*ಗಣಪತಿಯ ಬಗೆ ಬಗೆಯ ಅವತಾರಗಳು ಇವೆ: ಒಟ್ಟಾರೆಯಾಗಿ ಹೇಳಬೇಕೆಂದರೆ 32 ಬಗೆಯ ಅವತಾರಗಳಲ್ಲಿ
ಗಣಪತಿಯು ಕಾಣಿಸಿಕೊಂಡಿದ್ದಾನೆ. ಇವುಗಳಲ್ಲಿ ಕೆಲವು ಗಣಪತಿಯ ಜೀವನದ ವಿವಿಧ ಕಾಲ
ಘಟ್ಟಗಳನ್ನು ಪ್ರತಿನಿಧಿಸಿದರೆ, ಇನ್ನೂ ಕೆಲವು ಲೋಕ ಕಲ್ಯಾಣಾರ್ಥವಾಗಿ ತಳೆದ
ಅವತಾರಗಳಾಗಿವೆ.*

*ಬಾಲ ಗಣಪತಿ*

    ಬಾಲ ಗಣಪತಿ ಹೆಸರೆ ಸೂಚಿಸುವಂತೆ, ಗಣಪತಿಯ ಎಳೆಯ ಮಗುವಿನ ರೂಪ. ಇದರಲ್ಲಿ ಸ್ವಾಮಿಯು
ತನ್ನ ಬಾಲ್ಯದ ಸುಂದರವಾದ ಮತ್ತು ಮುದ್ದಾದ ರೂಪವಾಗಿದೆ.

    *ತರುಣ ಗಣಪತಿ*

    ತರುಣ ಗಣಪತಿಯು ಗಣಪತಿಯ ತಾರುಣ್ಯವನ್ನು ಪ್ರತಿನಿಧಿಸುವ ರೂಪವಾಗಿದೆ. ಇದು 8 ಕೈಗಳು
ಮತ್ತು ಮುರಿದ ದಂತವನ್ನು ಹೊಂದಿರುತ್ತದೆ.

    *ಭಕ್ತಿ ಗಣಪತಿ*

    ಭಕ್ತಿ ಗಣಪತಿ ಎಂಬುದು ಸುಗ್ಗಿಯ ಅವಧಿಯಲ್ಲಿ ರೈತರಿಂದ ಪೂಜಿಸಲ್ಪಡುವ ಗಣಪತಿಯ
ಅವತಾರವಾಗಿದೆ. ಈ ಗಣೇಶನ ಕೈಯಲ್ಲಿ ಬಾಳೆಹಣ್ಣು ಮತ್ತು ತೆಂಗಿನ ಕಾಯಿ ಇರುತ್ತದೆ.

    *ವೀರ ಗಣಪತಿ*

    ವೀರ ಗಣಪತಿಯ ಅವತಾರದಲ್ಲಿ ಗಣಪತಿಗೆ ಆಯುಧಗಳನ್ನು ಹಿಡಿದ 16 ಕೈಗಳು ಇರುತ್ತವೆ.
ಗಣಪತಿಯ ಈ " ವೀರ" ಅವತಾರವು ಯುದ್ಧಕ್ಕೆ ಸನ್ನದ್ಧವಾಗಿರುವ ರೀತಿಯಲ್ಲಿ ಕಾಣಿಸುತ್ತದೆ.

    *ಶಕ್ತಿ ಗಣಪತಿ*

    ಶಕ್ತಿ ಗಣಪತಿಯ ಅವತಾರದಲ್ಲಿ ಗಣಪತಿಯ ತೊಡೆಯ ಮೇಲೆ ಸ್ವಾಮಿಯ ಒಬ್ಬ ಪತ್ನಿಯು
ಹೂಮಾಲೆಯನ್ನು ಹಿಡಿದು ಕುಳಿತಿರುತ್ತಾಳೆ. ಈತನು ಕುಟುಂಬವನ್ನು ಕಾಪಾಡುವ ದೇವರು ಎಂದು
ಪೂಜಿಸಲಾಗುತ್ತದೆ.

    *ದ್ವಿಜ ಗಣಪತಿ*

    "ದ್ವಿಜ" ಎಂದರೆ ಎರಡು ಬಾರಿ ಜನಿಸಿದವನು ಎಂದರ್ಥ. ಗಣೇಶನು ನಿಜವಾಗಿಯೂ ಎರಡು ಬಾರಿ
ಜನಿಸಿದವನು. ಮೊದಲು ಜನಿಸಿ, ನಂತರ ಕೊಲ್ಲಲ್ಪಟ್ಟು ಆ ಮೇಲೆ ಪುನಃ ಜೀವವನ್ನು ಪಡೆದವನು. ಈ
ಅವತಾರದಲ್ಲಿ ಗಣಪತಿಗೆ 4 ತಲೆಗಳು ಇವೆ.

   *ಸಿದ್ಧಿ ಗಣಪತಿ*

    ಸಿದ್ಧಿ ಗಣಪತಿಯನು ಯಶಸ್ಸು ಮತ್ತು ಸಂಪತ್ತಿನ ಸಲುವಾಗಿ ಪೂಜಿಸಲಾಗುತ್ತದೆ. ಈ ಗಣಪತಿಯ
ಮೂರ್ತಿಯು ಹಳದಿ ಬಣ್ಣದಲ್ಲಿರುತ್ತದೆ.

    *ಉಚ್ಚಿಷ್ಟ ಗಣಪತಿ*

    ಈ ಗಣಪತಿಯು ಸಹ ಹಲವು ಕೈಗಳಿಂದ ಸುಂದರವಾಗಿ ಕಾಣುತ್ತಾನೆ. ತಿಳಿ ನೀಲಿ ಬಣ್ಣದ ಈ
ಗಣಪತಿಯು 6 ಕೈಗಳನ್ನು ಹೊಂದಿದ್ದು, ಕೈಯಲ್ಲಿ ವೀಣೆಯಂತಹ ಸಂಗೀತ ವಾದ್ಯಗಳನ್ನು
ಹಿಡಿದಿರುತ್ತಾನೆ.

    *ವಿಘ್ನ ಗಣಪತಿ*

    ಗಣಪತಿಯನ್ನು "ವಿಘ್ನೇಶ್ವರ, ವಿಘ್ನನಾಶಕ" ಎಂದು ಸಹ ಕರೆಯುತ್ತಾರೆ. ಚಿನ್ನದ ಬಣ್ಣದ ಈ
ಗಣಪತಿಯ ವಿಗ್ರಹವು ನಿಮಗೆ ಎದುರಾಗುವ ಎಲ್ಲಾ ಕಂಟಕಗಳನ್ನು ನಿವಾರಿಸುತ್ತಾನೆ.

    *ಕ್ಷಿಪ್ರ ಗಣಪತಿ*

    ಕೆಂಪು ವರ್ಣದ ಈ ಗಣಪತಿಯು ಹೆಸರೇ ಸೂಚಿಸುವಂತೆ ಕಾರ್ಯಗಳನ್ನು ಕ್ಷಿಪ್ರವಾಗಿ
ಸಿದ್ಧಿಸಿಕೊಳ್ಳಲು ನೆರವಾಗುತ್ತಾನೆ.

    *ಹೇರಂಬ ಗಣಪತಿ*

    ಹೇರಂಬ ಗಣಪತಿಯು ದೀನರನ್ನು ಉದ್ಧಾರ ಮಾಡಲು ಅವತರಿಸಿದ ಗಣಪತಿಯಾಗಿದ್ದಾನೆ. ಈತನಿಗೆ 5
ತಲೆಗಳು ಇದ್ದು, ನೆಗೆಯಲು ಸಿದ್ಧವಾಗಿರುವ ಸಿಂಹದ ವಾಹನವನ್ನು ಏರಿರುವ ಅವತಾರ ಇದಾಗಿದೆ.

    *ಲಕ್ಷ್ಮೀ ಗಣಪತಿ*

    ಲಕ್ಷ್ಮೀ ಮತ್ತು ಗಣಪತಿಯನ್ನು ಸಹೋದರ -ಸಹೋದರಿಯರಂತೆ ಕಾಣಲಾಗುತ್ತದೆ. ಚಿನ್ನದ ಬಣ್ಣದ
ಈ ಗಣಪತಿಯನ್ನು ಹಣ ಮತ್ತು ಐಶ್ವರ್ಯಗಳ ಸಂಕೇತವಾಗಿ ಪೂಜಿಸಲಾಗುತ್ತದೆ.

    *ಮಹಾ ಗಣಪತಿ*

    "ಮಹಾ" ಎಂಬ ಮಾತೇ "ಶ್ರೇಷ್ಟ" ಎಂಬುದನ್ನು ಸೂಚಿಸುತ್ತದೆ. ಕೆಂಪು ಬಣ್ಣದಲ್ಲಿರುವ ಈ
ಗಣಪತಿಯು, ತನ್ನ ಶಕ್ತಿಯ ಜೊತೆಯಲ್ಲಿ ಕುಳಿತಿರುತ್ತಾನೆ.

    *ವಿಜಯ ಗಣಪತಿ*

    ವಿಜಯ ಗಣಪತಿಯು ಹೆಸರೇ ಸೂಚಿಸುವಂತೆ "ವಿಜಯ"ದ ಸಂಕೇತ. ಈತನಿಗೆ ನಾಲ್ಕು ಕೈಗಳು ಇದ್ದು,
ಮೂಷಿಕ ವಾಹನನಾಗಿ ಕಾಣಿಸುತ್ತಾನೆ.

    *ನೃತ್ಯ ಗಣಪತಿ*

    ಗಣಪತಿಯು ತನ್ನ ಅಗಾಧ ದೇಹದ ಹೊರತಾಗಿಯೂ ನೃತ್ಯವನ್ನು ಮಾಡುವ ಭಂಗಿಯಲ್ಲಿ ಇಲ್ಲಿ
ಕಾಣಿಕೊಳ್ಳುತ್ತಾನೆ. ನೃತ್ಯ ಮಾಡುವ ಗಣಪತಿಯ ಅಂದಕ್ಕೆ ಬೆರಗಾಗದೆ ಇರುವವರು ಯಾರಿದ್ದಾರೆ?

    *ಊರ್ಧ್ವ ಗಣಪತಿ*

    ಊರ್ಧ್ವ ಗಣಪತಿ ಎಂದರೆ" ಉದ್ದವಾಗಿ ಇರುವ ಗಣಪತಿ" ಎಂದರ್ಥ. ಈ ಗಣಪತಿಯು ಪ್ರಮುಖವಾಗಿ
ಹಿಡುವಳಿಯನ್ನು ಹರಸುವ ಗಣಪತಿಯಂತೆ ಕಾಣುತ್ತಾನೆ. ಈತನ ಕೈಯಲ್ಲಿ ಭತ್ತ, ನೈದಿಲೆ, ಕಬ್ಬಿನ
ಜಲ್ಲೆಗಳನ್ನು ನಾವು ಕಾಣಬಹುದು.

    *ಏಕಾಕ್ಷರ ಗಣಪತಿ*

    "ಏಕಾಕ್ಷರ ಗಣಪತಿ"ಯು ಹೆಸರೇ ಸೂಚಿಸುವಂತೆ "ಒಂದೆ ಅಕ್ಷರದ "ಗಣಪತಿಯಾಗಿರುತ್ತಾನೆ.
ಈತನು ಕೆಂಪು ಬಣ್ಣದಲ್ಲಿದ್ದು, ಮೂಷಿಕ ವಾಹನನಾಗಿ ನಮಗೆ ಕಾಣಿಸುತ್ತಾನೆ.

    *ವರದ ಗಣಪತಿ*

    ನಿಮಗೆ ಯಾವುದಾದರು ಒಂದು ವರ ಬೇಕೆ? ಹಾಗಾದರೆ ನೀವು ವರದ ಗಣಪತಿಯನ್ನು ಪೂಜಿಸಿ.
ಈತನಿಗೆ "ಮೂರನೆ ಕಣ್ಣು" ಇದೆ. ಇದು ಜ್ಞಾನವನ್ನು ಪ್ರತಿನಿಧಿಸುತ್ತದೆ.

    *ತ್ರಯಾಕ್ಷರ ಗಣಪತಿ*

    ಈ ಗಣಪತಿಯು ಮೂರು ಅಕ್ಷರದ ಗಣಪತಿಯಾಗಿದ್ದು, ಕೈಯಲ್ಲಿ ತನ್ನ ಪ್ರೀತಿಯ ತಿನಿಸಾದ
ಮೋದಕವನ್ನು ಹಿಡಿದು ತಿನ್ನುತ್ತಿರುವುದನ್ನು ಕಾಣಬಹುದು.

    *ಕ್ಷಿಪ್ರ ಪ್ರಸಾದ ಗಣಪತಿ*

    ಈ ಗಣಪತಿಯು ನಿಮ್ಮ ಕೋರಿಕೆಯನ್ನು ಅತಿ ಶೀಘ್ರದಲ್ಲಿಯೇ ಪೂರೈಸುವನೆಂದು ಭಾವಿಸಲಾಗಿದೆ.

    *ಹರಿದ್ರ ಗಣಪತಿ*

    ಹರಿದ್ರ ಗಣಪತಿಯು ಸುಂದರವಾದ ಚಿನ್ನದ ಬಣ್ಣವನ್ನು ಹೊಂದಿದ್ದು, ಹಳದಿ ಬಣ್ಣದ ರಾಜ
ಠೀವಿಯಿಂದ ಕೂಡಿದ ವಸ್ತ್ರವನ್ನು ಧರಿಸಿರುತ್ತಾನೆ.

    *ಏಕದಂತ ಗಣಪತಿ*

    ಈ ಗಣಪತಿಯು ಒಂದೇ ಒಂದು ದಂತವನ್ನು ಮಾತ್ರ ಹೊಂದಿದ್ದು, ನೀಲಿಬಣ್ಣದಿಂದ ಕೂಡಿರುತ್ತಾನೆ.

    *ಸೃಷ್ಟಿ ಗಣಪತಿ*

    ಗಣಪತಿಯ ಈ ಸಣ್ಣರೂಪವು ಮೂಷಿಕ ವಾಹನವಾಗಿದ್ದು, ಒಳ್ಳೆಯ ಮೂಡ್‍ನಲ್ಲಿ
ಕಾಣಿಸಿಕೊಳ್ಳುತ್ತಾನೆ.

    *ಉದ್ಧಂಡ ಗಣಪತಿ*

    ಉದ್ಧಂಡ ಗಣಪತಿಯು ವಿಶ್ವದಲ್ಲಿ 'ಧರ್ಮವನ್ನು ಪರಿಪಾಲಿಸುತ್ತಾನೆ" . ಈ ಗಣಪತಿಯು 10
ಕೈಗಳನ್ನು ಹೊಂದಿದ್ದು, ವಿಶ್ವದಲ್ಲಿರುವ ಎಲ್ಲಾ 10 ಒಳ್ಳೆಯ ಅಂಶಗಳನ್ನು
ಪ್ರತಿನಿಧಿಸುತ್ತಾನೆ.

    *ಋಣಮೋಚನ ಗಣಪತಿ*

    ಈ ಗಣಪತಿಯು ಮಾನವ ಕುಲವನ್ನು ಕೀಳರಿಮೆ ಮತ್ತು ಸಾಲಗಳಿಂದ ಮುಕ್ತಗೊಳಿಸುತ್ತಾನೆ.
ಗಣಪತಿಯ ಈ ಅವತಾರವು ಬೂದು ಬಣ್ಣದಿಂದ ಕೂಡಿರುತ್ತದೆ.

    *ದುಂಧಿ ಗಣಪತಿ*

    ದುಂಧಿ ಗಣಪತಿಯು ಕೆಂಪು ವರ್ಣದಲ್ಲಿದ್ದು, ಕೈಗಳಲ್ಲಿ ರುದ್ರಾಕ್ಷದ ಮಾಲೆಯನ್ನು
ಹೊಂದಿರುತ್ತಾನೆ.

    *ದ್ವಿಮುಖ ಗಣಪತಿ*

    ದ್ವಿಮುಖ ಗಣಪತಿಯು ಹೆಸರೇ ಸೂಚಿಸುವಂತೆ, ಎರಡು ತಲೆಗಳನ್ನು ಹೊಂದಿದ್ದು, ಎರಡು ಕಡೆಗೆ
ಮುಖ ಮಾಡಿರುತ್ತಾನೆ. ಈತನ ಬಣ್ಣ ನೀಲಿ.

    *ತ್ರಿಮುಖ ಗಣಪತಿ*

    ತ್ರಿಮುಖ ಗಣಪತಿಯು ಮೂರು ಮುಖಗಳನ್ನು ಹೊಂದಿದ್ದು, ಚಿನ್ನದ ಕಮಲದ ಹೂವಿನ ಮೇಲೆ
ಆಸೀನನಾಗಿರುತ್ತಾನೆ.

    *ಸಿಂಹ ಗಣಪತಿ*

    ಸಿಂಹ ಗಣಪತಿಯು ತಾನು ಕುಳಿತ ಸಿಂಹದಿಂದಾಗಿ ಈ ಹೆಸರು ಪಡೆದಿರುತ್ತಾನೆ.

    *ಯೋಗ ಗಣಪತಿ*

    ಯೋಗ ಗಣಪತಿಯು ಪದ್ಮಾಸನದಲ್ಲಿ ಕುಳಿತಿರುತ್ತಾನೆ ಮತ್ತು ಧ್ಯಾನ ಯೋಗ ನಿರತನಂತೆ
ಕಾಣುತ್ತಾನೆ.

    *ದುರ್ಗಾ ಗಣಪತಿ*

    ದುರ್ಗಾ ಗಣಪತಿಯು ಗಣಪತಿಯ ಒಂದು ಅವತಾರವಾಗಿದ್ದು, ಈ ಅವತಾರದಲ್ಲಿ ಈತ ತನ್ನ ಮಾತೆಯಾದ
ದುರ್ಗಾ ದೇವಿಯಿಂದ ಶಕ್ತಿಗಳನ್ನು ಸಂಪಾದಿಸಿರುತ್ತಾನೆ.

    *ಸಂಕಷ್ಟ ಹರ ಗಣಪತಿ*

    ಗಣಪತಿಯ ಈ ಅದ್ಭುತ ಅವತಾರವು ಮಾನವ ಕುಲದ ಸಂಕಷ್ಟಗಳನ್ನು
ನಿವಾರಿಸುತ್ತದೆ.

💐 *ಸರ್ವೇ ಜನಃ ಸುಖಿನೋ ಭವಂತು* 💐ಗೌರಿ,ಗಣೇಶ ಹಬ್ಬದ ಮತ್ತು ಶಿಕ್ಷಕರ ದಿನಾಚರಣೆಯ
ಶುಭಾಶಯಗಳು🌷🌷

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/CAAsuZL8rA9%2B%3DnfoAmAgwC6qYEGKOO%2B0WNGwMbNq7%3D3iH12WaNA%40mail.gmail.com.
For more options, visit https://groups.google.com/d/optout.

Reply via email to