೮ನೇ ತರಗತಿಯ ರಾಜಕುಮಾರಿಯ ಜಾಣ್ಮೆ ಪಾಠದ ಕವಿವಿಚಾರದಲ್ಲಿ  ಜೀ. ಶಂ.ಪ .ಪದದ ಅರ್ಥ. ತಿಳಿಸಿ
ಸರ್
On Nov 2, 2016 3:18 PM, "Mahesh S" <mahesh.s...@gmail.com> wrote:

> ಉತ್ತಮ ಮಾಹಿತಿಗಾಗಿ ಧನ್ಯವಾದಗಳು.
>
> On Nov 2, 2016 8:15 AM, "Basavaraj Basu" <basavarajl...@gmail.com> wrote:
>
>> ಉತ್ತಮ ಮಾಹಿತಿ ಧನ್ಯವಾದಗಳು....
>> On Nov 2, 2016 7:55 AM, "Sharadamma" <ramchandrarao...@gmail.com> wrote:
>>
>>> Olle lekhana sir
>>>
>>> Shivakumar C <shivakumarcbpu...@gmail.com> wrote:
>>>
>>> ಕರ್ನಾಟಕ ಏಕೀಕರಣ
>>> ಕನ್ನಡ ರಾಜ್ಯೋತ್ಸವ ನಾಡಹಬ್ಬದ ಈ ಶುಭದಿನದಂದು ಪ್ರಪಂಚದಾದ್ಯಂತ ನೆಲೆಸಿರುವ ಸಮಸ್ತ
>>> ಕನ್ನಡಿಗರಿಗೆ ಹೃದಯಪೂರ್ವಕ ಶುಭಕಾಮನೆಗಳು. ಕಹಳೆ ಕಾರ್ಯಕ್ರಮದ ನಾಲ್ಕನೇ ಆವೃತ್ತಿಗೆ
>>> ಕನ್ನಡಿಗರೆಲ್ಲರಿಂದ ದೊರೆಯುತ್ತಿರುವ ಅಭೂತಪೂರ್ವ ಪ್ರೋತ್ಸಾಹ ಹಾಗೂ ಬೆಂಬಲಕ್ಕೆ ನಾವು
>>> ಋಣಿಗಳು. ಈ ಕಾರ್ಯಕ್ರಮದ ಯಶಸ್ಸು ಹೀಗೆಯೇ ಮುಂದುವರೆಯಲು ನಿಮ್ಮೆಲ್ಲರ ನಿರಂತರ
>>> ಆಶೀರ್ವಾದಪೂರ್ವಕ ಸಹಕಾರ ಅತೀ ಅವಶ್ಯಕ; ನೀವೆಲ್ಲರೂ ಸದಾ ಕಹಳೆಯೊಟ್ಟಿಗೆ ಇರುತ್ತೀರೆಂದು
>>> ನಂಬಿದ್ದೇವೆ. ನವಂಬರ್ 2014 ರ ಮಾಹೆಯುದ್ದಕ್ಕೂ ನಡೆಯಲಿರುವ ಈ ಕಾರ್ಯಕ್ರಮವು
>>> ನಿರ್ವಿಘ್ನವಾಗಿ ನೆರವೇರುವಂತಾಗಲಿ ಎಂದು ದೈವೀಸಂಭೂತರಾದ ಗುರುಗಳ ಪಾದಾರವಿಂದಗಳಿಗೆ ನಮಿಸಿ,
>>> ಶ್ರೀ ಚಾಮರಾಜ ಸವಡಿ ಇವರಿಂದ ರಚಿತಗೊಂಡಿರುವ ಲೇಖನವನ್ನು ಪ್ರಕಟಿಸುತ್ತಾ, ಕಹಳೆಯ ನಾಲ್ಕನೇ
>>> ಆವೃತ್ತಿಯನ್ನು ಸಮಸ್ತ ಕನ್ನಡಿಗರ ಪರವಾಗಿ ಕನ್ನಡಾಂಬೆಗೆ ಶ್ರದ್ಧಾಪೂರ್ವಕವಾಗಿ
>>> ಅರ್ಪಿಸುತ್ತಿದ್ದೇವೆ.
>>> => ಕಹಳೆ ತಂಡ.
>>>
>>> ಮೈಸೂರು ಕರ್ನಾಟಕವಾದ ಕಥೆ
>>> ಇವತ್ತು ಯಾವುದನ್ನು ನಾವು ವಿಶಾಲ ಕರ್ನಾಟಕ, ಅಖಂಡ ಕರ್ನಾಟಕ ಎಂದು ಕರೆಯುತ್ತೇವೆಯೋ ಅದು
>>> ಆರು ದಶಕಗಳ ಹಿಂದೆ ಸುಮಾರು 20 ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿತ್ತು. ಕನ್ನಡಿಗರ
>>> ಒಂದು ಪ್ರತ್ಯೇಕ ರಾಜ್ಯವೆಂಬುದು ಅಸ್ತಿತ್ವದಲ್ಲೇ ಇರಲಿಲ್ಲ ಎಂದರೆ ಅಚ್ಚರಿಯಾಗುತ್ತಿದೆಯೇ?
>>> ಸ್ವಂತ ರಾಜ್ಯ ಹೊಂದುವ ಕನಸು ಮೊಳೆತು, ಚಿಗುರಿ, ಹಬ್ಬಿ, ಹೂವಾಗಿ, ಕಾಯಾಗಿ, ಹಣ್ಣಾದ
>>> ಘಟನೆಗಳ ಹಿಂದಿನ ಸಂಕ್ಷಿಪ್ತ ಚಿತ್ರಣ ಇಲ್ಲಿದೆ:
>>>
>>> ಅದೊಂದು ಸಮೃದ್ಧ ಕನಸು
>>> ಕನ್ನಡ ಮಾತನಾಡುವ ಜನರೆಲ್ಲ ಒಂದೇ ಪ್ರದೇಶಕ್ಕೆ ಸೇರಬೇಕೆಂಬ ಕನಸು ಮೊಳೆತಾಗ ಇದು ನಮ್ಮ
>>> ನೆಲ ಎಂದು ಹೇಳಿಕೊಳ್ಳಲು ಮೈಸೂರು ಸಂಸ್ಥಾನ ಹೊರತುಪಡಿಸಿ ಬೇರೆ ನಿರ್ದಿಷ್ಟ ಪ್ರದೇಶವೇ
>>> ಇದ್ದಿಲ್ಲ. ಉಳಿದ ಪ್ರಾಂತ್ಯಗಳ ಆಡಳಿತದಲ್ಲಿ ಕನ್ನಡ, ಕನ್ನಡಿಗರಿಗೆ ಪ್ರಾಧಾನ್ಯತೆ ಇರಲಿಲ್ಲ.
>>>
>>> ಈ ಸಂದರ್ಭದಲ್ಲಿ ಕನ್ನಡದ ಪರವಾಗಿ ಕೆಲಸ ಮಾಡಿದ ಕೆಲ ಮಹನೀಯರನ್ನು ನೆನೆಯಲೇಬೇಕು. ಸರ್
>>> ವಾಲ್ಟರ್ ಎಲಿಯಟ್, ಸರ್ ಥಾಮಸ್ ಮನ್ರೋ, ಜಾನ್ ಎ. ಡನ್‌ಲಪ್, ಗ್ರೀನ್ ಹಿಲ್ ಆರ್. ಗ್ರಾಂಟ್,
>>> ಡಬ್ಲ್ಯು. ಎ. ರಸೆಲ್, ಜೆ. ಎಫ್. ಫ್ಲೀಟ್‌ರಂತಹ ಬ್ರಿಟಿಷ್ ಅಧಿಕಾರಿಗಳು ಕನ್ನಡ ಕಟ್ಟುವ
>>> ಕೆಲಸ ಮಾಡಿದರು. ಅವರಿಗೆ ಕೈ ಜೋಡಿಸಿದ್ದು ಚೆನ್ನಬಸಪ್ಪನವರಂತಹ ಕನ್ನಡಿಗ ಅಧಿಕಾರಿ.
>>> ಜೊತೆಗೆ, ರಾ. ಹ. ದೇಶಪಾಂಡೆ, ರೊದ್ದ ಶ್ರೀನಿವಾಸರಾವ್, ಆಲೂರು ವೆಂಕಟರಾವ್ ಮುಂತಾದ
>>> ಹಿರಿಯರು ಕನ್ನಡ ಮಾತನಾಡುವ ಜನರೆಲ್ಲರನ್ನೂ ಹೊಂದಿರುವ ಒಂದು ಪ್ರಾಂತ್ಯ ರಚನೆಯಾಗಬೇಕೆಂದು
>>> ಕನಸು ಕಂಡರು.
>>>
>>> ಕರ್ನಾಟಕ ಏಕೀಕರಣದ ಕನಸು ಮೊಳೆತಿದ್ದು ಹೀಗೆ. ಜೊತೆಗೆ, ಇಂಥದೊಂದು ಕನಸು ಮೊಳೆಯಲು ಕೆಲ
>>> ಐತಿಹಾಸಿಕ ಘಟನೆಗಳೂ ಕಾರಣವಾಗಿವೆ.
>>>
>>> 1905ರಲ್ಲಿ ಬ್ರಿಟಿಷ್ ಸರ್ಕಾರ ಪ್ರಸ್ತಾಪಿಸಿದ್ದ ಬಂಗಾಳ ರಾಜ್ಯದ ವಿಭಜನೆ. ಇದನ್ನು
>>> ಪ್ರತಿಭಟಿಸಿದ ಬಂಗಾಳಿಗಳು 'ವಂಗಭಂಗ' ಎಂದು ದೊಡ್ಡ ಚಳವಳಿಯನ್ನೇ ರೂಪಿಸಿದರು. ಹೋರಾಟ
>>> ತೀವ್ರಗೊಂಡಾಗ, ಮಣಿದ ಬ್ರಿಟಿಷ್ ಸರ್ಕಾರ 1912ರಲ್ಲಿ ಬಂಗಾಳವನ್ನು ಪುನಃ ಒಂದು ಮಾಡಿತು.
>>> ಕನ್ನಡಿಗರನ್ನು ಒಂದೆಡೆ ಸೇರಿಸುವ ಕನಸು ಹೊತ್ತಿದ್ದವರಿಗೆ ಈ ಘಟನೆ ದೊಡ್ಡ ಪ್ರೇರಣೆಯಾಯಿತು.
>>>
>>> ಕರ್ನಾಟಕ ವಿದ್ಯಾವರ್ಧಕ ಸಂಘ
>>> ಕರ್ನಾಟಕ ರೂಪುಗೊಳ್ಳಲು ಕಾರಣರಾದವರ ಪೈಕಿ ಒಬ್ಬರಾದ ರಾ. ಹ. ದೇಶಪಾಂಡೆ ಹಾಗೂ ಕೆಲವು
>>> ಸಮಾನ ಮನಸ್ಕರು ಒಂದೆಡೆ ಸೇರಿದರು. ಕನ್ನಡ ಭಾಷೆಯ ದುಃಸ್ಥಿತಿ ದೂರ ಮಾಡಲೆಂದು 1890ರಲ್ಲೇ
>>> ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ಧಾರವಾಡದಲ್ಲಿ ಸ್ಥಾಪಿಸಿದ್ದರು. ಕನ್ನಡದಲ್ಲಿ ಶಿಕ್ಷಣ
>>> ಪ್ರಸಾರಕ್ಕೆ ಪ್ರೋತ್ಸಾಹ, ಪ್ರಾಚೀನ ಕನ್ನಡ ಕೃತಿಗಳ ಸಂಪಾದನೆ ಮತ್ತು ಪ್ರಕಟಣೆ,
>>> ಕನ್ನಡದಲ್ಲಿ ಸ್ವತಂತ್ರ ಕೃತಿಗಳ ರಚನೆ, ಉತ್ತಮ ಮತ್ತು ಉಪಯುಕ್ತ ಕೃತಿಗಳ ಅನುವಾದ ಹಾಗೂ
>>> ಪ್ರಕಟಣೆಗೆ ಪ್ರೋತ್ಸಾಹ, ಗ್ರಂಥ ಭಂಡಾರಗಳ ಸ್ಥಾಪನೆ ಮತ್ತು ನಿರ್ವಹಣೆಗೆ ನೆರವು ನೀಡುವುದು
>>> ಈ ಸಂಸ್ಥೆಯ ಮೂಲ ಉದ್ದೇಶವಾಗಿತ್ತು. ಲೇಖಕರನ್ನು ಬೆಳೆಸಿದ ಸಂಘ, ಕನ್ನಡ ಗ್ರಂಥಗಳ
>>> ಭಾಷೆಯಲ್ಲಿ ಏಕರೂಪತೆ ಇರಬೇಕೆಂಬ ಕಾರಣದಿಂದ 1907ರ ಜೂನ್ ತಿಂಗಳ ಮೊದಲ ವಾರದಲ್ಲಿ
>>> ಧಾರವಾಡದಲ್ಲಿ ಅಖಿಲ ಕರ್ನಾಟಕ ಗ್ರಂಥಕರ್ತರ ಮೊದಲ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿತು.
>>>
>>> ಕನ್ನಡ ಸಾಹಿತ್ಯ ಪರಿಷತ್ತು
>>> ನಂತರದ ಸಮ್ಮೇಳನವನ್ನು ಬೆಂಗಳೂರಿನಲ್ಲಿ ನಡೆಸಬೇಕು ಎಂಬ ಪ್ರಯತ್ನದ ಫಲವಾಗಿ 1915ರಲ್ಲಿ
>>> ಸ್ಥಾಪನೆಯಾದದ್ದು ಕರ್ನಾಟಕ ಸಾಹಿತ್ಯ ಪರಿಷತ್ತು. ಮುಂದೆ ಇದು ಕನ್ನಡ ಸಾಹಿತ್ಯ ಪರಿಷತ್ತು
>>> ಎಂದು ಹೆಸರು ಬದಲಾಯಿಸಿಕೊಂಡಿತು. ಸಾಹಿತ್ಯ ಸಮ್ಮೇಳನಗಳ ಸಂದರ್ಭದಲ್ಲಿ ಕರ್ನಾಟಕ ಏಕೀಕರಣದ
>>> ಪರವಾಗಿ ದನಿ ಎತ್ತುವ ಮೂಲಕ ಏಕೀಕರಣದ ಬೇಡಿಕೆಗೆ ಪರಿಷತ್ತು ವೇದಿಕೆ ಕಲ್ಪಿಸಿತು.
>>>
>>> ಕರ್ನಾಟಕ ಕುಲ ಪುರೋಹಿತ
>>> ಎಲ್ಲರಿಗಿಂತ ಪ್ರಮುಖ ಸ್ಥಾನದಲ್ಲಿ ನಿಲ್ಲುವ ವ್ಯಕ್ತಿ ಎಂದರೆ 'ಕರ್ನಾಟಕದ ಗತವೈಭವ'
>>> ಗ್ರಂಥ ರಚಿಸಿದ ಕರ್ನಾಟಕ 'ಕುಲ ಪುರೋಹಿತ' ಆಲೂರು ವೆಂಕಟರಾಯರು. ಕರ್ನಾಟಕ ಏಕೀಕರಣದ ಬಗ್ಗೆ
>>> ಕನಸು ಕಂಡಿದ್ದಲ್ಲದೇ ಅದರ ಸಾಕಾರಕ್ಕೆ ದುಡಿದ ಹಿರಿಯ ಜೀವ ಇದು. ಆಲೂರು ವೆಂಕಟರಾಯರು,
>>> ಗದಿಗೆಯ್ಯ ಹೊನ್ನಾಪುರಮಠ ಮತ್ತು ಕಡಪಾ ರಾಘವೇಂದ್ರರಾಯರು ಸೇರಿ 1916ರಲ್ಲಿ ಸ್ಥಾಪಿಸಿದ
>>> 'ಕರ್ನಾಟಕ ಸಭೆ' ಕರ್ನಾಟಕ ಏಕೀಕರಣದ ಬೇಡಿಕೆಗೆ ಇಂಬು ಕೊಟ್ಟಿತು. ರಾಜಕೀಯ ಬೆಂಬಲವನ್ನೂ
>>> ಪಡೆದಿದ್ದ ಕರ್ನಾಟಕ ಸಭೆಯು ಏಕೀಕರಣದ ವಿಷಯದಲ್ಲಿ ಹಲವಾರು ಹೋರಾಟಗಳನ್ನು ನಡೆಸಿತು. ಇದರ
>>> ಪ್ರೇರಣೆಯಿಂದ ನಾಡಹಬ್ಬಗಳು ನಡೆದವು. ಸಕ್ಕರಿ ಬಾಳಾಚಾರ್ಯ, ಡಾ. ಯು. ರಾಮರಾವ್, ಮುದವೀಡು
>>> ಕೃಷ್ಣರಾವ್, ಕಡಪಾ ರಾಘವೇಂದ್ರ ರಾವ್, ಮಂಗಳವೇಡೆ ಶ್ರೀನಿವಾಸರಾವ್ ಮುಂತಾದ ಹಿರಿಯರು ಸಭೆಯ
>>> ಜೊತೆ ಗುರುತಿಸಿಕೊಂಡಿದ್ದರು.
>>>
>>> ಬ್ರಿಟಿಷರೂ ಬಯಸಿದ್ದರು
>>> 1918ರಲ್ಲೇ ಭಾರತದಲ್ಲಿ ಭಾಷಾವಾರು ಪ್ರಾಂತ ರಚನೆಯ ಸಂಬಂಧ ಮಾಂಟೆಗ್ಯೂ-ಚೆಲ್ಮ್ಸ್‌ಫರ್ಡ್
>>> ಸಮಿತಿ ನೇಮಕಗೊಂಡಿತ್ತು. ಆ ಸಮಿತಿಯು ದೇಶವನ್ನು ಭಾಷಾವಾರು ಪ್ರಾಂತ್ಯಗಳನ್ನಾಗಿ
>>> ವಿಭಾಗಿಸುವುದು ಅಗತ್ಯ ಎಂದು ಶಿಫಾರಸು ಮಾಡಿತು. ಇದನ್ನು ಆಗಿನ ಬ್ರಿಟಿಷ್ ಸರ್ಕಾರ ಕೂಡ
>>> ಒಪ್ಪಿಕೊಂಡಿತ್ತು. 1920ರಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದ ಕಾಂಗ್ರೆಸ್ ಮಹಾಧಿವೇಶನ
>>> ಏಕೀಕರಣದ ನಿಟ್ಟಿನಲ್ಲಿ ಒಂದು ಮಹತ್ವದ ವೇದಿಕೆ. ಕರ್ನಾಟಕ ಪ್ರತಿನಿಧಿಗಳ ಒತ್ತಡಕ್ಕೆ
>>> ಮಣಿದು, ಬ್ರಿಟಿಷ್ ಆಳ್ವಿಕೆಗೆ ಸೇರಿದ್ದ ಕನ್ನಡ ಭಾಷಿಕ ಪ್ರದೇಶಗಳನ್ನು ಕರ್ನಾಟಕ
>>> ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಸೇರಿಸಲಾಯಿತು.
>>>
>>> ಏಕೀಕರಣಕ್ಕೆ ವೇದಿಕೆಯಾದ ಬೆಳಗಾವಿ ಅಧಿವೇಶನ
>>> ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ರಾಷ್ಟ್ರೀಯ
>>> ಕಾಂಗ್ರೆಸ್‌ನ ಮಹಾಧಿವೇಶನದ ಸಂದರ್ಭದಲ್ಲಿ ಕರ್ನಾಟಕ ಏಕೀಕರಣಕ್ಕೆ ವಿಶೇಷ ಚಾಲನೆ ದೊರೆಯಿತು.
>>> ಕರ್ನಾಟಕ ಸಭೆಯ ಮೊದಲ ಪರಿಷತ್ತು ಬೆಳಗಾವಿಯಲ್ಲಿ 25-12-1924ರಂದು, ಸರ್ ಸಿದ್ದಪ್ಪ
>>> ಕಂಬಳಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಆ ಸಂದರ್ಭದಲ್ಲಿ ಹುಯಿಲಗೋಳ ನಾರಾಯಣರಾಯರು ರಚಿಸಿದ
>>> 'ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು' ಗೀತೆಯನ್ನು ಮೊದಲ ಬಾರಿಗೆ ಹಾಡಲಾಯಿತು.
>>>
>>> ಮದ್ರಾಸ್ ಮತ್ತು ಮುಂಬಯಿ ಆಧಿಪತ್ಯದ ವಿಧಾನ ಸಭೆಗಳಲ್ಲೂ ಕರ್ನಾಟಕ ಏಕೀಕರಣದ ವಿಷಯ
>>> ಪ್ರಸ್ತಾಪಿತಗೊಂಡಿತು. ಮದ್ರಾಸ್ ವಿಧಾನ ಸಭೆಯಲ್ಲಿ ಎ. ರಂಗನಾಥ ಮೊದಲಿಯಾರ್, ಜೆ. ಎ.
>>> ಸಲ್ಡಾನ, ಎ. ಬಿ. ಶೆಟ್ಟಿ, ಡಾ. ನಾಗನಗೌಡ ಮುಂತಾದ ಸದಸ್ಯರು ಕರ್ನಾಟಕ ಏಕೀಕರಣವನ್ನು
>>> ಬೆಂಬಲಿಸಿದರೂ ಸರ್ಕಾರ ಅದನ್ನು ತಿರಸ್ಕರಿಸಿತು. ಮುಂಬಯಿ ವಿಧಾನ ಸಭೆಯಲ್ಲಿ 1919ರಲ್ಲಿ ವಿ.
>>> ಎನ್. ಜೋಗ್ ಕರ್ನಾಟಕ ಪ್ರಾಂತ ರಚನೆಗೆ ಕೋರಿ ಠರಾವು ಮಂಡಿಸಿದ್ದರು. ಆದರೆ, ಅದೂ
>>> ತಿರಸ್ಕೃತವಾಯಿತು. 1926ರಲ್ಲಿ ಸರ್ ಸಿದ್ದಪ್ಪ ಕಂಬಳಿ ಪುನಃ ಕರ್ನಾಟಕ ಪ್ರಾಂತ ರಚನೆಗೆ
>>> ಠರಾವು ಮಂಡಿಸಿದರಾದರೂ, ಏಕೀಕರಣಕ್ಕೆ ಕನ್ನಡಿಗರ ಬೆಂಬಲವಿಲ್ಲ ಎಂಬ ಕಾರಣ ನೀಡಿ ಸರ್ಕಾರ
>>> ಠರಾವನ್ನು ತಿರಸ್ಕರಿಸಿತು.
>>>
>>> ಕೊನೆಗೆ ಮುಹೂರ್ತ ಕೂಡಿ ಬಂದಿದ್ದು 1938ರ ಮೇ ತಿಂಗಳ ಮೊದಲ ವಾರ. ಆಗ ನಡೆದ ಮುಂಬಯಿ
>>> ಶಾಸನ ಸಭೆ ಕರ್ನಾಟಕ ಏಕೀಕರಣ ಗೊತ್ತುವಳಿಯನ್ನು ಸ್ವೀಕರಿಸಿತು. ಚರ್ಚೆಯಲ್ಲಿ ಪಾಲ್ಗೊಂಡಿದ್ದ
>>> ಬಿ. ಜಿ. ಖೇರ್, ಸರ್ ಸಿದ್ದಪ್ಪ ಕಂಬಳಿ, ವಿ. ಎನ್. ಜೋಗ್ ಗೊತ್ತುವಳಿಯನ್ನು
>>> ಅನುಮೋದಿಸಿದರು. ಆದರೆ, ಎರಡನೇ ಜಾಗತಿಕ ಯುದ್ಧ ಪ್ರಾರಂಭವಾಗಿದ್ದರಿಂದ ಭಾಷಾವಾರು ಪ್ರಾಂತ
>>> ರಚನೆ ಆಗಲಿಲ್ಲ.
>>>
>>> ಸಮಗ್ರ ಕರ್ನಾಟಕದ ಕನಸು
>>> 1944ರಲ್ಲಿ ಧಾರವಾಡದಲ್ಲಿ ನಡೆದ 9ನೆಯ ಕರ್ನಾಟಕ ಏಕೀಕರಣ ಪರಿಷತ್ತು ಸಮಾವೇಶದಲ್ಲಿ
>>> ಸ್ವಾಗತಾಧ್ಯಕ್ಷರಾಗಿದ್ದ ಎಸ್. ಎಸ್. ಮಳೀಮಠ್, ಕರ್ನಾಟಕ ಏಕೀಕರಣವೆಂದರೆ, ಬ್ರಿಟಿಷ್
>>> ಕರ್ನಾಟಕ ಪ್ರಾಂತಗಳಷ್ಟೇ ಅಲ್ಲ, ಸಂಸ್ಥಾನಗಳೂ ಸೇರಿದಂತೆ ಸಮಗ್ರ ಕರ್ನಾಟಕದ ಏಕೀಕರಣ ಎಂದು
>>> ಸಾರಿದರು.
>>>
>>> 1946ರಲ್ಲಿ ದಾವಣಗೆರೆಯಲ್ಲಿ ನಡೆದ ಕರ್ನಾಟಕಸ್ಥರ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ
>>> ಮುಂಬಯಿ ಆಧಿಪತ್ಯದ ಕೃಷಿ ಮಂತ್ರಿ ಎಂ. ಪಿ. ಪಾಟೀಲರು 'ಭಾರತಕ್ಕೆ ಸ್ವಾತಂತ್ರ್ಯವು ಹೇಗೋ
>>> ಹಾಗೆ ಕರ್ನಾಟಕಕ್ಕೆ ಸ್ವಾಯತ್ತತೆ' ಎಂದು ಘೋಷಿಸಿದರು. ಕರ್ನಾಟಕ ಏಕೀಕರಣಕ್ಕೆ ಕೆಲವು
>>> ಸಂಸ್ಥಾನಿಕರು ಅಡ್ಡಿಯಾಗಿದ್ದಾರೆ ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಬಳ್ಳಾರಿಯ ಕೋ.
>>> ಚೆನ್ನಬಸಪ್ಪ 'ಸಾಧ್ಯವಾದರೆ ಮೈಸೂರನ್ನು ಒಳಗೊಂಡು, ಅಗತ್ಯವಾದರೆ ಅದನ್ನು ಬಿಟ್ಟು ಕರ್ನಾಟಕ
>>> ಏಕೀಕರಣವಾಗಬೇಕು' ಎಂಬ ಗೊತ್ತುವಳಿ ಮಂಡಿಸಿದರು.
>>>
>>> ಆದರೆ, ಕೆಂಗಲ್ ಹನುಮಂತಯ್ಯನವರು 'ಮೈಸೂರನ್ನು ಒಳಗೊಂಡು ಕರ್ನಾಟಕ ರಾಜ್ಯ
>>> ನಿರ್ಮಾಣವಾಗಬೇಕು' ಎಂದು ಗೊತ್ತುವಳಿಗೆ ತಿದ್ದುಪಡಿ ತಂದರು. ಗೊತ್ತುವಳಿಯನ್ನು ಜಾರಿಗೆ
>>> ತರಲು ಎಂ. ಪಿ. ಪಾಟೀಲ, ಎಸ್. ನಿಜಲಿಂಗಪ್ಪ ಮತ್ತು ಕೆ. ಬಿ. ಜಿನರಾಜ ಹೆಗ್ಗಡೆ ಅವರಿದ್ದ
>>> ಸಮಿತಿ ರಚನೆಯಾಯಿತು.
>>>
>>> ಸ್ವತಂತ್ರ ರಾಜ್ಯದತ್ತ...
>>> 1947ರ ಮುಂಬಯಿ ಶಾಸನ ಸಭೆಯಲ್ಲಿ ರೋಣದ ಅಂದಾನಪ್ಪ ದೊಡ್ಡಮೇಟಿ ಅವರು ಪ್ರತ್ಯೇಕ ಕರ್ನಾಟಕ
>>> ಪ್ರಾಂತ್ಯ ರಚನೆಗೆ ಒತ್ತಾಯಿಸಿ ಖಾಸಗಿ ಗೊತ್ತುವಳಿ ಮಂಡಿಸಿದರು. ಕೆಲವು
>>> ತಿದ್ದುಪಡಿಗಳೊಂದಿಗೆ ಗೊತ್ತುವಳಿಯು 60 ಮತಗಳನ್ನು ಪಡೆದು ಸ್ವೀಕೃತವಾಯಿತು. ವಿರುದ್ಧ
>>> ಬಂದದ್ದು ಕೇವಲ ಆರು ಮತಗಳು. ಮದ್ರಾಸ್ ಶಾಸನ ಸಭೆಯಲ್ಲಿಯೂ ಡಾ. ಪಿ. ಸುಬ್ಬರಾಯನ್ ಭಾಷಾವಾರು
>>> ಪ್ರಾಂತ್ಯ ರಚನೆಯ ಸಂಬಂಧ ಮಂಡಿಸಿದ ಗೊತ್ತುವಳಿ ಸ್ವೀಕೃತವಾಯಿತು.
>>>
>>> ಸ್ವತಂತ್ರ ಭಾರತದ ಸಂವಿಧಾನದ ರಚನೆಗೆ ಸೇರಿದ್ದ ಘಟನಾ ಸಮಿತಿಯ ಮೇಲೂ ಭಾಷಾವಾರು
>>> ಪ್ರಾಂತ್ಯ ರಚನೆಗೆ ಒತ್ತಡ ಹೆಚ್ಚಿತು. ಅಂದಿನ ಘಟನಾ ಸಮಿತಿಯ ಸಭೆಯಲ್ಲೇ ಭಾಷಾವಾರು
>>> ಪ್ರಾಂತ್ಯ ರಚನೆ ಕುರಿತು ವರದಿ ಸಿದ್ಧಪಡಿಸಲು ಉಪ ಸಮಿತಿಯೊಂದರ ರಚನೆಯಾಯಿತು.
>>>
>>> 1947ರ ಆಗಸ್ಟ್ 15ರಂದು ಭಾರತ ಸ್ವತಂತ್ರವಾಯಿತು. ಆದರೆ, ಭಾರತ ಒಕ್ಕೂಟದ ಜೊತೆ ಮೈಸೂರು
>>> ಸಂಸ್ಥಾನ ಸೇರ್ಪಡೆಯಾಗಿದ್ದು 1947ರ ಅಕ್ಟೋಬರ್ 24ರಂದು. ಹೈದರಾಬಾದ್ ಕರ್ನಾಟಕದ ಸೇರ್ಪಡೆ
>>> 1948ರ ಸೆಪ್ಟೆಂಬರ್ 17ರಂದು.
>>>
>>> 1948ರಲ್ಲಿ ಭಾಷಾವಾರು ಪ್ರಾಂತ್ಯ ರಚನೆಗೆ ಸಂಬಂಧಿಸಿದಂತೆ ವರದಿ ನೀಡಲು, ಅಲಹಾಬಾದ್
>>> ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಸ್. ಕೆ. ಧರ್ ಅಧ್ಯಕ್ಷತೆಯಲ್ಲಿ ಆಯೋಗ
>>> ನೇಮಿಸಿತ್ತು. ಆದರೆ, ವರದಿ ಭಾಷಾವಾರು ಪ್ರಾಂತ್ಯ ರಚನೆ ವಿರುದ್ಧವಾಗಿ ಬಂತು.
>>>
>>> ಕರ್ನಾಟಕ ಏಕೀಕರಣ ಪರಿಷತ್ತು
>>> ನ್ಯಾಯಮೂರ್ತಿ ಧರ್ ಆಯೋಗದ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾದ
>>> ಸಮಿತಿಯಲ್ಲಿದ್ದ ಜವಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಪಟ್ಟಾಭಿರಾಮಯ್ಯ
>>> ಕೂಡಾ ಆಯೋಗದ ಶಿಫಾರಸುಗಳನ್ನೇ ಎತ್ತಿ ಹಿಡಿದರು. ಇದನ್ನು ಖಂಡಿಸಿ ರಾಜ್ಯದ ಎಲ್ಲೆಡೆ ಸಭೆ,
>>> ಸಮಾರಂಭ ಮತ್ತು ಸಮ್ಮೇಳನಗಳು ನಡೆದವು. ಕಾಂಗ್ರೆಸ್ ನಾಯಕರಿಂದ ಕರ್ನಾಟಕ ಏಕೀಕರಣ
>>> ಸಾಧ್ಯವಾಗದು ಎಂಬ ಅಭಿಪ್ರಾಯದಿಂದ ಪಕ್ಷೇತರ ಕರ್ನಾಟಕ ಏಕೀಕರಣ ಪರಿಷತ್ತು ಸ್ಥಾಪಿತವಾಗಿ,
>>> ಏಕೀಕರಣಕ್ಕೆ ಹೊಸ ತಿರುವು ಬಂದಿತು.
>>>
>>> ಈ ಮಧ್ಯೆ ಆಂಧ್ರ ಪ್ರಾಂತ ರಚನೆಗೆ ಒತ್ತಾಯಿಸಿ, 1951ರ ಆಗಸ್ಟ್‌ನಲ್ಲಿ ಪೊಟ್ಟಿ
>>> ಶ್ರೀರಾಮುಲು ತಿರುಪತಿಯಲ್ಲಿ 37 ದಿನಗಳ ಉಪವಾಸ ಮಾಡಿದರು. ನಂತರ ಎರಡನೆಯ ಬಾರಿಗೆ ಆಮರಣಾಂತ
>>> ಉಪವಾಸಕ್ಕೆ ಕೈಹಾಕಿದ ಪೊಟ್ಟಿ ಶ್ರೀರಾಮುಲು, 58 ದಿನಗಳ ಉಪವಾಸ ಮಾಡಿ ನಿಧನರಾದರು. ಇದರಿಂದ
>>> ಎಚ್ಚೆತ್ತ ಲೋಕಸಭೆ, ಮದರಾಸ್ ನಗರವನ್ನು ಬಿಟ್ಟು ಆಂಧ್ರ ಪ್ರಾಂತ ರಚನೆಗೆ ನಿರ್ಧರಿಸಿತು.
>>> ಆಂಧ್ರ ಪ್ರಾಂತಕ್ಕೆ ಸೇರಿಸಬೇಕೆಂಬ ವಾದ ಇದ್ದ ಬಳ್ಳಾರಿ ತಾಲ್ಲೂಕಿನ ಬಗ್ಗೆ ಸ್ಪಷ್ಟ
>>> ಅಭಿಪ್ರಾಯ ಸಲ್ಲಿಸುವಂತೆ ರಾಷ್ಟ್ರಪತಿಗಳು ಹೈದರಾಬಾದ್‌ನ ಮುಖ್ಯ ನ್ಯಾಯಾಧೀಶ ಎಲ್. ಎಸ್.
>>> ಮಿಶ್ರಾ ಅವರಿಗೆ ಜವಾಬ್ದಾರಿ ಕೊಟ್ಟಿತು.
>>>
>>> ಆಂಧ್ರಕ್ಕಿಂತ ಕರ್ನಾಟಕದ ಪರ 90 ಮನವಿಗಳು ಹೆಚ್ಚಾಗಿ ಬಂದವು. ಜೊತೆಗೆ, ಕೊನೆಯ
>>> ಘಳಿಗೆಯಲ್ಲಿ ಕರ್ನಾಟಕದ ಖ್ಯಾತ ಇತಿಹಾಸ ತಜ್ಞ ಆರ್. ಎಸ್. ಪಂಚಮುಖಿ ಅವರ ಅಭಿಪ್ರಾಯವೂ
>>> ರಾಜ್ಯದ ಪರವಾಗಿಯೇ ಬಂದಿದ್ದರಿಂದ, ಬಳ್ಳಾರಿ ತಾಲ್ಲೂಕನ್ನು ಕರ್ನಾಟಕಕ್ಕೇ ಸೇರಿಸಲು ಮಿಶ್ರಾ
>>> ಶಿಫಾರಸು ಮಾಡಿದರು.
>>>
>>> ಹುಬ್ಬಳ್ಳಿ ಗೋಲಿಬಾರ್
>>> ಈ ಸಂದರ್ಭದಲ್ಲೇ, ಹುಬ್ಬಳ್ಳಿಯ ಸಮೀಪದ ಅದರಗುಂಚಿಯಲ್ಲಿ, ಶಂಕರಗೌಡ ಪಾಟೀಲರು
>>> 28-03-1953ರಂದು ಕರ್ನಾಟಕ ಏಕೀಕರಣಕ್ಕೆ ಆಗ್ರಹಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ
>>> ಆರಂಭಿಸಿದರು. 19-04-1953ರಂದು ಹುಬ್ಬಳ್ಳಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ
>>> ಕಾರ್ಯಕಾರಿ ಸಮಿತಿಯ ಸಭೆ ನಡೆಯಲಿದ್ದ ವಿಷಯ ತಿಳಿದ ಕರ್ನಾಟಕ ಏಕೀಕರಣ ಕಾರ್ಯಕರ್ತರು
>>> ಬೆಳಗಿನಿಂದಲೇ ಗುಳಕವ್ವನ ಕಟ್ಟೆ ಮೈದಾನದಲ್ಲಿ ಗುಂಪುಗೂಡಿದರು. ಮೊದಮೊದಲು
>>> ಶಾಂತಿಯುತವಾಗಿದ್ದ ಪ್ರತಿಭಟನೆ ಕ್ರಮೇಣ ಉಗ್ರವಾಯಿತು. ಗುದ್ಲೆಪ್ಪ ಹಳ್ಳಿಕೇರಿ ಅವರ ಜೀಪಿಗೆ
>>> ಬೆಂಕಿ ಹಚ್ಚಿದರು. ಪೊಲೀಸರ ನಿಯಂತ್ರಣ ತಪ್ಪಿದಾಗ ಲಾಠೀ ಚಾರ್ಜ್ ಅಲ್ಲದೆ, ಗೋಲೀಬಾರ್ ಕೂಡಾ
>>> ಮಾಡಲಾಯಿತು. ಗಲಭೆಗೆ ಕಾರಣಕರ್ತರೆಂದು ಬಂಧಿತರಾದವರ ವಿಚಾರಣೆ ನಡೆಯಿತು. ಆಗ ಸ್ಥಾನಬದ್ಧತಾ
>>> ಕಾನೂನಿನ ಅಡಿಯಲ್ಲಿ ಬಂಧಿತರಾಗಿದ್ದವರ ಪರ ವಾದಿಸಿದವರು ಮಾಜಿ ಮುಖ್ಯಮಂತ್ರಿ ದಿ. ಎಸ್.
>>> ಆರ್. ಬೊಮ್ಮಾಯಿ.
>>>
>>> ಏಕೀಕರಣಕ್ಕೆ ಹೆಚ್ಚಿದ ಒತ್ತಡ
>>> ಹುಬ್ಬಳ್ಳಿ ಗಲಭೆಯ ನಂತರ, ಮಿಶ್ರಾ ವರದಿ ಸ್ವೀಕೃತವಾಗಿ ಆಂಧ್ರ ಪ್ರದೇಶದ ರಚನೆ
>>> ಖಚಿತವಾಯಿತು. ಕಾಂಗ್ರೆಸ್ ನಾಯಕರನ್ನೇ ನಂಬಿ ಕೂತರೆ ಕರ್ನಾಟಕ ಏಕೀಕರಣ ಸಾಧ್ಯವಿಲ್ಲ ಎಂಬ
>>> ಅಭಿಪ್ರಾಯವಿದ್ದ ಕಾಂಗ್ರೆಸ್ಸೇತರ ಪಕ್ಷದ ಕೆಲವು ಮುಖಂಡರು 28-05-1953ರಂದು
>>> ದಾವಣಗೆರೆಯಲ್ಲಿ ಸಭೆ ಸೇರಿ, 'ಕರ್ನಾಟಕ ರಾಜ್ಯ ನಿರ್ಮಾಣ ಮಾಡುವುದು ಕನ್ನಡಿಗರ ಜನ್ಮಸಿದ್ಧ
>>> ಹಕ್ಕು' ಎಂಬ ಘೋಷಣೆಯೊಂದಿಗೆ, ಮಾಜಿ ಸಂಸದ ದಿ. ಅಳವಂಡಿ ಶಿವಮೂರ್ತಿ ಸ್ವಾಮಿ ಮತ್ತು ಕೆ.
>>> ಆರ್. ಕಾರಂತರ ನೇತೃತ್ವದಲ್ಲಿ 'ಅಖಂಡ ಕರ್ನಾಟಕ ರಾಜ್ಯ ನಿರ್ಮಾಣ ಪರಿಷತ್ತು' ಎಂಬ
>>> ಸಂಸ್ಥೆಯನ್ನು ಹುಟ್ಟುಹಾಕಿದರು. ಏಕೀಕರಣ ಹೋರಾಟಕ್ಕೆ ಜನಾಂದೋಲನದ ಸ್ವರೂಪ ನೀಡುವಲ್ಲಿ
>>> ಪರಿಷತ್ತು ಯಶ್ವಸಿಯಾಯಿತು. 1953ರ ಅಕ್ಟೋಬರ್ ಒಂದರಂದು ಆಂಧ್ರಪ್ರದೇಶ ರಚನೆಯಾದ
>>> ಸಂದರ್ಭದಲ್ಲೇ ಬಳ್ಳಾರಿ ಜಿಲ್ಲೆ ಮೈಸೂರು ಸಂಸ್ಥಾನದಲ್ಲಿ ವಿಲೀನಗೊಂಡಿತು.
>>>
>>> ಕರ್ನಾಟಕ ಏಕೀಕರಣಕ್ಕಾಗಿ ಜನಾಂದೋಲನ ಹೆಚ್ಚಿದಾಗ, ಕೇಂದ್ರ ಸರ್ಕಾರ 29-12-1953ರಂದು
>>> ರಚಿಸಿದ್ದ ಫಜಲ್ ಆಲಿ ನೇತೃತ್ವದ ರಾಜ್ಯ ಪುನರ್ವಿಂಗಡಣಾ ಆಯೋಗ ಕರ್ನಾಟಕ ರಾಜ್ಯ ರಚನೆಯ
>>> ಅಗತ್ಯತೆಯನ್ನು ಎತ್ತಿ ಹಿಡಿಯಿತು. ಅದರ ಕರಡು ವರದಿಯಲ್ಲಿ ಇಡಿಯಾಗಿ ಬಳ್ಳಾರಿ ಜಿಲ್ಲೆಯನ್ನು
>>> ಆಂಧ್ರಕ್ಕೆ ಸೇರಿಸಲು ಶಿಫಾರಸು ಮಾಡಿತ್ತು. ಅದನ್ನು ವಿರೋಧಿಸಿ, ಬಳ್ಳಾರಿ ಜಿಲ್ಲೆಯಾದ್ಯಂತ
>>> ತುಂಗಭದ್ರಾ ನದಿ ನೀರು ಹೋರಾಟ ನಡೆಯಿತು. ರಾಜ್ಯ ಪುನರ್ವಿಂಗಡಣಾ ಆಯೋಗವು ಹಿಂದಿನ
>>> ವರದಿಗಳನ್ನು ಪರಿಶೀಲಿಸಿ, ಬಂದ ಸಾವಿರಗಟ್ಟಲೆ ಮನವಿಗಳ ಅಧ್ಯಯನ ಮಾಡಿ, ಕೇಂದ್ರ ಸರ್ಕಾರಕ್ಕೆ
>>> 1955ರ ಅಕ್ಟೋಬರ್ 10ರಂದು ತನ್ನ ವರದಿಯನ್ನು ಸಲ್ಲಿಸಿತು.
>>>
>>> ರಾಜ್ಯ ಪುನರ್ವಿಂಗಡಣಾ ಆಯೋಗದ ವರದಿಯ ಬಗ್ಗೆ ಸಂಸತ್ತು 1956ರ ಜನವರಿ 19ರಂದು ಚರ್ಚಿಸಿ,
>>> 1956ರ ಮಾರ್ಚ್ 19ರಂದು ವಿಧೇಯಕ ಪ್ರಕಟಿಸಿತು. ಅದರ ಪ್ರಕಾರ 1956ರ ನವೆಂಬರ್ 1ರಂದು
>>> ಕರ್ನಾಟಕ (ಆಗ ಮೈಸೂರು) ರಾಜ್ಯ ಅಸ್ತಿತ್ವಕ್ಕೆ ಬರಲಿತ್ತು. ಆಗ ಈ ಪ್ರದೇಶಗಳು ಹೊಸ
>>> ರಾಜ್ಯದಲ್ಲಿ ಸೇರ್ಪಡೆಯಾಗಬೇಕಿತ್ತು:
>>>
>>> 1. ಇಡಿಯಾಗಿ ಮೈಸೂರು ರಾಜ್ಯ.
>>> 2. ಮುಂಬಯಿ ರಾಜ್ಯದ ಬಿಜಾಪುರ, ಧಾರವಾಡ, ಉತ್ತರ ಕನ್ನಡ ಮತ್ತು ಬೆಳಗಾವಿ (ಚಾಂದಘಡ
>>> ತಾಲ್ಲೂಕನ್ನು ಬಿಟ್ಟು) ಜಿಲ್ಲೆಗಳು.
>>> 3. ಹೈದರಾಬಾದ್ ರಾಜ್ಯದ ಗುಲಬರ್ಗಾ ಜಿಲ್ಲೆ (ಕೊಡಂಗಲ್ ಮತ್ತು ತಾಂಡೂರು
>>> ತಾಲ್ಲೂಕುಗಳನ್ನು ಬಿಟ್ಟು), ರಾಯಚೂರು ಜಿಲ್ಲೆ (ಆಲಂಪುರ ಮತ್ತು ಗದ್ವಾಲ್ ತಾಲ್ಲೂಕುಗಳನ್ನು
>>> ಬಿಟ್ಟು) ಮತ್ತು ಬೀದರ್ ಜಿಲ್ಲೆಯ ಬೀದರ್, ಭಾಲ್ಕಿ, ಔರಾದ್ (ಸಂತಪುರ) ಮತ್ತು ಹುಮನಾಬಾದ್
>>> ತಾಲ್ಲೂಕುಗಳು.
>>> 4. ಮದ್ರಾಸ್ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ (ಕಾಸರಗೋಡು ತಾಲ್ಲೂಕು ಮತ್ತು ಅಮೀನ್
>>> ದ್ವೀಪಗಳನ್ನು ಬಿಟ್ಟು) ಮತ್ತು ಕೊಯಮತ್ತೂರು ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು.
>>> 5. ಕೊಡಗು ರಾಜ್ಯ.
>>>
>>> ಈಡೇರಿದ ಕನಸು
>>> ವಿಜಯನಗರ ಕಾಲದವರೆಗೂ ದೊಡ್ಡ ಸಾಮ್ರಾಜ್ಯವಾಗಿದ್ದ ಕರುನಾಡು ಟಿಪ್ಪು ಸುಲ್ತಾನ್‌ನ ಮರಣದ
>>> ನಂತರ ಬ್ರಿಟಿಷರ ಒಡೆದು ಆಳುವ ನೀತಿಯಿಂದ ಹಲವಾರು ಪ್ರಾಂತ್ಯಗಳಾಗಿ ವಿಭಜನೆಯಾಗಿ ವಿವಿಧ
>>> ಭಾಷೆಗಳ ಪ್ರಾಂತ್ಯಗಳಲ್ಲಿ ಇಲ್ಲವಾಗಿತ್ತು. ಈಗ ಕನ್ನಡಿಗರನ್ನೊಳಗೊಂಡ ಪ್ರತ್ಯೇಕ ರಾಜ್ಯ
>>> ಅಸ್ತಿತ್ವಕ್ಕೆ ಬರುತ್ತದೆಂಬ ಸಂತಸದ ಜೊತೆಗೆ, ಇದಕ್ಕಾಗಿ ಹೋರಾಡಿದ ಹಿರಿಯ ಜೀವಗಳು
>>> ಹಂಬಲಿಸಿದಂತೆ, ಪೂರ್ತಿ ಏಕೀಕರಣ ಸಾಧ್ಯವಾಗಲಿಲ್ಲ.
>>>
>>> ಏಕೆಂದರೆ, ಕಾಸರಗೋಡು ಕೈಬಿಟ್ಟಿತ್ತು. ಅಕ್ಕಲಕೋಟೆ, ಸೊಲ್ಲಾಪುರಗಳು ಹೊರಗೇ
>>> ಉಳಿದಿದ್ದವು. ನೀಲಗಿರಿ ಕೂಡಾ ದಕ್ಕಲಿಲ್ಲ. ಏಕೀಕರಣದ ನಂತರವೂ ಪ್ರಾಚೀನ ಕಾಲದಿಂದ ಇದ್ದ
>>> ಕರ್ನಾಟಕ ಎಂಬ ಹೆಸರಿನ ಬದಲಾಗಿ ಮೈಸೂರು ರಾಜ್ಯವೆಂದು ಕರೆಯಲ್ಪಟ್ಟಿತು. ಕೊನೆಗೂ, ಸಾಕಷ್ಟು
>>> ಒತ್ತಡದ ನಂತರ, 1973 ನವೆಂಬರ್ 1ರಂದು ರಾಜ್ಯಕ್ಕೆ ಕರ್ನಾಟಕ ಎಂದು ಪುನರ್ ನಾಮಕರಣ
>>> ಮಾಡಲಾಯಿತು.
>>>
>>> ಏನೇ ಆದರೂ, ಬೇರೆ ಬೇರೆ ಪ್ರಾಂತಗಳಲ್ಲಿ ಹಂಚಿಹೋಗಿದ್ದ ಕನ್ನಡಿಗರು 1956ರ ನವೆಂಬರ್
>>> 1ರಂದು ಒಂದೇ ರಾಜ್ಯದ ಆಡಳಿತ ವ್ಯಾಪ್ತಿಗೆ ಬಂದಿದ್ದು ಒಂದು ಐತಿಹಾಸಿಕ ಹೋರಾಟದ ಫಲ. ಎರಡು
>>> ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕ ಶತಮಾನಗಳ ಸಂಕೋಲೆ ಕಳೆದುಕೊಂಡು ಎಲ್ಲ
>>> ರೀತಿಯಿಂದ ಒಂದಾಯಿತು. ಏಕೀಕರಣದ ಕನಸು ಈಡೇರುವ ಮೂಲಕ, ಕನ್ನಡಿಗರ ಭಾವನಾತ್ಮಕವಾಗಿಯೂ
>>> ಒಂದಾದರು. ಸಾಂಸ್ಕೃತಿಕ ಐಕ್ಯತೆಗೂ ಇಂಬು ದೊರೆಯಿತು.
>>>
>>> ಇಂಥದೊಂದು ಕನಸನ್ನು ನನಸು ಮಾಡಲು ಹೋರಾಡಿದ ಎಲ್ಲರ ತ್ಯಾಗ ಮತ್ತು ಬಲಿದಾನದ ಫಲ ಈ ನಮ್ಮ
>>> ಹೆಮ್ಮೆಯ ಕರ್ನಾಟಕ. ಆ ಸ್ಫೂರ್ತಿ ಅಳಿಯದಿರಲಿ. ಸಮೃದ್ಧ ಹಾಗೂ ಸ್ವಾವಲಂಬಿ ಕರ್ನಾಟಕ ಬೇಗ
>>> ಮೈದಾಳಲಿ.
>>>
>>> ಸಿರಿಗನ್ನಡಂಗೆಲ್ಗೆ!
>>>
>>> ಲೇಖಕರ ಕಿರುಪರಿಚಯ
>>>  ಶ್ರೀ ಚಾಮರಾಜ ಸವಡಿ
>>>
>>> ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಸುದ್ದಿ ಸಂಪಾದಕರಾಗಿರುವ ಇವರು ಹುಟ್ಟಿ
>>> ಬೆಳೆದದ್ದು ಕೊಪ್ಪಳ ಜಿಲ್ಲೆಯ ಅಳವಂಡಿಯಲ್ಲಿ. ಹಾಯ್‌ ಬೆಂಗಳೂರ್‌, ವಿಜಯ ಕರ್ನಾಟಕ, ಈಟಿವಿ
>>> ಕನ್ನಡ, ಪ್ರಜಾವಾಣಿ, ಸುವರ್ಣ ನ್ಯೂಸ್‌, ಸಮಯ ನ್ಯೂಸ್‌, ಟಿವಿ9 ನಲ್ಲಿ ಕೆಲಸ ಮಾಡಿದರುವ
>>> ಇವರು ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
>>>
>>> Blog  |  Facebook  |  Twitter
>>> ಹಂಚಿ
>>> 
>>> ಕಾಮೆಂಟ್‌ಗಳಿಲ್ಲ:
>>> ಕಾಮೆಂಟ್‌‌ ಪೋಸ್ಟ್‌ ಮಾಡಿ
>>> ‹
>>> ›
>>> ಮುಖಪುಟ
>>> ವೆಬ್‌ ಆವೃತ್ತಿಯನ್ನು ವೀಕ್ಷಿಸಿ
>>> This site uses cookies from Google to deliver its services, to
>>> personalise ads and t
>>>
>>> --
>>> *For doubts on Ubuntu and other public software, visit
>>> http://karnatakaeducation.org.in/KOER/en/index.php/Frequentl
>>> y_Asked_Questions
>>>
>>> **Are you using pirated software? Use Sarvajanika Tantramsha, see
>>> http://karnatakaeducation.org.in/KOER/en/index.php/Public_Software
>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>> ***If a teacher wants to join STF-read http://karnatakaeducation.org.
>>> in/KOER/en/index.php/Become_a_STF_groups_member
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> Visit this group at https://groups.google.com/group/kannadastf.
>>> To view this discussion on the web, visit https://groups.google.com/d/ms
>>> gid/kannadastf/CAD2E_f3poi4RNSroL8KpgVquE_Vy2%3Da1s%3Dq04Z_e
>>> 2sy7t1RNQA%40mail.gmail.com
>>> <https://groups.google.com/d/msgid/kannadastf/CAD2E_f3poi4RNSroL8KpgVquE_Vy2%3Da1s%3Dq04Z_e2sy7t1RNQA%40mail.gmail.com?utm_medium=email&utm_source=footer>
>>> .
>>> For more options, visit https://groups.google.com/d/optout.
>>>
>>> --
>>> *For doubts on Ubuntu and other public software, visit
>>> http://karnatakaeducation.org.in/KOER/en/index.php/Frequentl
>>> y_Asked_Questions
>>>
>>> **Are you using pirated software? Use Sarvajanika Tantramsha, see
>>> http://karnatakaeducation.org.in/KOER/en/index.php/Public_Software
>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>> ***If a teacher wants to join STF-read http://karnatakaeducation.org.
>>> in/KOER/en/index.php/Become_a_STF_groups_member
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> Visit this group at https://groups.google.com/group/kannadastf.
>>> To view this discussion on the web, visit https://groups.google.com/d/ms
>>> gid/kannadastf/duv3pnry7xrx72f9rnrg7pk7.1477666281708%40emai
>>> l.android.com
>>> <https://groups.google.com/d/msgid/kannadastf/duv3pnry7xrx72f9rnrg7pk7.1477666281708%40email.android.com?utm_medium=email&utm_source=footer>
>>> .
>>> For more options, visit https://groups.google.com/d/optout.
>>>
>>> --
>>> *For doubts on Ubuntu and other public software, visit
>>> http://karnatakaeducation.org.in/KOER/en/index.php/Frequentl
>>> y_Asked_Questions
>>>
>>> **Are you using pirated software? Use Sarvajanika Tantramsha, see
>>> http://karnatakaeducation.org.in/KOER/en/index.php/Public_Software
>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>> ***If a teacher wants to join STF-read http://karnatakaeducation.org.
>>> in/KOER/en/index.php/Become_a_STF_groups_member
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> Visit this group at https://groups.google.com/group/kannadastf.
>>> To view this discussion on the web, visit https://groups.google.com/d/ms
>>> gid/kannadastf/duv3pnry7xrx72f9rnrg7pk7.1477666281708%40emai
>>> l.android.com
>>> <https://groups.google.com/d/msgid/kannadastf/duv3pnry7xrx72f9rnrg7pk7.1477666281708%40email.android.com?utm_medium=email&utm_source=footer>
>>> .
>>> For more options, visit https://groups.google.com/d/optout.
>>>
>> --
>> *For doubts on Ubuntu and other public software, visit
>> http://karnatakaeducation.org.in/KOER/en/index.php/Frequentl
>> y_Asked_Questions
>>
>> **Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Public_Software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ***If a teacher wants to join STF-read http://karnatakaeducation.org.
>> in/KOER/en/index.php/Become_a_STF_groups_member
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> Visit this group at https://groups.google.com/group/kannadastf.
>> To view this discussion on the web, visit https://groups.google.com/d/ms
>> gid/kannadastf/CADxGXxV5OzVLr6i-eQ--0p4kZNV2g04HwEG9GveMms%
>> 3D2Kkc-2g%40mail.gmail.com
>> <https://groups.google.com/d/msgid/kannadastf/CADxGXxV5OzVLr6i-eQ--0p4kZNV2g04HwEG9GveMms%3D2Kkc-2g%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/
> Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read http://karnatakaeducation.org.
> in/KOER/en/index.php/Become_a_STF_groups_member
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> Visit this group at https://groups.google.com/group/kannadastf.
> To view this discussion on the web, visit https://groups.google.com/d/
> msgid/kannadastf/CANaCK5ZFwMMAxCNfo9Oqt7j%2BV%3D7t7mkLE1_L13zkTnNwYjwZgA%
> 40mail.gmail.com
> <https://groups.google.com/d/msgid/kannadastf/CANaCK5ZFwMMAxCNfo9Oqt7j%2BV%3D7t7mkLE1_L13zkTnNwYjwZgA%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/CANFPExf6w-YKzG4U1B%2BjW2-VDqHUOrR0__9%2BDsHJjyHurL9evg%40mail.gmail.com.
For more options, visit https://groups.google.com/d/optout.

Reply via email to