ಇದು ನಿಜಕ್ಕೂ ಪ್ರೇರಕವಾಗಿದೆ. ಧನ್ಯವಾದಗಳು . ಬಿಕೆಆರ್,ಕುದೂರು ,
On Apr 29, 2016 7:57 AM, "vijay prasad" <gejj...@gmail.com> wrote:

> ಜನಸೇವೆಗೆ ರಾಜಕೀಯವೇ ಬೇಕಾಗಿಲ್ಲ, ಹೀಗೂ ಮಾಡಬಹುದು!
>
> ಬಿಹಾರ, ಪಾಟ್ನಾ! ಹೀಗೆಂದ ತಕ್ಷಣ ನಮ್ಮ ಕಣ್ಮುಂದೆ ಲಾಲೂ ಪ್ರಸಾದ್ ಯಾದವ್, ರಾಬ್ಡಿದೇವಿಯ
> ಚಿತ್ರಗಳು ಬಂದು ನಿಲ್ಲುತ್ತವೆ. ಅದರ ಹಿಂದೆಯೇ, ಬಿಹಾರದ ರಾಜಕೀಯದಲ್ಲಿ ದೊಡ್ಡ ಹೆಸರು
> ಮಾಡಿರುವ ಕಳ್ಳರು, ಸುಳ್ಳರು, ಕೊಲೆಗಡುಕರು, ಕ್ರಿಮಿನಲ್‌ಗಳ ಮುಖಗಳೂ ಮೆರವಣಿಗೆ
> ಹೊರಡುತ್ತವೆ. ಇದೇ ಕಾರಣಕ್ಕೆ ಬಿಹಾರವನ್ನು `ಗೂಂಡಾರಾಜ್ಯ’ ಎಂದು ಕರೆಯುವ ಪರಿಪಾಠವೂ ಇದೆ.
> ಬಿಹಾರ ಅಂದ್ರೆ ಎಲ್ಲ ಅಕ್ರಮ, ಅವ್ಯವಹಾರಗಳಿಗೆ ಪರ್ಯಾಯ ಪದವೆನ್ನುವಂತಾಗಿದೆ. ಆದರೆ, ಈಗ
> ಅದೇ ಪಾಟ್ನಾದಿಂದ ದೇವರಂಥ ವ್ಯಕ್ತಿಯೊಬ್ಬ ಎದ್ದು ಬಂದಿದ್ದಾನೆ. ಅವನ ಹೆಸರು ಆನಂದಕುಮಾರ್.
>
> ಇವತ್ತು ಪಾಟ್ನಾದ ಬಸ್‌ನಿಲ್ದಾಣ ಅಥವಾ ರೈಲು ನಿಲ್ದಾಣದಲ್ಲಿ ನಿಂತು- ನಾಲ್ಕು ಮಂದಿಯ
> ಮುಂದೆ ಆನಂದಕುಮಾರ್ ಅಂದು ನೋಡಿ; ಜನ ಕಣ್ಣರಳಿಸುತ್ತಾರೆ. ನಿಂತಲ್ಲೇ ಕೈಮುಗಿಯುತ್ತಾರೆ.
> `ಓಹ್, ನಿಮ್ಗೆ ಮೇಷ್ಟ್ರು ಬೇಕಿತ್ತಾ’ ಎನ್ನುತ್ತಾರೆ. ಮರುಕ್ಷಣದಲ್ಲೇ ಈ ಆನಂದಕುಮಾರ್ ಅವರ
> ವಿಳಾಸವನ್ನು ಹೇಳುತ್ತಾರೆ. ಆನಂತರವೂ ಒಂದೆರಡು ನಿಮಿಷ ಅಲ್ಲಿಯೇ ನಿಂತರೆ- ಆನಂದಕುಮಾರ್
> ಅವರನ್ನು ಹೊಗಳುತ್ತ ಹೊಗಳುತ್ತಾ ಮೈಮರೆಯುತ್ತಾರೆ. ಸ್ವಾರಸ್ಯವೇನೆಂದರೆ- ಹೀಗೆ ಎಲ್ಲರಿಂದಲೂ
> ಹೊಗಳಿಸಿಕೊಳ್ಳುವ ಆನಂದಕುಮಾರ್ ರಾಜಕಾರಣಿಯಲ್ಲ. ಹಣವಂತನಲ್ಲ. ಯೋಗ ಗುರುವಲ್ಲ.
> ಚಿತ್ರನಟನಲ್ಲ. ರಾಬ್ಡಿದೇವಿಯ ಮಾವನಲ್ಲ. ಲಾಲೂ ಪ್ರಸಾದನಿಗೂ ಅವನಿಗೂ ಸಂಬಂಧವಿಲ್ಲ.
> ನಿತೀಶ್‌ಕುಮಾರನ ನೆಂಟನೂ ಅಲ್ಲ. ಅಸಲಿಗೆ, ರಾಜಕೀಯದ ನೆರಳನ್ನು ಆತ ತನ್ನೆಡೆಗೆ
> ಬಿಟ್ಟುಕೊಂಡವನಲ್ಲ. ಆತ ಪೊಲೀಸ್ ಅಧಿಕಾರಿಯಲ್ಲ, ಕರಾಟೆ ಮಾಸ್ಟರ್ ಕೂಡ ಅಲ್ಲ. ಜ್ಯೋತಿಷಿಯೂ
> ಅಲ್ಲ. ಬದಲಿಗೆ, ಒಬ್ಬ ಟ್ಯೂಶನ್ ಮಾಸ್ಟರ್!
>
> ನಂಬಿ ಮಹಾರಾಯರೆ, ಈ ಟ್ಯೂಶನ್ ಮಾಸ್ಟರ್, ಇವತ್ತು ಬಿಹಾರದಲ್ಲಿ ದೊಡ್ಡದೊಂದು ಕ್ರಾಂತಿ
> ಉಂಟುಮಾಡಿದ್ದಾನೆ. ವಿದ್ಯಾರ್ಥಿಗಳ ಪಾಲಿಗೆ ರೋಲ್‌ಮಾಡೆಲ್ ಆಗಿದ್ದಾನೆ. ತೀರಾ ಕಡಿಮೆ ಹಣ
> ಪಡೆದು ಎಲ್ಲರಿಗೂ ಟ್ಯೂಶನ್ ಮಾಡುತ್ತ ಶೈಕ್ಷಣಿಕ ಕ್ರಾಂತಿಯ ಹರಿಕಾರ ಎನಿಸಿಕೊಂಡಿದ್ದಾನೆ.
> ಅಷ್ಟೇ ಅಲ್ಲ, ಸೂಪರ್-30 ಎಂಬ ಖಾಸಗಿ ಟ್ಯೂಶನ್ ಕೇಂದ್ರವನ್ನೂ ಆರಂಭಿಸಿದ್ದಾನೆ. ಆ ಕೇಂದ್ರದ
> ಮುಂದೆ ಆನೆಗಾತ್ರದ ಅಕ್ಷರದಲ್ಲಿ- ‘ಇಲ್ಲಿ ಬಡವರ ಮಕ್ಕಳಿಗೆ ಉಚಿತವಾಗಿ ಪಾಠ ಹೇಳಲಾಗುವುದು’
> ಎಂದು ಬೋರ್ಡ್ ಹಾಕಿದ್ದಾನೆ. ಅಷ್ಟೇ ಅಲ್ಲ, ನುಡಿದಂತೆಯೇ ನಡೆದುಕೊಂಡಿದ್ದಾನೆ. ಈತನ ಬಳಿ
> ಟ್ಯೂಶನ್ ಹೇಳಿಸಿಕೊಂಡ ಹುಡುಗರು- ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯವರು ನಡೆಸುವ
> ಐಐಟಿ-ಜೆಇಇ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಪಡೆದಿದ್ದಾರೆ. ಕೆಲವರು ಐಎಎಸ್ ನಲ್ಲೂ
> ಪಾಸಾಗಿದ್ದಾರೆ. ಒಂದಷ್ಟು ಮಂದಿ ಬ್ಯಾಂಕ್ ಪರೀಕ್ಷೆ ಬರೆದು ಮ್ಯಾನೇಜರ್‌ಗಳಾಗಿದ್ದಾರೆ.
> ಹೀಗೆ, ದೊಡ್ಡ ದೊಡ್ಡ ಸ್ಥಾನ ತಲುಪಿಕೊಂಡವರೆಲ್ಲ ಕ್ಷಣಕ್ಷಣಕ್ಕೂ ತಮ್ಮ ಗುರು ಆನಂದಕುಮಾರ್
> ಅವರನ್ನು ಸ್ಮರಿಸಿಕೊಂಡಿದ್ದಾರೆ. ಗುರುಗಳಿಗೆ ಜೈ ಹೋ ಎಂದು ಸಂತೋಷದಿಂದ ಹೇಳಿದ್ದಾರೆ.
>
> ಅಲ್ಲ, ಮೊನ್ನೆಮೊನ್ನೆಯವರೆಗೂ ರಕ್ತಸಿಕ್ತ ರಾಜಕಾರಣವನ್ನೇ ಉಸಿರಾಡುತ್ತಿದ್ದ ನಾಡು ಬಿಹಾರ.
> ಅಂಥ ಊರಿನಲ್ಲಿ ಆನಂದಕುಮಾರ್ ಥರದ ಜನ ಎದ್ದುನಿಲ್ಲಲು ಕಾರಣವಾದದ್ದು ಏನು? ಇಷ್ಟಕ್ಕೂ ಈ
> ಹುಡುಗ ಯಾರು? ಅವನ ಹಿನ್ನೆಲೆ ಏನು? ಅವನು ಟ್ಯೂಶನ್ ತರಗತಿ ಆರಂಭಿಸಲು ಕಾರಣವಾದರೂ ಏನು?
> ತೀರಾ ಬಡವರ ಮಕ್ಕಳಿಗೇ ಪಾಠ ಹೇಳುತ್ತೇನೆ ಎಂಬ ಆದರ್ಶದ ಹಂಬಲವಾದರೂ ಆ ಹುಡುಗನ
> ತಲೆಗೇರಿದ್ದೇಕೆ?
>
> ಸ್ವಾರಸ್ಯಕರ ಕಥೆ : ಇಂಥ ಎಲ್ಲ ಕುತೂಹಲಗಳಿಗೂ ಇಲ್ಲಿ ಸ್ವಾರಸ್ಯಕರ ಉತ್ತರವಿದೆ. ಈ
> ಆನಂದಕುಮಾರ್, ಬಿಹಾರದ ಒಂದು ಸಾಮಾನ್ಯ ಕುಟುಂಬದಿಂದ ಬಂದವನು. ಅವನ ತಂದೆ ಅಂಚೆ ಕಚೇರಿಯಲ್ಲಿ
> ಸೆಕೆಂಡ್ ಡಿವಿಜನ್ ಕ್ಲರ್ಕ್ ಆಗಿದ್ದ. ಬರುತ್ತಿದ್ದ ಸಂಬಳ ಹೊಟ್ಟೆ- ಬಟ್ಟೆಗೇ
> ಆಗಿಹೋಗುತ್ತಿತ್ತು. ಹಾಗಾಗಿ ಮಕ್ಕಳನ್ನು ಟ್ಯೂಶನ್‌ಗೆ ಕಳುಹಿಸುವ ಯೋಚನೆಯನ್ನೇ
> ಆನಂದ್‌ಕುಮಾರನ ತಂದೆ ಮಾಡಲಿಲ್ಲ. ಈ ಹುಡುಗ ಆನಂದ್, ಹಿಂದಿ ಮಾಧ್ಯಮದಲ್ಲಿ ಪ್ರಾಥಮಿಕ
> ಶಿಕ್ಷಣ ಮುಗಿಸಿದ. ಮನೆಯಲ್ಲಿ ಕಡುಬಡತನವಿತ್ತು ನಿಜ. ಆದರೆ, ಅದು ಈ ಹುಡುಗನ ಜ್ಞಾನದಾಹಕ್ಕೆ
> ಅಡ್ಡಿಯಾಗಲಿಲ್ಲ. ಚಿಕ್ಕಂದಿನಲ್ಲಿಯೇ ಗಣಿತದತ್ತ ಆಕರ್ಷಿತನಾದ ಆನಂದಕುಮಾರ್, ಹೈಸ್ಕೂಲಿಗೆ
> ಬರುವ ವೇಳೆಗೆ ಕಾಲೇಜು ತರಗತಿಗಳ ಸಮಸ್ಯೆಗಳನ್ನೆಲ್ಲ ಬಿಡಿಸುವಷ್ಟು ಪ್ರಾವೀಣ್ಯ ಪಡೆದ.
> ಅಷ್ಟಕ್ಕೆ ಸುಮ್ಮನಾಗದೆ, ಗಣಿತ ಲೋಕದ ಪ್ರೊಫೆಸರ್‌ಗಳಿಗೇ ಸವಾಲು ಹಾಕುವಂತಿದ್ದ ಅವೆಷ್ಟೋ
> ಸಮಸ್ಯೆಗಳಿಗೆ ಉತ್ತರ ಕಂಡುಹಿಡಿದ. ಅವುಗಳನ್ನು ಇಂಗ್ಲೆಂಡಿನ ಮ್ಯಾಥಮೆಟಿಕಲ್ ಸ್ಪೆಕ್ಟ್ರಂ
> ಮತ್ತು ದಿ ಮ್ಯಾಥಮೆಟಿಕಲ್ ಗೆಜೆಟ್ ಪತ್ರಿಕೆಗಳಿಗೆ ಕಳಿಸಿಕೊಟ್ಟ.
>
> ದಶಕಗಳ ಕಾಲದಿಂದಲೂ ಗಣಿತದ ಪ್ರೊಫೆಸರ್‌ಗಳಿಗೆ ಅರ್ಥವೇ ಆಗದಿದ್ದ ಸಮಸ್ಯೆಗಳನ್ನು, ಇನ್ನೂ
> ಮೀಸೆ ಚಿಗುರದ ಭಾರತದ ಹೈದನೊಬ್ಬ ಪರಿಹಾರ ಹುಡುಕಿದ್ದು ಕಂಡು ಅಮೆರಿಕ, ಇಂಗ್ಲೆಂಡಿನ
> ಪಂಡಿತರೆಲ್ಲ ಖುಷಿಯಾದರು. ಕೇಂಬ್ರಿಡ್ಜ್ ವಿಶ್ವವಿದ್ಯಾಲಯ ಈ ಹುಡುಗನಿಗೆ ಪ್ರವೇಶ ನೀಡಲೂ
> ಮುಂದಾಯಿತು. ಇನ್ನು ಕೆಲವೇ ವರ್ಷಗಳಲ್ಲಿ ನಾನೂ ಒಬ್ಬ ಗಣಿತದ ಪ್ರೊಫೆಸರ್ ಆಗುತ್ತೇನೆ ಎಂಬ
> ಖುಷಿಯಲ್ಲಿ ಈ ಆನಂದಕುಮಾರ್ ಪಾಸ್‌ಪೋರ್ಟ್, ವೀಸಾ ಮಾಡಿಸಿಕೊಳ್ಳಲು ಓಡಾಡತೊಡಗಿದ.
> ಅಷ್ಟರಲ್ಲಿ ಆಗಬಾರದ ಅನಾಹುತವೊಂದು ಆಗಿಹೋಯಿತು. ಅದೊಂದು ದಿನ, ಕಚೇರಿಯಿಂದ ಮನೆಗೆ ಬಂದ
> ಆನಂದ್‌ಕುಮಾರನ ತಂದೆ, ಯಾಕೋ ಎದೆನೋವು ಎಂದು ಕುಸಿದು ಕೂತವರು ಮತ್ತೆ ಮೇಲೇಳಲಿಲ್ಲ!
>
> ಅದುವರೆಗೂ ಕುಟುಂಬ ನಿರ್ವಹಣೆಗೆ ಆಧಾರವಾಗಿದ್ದುದೇ ತಂದೆಯ ಸಂಬಳ. ಅದೇ ಇಲ್ಲವೆಂದಮೇಲೆ,
> ಬದುಕಲು ಏನಾದರೂ ಮಾಡಲೇಬೇಕಿತ್ತು. ಈ ಸಂದರ್ಭದಲ್ಲಿ ಆನಂದಕುಮಾರ್, ಅನಿವಾರ್ಯವಾಗಿ ತನ್ನ
> ಉನ್ನತ ವ್ಯಾಸಂಗದ ಕನಸನ್ನು ಕೈಬಿಟ್ಟ. ಆನಂದ್‌ನ ತಾಯಿ, ಜೀವನ ನಿರ್ವಹಣೆಗೆಂದು ಹಪ್ಪಳ
> ತಯಾರಿಕೆಗೆ ನಿಂತಳು. ಬೆಳಗಿನಿಂದಲೂ ಮನೆಯಲ್ಲಿದ್ದುಕೊಂಡೇ ಗಣಿತದ ಸಮಸ್ಯೆಗಳನ್ನು
> ಬಿಡಿಸುತ್ತ, ಹೊಸ ಹೊಸ ಥಿಯರಿಗಳನ್ನು ಸೃಷ್ಟಿಸುತ್ತ ಕಾಲ ಕಳೆಯುತ್ತಿದ್ದ.
> ಸಂಜೆಯಾಗುತ್ತಿದ್ದಂತೆಯೇ ಮನೆಮನೆಯ ಬಾಗಿಲು ತಟ್ಟಿ ಹಪ್ಪಳ ಮಾರುತ್ತಿದ್ದ. ಹೀಗಿದ್ದಾಗಲೇ,
> ಹೀಗೆ ಮನೆಮನೆಗೂ ಹೋಗಿ ಹಪ್ಪಳ ಮಾರುವ ಬದಲು ಖಾಸಗಿಯಾಗಿ ಯಾಕೆ ಟ್ಯೂಶನ್ ಹೇಳಬಾರದು?
> ಹೇಗಿದ್ರೂ ನಿಂಗೆ ಗಣಿತ ಚೆನ್ನಾಗಿ ಗೊತ್ತಿದೆಯಲ್ಲ? ಅದೇ ವಿಷಯವನ್ನು ಯಾಕೆ ಹೇಳಿಕೊಡಬಾರದು
> ಎಂದು ಹಿತೈಷಿಯೊಬ್ಬರು ಸಲಹೆ ಮಾಡಿದರು. ಆಗ ಈ ಆನಂದಕುಮಾರ್‌ನ ವಯಸ್ಸೆಷ್ಟು ಗೊತ್ತೆ? ಬರೀ
> 22 ವರ್ಷ. ಅಂದಹಾಗೆ, ಇದು 1995ರ ಮಾತು!
>
> ಒಂದೆರಡು ದಿನ ಬಿಟ್ಟು ಯೋಚಿಸಿದಾಗ- ಹೌದಲ್ವಾ? ನಾನು ಹಾಗೇಕೆ ಮಾಡಬಾರದು ಎಂದು
> ಆನಂದ್‌ಕುಮಾರನಿಗೂ ಅನಿಸಿತು. ತಕ್ಷಣವೇ 500 ರೂ. ಬಾಡಿಗೆಗೆ ಒಂದು ಪುಟ್ಟ ರೂಮ್ ಪಡೆದು
> ಅಲ್ಲಿ ಟ್ಯೂಶನ್ ಆರಂಭಿಸಿಯೇ ಬಿಟ್ಟ. ಗಣಿತದ ಮೇಲಿನ ಪ್ರೀತಿಯಿಂದ ತನ್ನ ಟ್ಯೂಶನ್
> ಕೇಂದ್ರಕ್ಕೆ ಪ್ರಸಿದ್ಧ ಗಣಿತಜ್ಞ ಶ್ರೀನಿವಾಸ ರಾಮಾನುಜನ್ ಹೆಸರಿನಲ್ಲಿ- `ರಾಮಾನುಜನ್
> ಸ್ಕೂಲ್ ಆಫ್ ಮ್ಯಾಥಮೆಟಿಕ್ಸ್’ ಎಂದು ಹೆಸರಿಟ್ಟ. ಮೊದಲ ವರ್ಷ ಟ್ಯೂಶನ್‌ಗೆಂದು ಬಂದವರು
> ಇಬ್ಬರೇ ಇಬ್ಬರು. ಆ ವರ್ಷ ಅವರಿಬ್ಬರೂ ಗಣಿತದಲ್ಲಿ ನೂರಕ್ಕೆ ನೂರು ಅಂಕ ಪಡೆದರು. ಮರುವರ್ಷ,
> ಟ್ಯೂಶನ್‌ಗೆ ಬಂದವರ ಸಂಖ್ಯೆ 25 ದಾಟಿತು. ಹಾಗೆ ಪಾಠ ಹೇಳಿಸಿಕೊಂಡವರೆಲ್ಲ ನೂರಕ್ಕೆ
> ತೊಂಬತ್ತಕ್ಕೂ ಹೆಚ್ಚು ಅಂಕ ಪಡೆದರು. ಪರಿಣಾಮ, ಮೂರು ವರ್ಷ ತುಂಬುವುದರೊಳಗೆ, ಆನಂದಕುಮಾರ್
> ಬಳಿ ಟ್ಯೂಶನ್‌ಗೆ ಬಂದವರ ಸಂಖ್ಯೆ 500ನ್ನು ದಾಟಿತು. ಒಂದು ವರ್ಷ ಟ್ಯೂಶನ್ ಹೇಳಿಸಿಕೊಳ್ಳಲು
> 1500 ರೂ. ಶುಲ್ಕ ಎಂದು ಈ ವೇಳೆಗೆ ಆನಂದಕುಮಾರ್ ಪ್ರಕಟಿಸಿದ್ದ. ಅಷ್ಟು ದುಡ್ಡು ಕೊಡಲು
> ವಿದ್ಯಾರ್ಥಿಗಳೂ ಸಿದ್ಧರಾಗಿದ್ದರು. ಹೀಗಿದ್ದಾಗಲೇ, ಅದೊಂದು ದಿನ ಆನಂದ್ ಬಳಿಗೆ ಬಂದ ಒಬ್ಬ
> ಹುಡುಗ- `ಸಾರ್, ನಾನು ತುಂಬಾ ಬಡವರ ಮನೆಯ ಹುಡುಗ. ನನಗೆ ಓದುವ ಆಸೆಯಿದೆ. ದೊಡ್ಡ ಅಧಿಕಾರಿ
> ಆಗಬೇಕೆಂಬ ಹಂಬಲವಿದೆ. ಗಣಿತದಲ್ಲಿ ತುಂಬಾ ಆಸಕ್ತಿಯಿದೆ. ಆದರೆ, ಟ್ಯೂಶನ್‌ಗೆ ಕೊಡುವಷ್ಟು
> ಹಣವಿಲ್ಲ’ ಎಂದನಂತೆ.
>
> `ಆ ಹುಡುಗನ ಮಾತು ಕೇಳಿ ತುಂಬಾ ಬೇಸರವಾಯಿತು. ನನ್ನ ತಂದೆ ಆಕಸ್ಮಿಕವಾಗಿ ಸತ್ತುಹೋದಾಗ
> ನಾನು ಎದುರಿಸಿದ ಪರಿಸ್ಥಿತಿ ನೆನಪಾಯಿತು. ತುಂಬಾ ಬಡಕುಟುಂಬದಿಂದ ಬಂದ ಮೂವತ್ತು ಮಂದಿಗೆ
> ಉಚಿತವಾಗಿ ಊಟ, ವಸತಿ, ಟ್ಯೂಶನ್ ಹೇಳುವ ನಿರ್ಧಾರಕ್ಕೆ ನಾನು ಬಂದದ್ದೇ ಆಗ. ಈ ವಿಷಯವನ್ನು
> ಅಮ್ಮನಿಗೆ ಹೇಳಿದಾಗ- `ನಾನು ಆ ಮಕ್ಕಳಿಗೆ ಅಡುಗೆ ಮಾಡಿಕೊಡ್ತೇನೆ ಕಂದಾ’ ಎಂದಳು ಅಮ್ಮ. ಆ
> ವಿದ್ಯಾರ್ಥಿಗಳ ವಸತಿ ವ್ಯವಸ್ಥೆಯನ್ನು ನನಗೆ ಬಿಡು, ಆ ಜವಾಬ್ದಾರಿಯನ್ನು ನಾನು ತಗೋತೇನೆ
> ಎಂದು ವೃತ್ತಿಯಿಂದ ಸಂಗೀತಗಾರನಾಗಿರುವ ನಮ್ಮ ಅಣ್ಣ ಪ್ರಣವ್‌ಕುಮಾರ್ ಹೇಳಿದ. ಈ ಇಬ್ಬರ
> ಬೆಂಬಲದಿಂದ ನನ್ನ ಕೆಲಸ ಹಗುರಾಯಿತು. ಹೀಗೆ ಶುರುವಾದ ತರಗತಿಗೆ ಸೂಪರ್-30 ಎಂಬ ಹೆಸರು
> ಕೊಟ್ಟೆ ಎನ್ನುತ್ತಾನೆ ಆನಂದಕುಮಾರ್.
>
> ಬೆದರಿಕೆ ಮೆಟ್ಟಿನಿಂತ ಧೀರ : ನೀವು ಪಾಠ ಹೇಳುವುದರಲ್ಲಿ ಅಂಥದೇನಿದೆ ವಿಶೇಷ? ನಿಮ್ಮಲ್ಲಿ
> ಕಲಿತವರೆಲ್ಲ ಗಣಿತದಲ್ಲಿ ಪಂಡಿತರೇ ಆಗಿಬಿಡ್ತಾರಲ್ಲ? ಈ ಪವಾಡ ಹೇಗೆ ನಡೆಯುತ್ತೆ ಎಂದು
> ಪ್ರಶ್ನಿಸಿದರೆ ಆನಂದಕುಮಾರ್ ಹೇಳುವುದಿಷ್ಟು- `ಗಣಿತ ಎಂದರೆ, ಹೆಚ್ಚುಕಮ್ಮಿ ಎಲ್ಲ
> ವಿದ್ಯಾರ್ಥಿಗಳಿಗೂ ಭಯ. ಆ ಭಯವನ್ನು ನಾವು ಮೊದಲ ದಿನವೇ ಹೋಗಲಾಡಿಸುತ್ತೇವೆ. ಕೂಡುವುದು,
> ಕಳೆಯುವುದು, ಗುಣಿಸುವುದು ಮತ್ತು ಭಾಗಿಸುವುದು ಇದಿಷ್ಟೇ ಗಣಿತ ಎಂದು ಒತ್ತಿ ಹೇಳುತ್ತೇವೆ.
> ಮುಖ್ಯವಾಗಿ, ಮೊದಲು ತುಂಬ ಸುಲಭವಾಗಿ ಅರ್ಥವಾಗುವ ಐವತ್ತರವತ್ತು ಸಮಸ್ಯೆಗಳನ್ನು ಬಿಡಿಸಿ,
> ನಂತರವಷ್ಟೇ ಕಷ್ಟದ ಸಮಸ್ಯೆಗಳಿಗೆ ಕೈಹಾಕುತ್ತೇವೆ. ಸಾಧ್ಯವಾದಷ್ಟೂ ವಿದ್ಯಾರ್ಥಿಗಳಿಗೆ
> ಹೋಂವರ್ಕ್ ನೀಡುವುದಿಲ್ಲ. ಎಲ್ಲ ಸಮಸ್ಯೆಗಳನ್ನೂ ತರಗತಿಯಲ್ಲೇ ಬಿಡಿಸುತ್ತೇವೆ. ಇದಿಷ್ಟೇ
> ನಮ್ಮ ಯಶಸ್ಸಿನ ಸೂತ್ರ…’
>
> ಇವತ್ತು ಒಂದು ವಿಷಯಕ್ಕೆ ಭರ್ತಿ ಹತ್ತು ಸಾವಿರ ರೂ. ತಗೊಂಡು ಪಾಠ ಹೇಳುವ
> ಶಿಕ್ಷಕರಿದ್ದಾರೆ. ಟ್ಯೂಶನ್ ಮಾಫಿಯಾ ಕೂಡ ಎಲ್ಲ ನಗರಗಳಲ್ಲೂ ಇದೆ. ಹೀಗಿರುವಾಗ ಕಡಿಮೆ
> ಶುಲ್ಕ ಪಡೆಯುವುದರಿಂದ ನಿಮಗೆ ನಷ್ಟ ಆಗಿಲ್ಲವಾ? ಟ್ಯೂಶನ್ ಮಾಫಿಯಾದಿಂದ ಬೆದರಿಕೆ
> ಬಂದಿಲ್ಲವಾ ಎಂಬ ಪ್ರಶ್ನೆಗೆ ಆನಂದಕುಮಾರ್ ಹೇಳುತ್ತಾನೆ- ಇವತ್ತು ಬಿಹಾರದಲ್ಲಿ ಟ್ಯೂಶನ್
> ಕೇಂದ್ರಗಳನ್ನು ಹೆಸರಾಂತ ಕ್ರಿಮಿನಲ್‌ಗಳು ನಡೆಸುತ್ತಿದ್ದಾರೆ, ನಿಯಂತ್ರಿಸುತ್ತಿದ್ದಾರೆ.
> ನಾನು ತುಂಬಾ ಕಡಿಮೆ ಹಣಕ್ಕೆ ಟ್ಯೂಶನ್ ಮಾಡುತ್ತಿರುವುದರಿಂದ ಅವರ ವ್ಯಾಪಾರಕ್ಕೆ
> ಕೊಡಲಿಪೆಟ್ಟು ಬಿದ್ದಿದೆ. ಈ ಕಾರಣದಿಂದಲೇ ನನ್ನ ಮೇಲೆ ಹಲವರಿಗೆ ಸಿಟ್ಟಿದೆ. ಈಗಲೂ ನನಗೆ
> ದಿನಕ್ಕೆ ಎರಡಾದರೂ ಜೀವಬೆದರಿಕೆಯ ಕರೆಗಳು ಬರುತ್ತವೆ. ನನ್ನ ಮೇಲೆ ಒಂದೆರಡು ಬಾರಿ
> ಹಲ್ಲೆಯಾಗಿದೆ. ಒಮ್ಮೆ ಬಾಂಬ್ ದಾಳಿ ಕೂಡ ನಡೆದಿದೆ. ನನ್ನ ಬಳಿ ಪಾಠ ಹೇಳಿಸಿಕೊಂಡ
> ವಿದ್ಯಾರ್ಥಿಯೊಬ್ಬನಿಗೆ ಚೂರಿಯಿಂದ ಇರಿಯಲಾಗಿದೆ. ಇವೆಲ್ಲ ನನ್ನನ್ನು ಹೆದರಿಸುವ ತಂತ್ರಗಳೇ.
> ದೈವಕೃಪೆಯಿಂದ, ಎಲ್ಲ ಸಂದರ್ಭಗಳಲ್ಲೂ ನಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆ. ಈಗ
> ಗನ್‌ಲೈಸೆನ್ಸ್ ಪಡೆದಿದ್ದೇನೆ. ಬೆಂಗಾವಲಿಗೆ ಅಂಗರಕ್ಷಕರನ್ನು ಇಟ್ಟುಕೊಂಡೇ
> ಓಡಾಡುತ್ತಿದ್ದೇನೆ. ಒಂದಂತೂ ನಿಜ, ದುಡ್ಡು ನನಗೆ ಮುಖ್ಯವಲ್ಲ. ಬಡವರ ಮಕ್ಕಳಿಗೆ ಉಚಿತವಾಗಿ
> ಪಾಠ ಹೇಳಬೇಕು ಎಂಬುದು ನನ್ನ ಕನಸಾಗಿತ್ತು. ಅದನ್ನು ನನಸು ಮಾಡಿಕೊಂಡಿದ್ದೇನೆ. ಮೊನ್ನೆ
> ಮೊನ್ನೆಯವರೆಗೂ ಕ್ರೈಂ ಸಿಟಿ ಎಂದು ಕರೆಸಿಕೊಂಡಿದ್ದ ಪಾಟ್ನಾವನ್ನು ಈಗ `ಎಜುಕೇಷನ್
> ಸಿಟಿ’ಎಂದು ಕರೆಯುವಂತೆ ಮಾಡಿದ್ದೇನೆ. ಇಂಥದೊಂದು ಅಪರೂಪದ ಬದಲಾವಣೆ ತಂದ ಹೆಮ್ಮೆ ನನಗಿದೆ…
>
> ಈಗ ಏನಾಗಿದೆ ಗೊತ್ತೆ? : ಪಾಟ್ನಾದ ಆ ಹಳ್ಳಿಹೈದನ ಯಶೋಗಾಥೆ ದೇಶದ ಗಡಿದಾಟಿ ಅಮೆರಿಕ ತಲುಪಿ
> ಅಲ್ಲೂ ಸುದ್ದಿಯಾಗಿದೆ. ಜಗತ್ತಿನ ಅತ್ಯುತ್ತಮ ಕೋಚಿಂಗ್ ತರಗತಿಗಳ ಪೈಕಿ ಆನಂದಕುಮಾರ್‌ನ
> ಸೂಪರ್-30 ಶಾಲೆಯೂ ಸ್ಥಾನ ಪಡೆದುಕೊಂಡಿದೆ. ಅದನ್ನು ಭಾರತದ ಅತ್ಯುತ್ತಮ ಕೋಚಿಂಗ್ ಕ್ಲಾಸ್
> ಎಂದೇ ಬಣ್ಣಿಸಲಾಗಿದೆ. ಈ ಅಪರೂಪದ ಸಾಧನೆಗೆ ಅಮೆರಿಕ ಸರಕಾರ ಒಂದು ವಿಶೇಷ ಪ್ರಶಸ್ತಿಯನ್ನೂ
> ನೀಡಿದೆ. ಒಬಾಮಾ ಅವರ ವಿಶೇಷ ಕಾರ್ಯದರ್ಶಿ ರಶೀದ್ ಹುಸೇನ್, ಈ ಪ್ರಶಸ್ತಿಯನ್ನು
> ಆನಂದಕುಮಾರ್‌ಗೆ ತಲುಪಿಸಿ ಬೆನ್ನುತಟ್ಟಿದ್ದಾರೆ. ಕೈ ಮುಗಿದಿದ್ದಾರೆ. ಆ ಮಹಾರಾಯ ಒಬಾಮಾ
> ಅಷ್ಟಕ್ಕೇ ಸುಮ್ಮನಾಗಿಲ್ಲ. ಅಮೆರಿಕಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಇದೇ
> ಸಂದರ್ಭದಲ್ಲಿ ಗಣಿತದ ಹಲವು ಸಮಸ್ಯೆಗಳ ಬಗ್ಗೆ ವಿಶೇಷ ಉಪನ್ಯಾಸ ನೀಡುವಂತೆ ಅಮೆರಿಕದ
> ವಿಶ್ವವಿದ್ಯಾಲಯಗಳೂ ಆನಂದಕುಮಾರ್ ಅವರಿಗೆ ಆಹ್ವಾನ ನೀಡಿವೆ. ಅಮೆರಿಕದಲ್ಲಿ ಗಣಿತದ ಅಭ್ಯಾಸ
> ಮಾಡಬೇಕು ಎಂದುಕೊಂಡಿದ್ದ ಹುಡುಗ, ಇವತ್ತು ಅಲ್ಲಿನ ಅಧ್ಯಾಪಕರುಗಳಿಗೇ ಉಪನ್ಯಾಸ ನೀಡುವ ಮಟ್ಟ
> ತಲುಪಿಕೊಂಡಿದ್ದಾನೆ, ಕೇವಲ ಸ್ವಸಾಮರ್ಥ್ಯದಿಂದ!
>
> ಇಂದು ಆನಂದನಿಂದಾಗಿ ಬಡಮಕ್ಕಳು ಉನ್ನತ ಹುದ್ದೆಗೇರುವಂತಾಗಿದೆ. ಗಣಿತ ಸುಲಿದ
> ಬಾಳೆಹಣ್ಣಿನಂತಾಗಿದೆ. ಜನಸೇವೆ ಮಾಡಲು ರಾಜಕೀಯವೇ ಬೇಕಾಗಿಲ್ಲ. ದುರ್ದೈವವೆಂದರೆ ಜನ ಸೇವೆಯ
> ಹೆಸರಿನಲ್ಲಿ ರಾಜಕೀಯಕ್ಕೆ ಬರುವವರು ಟ್ಯೂಶನ್ ಹೇಳಿಸಿ ಕೊಂಡೂ ಎಲ್ಲಾ ವಿಷಯಗಳಲ್ಲೂ
> ಫೇಲಾದವರೇ. ಇರಲಿ ಬಿಡಿ. ಆನಂದನಂಥವರು ಸ್ಫೂರ್ತಿಯ ಚಿಲುಮೆಯಾಗುತ್ತಾರೆ
>
> By..whats app gps
>
> --
> 1. If a teacher wants to join STF, visit
> http://karnatakaeducation.org.in/KOER/en/index.php/Become_a_STF_groups_member
> 2. For STF training, visit KOER -
> http://karnatakaeducation.org.in/KOER/en/index.php
> 4. For Ubuntu 14.04 installation, visit
> http://karnatakaeducation.org.in/KOER/en/index.php/Kalpavriksha
> 4. For doubts on Ubuntu, public software, visit
> http://karnatakaeducation.org.in/KOER/en/index.php/Frequently_Asked_Questions
> 5. Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Why_public_software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
> Visit this group at https://groups.google.com/group/mathssciencestf.
> For more options, visit https://groups.google.com/d/optout.
>

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to