Nice article sir
On Jun 13, 2016 11:07 PM, "Harsha" <hardeepmys...@gmail.com> wrote:

> ಸಿಂಪಲ್ಲಾಗಿ  ಕಲಿಯೋಣ ಬನ್ನಿ …
>
> ಕರಣಿಗಳು (Surds)
>
> ಹೆದರಿಸೋಕೆ ಅಂತಾನೇ ಹುಟ್ಟಿರೋ ವಿಷಯಗಳಲ್ಲಿ ಗಣಿತದ ಸ್ಥಾನ ಮೊದಲು ಎಂದು ಸಾಮಾನ್ಯರ
> ಬಾಯಲ್ಲಿ ಬರೋ ಮಾತು ತಪ್ಪಿಲ್ಲ ಅನ್ಸತ್ತೆ. ಯಾಕಂದ್ರೆ ಈ ಗಣಿತ ಕಲಿಯೋರಿಗೆ ಮಾತ್ರವಲ್ಲದೇ,
> ಬೋಧಿಸೋರಿಗೂ ಕಾಟ ಕೊಡೊ ಜಾಯಮಾನಕ್ಕೆ ಸೇರಿದ್ದು ಅನ್ನೋದು ಎಷ್ಟೋ ಶಿಕ್ಷಕರ ಆಂಬೋಣ.
> ಸಾಮಾನ್ಯವಾಗಿ ಸೆಕೆಂಡರಿ ಹಂತದಲ್ಲಿ ಬೋಧಿಸೋ ನಾವೆಲ್ಲಾ ಮೊಟ್ಟ ಮೊದಲು ಮಾಡೋ ಕೆಲಸವೆಂದರೆ,
> ಕ್ಲಿಷ್ಟವಾದ ಪಾಠ ಯಾವುದು…?, ಸುಲಭವಾದ ಪಾಠ ಯಾವುದು…? ಅಂತಾ ವಿಂಗಡನೆ ಮಾಡೋದು. ಹಾಗೆ
> ವಿಂಗಡಿಸಿದಾಗ ಸುಲಭದ ಸಾಲಿನಲ್ಲಿ ಮೊದಲು ನಿಲ್ಲೋದು ಗಣಗಳು, ಕರಣಿಗಳು, ಪ್ರಾಯೋಗಿಕ
> ರಚನೆಗಳು,… ಇತ್ಯಾದಿ.
>
> ಹಾಗಿದ್ರೆ ನಿಜವಾಗ್ಲೂ ಈ ಪಾಠಗಳು ಸುಲಭವೇ…?
>
> ಹೌದು…. ಅನ್ನೋದಾದರೆ…
>
> ಅದು ಕೇವಲ ವಿದ್ಯಾರ್ಥಿಗಳನ್ನು ದೃಷ್ಟಿಯಲ್ಲಿಟ್ಟು ಮಾತ್ರವೇ ನೋಡಿದಾಗ… ಏಕಂದ್ರೆ
> ಮಾರ್ಕ್ಸ್ ತೆಗ್ಸೋದ್ ಮಾತ್ರ ಅಲ್ಲವೇ ನಮ್ಮ ಗುರಿ… ಹೇಳ್ಕೋಳೋಕೆ ಬೇಸರ ಅನ್ಸತ್ತೆ.
>
> ನಿಜವಾಗಲೂ ಈ ಪಾಠಗಳು ಸುಲಭವೇ ಇರಬಹುದು…! ಆದರೆ, ಪಾಠಗಳು ಪ್ರಾರಂಭವಾಗುತ್ತಿದ್ದಂತೆ
> ಎದ್ದೇಳೋ ಆ ಪರಿಕಲ್ಪನೆಗಳ ವ್ಯಾಖ್ಯಾನಗಳ ವಿವರಣೆ?
>
> ಕೇವಲ ಅರ್ಧ ಸಾಲಿಗಿಂತ ಕಡಿಮೆಯಷ್ಟು ವ್ಯಾಖ್ಯಾನವನ್ನು ಹೊಂದಿರೋ ಕರಣಿ ಎಂಬ
> ಪರಿಕಲ್ಪನೆಯನ್ನೇ ತೆಗೆದುಕೊಳ್ಳಿ.
>
> “ಭಾಗಲಬ್ಧ ಸಂಖ್ಯೆಯ ಅಭಾಗಲಬ್ಧ ಮೂಲವೇ ಕರಣಿ”
> ಉದಾ : √2, √3, …
>
> ಯಾರೇ ಯಾವ ವಿದ್ಯಾರ್ಥಿಯನ್ನು ಕರಣಿಯ ವ್ಯಾಖ್ಯಾನವನ್ನು ಕೇಳಿದರೂ ಸುಲಭವಾಗಿ
> ಉತ್ತರಿಸುತ್ತಾನೆ.
>
> ಆದರೆ ಈ ಪರಿಕಲ್ಪನೆಯನ್ನು ಅರ್ಥೈಸುವಿಕೆಯ ಬಗ್ಗೆ ಚರ್ಚಿಸುವುದಾದರೇ, ಇದರ ವಿವರಣೆನ್ನು
> ನೀಡುವುದು ಹಾಗು ಅರ್ಥೈಸುವುದು ಅಷ್ಟು ಸುಲಭವಿಲ್ಲ ಎಂಬುದನ್ನು ಅದಕ್ಕಾಗಿ ಪರಿಶ್ರಮಿಸುವ
> ಶಿಕ್ಷಕರು ಅರಿತಿದ್ದಾರೆ.
>
> ಹಾಗದರೇ ಈ ವ್ಯಾಖ್ಯಾನದಲ್ಲಿ ಅಂತಹ ಕಠಿಣತೆ ಏನಿದೆ?
>
> ಒಳಹೊಕ್ಕಿದರೆ ಮಾತ್ರ ಅರಿವಿಗೆ ಬರಬಹುದು. ವಿಶ್ಲೇಷಿಸಿ ನೋಡೋಣ…
>
> ಯಾವುದೇ ಒಂದು ಸಂಖ್ಯೆನಾ ದಶಮಾಂಶ ರೂಪದಲ್ಲಿ ( ಪಾಯಿಂಟ್ ಹಾಕಿ ಬರೆಯೋ ಸಂಖ್ಯೆ) ಬರೆದಾಗ,
> ಪಾಯಿಂಟ್ ಆದ್ಮೇಲೆ ಎಣಿಸೊಕಾಗೋವಷ್ಟು ಅಂಕಿಗಳು (ಅಂದ್ರೆ ಅಂತ್ಯ ಆಗಿರ ಬೇಕು) ಇದ್ರೆ ಅದು
> ಭಾಗಲಬ್ಧ ಸಂಖ್ಯೆ ಆಗುತ್ತೆ.
> ಉದಾ: 2, 3, 4, 5, 3.25, 7.48, 5.5554, …
>
> ಇಂತಹ ಭಾಗಲಬ್ಧ ಸಂಖ್ಯೆಗಳಿಗೆ ಯಾವುದೇ ಮೂಲವನ್ನು(ವರ್ಗಮೂಲ, ಘನಮೂಲ,…)ಹಾಕಿದಾಗ, ಅದರಿಂದ
> ಬರುವ ಉತ್ತರವು ಅಥವಾ ಬೆಲೆಯು ಅಭಾಗಲಬ್ಧವಾಗಿರುತ್ತದೆ.
>
> ಸರಳಿಕರಿಸೋಣ ಬನ್ನಿ…
>
> 2 ಎನ್ನುವುದು ನಮಗೆ ತಿಳಿದಂತೆ ಭಾಗಲಬ್ಧ ಸಂಖ್ಯೆ ಆಗಿದೆ. ಇದಕ್ಕೆ ಈಗ ವರ್ಗಮೂಲವನ್ನು
> ಹಾಕೋಣ… ಆಗ
> √2 = 1.41421356…..
> ಇಲ್ಲಿ ಗಮನಿಸಿದಾಗ ಭಾಗಲಬ್ಧವಾಗಿದ್ದ (rational) 2 ಎಂಬ ಸಂಖ್ಯೆಯು, ಅದಕ್ಕೆ
> ವರ್ಗಮೂಲವನ್ನು ಹಾಕಿದಾಗ ಅಭಾಗಲಬ್ಧ (irrational) ಆಗಿ ಹೋಗಿದೆ. ಅಂದರೆ ಅಂತ್ಯವನ್ನು
> (finite) ಹೊಂದಿದ್ದ ಸಂಖ್ಯೆಯು ಈಗ ಅನಂತವಾಗಿದೆ (infinite).
>
> ಆದ್ದರಿಂದ √2 ಅಭಾಗಲಬ್ಧ ಸಂಖ್ಯೆಯಾಗಿದೆ
>
> ಇಷ್ಟೇ ಇದರ ಒಳಾರ್ಥ…
>
> ಹಾಗೇ ಮುಂದುವರೆದು ಹೋಗಿ, ಕರಣಿಗಳಿಗೆ ಉದಾಹರಣೆ ನೀಡುವಾಗ , √2, √3, √5, √6, … ಎಂದು
> ನೀಡುತ್ತೇವೆ.
>
> ಇಲ್ಲೂ ಗಮನ ಹರಿಸಿ ವಿದ್ಯಾರ್ಥಿಗಳಿಗೆ ಸೂಕ್ಷ್ಮತೆಯನ್ನು ತಿಳಿಸೋಣ.
>
> ಕರಣಿಗಳಿಗೆ ಉದಾಹರಿಸುವಾಗ ನಾವು √4 ನ್ನು ನೀಡಿಲ್ಲ.
> ಏಕೆಂದು ಸ್ವಲ್ಪ ಯೋಚಿಸಿ ನೋಡಿ…!
> 4 ಎಂಬುದು ನಮಗೆ ತಿಳಿದಂತೆ ಭಾಗಲಬ್ಧ ಸಂಖ್ಯೆ ಆಗಿದೆ. ಇದಕ್ಕೆ ಈಗ ವರ್ಗಮೂಲವನ್ನು ಹಾಕೋಣ…
> ಆಗ
>
> √4 = 2 ದೊರೆಯುತ್ತದೆ.
>
> ಇಲ್ಲಿ ಗಮನಿಸಿದಾಗ ಭಾಗಲಬ್ಧವಾಗಿದ್ದ 4 ಎಂಬ ಸಂಖ್ಯೆಯು, ಅದಕ್ಕೆ ವರ್ಗಮೂಲವನ್ನು ಹಾಕಿದ
> ನಂತರವೂ ಭಾಗಲಬ್ಧ ಸಂಖ್ಯೆಯೇ ಆಗಿ ಉಳಿದಿದೆ. ಅಂದರೆ ಅಂತ್ಯವನ್ನು (finite) ಹೊಂದಿದ್ದ
> ಸಂಖ್ಯೆಯು ವರ್ಗಮೂಲದ ಪ್ರಯೋಗದ ನಂತರವೂ ಅಂತ್ಯವಾಗಿಯೇ (finite) ಉಳಿದಿದೆ.
>
> √2 = 1.41421356…..  -  ಕರಣಿ
> √4 = 2 -  ಅಕರಣಿ
>
> ಇಷ್ಟು ಸಣ್ಣ ವ್ಯಾಖ್ಯೆಯಲ್ಲಿ ಇಷ್ಟೊಂದು ಅಗಾಧ ಅರ್ಥವಡಗಿದೆ ಎಂದಾಗ, ತಿಳಿಯುತ್ತದಲ್ಲವೇ
> ನಮ್ಮ ವಿಷಯ ಗಣಿತದ ಮಹತ್ವ.
>
>
>
>
> PROUD TO BE A MATHEMATICS TEACHER
>
>
> ಎಸ್. ಹರ್ಷ
> ಎಂ.ಎಸ್ಸಿ., ಎಂ.ಎಡ್.,ಎಂ.ಫಿಲ್.,
> ಸಹ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಹೆಡತಲೆ,
> ನಂಜನಗೂಡು ತಾ., ಮೈಸೂರು
> ದೂ.ಸಂ. 9972261802
>
> Sent from my iPhone
>
> --
> 1. If a teacher wants to join STF, visit
> http://karnatakaeducation.org.in/KOER/en/index.php/Become_a_STF_groups_member
> 2. For STF training, visit KOER -
> http://karnatakaeducation.org.in/KOER/en/index.php
> 4. For Ubuntu 14.04 installation,    visit
> http://karnatakaeducation.org.in/KOER/en/index.php/Kalpavriksha
> 4. For doubts on Ubuntu, public software, visit
> http://karnatakaeducation.org.in/KOER/en/index.php/Frequently_Asked_Questions
> 5. Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Why_public_software
> ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send an email to mathssciencestf@googlegroups.com.
> Visit this group at https://groups.google.com/group/mathssciencestf.
> For more options, visit https://groups.google.com/d/optout.
>

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to