Very Nice work Sir On Apr 29, 2016 7:57 AM, "vijay prasad" <gejj...@gmail.com> wrote:
> ಜನಸೇವೆಗೆ ರಾಜಕೀಯವೇ ಬೇಕಾಗಿಲ್ಲ, ಹೀಗೂ ಮಾಡಬಹುದು! > > ಬಿಹಾರ, ಪಾಟ್ನಾ! ಹೀಗೆಂದ ತಕ್ಷಣ ನಮ್ಮ ಕಣ್ಮುಂದೆ ಲಾಲೂ ಪ್ರಸಾದ್ ಯಾದವ್, ರಾಬ್ಡಿದೇವಿಯ > ಚಿತ್ರಗಳು ಬಂದು ನಿಲ್ಲುತ್ತವೆ. ಅದರ ಹಿಂದೆಯೇ, ಬಿಹಾರದ ರಾಜಕೀಯದಲ್ಲಿ ದೊಡ್ಡ ಹೆಸರು > ಮಾಡಿರುವ ಕಳ್ಳರು, ಸುಳ್ಳರು, ಕೊಲೆಗಡುಕರು, ಕ್ರಿಮಿನಲ್‌ಗಳ ಮುಖಗಳೂ ಮೆರವಣಿಗೆ > ಹೊರಡುತ್ತವೆ. ಇದೇ ಕಾರಣಕ್ಕೆ ಬಿಹಾರವನ್ನು `ಗೂಂಡಾರಾಜ್ಯ’ ಎಂದು ಕರೆಯುವ ಪರಿಪಾಠವೂ ಇದೆ. > ಬಿಹಾರ ಅಂದ್ರೆ ಎಲ್ಲ ಅಕ್ರಮ, ಅವ್ಯವಹಾರಗಳಿಗೆ ಪರ್ಯಾಯ ಪದವೆನ್ನುವಂತಾಗಿದೆ. ಆದರೆ, ಈಗ > ಅದೇ ಪಾಟ್ನಾದಿಂದ ದೇವರಂಥ ವ್ಯಕ್ತಿಯೊಬ್ಬ ಎದ್ದು ಬಂದಿದ್ದಾನೆ. ಅವನ ಹೆಸರು ಆನಂದಕುಮಾರ್. > > ಇವತ್ತು ಪಾಟ್ನಾದ ಬಸ್‌ನಿಲ್ದಾಣ ಅಥವಾ ರೈಲು ನಿಲ್ದಾಣದಲ್ಲಿ ನಿಂತು- ನಾಲ್ಕು ಮಂದಿಯ > ಮುಂದೆ ಆನಂದಕುಮಾರ್ ಅಂದು ನೋಡಿ; ಜನ ಕಣ್ಣರಳಿಸುತ್ತಾರೆ. ನಿಂತಲ್ಲೇ ಕೈಮುಗಿಯುತ್ತಾರೆ. > `ಓಹ್, ನಿಮ್ಗೆ ಮೇಷ್ಟ್ರು ಬೇಕಿತ್ತಾ’ ಎನ್ನುತ್ತಾರೆ. ಮರುಕ್ಷಣದಲ್ಲೇ ಈ ಆನಂದಕುಮಾರ್ ಅವರ > ವಿಳಾಸವನ್ನು ಹೇಳುತ್ತಾರೆ. ಆನಂತರವೂ ಒಂದೆರಡು ನಿಮಿಷ ಅಲ್ಲಿಯೇ ನಿಂತರೆ- ಆನಂದಕುಮಾರ್ > ಅವರನ್ನು ಹೊಗಳುತ್ತ ಹೊಗಳುತ್ತಾ ಮೈಮರೆಯುತ್ತಾರೆ. ಸ್ವಾರಸ್ಯವೇನೆಂದರೆ- ಹೀಗೆ ಎಲ್ಲರಿಂದಲೂ > ಹೊಗಳಿಸಿಕೊಳ್ಳುವ ಆನಂದಕುಮಾರ್ ರಾಜಕಾರಣಿಯಲ್ಲ. ಹಣವಂತನಲ್ಲ. ಯೋಗ ಗುರುವಲ್ಲ. > ಚಿತ್ರನಟನಲ್ಲ. ರಾಬ್ಡಿದೇವಿಯ ಮಾವನಲ್ಲ. ಲಾಲೂ ಪ್ರಸಾದನಿಗೂ ಅವನಿಗೂ ಸಂಬಂಧವಿಲ್ಲ. > ನಿತೀಶ್‌ಕುಮಾರನ ನೆಂಟನೂ ಅಲ್ಲ. ಅಸಲಿಗೆ, ರಾಜಕೀಯದ ನೆರಳನ್ನು ಆತ ತನ್ನೆಡೆಗೆ > ಬಿಟ್ಟುಕೊಂಡವನಲ್ಲ. ಆತ ಪೊಲೀಸ್ ಅಧಿಕಾರಿಯಲ್ಲ, ಕರಾಟೆ ಮಾಸ್ಟರ್ ಕೂಡ ಅಲ್ಲ. ಜ್ಯೋತಿಷಿಯೂ > ಅಲ್ಲ. ಬದಲಿಗೆ, ಒಬ್ಬ ಟ್ಯೂಶನ್ ಮಾಸ್ಟರ್! > > ನಂಬಿ ಮಹಾರಾಯರೆ, ಈ ಟ್ಯೂಶನ್ ಮಾಸ್ಟರ್, ಇವತ್ತು ಬಿಹಾರದಲ್ಲಿ ದೊಡ್ಡದೊಂದು ಕ್ರಾಂತಿ > ಉಂಟುಮಾಡಿದ್ದಾನೆ. ವಿದ್ಯಾರ್ಥಿಗಳ ಪಾಲಿಗೆ ರೋಲ್‌ಮಾಡೆಲ್ ಆಗಿದ್ದಾನೆ. ತೀರಾ ಕಡಿಮೆ ಹಣ > ಪಡೆದು ಎಲ್ಲರಿಗೂ ಟ್ಯೂಶನ್ ಮಾಡುತ್ತ ಶೈಕ್ಷಣಿಕ ಕ್ರಾಂತಿಯ ಹರಿಕಾರ ಎನಿಸಿಕೊಂಡಿದ್ದಾನೆ. > ಅಷ್ಟೇ ಅಲ್ಲ, ಸೂಪರ್-30 ಎಂಬ ಖಾಸಗಿ ಟ್ಯೂಶನ್ ಕೇಂದ್ರವನ್ನೂ ಆರಂಭಿಸಿದ್ದಾನೆ. ಆ ಕೇಂದ್ರದ > ಮುಂದೆ ಆನೆಗಾತ್ರದ ಅಕ್ಷರದಲ್ಲಿ- ‘ಇಲ್ಲಿ ಬಡವರ ಮಕ್ಕಳಿಗೆ ಉಚಿತವಾಗಿ ಪಾಠ ಹೇಳಲಾಗುವುದು’ > ಎಂದು ಬೋರ್ಡ್ ಹಾಕಿದ್ದಾನೆ. ಅಷ್ಟೇ ಅಲ್ಲ, ನುಡಿದಂತೆಯೇ ನಡೆದುಕೊಂಡಿದ್ದಾನೆ. ಈತನ ಬಳಿ > ಟ್ಯೂಶನ್ ಹೇಳಿಸಿಕೊಂಡ ಹುಡುಗರು- ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯವರು ನಡೆಸುವ > ಐಐಟಿ-ಜೆಇಇ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಪಡೆದಿದ್ದಾರೆ. ಕೆಲವರು ಐಎಎಸ್ ನಲ್ಲೂ > ಪಾಸಾಗಿದ್ದಾರೆ. ಒಂದಷ್ಟು ಮಂದಿ ಬ್ಯಾಂಕ್ ಪರೀಕ್ಷೆ ಬರೆದು ಮ್ಯಾನೇಜರ್‌ಗಳಾಗಿದ್ದಾರೆ. > ಹೀಗೆ, ದೊಡ್ಡ ದೊಡ್ಡ ಸ್ಥಾನ ತಲುಪಿಕೊಂಡವರೆಲ್ಲ ಕ್ಷಣಕ್ಷಣಕ್ಕೂ ತಮ್ಮ ಗುರು ಆನಂದಕುಮಾರ್ > ಅವರನ್ನು ಸ್ಮರಿಸಿಕೊಂಡಿದ್ದಾರೆ. ಗುರುಗಳಿಗೆ ಜೈ ಹೋ ಎಂದು ಸಂತೋಷದಿಂದ ಹೇಳಿದ್ದಾರೆ. > > ಅಲ್ಲ, ಮೊನ್ನೆಮೊನ್ನೆಯವರೆಗೂ ರಕ್ತಸಿಕ್ತ ರಾಜಕಾರಣವನ್ನೇ ಉಸಿರಾಡುತ್ತಿದ್ದ ನಾಡು ಬಿಹಾರ. > ಅಂಥ ಊರಿನಲ್ಲಿ ಆನಂದಕುಮಾರ್ ಥರದ ಜನ ಎದ್ದುನಿಲ್ಲಲು ಕಾರಣವಾದದ್ದು ಏನು? ಇಷ್ಟಕ್ಕೂ ಈ > ಹುಡುಗ ಯಾರು? ಅವನ ಹಿನ್ನೆಲೆ ಏನು? ಅವನು ಟ್ಯೂಶನ್ ತರಗತಿ ಆರಂಭಿಸಲು ಕಾರಣವಾದರೂ ಏನು? > ತೀರಾ ಬಡವರ ಮಕ್ಕಳಿಗೇ ಪಾಠ ಹೇಳುತ್ತೇನೆ ಎಂಬ ಆದರ್ಶದ ಹಂಬಲವಾದರೂ ಆ ಹುಡುಗನ > ತಲೆಗೇರಿದ್ದೇಕೆ? > > ಸ್ವಾರಸ್ಯಕರ ಕಥೆ : ಇಂಥ ಎಲ್ಲ ಕುತೂಹಲಗಳಿಗೂ ಇಲ್ಲಿ ಸ್ವಾರಸ್ಯಕರ ಉತ್ತರವಿದೆ. ಈ > ಆನಂದಕುಮಾರ್, ಬಿಹಾರದ ಒಂದು ಸಾಮಾನ್ಯ ಕುಟುಂಬದಿಂದ ಬಂದವನು. ಅವನ ತಂದೆ ಅಂಚೆ ಕಚೇರಿಯಲ್ಲಿ > ಸೆಕೆಂಡ್ ಡಿವಿಜನ್ ಕ್ಲರ್ಕ್ ಆಗಿದ್ದ. ಬರುತ್ತಿದ್ದ ಸಂಬಳ ಹೊಟ್ಟೆ- ಬಟ್ಟೆಗೇ > ಆಗಿಹೋಗುತ್ತಿತ್ತು. ಹಾಗಾಗಿ ಮಕ್ಕಳನ್ನು ಟ್ಯೂಶನ್‌ಗೆ ಕಳುಹಿಸುವ ಯೋಚನೆಯನ್ನೇ > ಆನಂದ್‌ಕುಮಾರನ ತಂದೆ ಮಾಡಲಿಲ್ಲ. ಈ ಹುಡುಗ ಆನಂದ್, ಹಿಂದಿ ಮಾಧ್ಯಮದಲ್ಲಿ ಪ್ರಾಥಮಿಕ > ಶಿಕ್ಷಣ ಮುಗಿಸಿದ. ಮನೆಯಲ್ಲಿ ಕಡುಬಡತನವಿತ್ತು ನಿಜ. ಆದರೆ, ಅದು ಈ ಹುಡುಗನ ಜ್ಞಾನದಾಹಕ್ಕೆ > ಅಡ್ಡಿಯಾಗಲಿಲ್ಲ. ಚಿಕ್ಕಂದಿನಲ್ಲಿಯೇ ಗಣಿತದತ್ತ ಆಕರ್ಷಿತನಾದ ಆನಂದಕುಮಾರ್, ಹೈಸ್ಕೂಲಿಗೆ > ಬರುವ ವೇಳೆಗೆ ಕಾಲೇಜು ತರಗತಿಗಳ ಸಮಸ್ಯೆಗಳನ್ನೆಲ್ಲ ಬಿಡಿಸುವಷ್ಟು ಪ್ರಾವೀಣ್ಯ ಪಡೆದ. > ಅಷ್ಟಕ್ಕೆ ಸುಮ್ಮನಾಗದೆ, ಗಣಿತ ಲೋಕದ ಪ್ರೊಫೆಸರ್‌ಗಳಿಗೇ ಸವಾಲು ಹಾಕುವಂತಿದ್ದ ಅವೆಷ್ಟೋ > ಸಮಸ್ಯೆಗಳಿಗೆ ಉತ್ತರ ಕಂಡುಹಿಡಿದ. ಅವುಗಳನ್ನು ಇಂಗ್ಲೆಂಡಿನ ಮ್ಯಾಥಮೆಟಿಕಲ್ ಸ್ಪೆಕ್ಟ್ರಂ > ಮತ್ತು ದಿ ಮ್ಯಾಥಮೆಟಿಕಲ್ ಗೆಜೆಟ್ ಪತ್ರಿಕೆಗಳಿಗೆ ಕಳಿಸಿಕೊಟ್ಟ. > > ದಶಕಗಳ ಕಾಲದಿಂದಲೂ ಗಣಿತದ ಪ್ರೊಫೆಸರ್‌ಗಳಿಗೆ ಅರ್ಥವೇ ಆಗದಿದ್ದ ಸಮಸ್ಯೆಗಳನ್ನು, ಇನ್ನೂ > ಮೀಸೆ ಚಿಗುರದ ಭಾರತದ ಹೈದನೊಬ್ಬ ಪರಿಹಾರ ಹುಡುಕಿದ್ದು ಕಂಡು ಅಮೆರಿಕ, ಇಂಗ್ಲೆಂಡಿನ > ಪಂಡಿತರೆಲ್ಲ ಖುಷಿಯಾದರು. ಕೇಂಬ್ರಿಡ್ಜ್ ವಿಶ್ವವಿದ್ಯಾಲಯ ಈ ಹುಡುಗನಿಗೆ ಪ್ರವೇಶ ನೀಡಲೂ > ಮುಂದಾಯಿತು. ಇನ್ನು ಕೆಲವೇ ವರ್ಷಗಳಲ್ಲಿ ನಾನೂ ಒಬ್ಬ ಗಣಿತದ ಪ್ರೊಫೆಸರ್ ಆಗುತ್ತೇನೆ ಎಂಬ > ಖುಷಿಯಲ್ಲಿ ಈ ಆನಂದಕುಮಾರ್ ಪಾಸ್‌ಪೋರ್ಟ್, ವೀಸಾ ಮಾಡಿಸಿಕೊಳ್ಳಲು ಓಡಾಡತೊಡಗಿದ. > ಅಷ್ಟರಲ್ಲಿ ಆಗಬಾರದ ಅನಾಹುತವೊಂದು ಆಗಿಹೋಯಿತು. ಅದೊಂದು ದಿನ, ಕಚೇರಿಯಿಂದ ಮನೆಗೆ ಬಂದ > ಆನಂದ್‌ಕುಮಾರನ ತಂದೆ, ಯಾಕೋ ಎದೆನೋವು ಎಂದು ಕುಸಿದು ಕೂತವರು ಮತ್ತೆ ಮೇಲೇಳಲಿಲ್ಲ! > > ಅದುವರೆಗೂ ಕುಟುಂಬ ನಿರ್ವಹಣೆಗೆ ಆಧಾರವಾಗಿದ್ದುದೇ ತಂದೆಯ ಸಂಬಳ. ಅದೇ ಇಲ್ಲವೆಂದಮೇಲೆ, > ಬದುಕಲು ಏನಾದರೂ ಮಾಡಲೇಬೇಕಿತ್ತು. ಈ ಸಂದರ್ಭದಲ್ಲಿ ಆನಂದಕುಮಾರ್, ಅನಿವಾರ್ಯವಾಗಿ ತನ್ನ > ಉನ್ನತ ವ್ಯಾಸಂಗದ ಕನಸನ್ನು ಕೈಬಿಟ್ಟ. ಆನಂದ್‌ನ ತಾಯಿ, ಜೀವನ ನಿರ್ವಹಣೆಗೆಂದು ಹಪ್ಪಳ > ತಯಾರಿಕೆಗೆ ನಿಂತಳು. ಬೆಳಗಿನಿಂದಲೂ ಮನೆಯಲ್ಲಿದ್ದುಕೊಂಡೇ ಗಣಿತದ ಸಮಸ್ಯೆಗಳನ್ನು > ಬಿಡಿಸುತ್ತ, ಹೊಸ ಹೊಸ ಥಿಯರಿಗಳನ್ನು ಸೃಷ್ಟಿಸುತ್ತ ಕಾಲ ಕಳೆಯುತ್ತಿದ್ದ. > ಸಂಜೆಯಾಗುತ್ತಿದ್ದಂತೆಯೇ ಮನೆಮನೆಯ ಬಾಗಿಲು ತಟ್ಟಿ ಹಪ್ಪಳ ಮಾರುತ್ತಿದ್ದ. ಹೀಗಿದ್ದಾಗಲೇ, > ಹೀಗೆ ಮನೆಮನೆಗೂ ಹೋಗಿ ಹಪ್ಪಳ ಮಾರುವ ಬದಲು ಖಾಸಗಿಯಾಗಿ ಯಾಕೆ ಟ್ಯೂಶನ್ ಹೇಳಬಾರದು? > ಹೇಗಿದ್ರೂ ನಿಂಗೆ ಗಣಿತ ಚೆನ್ನಾಗಿ ಗೊತ್ತಿದೆಯಲ್ಲ? ಅದೇ ವಿಷಯವನ್ನು ಯಾಕೆ ಹೇಳಿಕೊಡಬಾರದು > ಎಂದು ಹಿತೈಷಿಯೊಬ್ಬರು ಸಲಹೆ ಮಾಡಿದರು. ಆಗ ಈ ಆನಂದಕುಮಾರ್‌ನ ವಯಸ್ಸೆಷ್ಟು ಗೊತ್ತೆ? ಬರೀ > 22 ವರ್ಷ. ಅಂದಹಾಗೆ, ಇದು 1995ರ ಮಾತು! > > ಒಂದೆರಡು ದಿನ ಬಿಟ್ಟು ಯೋಚಿಸಿದಾಗ- ಹೌದಲ್ವಾ? ನಾನು ಹಾಗೇಕೆ ಮಾಡಬಾರದು ಎಂದು > ಆನಂದ್‌ಕುಮಾರನಿಗೂ ಅನಿಸಿತು. ತಕ್ಷಣವೇ 500 ರೂ. ಬಾಡಿಗೆಗೆ ಒಂದು ಪುಟ್ಟ ರೂಮ್ ಪಡೆದು > ಅಲ್ಲಿ ಟ್ಯೂಶನ್ ಆರಂಭಿಸಿಯೇ ಬಿಟ್ಟ. ಗಣಿತದ ಮೇಲಿನ ಪ್ರೀತಿಯಿಂದ ತನ್ನ ಟ್ಯೂಶನ್ > ಕೇಂದ್ರಕ್ಕೆ ಪ್ರಸಿದ್ಧ ಗಣಿತಜ್ಞ ಶ್ರೀನಿವಾಸ ರಾಮಾನುಜನ್ ಹೆಸರಿನಲ್ಲಿ- `ರಾಮಾನುಜನ್ > ಸ್ಕೂಲ್ ಆಫ್ ಮ್ಯಾಥಮೆಟಿಕ್ಸ್’ ಎಂದು ಹೆಸರಿಟ್ಟ. ಮೊದಲ ವರ್ಷ ಟ್ಯೂಶನ್‌ಗೆಂದು ಬಂದವರು > ಇಬ್ಬರೇ ಇಬ್ಬರು. ಆ ವರ್ಷ ಅವರಿಬ್ಬರೂ ಗಣಿತದಲ್ಲಿ ನೂರಕ್ಕೆ ನೂರು ಅಂಕ ಪಡೆದರು. ಮರುವರ್ಷ, > ಟ್ಯೂಶನ್‌ಗೆ ಬಂದವರ ಸಂಖ್ಯೆ 25 ದಾಟಿತು. ಹಾಗೆ ಪಾಠ ಹೇಳಿಸಿಕೊಂಡವರೆಲ್ಲ ನೂರಕ್ಕೆ > ತೊಂಬತ್ತಕ್ಕೂ ಹೆಚ್ಚು ಅಂಕ ಪಡೆದರು. ಪರಿಣಾಮ, ಮೂರು ವರ್ಷ ತುಂಬುವುದರೊಳಗೆ, ಆನಂದಕುಮಾರ್ > ಬಳಿ ಟ್ಯೂಶನ್‌ಗೆ ಬಂದವರ ಸಂಖ್ಯೆ 500ನ್ನು ದಾಟಿತು. ಒಂದು ವರ್ಷ ಟ್ಯೂಶನ್ ಹೇಳಿಸಿಕೊಳ್ಳಲು > 1500 ರೂ. ಶುಲ್ಕ ಎಂದು ಈ ವೇಳೆಗೆ ಆನಂದಕುಮಾರ್ ಪ್ರಕಟಿಸಿದ್ದ. ಅಷ್ಟು ದುಡ್ಡು ಕೊಡಲು > ವಿದ್ಯಾರ್ಥಿಗಳೂ ಸಿದ್ಧರಾಗಿದ್ದರು. ಹೀಗಿದ್ದಾಗಲೇ, ಅದೊಂದು ದಿನ ಆನಂದ್ ಬಳಿಗೆ ಬಂದ ಒಬ್ಬ > ಹುಡುಗ- `ಸಾರ್, ನಾನು ತುಂಬಾ ಬಡವರ ಮನೆಯ ಹುಡುಗ. ನನಗೆ ಓದುವ ಆಸೆಯಿದೆ. ದೊಡ್ಡ ಅಧಿಕಾರಿ > ಆಗಬೇಕೆಂಬ ಹಂಬಲವಿದೆ. ಗಣಿತದಲ್ಲಿ ತುಂಬಾ ಆಸಕ್ತಿಯಿದೆ. ಆದರೆ, ಟ್ಯೂಶನ್‌ಗೆ ಕೊಡುವಷ್ಟು > ಹಣವಿಲ್ಲ’ ಎಂದನಂತೆ. > > `ಆ ಹುಡುಗನ ಮಾತು ಕೇಳಿ ತುಂಬಾ ಬೇಸರವಾಯಿತು. ನನ್ನ ತಂದೆ ಆಕಸ್ಮಿಕವಾಗಿ ಸತ್ತುಹೋದಾಗ > ನಾನು ಎದುರಿಸಿದ ಪರಿಸ್ಥಿತಿ ನೆನಪಾಯಿತು. ತುಂಬಾ ಬಡಕುಟುಂಬದಿಂದ ಬಂದ ಮೂವತ್ತು ಮಂದಿಗೆ > ಉಚಿತವಾಗಿ ಊಟ, ವಸತಿ, ಟ್ಯೂಶನ್ ಹೇಳುವ ನಿರ್ಧಾರಕ್ಕೆ ನಾನು ಬಂದದ್ದೇ ಆಗ. ಈ ವಿಷಯವನ್ನು > ಅಮ್ಮನಿಗೆ ಹೇಳಿದಾಗ- `ನಾನು ಆ ಮಕ್ಕಳಿಗೆ ಅಡುಗೆ ಮಾಡಿಕೊಡ್ತೇನೆ ಕಂದಾ’ ಎಂದಳು ಅಮ್ಮ. ಆ > ವಿದ್ಯಾರ್ಥಿಗಳ ವಸತಿ ವ್ಯವಸ್ಥೆಯನ್ನು ನನಗೆ ಬಿಡು, ಆ ಜವಾಬ್ದಾರಿಯನ್ನು ನಾನು ತಗೋತೇನೆ > ಎಂದು ವೃತ್ತಿಯಿಂದ ಸಂಗೀತಗಾರನಾಗಿರುವ ನಮ್ಮ ಅಣ್ಣ ಪ್ರಣವ್‌ಕುಮಾರ್ ಹೇಳಿದ. ಈ ಇಬ್ಬರ > ಬೆಂಬಲದಿಂದ ನನ್ನ ಕೆಲಸ ಹಗುರಾಯಿತು. ಹೀಗೆ ಶುರುವಾದ ತರಗತಿಗೆ ಸೂಪರ್-30 ಎಂಬ ಹೆಸರು > ಕೊಟ್ಟೆ ಎನ್ನುತ್ತಾನೆ ಆನಂದಕುಮಾರ್. > > ಬೆದರಿಕೆ ಮೆಟ್ಟಿನಿಂತ ಧೀರ : ನೀವು ಪಾಠ ಹೇಳುವುದರಲ್ಲಿ ಅಂಥದೇನಿದೆ ವಿಶೇಷ? ನಿಮ್ಮಲ್ಲಿ > ಕಲಿತವರೆಲ್ಲ ಗಣಿತದಲ್ಲಿ ಪಂಡಿತರೇ ಆಗಿಬಿಡ್ತಾರಲ್ಲ? ಈ ಪವಾಡ ಹೇಗೆ ನಡೆಯುತ್ತೆ ಎಂದು > ಪ್ರಶ್ನಿಸಿದರೆ ಆನಂದಕುಮಾರ್ ಹೇಳುವುದಿಷ್ಟು- `ಗಣಿತ ಎಂದರೆ, ಹೆಚ್ಚುಕಮ್ಮಿ ಎಲ್ಲ > ವಿದ್ಯಾರ್ಥಿಗಳಿಗೂ ಭಯ. ಆ ಭಯವನ್ನು ನಾವು ಮೊದಲ ದಿನವೇ ಹೋಗಲಾಡಿಸುತ್ತೇವೆ. ಕೂಡುವುದು, > ಕಳೆಯುವುದು, ಗುಣಿಸುವುದು ಮತ್ತು ಭಾಗಿಸುವುದು ಇದಿಷ್ಟೇ ಗಣಿತ ಎಂದು ಒತ್ತಿ ಹೇಳುತ್ತೇವೆ. > ಮುಖ್ಯವಾಗಿ, ಮೊದಲು ತುಂಬ ಸುಲಭವಾಗಿ ಅರ್ಥವಾಗುವ ಐವತ್ತರವತ್ತು ಸಮಸ್ಯೆಗಳನ್ನು ಬಿಡಿಸಿ, > ನಂತರವಷ್ಟೇ ಕಷ್ಟದ ಸಮಸ್ಯೆಗಳಿಗೆ ಕೈಹಾಕುತ್ತೇವೆ. ಸಾಧ್ಯವಾದಷ್ಟೂ ವಿದ್ಯಾರ್ಥಿಗಳಿಗೆ > ಹೋಂವರ್ಕ್ ನೀಡುವುದಿಲ್ಲ. ಎಲ್ಲ ಸಮಸ್ಯೆಗಳನ್ನೂ ತರಗತಿಯಲ್ಲೇ ಬಿಡಿಸುತ್ತೇವೆ. ಇದಿಷ್ಟೇ > ನಮ್ಮ ಯಶಸ್ಸಿನ ಸೂತ್ರ…’ > > ಇವತ್ತು ಒಂದು ವಿಷಯಕ್ಕೆ ಭರ್ತಿ ಹತ್ತು ಸಾವಿರ ರೂ. ತಗೊಂಡು ಪಾಠ ಹೇಳುವ > ಶಿಕ್ಷಕರಿದ್ದಾರೆ. ಟ್ಯೂಶನ್ ಮಾಫಿಯಾ ಕೂಡ ಎಲ್ಲ ನಗರಗಳಲ್ಲೂ ಇದೆ. ಹೀಗಿರುವಾಗ ಕಡಿಮೆ > ಶುಲ್ಕ ಪಡೆಯುವುದರಿಂದ ನಿಮಗೆ ನಷ್ಟ ಆಗಿಲ್ಲವಾ? ಟ್ಯೂಶನ್ ಮಾಫಿಯಾದಿಂದ ಬೆದರಿಕೆ > ಬಂದಿಲ್ಲವಾ ಎಂಬ ಪ್ರಶ್ನೆಗೆ ಆನಂದಕುಮಾರ್ ಹೇಳುತ್ತಾನೆ- ಇವತ್ತು ಬಿಹಾರದಲ್ಲಿ ಟ್ಯೂಶನ್ > ಕೇಂದ್ರಗಳನ್ನು ಹೆಸರಾಂತ ಕ್ರಿಮಿನಲ್‌ಗಳು ನಡೆಸುತ್ತಿದ್ದಾರೆ, ನಿಯಂತ್ರಿಸುತ್ತಿದ್ದಾರೆ. > ನಾನು ತುಂಬಾ ಕಡಿಮೆ ಹಣಕ್ಕೆ ಟ್ಯೂಶನ್ ಮಾಡುತ್ತಿರುವುದರಿಂದ ಅವರ ವ್ಯಾಪಾರಕ್ಕೆ > ಕೊಡಲಿಪೆಟ್ಟು ಬಿದ್ದಿದೆ. ಈ ಕಾರಣದಿಂದಲೇ ನನ್ನ ಮೇಲೆ ಹಲವರಿಗೆ ಸಿಟ್ಟಿದೆ. ಈಗಲೂ ನನಗೆ > ದಿನಕ್ಕೆ ಎರಡಾದರೂ ಜೀವಬೆದರಿಕೆಯ ಕರೆಗಳು ಬರುತ್ತವೆ. ನನ್ನ ಮೇಲೆ ಒಂದೆರಡು ಬಾರಿ > ಹಲ್ಲೆಯಾಗಿದೆ. ಒಮ್ಮೆ ಬಾಂಬ್ ದಾಳಿ ಕೂಡ ನಡೆದಿದೆ. ನನ್ನ ಬಳಿ ಪಾಠ ಹೇಳಿಸಿಕೊಂಡ > ವಿದ್ಯಾರ್ಥಿಯೊಬ್ಬನಿಗೆ ಚೂರಿಯಿಂದ ಇರಿಯಲಾಗಿದೆ. ಇವೆಲ್ಲ ನನ್ನನ್ನು ಹೆದರಿಸುವ ತಂತ್ರಗಳೇ. > ದೈವಕೃಪೆಯಿಂದ, ಎಲ್ಲ ಸಂದರ್ಭಗಳಲ್ಲೂ ನಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆ. ಈಗ > ಗನ್‌ಲೈಸೆನ್ಸ್ ಪಡೆದಿದ್ದೇನೆ. ಬೆಂಗಾವಲಿಗೆ ಅಂಗರಕ್ಷಕರನ್ನು ಇಟ್ಟುಕೊಂಡೇ > ಓಡಾಡುತ್ತಿದ್ದೇನೆ. ಒಂದಂತೂ ನಿಜ, ದುಡ್ಡು ನನಗೆ ಮುಖ್ಯವಲ್ಲ. ಬಡವರ ಮಕ್ಕಳಿಗೆ ಉಚಿತವಾಗಿ > ಪಾಠ ಹೇಳಬೇಕು ಎಂಬುದು ನನ್ನ ಕನಸಾಗಿತ್ತು. ಅದನ್ನು ನನಸು ಮಾಡಿಕೊಂಡಿದ್ದೇನೆ. ಮೊನ್ನೆ > ಮೊನ್ನೆಯವರೆಗೂ ಕ್ರೈಂ ಸಿಟಿ ಎಂದು ಕರೆಸಿಕೊಂಡಿದ್ದ ಪಾಟ್ನಾವನ್ನು ಈಗ `ಎಜುಕೇಷನ್ > ಸಿಟಿ’ಎಂದು ಕರೆಯುವಂತೆ ಮಾಡಿದ್ದೇನೆ. ಇಂಥದೊಂದು ಅಪರೂಪದ ಬದಲಾವಣೆ ತಂದ ಹೆಮ್ಮೆ ನನಗಿದೆ… > > ಈಗ ಏನಾಗಿದೆ ಗೊತ್ತೆ? : ಪಾಟ್ನಾದ ಆ ಹಳ್ಳಿಹೈದನ ಯಶೋಗಾಥೆ ದೇಶದ ಗಡಿದಾಟಿ ಅಮೆರಿಕ ತಲುಪಿ > ಅಲ್ಲೂ ಸುದ್ದಿಯಾಗಿದೆ. ಜಗತ್ತಿನ ಅತ್ಯುತ್ತಮ ಕೋಚಿಂಗ್ ತರಗತಿಗಳ ಪೈಕಿ ಆನಂದಕುಮಾರ್‌ನ > ಸೂಪರ್-30 ಶಾಲೆಯೂ ಸ್ಥಾನ ಪಡೆದುಕೊಂಡಿದೆ. ಅದನ್ನು ಭಾರತದ ಅತ್ಯುತ್ತಮ ಕೋಚಿಂಗ್ ಕ್ಲಾಸ್ > ಎಂದೇ ಬಣ್ಣಿಸಲಾಗಿದೆ. ಈ ಅಪರೂಪದ ಸಾಧನೆಗೆ ಅಮೆರಿಕ ಸರಕಾರ ಒಂದು ವಿಶೇಷ ಪ್ರಶಸ್ತಿಯನ್ನೂ > ನೀಡಿದೆ. ಒಬಾಮಾ ಅವರ ವಿಶೇಷ ಕಾರ್ಯದರ್ಶಿ ರಶೀದ್ ಹುಸೇನ್, ಈ ಪ್ರಶಸ್ತಿಯನ್ನು > ಆನಂದಕುಮಾರ್‌ಗೆ ತಲುಪಿಸಿ ಬೆನ್ನುತಟ್ಟಿದ್ದಾರೆ. ಕೈ ಮುಗಿದಿದ್ದಾರೆ. ಆ ಮಹಾರಾಯ ಒಬಾಮಾ > ಅಷ್ಟಕ್ಕೇ ಸುಮ್ಮನಾಗಿಲ್ಲ. ಅಮೆರಿಕಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಇದೇ > ಸಂದರ್ಭದಲ್ಲಿ ಗಣಿತದ ಹಲವು ಸಮಸ್ಯೆಗಳ ಬಗ್ಗೆ ವಿಶೇಷ ಉಪನ್ಯಾಸ ನೀಡುವಂತೆ ಅಮೆರಿಕದ > ವಿಶ್ವವಿದ್ಯಾಲಯಗಳೂ ಆನಂದಕುಮಾರ್ ಅವರಿಗೆ ಆಹ್ವಾನ ನೀಡಿವೆ. ಅಮೆರಿಕದಲ್ಲಿ ಗಣಿತದ ಅಭ್ಯಾಸ > ಮಾಡಬೇಕು ಎಂದುಕೊಂಡಿದ್ದ ಹುಡುಗ, ಇವತ್ತು ಅಲ್ಲಿನ ಅಧ್ಯಾಪಕರುಗಳಿಗೇ ಉಪನ್ಯಾಸ ನೀಡುವ ಮಟ್ಟ > ತಲುಪಿಕೊಂಡಿದ್ದಾನೆ, ಕೇವಲ ಸ್ವಸಾಮರ್ಥ್ಯದಿಂದ! > > ಇಂದು ಆನಂದನಿಂದಾಗಿ ಬಡಮಕ್ಕಳು ಉನ್ನತ ಹುದ್ದೆಗೇರುವಂತಾಗಿದೆ. ಗಣಿತ ಸುಲಿದ > ಬಾಳೆಹಣ್ಣಿನಂತಾಗಿದೆ. ಜನಸೇವೆ ಮಾಡಲು ರಾಜಕೀಯವೇ ಬೇಕಾಗಿಲ್ಲ. ದುರ್ದೈವವೆಂದರೆ ಜನ ಸೇವೆಯ > ಹೆಸರಿನಲ್ಲಿ ರಾಜಕೀಯಕ್ಕೆ ಬರುವವರು ಟ್ಯೂಶನ್ ಹೇಳಿಸಿ ಕೊಂಡೂ ಎಲ್ಲಾ ವಿಷಯಗಳಲ್ಲೂ > ಫೇಲಾದವರೇ. ಇರಲಿ ಬಿಡಿ. ಆನಂದನಂಥವರು ಸ್ಫೂರ್ತಿಯ ಚಿಲುಮೆಯಾಗುತ್ತಾರೆ > > By..whats app gps > > -- > 1. If a teacher wants to join STF, visit > http://karnatakaeducation.org.in/KOER/en/index.php/Become_a_STF_groups_member > 2. For STF training, visit KOER - > http://karnatakaeducation.org.in/KOER/en/index.php > 4. For Ubuntu 14.04 installation, visit > http://karnatakaeducation.org.in/KOER/en/index.php/Kalpavriksha > 4. For doubts on Ubuntu, public software, visit > http://karnatakaeducation.org.in/KOER/en/index.php/Frequently_Asked_Questions > 5. Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Why_public_software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com. > To post to this group, send email to mathssciencestf@googlegroups.com. > Visit this group at https://groups.google.com/group/mathssciencestf. > For more options, visit https://groups.google.com/d/optout. > -- 1. If a teacher wants to join STF, visit http://karnatakaeducation.org.in/KOER/en/index.php/Become_a_STF_groups_member 2. For STF training, visit KOER - http://karnatakaeducation.org.in/KOER/en/index.php 4. For Ubuntu 14.04 installation, visit http://karnatakaeducation.org.in/KOER/en/index.php/Kalpavriksha 4. For doubts on Ubuntu, public software, visit http://karnatakaeducation.org.in/KOER/en/index.php/Frequently_Asked_Questions 5. Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Why_public_software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. Visit this group at https://groups.google.com/group/mathssciencestf. For more options, visit https://groups.google.com/d/optout.