ಒಂದು ಚತುರ್ಭುಜದ ಕರ್ಣಗಳು ಸಮಾನುಪಾತದಲ್ಲಿ ವಿಭಾಗಿಸಿದರೆ,ಅದು ತ್ರಾಪಿಜ್ಯವಾಗಿರುತ್ತದೆ ಎಂದು ಸಾಧಿಸಿ On Apr 1, 2016 7:50 PM, "HR Hanumanth Hanumanth" <hr.hanuma...@gmail.com> wrote:
> Superb sir > It's 100% true > Excellent hats off uuuuuuuuuuuu sir > On Apr 1, 2016 10:29 AM, "veeresh.arakeri" <veeresh.arak...@gmail.com> > wrote: > >> ಶಿಕ್ಷಕನ ರೆಸ್ಯೂಮೆ >> >> >> ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಒಂದು ವಿಚಿತ್ರ ಯೋಚನೆ. ಒಂದು ವೇಳೆ ನಾನೇನಾದರೂ >> ನನ್ನ ಕೆಲಸವನ್ನು ಕಳೆದುಕೊಂಡರೆ ಬೇರೆ ಎಲ್ಲೆಲ್ಲಿ, ಯಾವ ಯಾವ ಕ್ಷೇತ್ರದಲ್ಲಿ ಕೆಲಸ >> ಮಾಡಬಲ್ಲೆ? ಏನೇನು ಮಾಡಬಲ್ಲೆನೋ ಗೊತ್ತಿಲ್ಲ, ಆದರೆ ಎಲ್ಲ ಕ್ಷೇತ್ರದವರೂ ನನ್ನನ್ನು ಕರೆದು >> ಕೆಲಸ ಕೊಡುವ ಅರ್ಹತೆಯನ್ನಂತೂ ಹೊಂದಿರುತ್ತೇನೆ! ಯಾಕೆಂದರೆ ನಾನು ಶಿಕ್ಷಕನಲ್ಲವೇ? ಅದರಲ್ಲೂ >> ಖಾಸಗಿ ಶಾಲೆಯಲ್ಲಿರುವವನಲ್ಲವೇ? >> >> ಇಲ್ಲಿದೆ - ಶಿಕ್ಷಕನ ರೆಸ್ಯೂಮೆಯಲ್ಲಿರಬೇಕಾದ ಎಕ್ಸ್ಪೀರಿಯನ್ಸ್ ಸಮ್ಮರಿ. >> >> [ ಒಂದು ಡಿಸ್ಕ್ಲೇಯ್ಮರ್ರು: ಇಲ್ಲಿ ನಾನು ಎಲ್ಲೆಲ್ಲಿ ಶಿಕ್ಷಕ, ಮೇಷ್ಟ್ರು ಮುಂತಾದ >> ಪದಗಳನ್ನು ಬಳಸಿದ್ದೇನೋ ಅಲ್ಲೆಲ್ಲವೂ ಶಿಕ್ಷಕಿ, ಅಥವಾ ಟೀಚರ್ ಎಂಬ ಪದವನ್ನೂ >> ಬಳಸಿಕೊಳ್ಳಬಹುದು. ಲಿಂಗಭೇದವಿಲ್ಲ.] >> >> ತರಗತಿಯಲ್ಲಿ ಕಳ್ಳರನ್ನು, ಸುಳ್ಳರನ್ನು ಮೇಷ್ಟರಿಗಿಂತ ಸುಲಭವಾಗಿ ಯಾರು ತಾನೆ ಕಂಡು >> ಹಿಡಿಯಲು ಸಾಧ್ಯ! ನಮಗೆ ಯಾವ ಮಂಪರು ಪರೀಕ್ಷೆಯ ಹಂಗೂ ಬೇಕಿಲ್ಲ ಪತ್ತೆ ಮಾಡಲು, ಸಿಕ್ಕಿ >> ಬಿದ್ದ ಕಳ್ಳನನ್ನು ದೈಹಿಕವಾಗಿ ದಂಡಿಸದೆಯೇ ಪರಿವರ್ತನೆಯ ಪ್ರಾಮಾಣಿಕ ಪ್ರಯತ್ನ ಮಾಡಲು. >> ಹಾಗಾಗಿ ಪೋಲೀಸ್ ಇಲಾಖೆಯು ಮೇಷ್ಟರಿಗಾಗಿ ಒಂದು ಸೀಟು ಕಾಯ್ದಿರಿಸಬೇಕು. ಅಲ್ಲದೆ >> ಪರೀಕ್ಷೆಗಳಲ್ಲಿ ಮೇಲ್ವಿಚಾರಣೆ ಮಾಡುವುದೆಂದರೆ ಪೋಲೀಸ್ ಕೆಲಸವಲ್ಲದೆ ಮತ್ತಿನ್ನೇನು. ಬರೀ >> ಕ್ರೈಮ್ ಪೋಲೀಸಿನವರು ಮಾತ್ರವಲ್ಲ, ಟ್ರಾಫಿಕ್ ಇಲಾಖೆಯವರೂ ಸಹ ಮೀಸಲಾತಿಯಿಡಬೇಕು. ಏಕೆಂದರೆ, >> ನಿತ್ಯವೂ ಶಾಲೆಯಲ್ಲಿ ಮೇಷ್ಟರುಗಳು ಟ್ರಾಫಿಕ್ ನಿರ್ವಹಣೆ ಮಾಡುತ್ತಲೇ ಇರುತ್ತಾರೆ. >> ವಿದ್ಯಾರ್ಥಿಗಳು ಸಾಲಾಗಿ ನಡೆದುಕೊಂಡು ಪ್ರಾರ್ಥನೆಯ ಮಂದಿರದಿಂದ ತರಗತಿಗಳಿಗೆ ಹೋಗುವ ಹೊಣೆ, >> ಅಥವಾ ತರಗತಿಗಳಿಂದ ಮೈದಾನಕ್ಕೆ ಹೋಗುವಾಗ ಶಿಸ್ತಿನಿಂದ ಒಬ್ಬರ ಹಿಂದೊಬ್ಬರು ಸಾಲನ್ನು >> ಮುರಿಯದೇ ಹೋಗುವ ಹೊಣೆಯು ಮೇಷ್ಟರದಲ್ಲದೆ ಇನ್ಯಾರದ್ದು! ಯಾರಾದರೂ ಸಾಲಿನ ನಿಯಮವನ್ನು >> ಮುರಿದರೆ ತಕ್ಷಣವೇ ಅವರನ್ನು ಬದಿಗೆ ಸರಿಸಿ, ಐಡಿ ಕಾರ್ಡನ್ನು ಪರಿಶೀಲಿಸಿ, ನೂರೆಂಟು >> ಪ್ರಶ್ನೆ ಕೇಳಿ, ನಂತರ ಸಾಲಿನ ಕೊನೆಯಲ್ಲಿ ನಡೆದು ಹೋಗುವ ಶಿಕ್ಷೆ ವಿಧಿಸುವ ಮೇಷ್ಟ್ರು >> ಟ್ರಾಫಿಕ್ ಪೋಲೀಸ್ ಆಗಲು ಅರ್ಹರಷ್ಟೆ? >> >> ಮೈದಾನಕ್ಕೆ ಸಾಲಾಗಿ ಹೋಗುವ ಮಕ್ಕಳನ್ನು ಕಳುಹಿಸುವ ಟ್ರಾಫಿಕ್ ಪೋಲೀಸ್ ಮೇಷ್ಟರುಗಳು ಕೆಲ >> ಕ್ಷಣಗಳ ನಂತರವೇ ವೈದ್ಯರಾಗಿ ಬದಲಾಗುವುದೂ ಉಂಟು. ನಡೆದು ಹೋಗುವ ಮಕ್ಕಳು ಇದ್ದಕ್ಕಿದ್ದ >> ಹಾಗೆ ಒಬ್ಬರನ್ನೊಬ್ಬರು ತಳ್ಳಿಕೊಂಡು ಬೀಳುವುದು ಸಹಜ. ಬಿದ್ದು ಮೈ ಕೈ ಗಾಯ ಮಾಡಿಕೊಂಡು ರಂಪ >> ರಾದ್ಧಾಂತ ಮಾಡುವುದಂತೂ ಶಾಲೆಯಲ್ಲಿ ಸಾಮಾನ್ಯ ದೃಶ್ಯ. ಈ ಮಕ್ಕಳಿಗೆ ಚಿಕಿತ್ಸೆ ಕೊಡುವ >> ಮೇಷ್ಟ್ರು ಬಿಳಿ ಕೋಟು ಧರಿಸಿರುವುದಿಲ್ಲ ಅಷ್ಟೆ. ಕೇವಲ general physician ಅಷ್ಟೇ ಅಲ್ಲ, >> ಮಕ್ಕಳ ಮನಸ್ಸಿನ ಆಳವನ್ನು ಹೊಕ್ಕು, ಅವರ ವಯಕ್ತಿಕ ಬದುಕಿನ ಸಂಕಷ್ಟಗಳನ್ನು ಗುಣಪಡಿಸಲು >> ಪ್ರಯತ್ನ ಪಡಲು ಬೇಕಾದ ಎಲ್ಲ ರೀತಿಯ counseling ಮಾಡುವ ಮನಃಶಾಸ್ತ್ರಜ್ಞನೂ ಆಗಿರುತ್ತಾನೆ >> (ಆಗಿರಬೇಕು). ತಾನು ಯಾವ ಬಟ್ಟೆ ಧರಿಸಿದರೆ ಮಕ್ಕಳಿಗೆ ಇಷ್ಟವಾಗುತ್ತೆ, ಹೇಗೆ ಮಾತನಾಡಿದರೆ >> ಮಕ್ಕಳು ಸಂತೋಷ ಪಡುತ್ತಾರೆ ಎಂಬ ಸೂಕ್ಷ್ಮಗಳನ್ನೆಲ್ಲ ಅರಿತುಕೊಂಡಿರುವವನು >> ಮನಃಶಾಸ್ತ್ರಜ್ಞನಲ್ಲದೆ ಇನ್ನೇನು! ಮಕ್ಕಳಿಗಿಂತ ಹೆಚ್ಚಾಗಿ ಪೋಷಕರಿಗೆ counseling ಮಾಡುವ >> ಮೇಷ್ಟ್ರು ಯಾವ ಸಿಗ್ಮಂಡ್ ಫ್ರಾಯ್ಡಿಗೂ ಕಡಿಮೆಯಿಲ್ಲ. >> >> ಖಾಸಗಿ ಶಾಲೆಯೆಂದು ಆಗಲೇ ಹೇಳಿದೆನಷ್ಟೆ? ಆಗಿಂದಾಗ್ಗೆ, ವಿಜ್ಞಾನ, ಸಮಾಜ ಶಾಸ್ತ್ರ, >> ಗಣಿತ, ಕಂಪ್ಯೂಟರು, ಕಲೆ, ಇತ್ಯಾದಿ ಪ್ರದರ್ಶನಗಳು ನಡೆಯುತ್ತಲೇ ಇರುತ್ತೆ. ಪ್ರದರ್ಶನಗಳಿಗೆ >> ತಕ್ಕ ಹಾಗೆ ಬೇಕಾದ ಮಾಡೆಲ್ಗಳನ್ನು ತಯಾರಿಸುವುದೂ ಮೇಷ್ಟ್ರುಗಳೇ. ಆರ್ಕಿಟೆಕ್ಟು, >> ಕಂಟ್ರಾಕ್ಟರ್ರು, ಕೆಲಸಗಾರ – ಮೂರೂ ಕೆಲಸವನ್ನು ಒಬ್ಬನೇ ನಿರ್ವಹಿಸುತ್ತಾನೆ. ಜೊತೆಗೆ >> ಬೇಕಾದ ಕಲಾವಿನ್ಯಾಸವನ್ನೂ ಮಾಡುತ್ತಾನೆ. ಪ್ರದರ್ಶನಕ್ಕೆ ಅಗತ್ಯವಿರುವ ಯೋಜನೆ, ನಿರ್ವಹಣೆ, >> ಎಲ್ಲವನ್ನೂ ಮಾಡಬಲ್ಲನು. >> >> ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಂತೂ ನಿರೂಪಣೆ, ಪ್ರಾರ್ಥನೆಯ ಹಾಡು, ನಾಟಕ, ನೃತ್ಯ, ಯೋಗ, >> ಇವೆಲ್ಲವೂ ನಿರ್ವಹಿಸುವುದರಿಂದ ಕಲಾವಿದನ ಎಲ್ಲ ಲಕ್ಷಣಗಳೂ ಮೇಷ್ಟರಲ್ಲಿ ಇರದೇ ಇರಲು >> ಸಾಧ್ಯವೇ ಇಲ್ಲ. ಕಲಾವಿದ ಮಾತ್ರವಲ್ಲ, ಇಂಥ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕಗಳ ಸೆಟ್ಟಿಂಗು, >> ಲೈಟು ಸೆಟ್ಟಿಂಗು, ಫೋಟೋ ತೆಗೆಯುವುದು, ವೇದಿಕೆಯ ವಿನ್ಯಾಸ ಮುಂತಾದವುಗಳಲ್ಲಿಯೂ ಮೇಷ್ಟರದು >> ಎತ್ತಿದ ಕೈ. ಸಿನಿಮಾದವರು ಕೆಲಸ ಕೊಡುವುದೊಂದು ಬಾಕಿ. >> >> ಶಾಲೆಯ ಬಸ್ಸಿನಲ್ಲಿ ಆಗಾಗ್ಗೆ ಪ್ರಯಾಣ ಮಾಡಬೇಕಾಗುತ್ತಿರುತ್ತೆ. ಡ್ರೈವಿಂಗ್ ಕೆಲಸವೊಂದು >> ಇರುವುದಿಲ್ಲ. ಆದರೆ ಕಂಡಕ್ಟರ್ ಕೆಲಸ ಗ್ಯಾರೆಂಟಿ. ಯಾರು ಯಾರು ಎಲ್ಲೆಲ್ಲಿ ಹತ್ತುತ್ತಾರೆ, >> ಎಲ್ಲೆಲ್ಲಿ ಇಳಿದುಕೊಳ್ಳುತ್ತಾರೆಂಬ ಅರಿವು ಮೇಷ್ಟರುಗಳಿಗಿರಬೇಕಲ್ಲವೇ? ಕ್ರೀಡೆಗಳಲ್ಲಂತೂ – >> ಇಂಥದ್ದು ಇಲ್ಲವೆಂದಿಲ್ಲ. ಲಗೋರಿಯಿಂದ ಹಿಡಿದು ಫುಟ್ಬಾಲ್ವರೆಗೆ, ತಾವೇ ರಚಿಸುವ ಆಟಗಳಿಂದ >> ಹಿಡಿದು ಕಂಪ್ಯೂಟರ್ ಗೇಮ್ಗಳವರೆಗೆ ಎಲ್ಲವೂ ಗೊತ್ತು. ಅದಲ್ಲದೆ ಮಾರ್ಚ್ಪಾಸ್ಟು, >> ಡ್ರಿಲ್ಲು, ಬ್ಯಾಂಡು ಇವೆಲ್ಲವೂ ಮಿಲಿಟರಿಯ ತರಬೇತಿಗಳು. ಆಯಾ ಇಲಾಖೆಯವರು ಈ ಪ್ಯಾರಾದ ಕಡೆ >> ಗಮನಹರಿಸತಕ್ಕದ್ದು. >> >> ಪ್ರವಾಸವನ್ನು ಆಯೋಜಿಸುವುದು ಸುಲಭದ ಕೆಲಸವೇನಲ್ಲ. ಎಲ್ಲಿಗೆ ಯಾವ ಕಾಲದಲ್ಲಿ ಹೋಗಬೇಕು, >> ಯಾವ ಕಾಲದಲ್ಲಿ ಹೋಗಬಾರದು ಎಂಬ ಭೌಗೋಳಿಕ ಅರಿವಿರಬೇಕು. ಊಟ ತಿಂಡಿಗಳನ್ನು ಹೇಗೆ >> ಪೂರೈಸಬೇಕೆಂಬ ಅಡುಗೆ ಕಂಟ್ರಾಕ್ಟರನ ತಿಳಿವಳಿಕೆಯಿರಬೇಕು. ಎಲ್ಲೆಲ್ಲಿ ಹೋಗುತ್ತೇವೋ ಆ >> ಜಾಗಗಳ, ಅಲ್ಲಿ ಭೇಟಿಯಾಗುವ ಜನರ ಹಿಸ್ಟರಿ, ಜಿಯಾಲಜಿ, ಸೈಕಾಲಜಿ, ಬಯಾಲಜಿ, ಅಡುಗೋಲಜ್ಜಿ >> ಕತೆಗಳೆಲ್ಲವೂ ಗೊತ್ತಿರಬೇಕು. ಗೊತ್ತಿರದಿದ್ದರೆ ಹೊಸ ಕತೆ ಕಟ್ಟುವ ಸಾಮರ್ಥ್ಯವಿರಬೇಕು. >> ರಾತ್ರಿ ಎಲ್ಲಿ ಉಳಿದುಕೊಂಡರೆ ಕ್ಷೇಮವೆಂಬುದು ಗೊತ್ತಿರಬೇಕು, ಅದಕ್ಕಾಗಿ ವ್ಯವಸ್ಥೆ >> ಮಾಡಬೇಕು. ಇವೆಲ್ಲವನ್ನೂ ಶಿಕ್ಷಕನು ಸಲೀಸಾಗಿ ಮಾಡಿಯಾನು. >> >> ಹಣಕಾಸು ವಿಚಾರದಲ್ಲೂ ಏನು ಕಡಿಮೆಯಿಲ್ಲ. ಸಂಪಾದನೆಯಲ್ಲಿ ಕಡಿಮೆಯಿರಬಹುದು, ಆದರೆ >> ಲಕ್ಷಗಟ್ಟಲೆ ಹಣದ ಎಣಿಕೆ, ಲೆಕ್ಕಾಚಾರ ಮುಂತಾದ ಗುಮಾಸ್ತೆ ಕೆಲಸವು ಶಾಲೆಯ ಆರಂಭದ ವೇಳೆ >> ನಡೆಯುವ ಅಡ್ಮಿಷನ್ ಪ್ರಕ್ರಿಯೆಯಲ್ಲಿ ಮೇಷ್ಟರುಗಳಲ್ಲದೆ ಇನ್ಯಾರು ಮಾಡುತ್ತಾರೆ? ಎಷ್ಟು >> ಹಣಕ್ಕೆ ರಸೀತಿ ಕೊಡಬೇಕು, ಎಷ್ಟಕ್ಕೆ ಕೊಡಬಾರದು; ರಾಮನ ಲೆಕ್ಕ ಯಾವುದು, ಕೃಷ್ಣನದು >> ಯಾವುದು; ಸಮವಸ್ತ್ರ, ಶೂ, ಪುಸ್ತಕ ಮುಂತಾದವುಗಳನ್ನು ಮಾರುವುದು ಹೇಗೆ; ಹಾಗೆ ಮಾರಿದರಲ್ಲಿ >> ಒಂದು ಪೈಸೆಯೂ ತನ್ನದಲ್ಲವೆಂಬಂತೆ ಲೆಕ್ಕವೊಪ್ಪಿಸಿ ತೆಪ್ಪಗಿರುವುದು ಹೇಗೆ – ಎಂಬುದು >> ಗೊತ್ತಿರುತ್ತೆ. >> >> ತಮ್ಮ ತಮ್ಮ ತರಗತಿಗಳನ್ನು ಚೊಕ್ಕವಾಗಿಟ್ಟುಕೊಳ್ಳುವ ಸಲುವಾಗಿ ಆಯಾಗಳಿಂದ ಕೆಲವು ಸಲ ಕೆಲಸ >> ಮಾಡಿಸಿಕೊಂಡರೆ, ಮತ್ತೆ ಕೆಲವು ಸಲ ತಾವೇ ಮಾಡಿಕೊಳ್ಳಬೇಕಾಗುತ್ತೆ. ಸಣ್ಣ ಪುಟ್ಟ >> ಎಲೆಕ್ಟ್ರಿಕಲ್ ರಿಪೇರಿ, ಮರಗೆಲಸದ ರಿಪೇರಿ, ಒಂದೇ ಬದಿಯಲ್ಲಿ ಬೀಗವಿರುವುದರಿಂದ ಆಗಾಗ್ಗೆ >> ಮಕ್ಕಳು ಬಾಗಿಲು ಹಾಕಿಕೊಂಡು ಒಳಗೆ ಸಿಕ್ಕಿಕೊಂಡಾಗ ಬೀಗ ಮುರಿಯುವ ಅಥವಾ ಬೀಗ ರಿಪೇರಿ >> ಮಾಡುವ, ಬೆಂಕಿ ಸಂಭವಿಸಿದರೆ ಅಗ್ನಿಶಾಮಕವನ್ನು ಬಳಸಿ ಬೆಂಕಿಯನ್ನು ನಂದಿಸುವ – ಇಂಥ ಎಲ್ಲ >> ಕೆಲಸವೂ ತಾನಾಗಿಯೇ ಬರುತ್ತೆ ಶಿಕ್ಷಕನಾದವನಿಗೆ. >> >> ಶಾಲೆಯ ಪತ್ರಿಕೆಯನ್ನು ಹೇಗೆ ಮರೆಯುವುದು? ಪತ್ರಿಕೆಯೆಂದರೆ ಅದರಲ್ಲಿ ಲೇಖನಗಳನ್ನು >> ಬರೆಯಬೇಕು, ಬರೆಸಬೇಕು, ಮಕ್ಕಳು ಬರೆದು ತಂದುಕೊಟ್ಟಿದ್ದನ್ನು ಸಂಪಾದಿಸಬೇಕು, >> ಪತ್ರಿಕೆಗೊಂದು ಮುಖಪುಟ ವಿನ್ಯಾಸ ಮಾಡಬೇಕು, ಒಳಗೆ ಪುಟಗಳ ವಿನ್ಯಾಸವನ್ನೂ ಮಾಡಬೇಕು. >> ಪತ್ರಿಕೋದ್ಯಮದಲ್ಲಿ ಈ ಪ್ರತಿಯೊಂದಕ್ಕೂ ಬೇರೆ ಬೇರೆಯವರಿರುತ್ತಾರೆಂದು ನಾನು ಕೇಳಿ ಬಲ್ಲೆ. >> ಇಲ್ಲಿ ಮೇಷ್ಟ್ರೇ ಎಲ್ಲ! >> >> ರಾವಣನ ದಶಶಿರವದೇಂ? ನರನು ಶತಶಿರನು! >> ಸಾವಿರಾಸ್ಯಗಳನೊಂದರೊಳಣಗಿಸಿಹನು! >> ಹಾವಾಗಿ, ಹುಲಿಯಾಗಿ, ಕಪ್ಪೆ-ಹುಲ್ಲೆಯುಮಾಗಿ >> ಭೂವ್ಯೋಮಕತಿಶಯನು! - ಮಂಕುತಿಮ್ಮ. >> >> ಇದನ್ನು ಡಿ.ವಿ.ಜಿ.ಯವರು ಶಿಕ್ಷಕರಿಗೆಂದೇ ಬರೆದರೇನೋ ಎನ್ನಿಸುತ್ತೆ. ನರ ಎಂಬ ಪದವನ್ನು >> ಬಳಸಿಬಿಟ್ಟಿದ್ದಾರೆ. ಛಂದಸ್ಸಿಗೆ ಹೊಂದಿಕೊಳ್ಳುವಂತಿದ್ದರೆ ಶಿಕ್ಷಕ ಎಂದೇ >> ಬರೆಯುತ್ತಿದ್ದರೇನೋ. >> >> ನನ್ನ ರೆಸ್ಯೂಮೆಗೆ ನನ್ನೀ ಶತಶಿರದ ಅರ್ಹತೆಯನ್ನು ಸೇರಿಸಿಕೊಳ್ಳಬೇಕೆಂಬ ಬಯಕೆಯು ಹೆಚ್ಚು >> ಕಾಲ ಉಳಿಯುವಂಥದ್ದಲ್ಲ. ಮೇಲೆ ಹೇಳಿದ ಯಾವುದಾದರೂ ಇಲಾಖೆಯವರು ನನಗೆ ಕರೆದು ಕೆಲಸ >> ಕೊಟ್ಟರೂ, ಅಲ್ಲಿ ನನಗೆ ತರಗತಿಯಲ್ಲಿ ಪಾಠ ಮಾಡುವ ಭಾಗ್ಯವಿರುವುದೇ? ಮಕ್ಕಳೊಡನೆ ಆಟವಾಡುವ >> ಅವಕಾಶವಿರುವುದೇ? ಊಟದ ವಿರಾಮದ ವೇಳೆ ಬಿಗಿಯಾಗಿರುವ ಡಬ್ಬಿಯ ಮುಚ್ಚಳವನ್ನು ತೆಗೆದುಕೊಡುವ, >> ಹಾಗೆ ತೆಗೆದುಕೊಟ್ಟು “ನಮ್ಮ ಮೇಷ್ಟ್ರು ಜಗತ್ತಿನ ಅತ್ಯಂತ ಶಕ್ತಿಶಾಲಿ” ಎಂಬ ಬಿರುದನ್ನು >> ಪಡೆದುಕೊಳ್ಳಲಾಗುವುದೇ? ದಿನಕ್ಕೆ ಮೂರು ನಾಲ್ಕು ಜನರ ಹುಟ್ಟುಹಬ್ಬವನ್ನು ಆಚರಿಸಲು >> ಸಾಧ್ಯವೇ? ಅಥವಾ ನನ್ನ ಹುಟ್ಟುಹಬ್ಬಕ್ಕೆ ಸಹಸ್ರಾರು ಪ್ರಾಮಾಣಿಕ, ಮನಃಪೂರ್ವಕ, ತಾವೇ ತಮ್ಮ >> ಕೈಯ್ಯಾರೆ ಕಾಗದಗಳಿಂದ ಮಾಡಿದ ಗ್ರೀಟಿಂಗ್ ಕಾರ್ಡುಗಳನ್ನು ಸಂಪಾದಿಸಲು ಆದೀತೆ? ಯಾರು ಏನೇ >> ಹೇಳಲಿ, ನಾನು (ಶಿಕ್ಷಕ) ಹೇಳುವುದೇ ಪರಮ ಸತ್ಯ ಎಂದು ಸಂಪೂರ್ಣ ನಂಬಿಕೆಯನ್ನು >> ಪಡೆದುಕೊಳ್ಳಲು ಬೇರೆಲ್ಲಿ ಸಾಧ್ಯ? >> >> ಈ ಶತಶಿರದ ಅರ್ಹತೆಯೂ ಅನುಭವವೂ ಹೀಗೆ ಇನ್ನೂ ಬೆಳೆಯುತ್ತಿರಲಿ – ಬೇರೆ ಕಡೆ ಹೋಗಲೆಂದಲ್ಲ. >> ಇನ್ನೂ ಉತ್ತಮ ಮೇಷ್ಟರಾಗಲು ಎಂದು ನನಗೆ ನನ್ನದೇ ಹಾರೈಕೆ. ಸ್ವಧರ್ಮದಲ್ಲಿ ನಿಧನವೂ >> ಶ್ರೇಯಸ್ಸಂತೆ.. >> >> -- >> 1. If a teacher wants to join STF, visit >> http://karnatakaeducation.org.in/KOER/en/index.php/Become_a_STF_groups_member >> 2. For STF training, visit KOER - >> http://karnatakaeducation.org.in/KOER/en/index.php >> 4. For Ubuntu 14.04 installation, visit >> http://karnatakaeducation.org.in/KOER/en/index.php/Kalpavriksha >> 4. For doubts on Ubuntu, public software, visit >> http://karnatakaeducation.org.in/KOER/en/index.php/Frequently_Asked_Questions >> 5. Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Why_public_software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to mathssciencestf+unsubscr...@googlegroups.com. >> To post to this group, send an email to mathssciencestf@googlegroups.com. >> Visit this group at https://groups.google.com/group/mathssciencestf. >> For more options, visit https://groups.google.com/d/optout. >> > -- > 1. If a teacher wants to join STF, visit > http://karnatakaeducation.org.in/KOER/en/index.php/Become_a_STF_groups_member > 2. For STF training, visit KOER - > http://karnatakaeducation.org.in/KOER/en/index.php > 4. For Ubuntu 14.04 installation, visit > http://karnatakaeducation.org.in/KOER/en/index.php/Kalpavriksha > 4. For doubts on Ubuntu, public software, visit > http://karnatakaeducation.org.in/KOER/en/index.php/Frequently_Asked_Questions > 5. Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Why_public_software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com. > To post to this group, send email to mathssciencestf@googlegroups.com. > Visit this group at https://groups.google.com/group/mathssciencestf. > For more options, visit https://groups.google.com/d/optout. > -- 1. If a teacher wants to join STF, visit http://karnatakaeducation.org.in/KOER/en/index.php/Become_a_STF_groups_member 2. For STF training, visit KOER - http://karnatakaeducation.org.in/KOER/en/index.php 4. For Ubuntu 14.04 installation, visit http://karnatakaeducation.org.in/KOER/en/index.php/Kalpavriksha 4. For doubts on Ubuntu, public software, visit http://karnatakaeducation.org.in/KOER/en/index.php/Frequently_Asked_Questions 5. Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Why_public_software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. Visit this group at https://groups.google.com/group/mathssciencestf. For more options, visit https://groups.google.com/d/optout.