ಎನ್ನುವುದು ತಮೋ ಗುಣದ ಪ್ರತೀಕ. ಆಲಸ್ಯ, ನಿದ್ರೆ, ಅಹಂಕಾರ, ಅಜ್ಞಾನಗಳ ದ್ಯೋತಕ
>> ನಿಶೆ. ಆ ಸಮಯದಲ್ಲಿ ಜಾಗೃತರಾಗಿರಬೆಕು ಎಂದರೆ, ಅವುಗಳಿಂದ ಜಾಗೃತರಾಗಿರಬೇಕು ಎಂಬರ್ಥ. ಹಾಗೆ
>> ಜಾಗೃತರಾಗಿರುವುದಕ್ಕೆ ನಮಗೆ ಸಹಾಯವನ್ನು ಮಾಡುವವನು ದೇವರು. ಆ ದೇವರನ್ನು ಸ್ಮರಿಸುತ್ತ ಈ
>> ತಮೋ ಗುಣಗಳಿಂದ ಜಾಗೃತರಾಗಿರಬೇಕು ಎನ್ನುವುದರ ಪ್ರತೀಕ ಶಿವರಾತ್ರಿಯ ಜಾಗರಣೆ.
>>
>> 👉ಆ ದಿನ ಬೆಳಗ್ಗೆ ಬೇಗ ಎದ್ದು ಅಭ್ಯಂಜನ ಮಾಡಿ ಶಿವನಿಗೆ ಅಭಿಷೇಕ ಮಾಡುವುದು ರೂಢಿ.
>> ಇಲ್ಲಿ ದಿನವನ್ನು ಮೂರು ಭಾಗಗಳನ್ನಾಗಿ ಮಾಡಿ ರುದ್ರಾಭಿಷೇಕಯುಕ್ತ ಪೂಜೆಯನ್ನು ಮಾಡುವುದು
>> ವಾಡಿಕೆ. ರುದ್ರ ನಮಕ ಚಮಕಗಳನ್ನು ಉಚ್ಚರಿಸುವುದರಿಂದ ಉಸಿರಾಟಕ್ಕೂ ಹೆಚ್ಚಿನ ಶಕ್ತಿ
>> ಬರುವುದು ಮತ್ತು ಬಾಯಿಯಿಂದ ಹೊರ ಹೊಮ್ಮುವ ತರಂಗಗಳಿಂದ ಸುತ್ತ ಮುತ್ತಲಿನ ಪರಿಸರ
>> ಶಕ್ತಿಯುತವಾಗುವುದು.
>>
>> 👉ಮೊದಲಿಗೆ ಶಿವಲಿಂಗಕ್ಕೆ ಪಂಚಾಮೃತ ಅಭಿಷೇಕವನ್ನೂ ಮಾಡುವರು. ಇದಕ್ಕೆಂದೇ ಮಹಾನ್ಯಾಸವೆಂಬ
>> ಪ್ರಕಾರವಿದೆ. ನಂತರ ನೀರಿನ ಅಭಿಷೇಕವನ್ನು ನಿರಂತರವಾಗಿ ಮಾಡುವರು. ಅಭಿಷೇಕ್ಕಾಗಿಯೇ
>> ಪ್ರತ್ಯೇಕವಾದ ಪಾತ್ರೆ ಇರುವುದು. ಅದರ ತಳಭಾಗದಲ್ಲಿ ರಂದ್ರವಿದ್ದು ಅದನ್ನು ಲಿಂಗದ ಮೇಲೆ
>> ತೂಗು ಬಿಟ್ಟಿರುವರು. ಅದರೊಳಗೆ ನೀರು ತುಂಬಿಸಿದರೆ, ಸಣ್ಣದಾಗಿ ನೀರು ಲಿಂಗದ ಮೇಲೆ
>> ಬೀಳುವುದು.
>>
>> 👉ಕೃಷ್ಣ ಯಜುರ್ವೇದದ ಪ್ರಕಾರವಾದ ರುದ್ರ ನಮಕ ಮತ್ತು ಚಮಕಗಳನ್ನು ಅಭಿಷೇಕದ ಸಂದರ್ಭದಲ್ಲಿ
>> ಪಠಿಸುತ್ತಾರೆ. ಹನ್ನೊಂದು ಬಾರಿ ನಮಕ ಚಮಕಗಳನ್ನು ಹನ್ನೊಂದು ಜನ ಋತ್ವಿಕರು ಪಠಣ
>> ಮಾಡುವುದಕ್ಕೆ ಏಕಾದಶವಾರ ರುದ್ರಾಭಿಷೇಕ ಎಂದು ಕರೆಯುವರು. ಮೊದಲಿಗೆ ಚಮಕದ ಮೂರನೆಯ
>> ಭಾಗವನ್ನು ಉಚ್ಚರಿಸಿ, ನಂತರ ಒಂದು ನಮಕದ ಭಾಗವನ್ನೂ ನಂತರ ಹನ್ನೊಂದು ಚಮಕ ಭಾಗಗಳನ್ನೂ
>> ಪಠಿಸುವರು. ತದನಂತರ ಎರಡನೆಯ ನಮಕದ ಭಾಗವನ್ನೂ ಮತ್ತು ಹನ್ನೊಂದು ಚಮಕ ಭಾಗಗಳನ್ನೂ
>> ಪಠಿಸುವರು. ಹೀಗೆ ನಮಕಗಳ ಹನ್ನೊಂದೂ ಭಾಗವನ್ನು ಪಠಿಸಿ ಅಭಿಷೇಕ ಮಾಡುವರು. ಇದಕ್ಕೆ ಒಂದು
>> ರುದ್ರವೆಂದು ಕರೆಯುವರು. ಬೆಳಗ್ಗೆ, ಸಂಜೆ ಮತ್ತು ರಾತ್ರೆ ಹೀಗೆ ೨೪ ಘಂಟೆಗಳು
>> ಭಗವನ್ನಾಮಸ್ಮರಣೆ ಮಾಡುತ್ತಾ ಜಾಗರಣೆ ಮಾಡುವುದು ಪರಿಪಾಠ. ಅಂದು ಊಟ ಮಾಡದೆ ಅಲ್ಪಾಹಾರ
>> ಸೇವನೆ ಮಾಡುವರು.
>>
>> ⚛️✡️ಜಾಗರಣೆ, ಹಬ್ಬದ ವಿಶೇಷ ಆಚರಣೆ✡️⚛️
>>
>> 👉ಕಾಶಿ ವಿಶ್ವನಾಥ, ಗೋಕರ್ಣದ ಮಹಾಬಲೇಶ್ವರ, ರಾಮೇಶ್ವರದ ರಾಮೇಶ್ವರ ಸೇರಿದಂತೆ ರಾಜ್ಯ,
>> ದೇಶ, ವಿದೇಶಗಳ ಶಿವದೇವಾಲಯಗಳಲ್ಲಿ ಅಂದು ವಿಶೇಷ ಪೂಜೆ ನಡೆಯುತ್ತದೆ. ಬಿಲ್ವಾರ್ಚನೆ,
>> ರುದ್ರಾಭಿಷೇಕ, ಶಿವನಾಮ ಧ್ಯಾನಗಳ ಮೂಲಕ ಶಿವನನ್ನು ಆರಾಸಲಾಗುತ್ತದೆ. ಇಡೀ ರಾತ್ರಿ
>> ಶಿವದೇವಾಲಯಗಳಲ್ಲಿ ರುದ್ರಪಠಣದ ಜೊತೆ ಜಾಗರಣೆ ನಡೆಯುತ್ತದೆ.
>>
>> 👉ಶಿವರಾತ್ರಿಯಂದು ಬೆಳಗ್ಗೆ ಬೇಗನೆ ಏಳುವ ಭಕ್ತರು, ಸ್ವಾನ ಮಾಡಿ, ಶುಚಿರ್ಭೂತರಾಗಿ
>> ಶಿವದೇವಾಲಯಕ್ಕೆ ತೆರಳುತ್ತಾರೆ. ಕೆಲವರು ಕೈಲಾಸಯಂತ್ರ ರಚಿಸಿ, ಮನೆಯಲ್ಲಿಯೇ ಶಿವನಿಗೆ
>> ವಿಶೇಷ ಪೂಜೆ ನಡೆಸುತ್ತಾರೆ. ಗಂಗಾ, ಬ್ರಹ್ಮಪುತ್ರ, ಕೃಷ್ಣ, ಕಾವೇರಿ, ತ್ರಿವೇಣಿ ಸಂಗಮ
>> ಸೇರಿದಂತೆ ಪುಣ್ಯನದಿಗಳಲ್ಲಿ ಭಕ್ತರು ಸ್ನಾನ ಮಾಡುತ್ತಾರೆ. ಕೆಲವರು ಹಾಲು, ಹಣ್ಣು ಸೇವಿಸಿ
>> ಲಘು ಉಪಹಾರ ಸೇವಿಸಿದರೆ, ಕೆಲವು ಭಕ್ತರು ದಿನವಿಡಿ ಏನನ್ನೂ ತಿನ್ನದೆ, ನೀರನ್ನೂ ಕುಡಿಯದೆ
>> ಉಪವಾಸ ಇರುತ್ತಾರೆ. ಭಸ್ಮ ಲೇಪಿಸಿಕೊಂಡು, ಬಿಲ್ವಾರ್ಚನೆ ಮೂಲಕ ರುದ್ರ ಪಠಣ ಹಬ್ಬದ ಆಚರಣೆಯ
>> ವಿಶೇಷ.
>>
>> 👉ಅಭಿಷೇಕಪ್ರಿಯ ಎಂದೇ ಖ್ಯಾತನಾದ ಶಿವನಿಗೆ ದಿನವಿಡಿ ಹಾಲು, ಜೇನುತುಪ್ಪ ಹಾಗೂ ನೀರಿನ
>> ಅಭಿಷೇಕ ನಡೆಯುತ್ತದೆ. ಪ್ರತಿ 3 ಗಂಟೆಗೊಮ್ಮೆ ಶಿವಲಿಂಗಕ್ಕೆ ಅಭಿಷೇಕ ಮಾಡಲಾಗುತ್ತದೆ.
>> ಬಿಲ್ವಪತ್ರೆ, ತುಂಬೆ, ಶ್ರೀ ಗಂಧ, ಹಾಲು, ಜೇನುತುಪ್ಪಗಳಿಂದ ಅಭಿಷೇಕ ನಡೆಯುತ್ತದೆ. ಶಿವ
>> ಪಂಚಾಕ್ಷರಿ ಮಂತ್ರ "ಓಂ ನಮ: ಶಿವಾಯ", ಹರ ಹರ ಮಹಾದೇವ, ಶಂಭೋ ಶಂಕರ...ಶಿವದೇವಾಲಯಗಳಲ್ಲಿ
>> ಮಾರ್ದನಿಸುತ್ತದೆ. ನಾಲ್ಕು ಆಯಾಮಗಳ ರುದ್ರಪಠಣ, ಶಿವರಾತ್ರಿ ಪೂಜೆಯ ವಿಶೇಷ.
>>
>> 👉ಶಿವಪುರಾಣದ ಪ್ರಕಾರ ರುದ್ರ ಹಾಗೂ ಚಮೆಗಳ ಪಠಣ ಶಿವನಿಗೆ ಅಚ್ಚುಮೆಚ್ಚು. ದೇವಾಲಯಗಳಲ್ಲಿ
>> ಸಂಜೆ 6 ಗಂಟೆಯಿಂದ ಮೊದಲ್ಗೊಂಡು ಮುಂಜಾನೆ 6 ಗಂಟೆಯವರೆಗೆ ರುದ್ರಪಠಣದ ಮೂಲಕ ಶಿವ ಸ್ತುತಿ,
>> ಜಾಗರಣೆ ನಡೆಯುತ್ತದೆ. ಪ್ರತಿ 3 ಗಂಟೆಗೊಮ್ಮೆ ಮಂಗಳಾರತಿ ಮಾಡಲಾಗುತ್ತದೆ. ಬೆಳಗ್ಗೆ 6
>> ಗಂಟೆಗೆ ಮಹಾಮಂಗಳಾರತಿ ಆಚರಣೆ ಮೂಲಕ ಜಾಗರಣೆ ಮುಕ್ತಾಯಗೊಳ್ಳುತ್ತದೆ. ಮೊದಲನೆಯ ಆಯಾಮದಲ್ಲಿ
>> ಹಾಲು, ಎರಡನೆಯ ಆಯಾಮದಲ್ಲಿ ಮೊಸರು, ಮೂರನೆಯ ಆಯಾಮದಲ್ಲಿ ತುಪ್ಪ ಹಾಗೂ ನಾಲ್ಕನೆಯ
>> ಆಯಾಮದಲ್ಲಿ ಜೇನುತುಪ್ಪಗಳಿಂದ ಶಿವನಿಗೆ ಅಭಿಷೇಕ ಮಾಡುವ ಪದ್ಧತಿಯೂ ಕೆಲವಡೆ ಇದೆ.
>>
>> 🌹🌼ಸರ್ವರಿಗೂ ಮ ಶಿವರಾತ್ರಿ ಹಬ್ಬದ ಶುಭಾಶಯಗಳು, ಮಹಾ ಶಿವನು ತಮ್ಮೆಲ್ಲರಿಗೂ
>> ಸನ್ಮಂಗಳವನ್ನು, ಇಷ್ಟಾರ್ಥಗಳನ್ನು ಕರುಣಿಸಲಿ🌼
>>
>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to