NICE THANK YOU

2016-06-14 14:51 GMT+05:30 DEEPASRI HG <hgdeepa...@gmail.com>:

> Nice article sir
> On Jun 13, 2016 11:07 PM, "Harsha" <hardeepmys...@gmail.com> wrote:
>
>> ಸಿಂಪಲ್ಲಾಗಿ  ಕಲಿಯೋಣ ಬನ್ನಿ …
>>
>> ಕರಣಿಗಳು (Surds)
>>
>> ಹೆದರಿಸೋಕೆ ಅಂತಾನೇ ಹುಟ್ಟಿರೋ ವಿಷಯಗಳಲ್ಲಿ ಗಣಿತದ ಸ್ಥಾನ ಮೊದಲು ಎಂದು ಸಾಮಾನ್ಯರ
>> ಬಾಯಲ್ಲಿ ಬರೋ ಮಾತು ತಪ್ಪಿಲ್ಲ ಅನ್ಸತ್ತೆ. ಯಾಕಂದ್ರೆ ಈ ಗಣಿತ ಕಲಿಯೋರಿಗೆ ಮಾತ್ರವಲ್ಲದೇ,
>> ಬೋಧಿಸೋರಿಗೂ ಕಾಟ ಕೊಡೊ ಜಾಯಮಾನಕ್ಕೆ ಸೇರಿದ್ದು ಅನ್ನೋದು ಎಷ್ಟೋ ಶಿಕ್ಷಕರ ಆಂಬೋಣ.
>> ಸಾಮಾನ್ಯವಾಗಿ ಸೆಕೆಂಡರಿ ಹಂತದಲ್ಲಿ ಬೋಧಿಸೋ ನಾವೆಲ್ಲಾ ಮೊಟ್ಟ ಮೊದಲು ಮಾಡೋ
>> ಕೆಲಸವೆಂದರೆ, ಕ್ಲಿಷ್ಟವಾದ ಪಾಠ ಯಾವುದು…?, ಸುಲಭವಾದ ಪಾಠ ಯಾವುದು…? ಅಂತಾ ವಿಂಗಡನೆ
>> ಮಾಡೋದು. ಹಾಗೆ ವಿಂಗಡಿಸಿದಾಗ ಸುಲಭದ ಸಾಲಿನಲ್ಲಿ ಮೊದಲು ನಿಲ್ಲೋದು ಗಣಗಳು, ಕರಣಿಗಳು,
>> ಪ್ರಾಯೋಗಿಕ ರಚನೆಗಳು,… ಇತ್ಯಾದಿ.
>>
>> ಹಾಗಿದ್ರೆ ನಿಜವಾಗ್ಲೂ ಈ ಪಾಠಗಳು ಸುಲಭವೇ…?
>>
>> ಹೌದು…. ಅನ್ನೋದಾದರೆ…
>>
>> ಅದು ಕೇವಲ ವಿದ್ಯಾರ್ಥಿಗಳನ್ನು ದೃಷ್ಟಿಯಲ್ಲಿಟ್ಟು ಮಾತ್ರವೇ ನೋಡಿದಾಗ… ಏಕಂದ್ರೆ
>> ಮಾರ್ಕ್ಸ್ ತೆಗ್ಸೋದ್ ಮಾತ್ರ ಅಲ್ಲವೇ ನಮ್ಮ ಗುರಿ… ಹೇಳ್ಕೋಳೋಕೆ ಬೇಸರ ಅನ್ಸತ್ತೆ.
>>
>> ನಿಜವಾಗಲೂ ಈ ಪಾಠಗಳು ಸುಲಭವೇ ಇರಬಹುದು…! ಆದರೆ, ಪಾಠಗಳು ಪ್ರಾರಂಭವಾಗುತ್ತಿದ್ದಂತೆ
>> ಎದ್ದೇಳೋ ಆ ಪರಿಕಲ್ಪನೆಗಳ ವ್ಯಾಖ್ಯಾನಗಳ ವಿವರಣೆ?
>>
>> ಕೇವಲ ಅರ್ಧ ಸಾಲಿಗಿಂತ ಕಡಿಮೆಯಷ್ಟು ವ್ಯಾಖ್ಯಾನವನ್ನು ಹೊಂದಿರೋ ಕರಣಿ ಎಂಬ
>> ಪರಿಕಲ್ಪನೆಯನ್ನೇ ತೆಗೆದುಕೊಳ್ಳಿ.
>>
>> “ಭಾಗಲಬ್ಧ ಸಂಖ್ಯೆಯ ಅಭಾಗಲಬ್ಧ ಮೂಲವೇ ಕರಣಿ”
>> ಉದಾ : √2, √3, …
>>
>> ಯಾರೇ ಯಾವ ವಿದ್ಯಾರ್ಥಿಯನ್ನು ಕರಣಿಯ ವ್ಯಾಖ್ಯಾನವನ್ನು ಕೇಳಿದರೂ ಸುಲಭವಾಗಿ
>> ಉತ್ತರಿಸುತ್ತಾನೆ.
>>
>> ಆದರೆ ಈ ಪರಿಕಲ್ಪನೆಯನ್ನು ಅರ್ಥೈಸುವಿಕೆಯ ಬಗ್ಗೆ ಚರ್ಚಿಸುವುದಾದರೇ, ಇದರ ವಿವರಣೆನ್ನು
>> ನೀಡುವುದು ಹಾಗು ಅರ್ಥೈಸುವುದು ಅಷ್ಟು ಸುಲಭವಿಲ್ಲ ಎಂಬುದನ್ನು ಅದಕ್ಕಾಗಿ ಪರಿಶ್ರಮಿಸುವ
>> ಶಿಕ್ಷಕರು ಅರಿತಿದ್ದಾರೆ.
>>
>> ಹಾಗದರೇ ಈ ವ್ಯಾಖ್ಯಾನದಲ್ಲಿ ಅಂತಹ ಕಠಿಣತೆ ಏನಿದೆ?
>>
>> ಒಳಹೊಕ್ಕಿದರೆ ಮಾತ್ರ ಅರಿವಿಗೆ ಬರಬಹುದು. ವಿಶ್ಲೇಷಿಸಿ ನೋಡೋಣ…
>>
>> ಯಾವುದೇ ಒಂದು ಸಂಖ್ಯೆನಾ ದಶಮಾಂಶ ರೂಪದಲ್ಲಿ ( ಪಾಯಿಂಟ್ ಹಾಕಿ ಬರೆಯೋ ಸಂಖ್ಯೆ) ಬರೆದಾಗ,
>> ಪಾಯಿಂಟ್ ಆದ್ಮೇಲೆ ಎಣಿಸೊಕಾಗೋವಷ್ಟು ಅಂಕಿಗಳು (ಅಂದ್ರೆ ಅಂತ್ಯ ಆಗಿರ ಬೇಕು) ಇದ್ರೆ ಅದು
>> ಭಾಗಲಬ್ಧ ಸಂಖ್ಯೆ ಆಗುತ್ತೆ.
>> ಉದಾ: 2, 3, 4, 5, 3.25, 7.48, 5.5554, …
>>
>> ಇಂತಹ ಭಾಗಲಬ್ಧ ಸಂಖ್ಯೆಗಳಿಗೆ ಯಾವುದೇ ಮೂಲವನ್ನು(ವರ್ಗಮೂಲ, ಘನಮೂಲ,…)ಹಾಕಿದಾಗ, ಅದರಿಂದ
>> ಬರುವ ಉತ್ತರವು ಅಥವಾ ಬೆಲೆಯು ಅಭಾಗಲಬ್ಧವಾಗಿರುತ್ತದೆ.
>>
>> ಸರಳಿಕರಿಸೋಣ ಬನ್ನಿ…
>>
>> 2 ಎನ್ನುವುದು ನಮಗೆ ತಿಳಿದಂತೆ ಭಾಗಲಬ್ಧ ಸಂಖ್ಯೆ ಆಗಿದೆ. ಇದಕ್ಕೆ ಈಗ ವರ್ಗಮೂಲವನ್ನು
>> ಹಾಕೋಣ… ಆಗ
>> √2 = 1.41421356…..
>> ಇಲ್ಲಿ ಗಮನಿಸಿದಾಗ ಭಾಗಲಬ್ಧವಾಗಿದ್ದ (rational) 2 ಎಂಬ ಸಂಖ್ಯೆಯು, ಅದಕ್ಕೆ
>> ವರ್ಗಮೂಲವನ್ನು ಹಾಕಿದಾಗ ಅಭಾಗಲಬ್ಧ (irrational) ಆಗಿ ಹೋಗಿದೆ. ಅಂದರೆ ಅಂತ್ಯವನ್ನು
>> (finite) ಹೊಂದಿದ್ದ ಸಂಖ್ಯೆಯು ಈಗ ಅನಂತವಾಗಿದೆ (infinite).
>>
>> ಆದ್ದರಿಂದ √2 ಅಭಾಗಲಬ್ಧ ಸಂಖ್ಯೆಯಾಗಿದೆ
>>
>> ಇಷ್ಟೇ ಇದರ ಒಳಾರ್ಥ…
>>
>> ಹಾಗೇ ಮುಂದುವರೆದು ಹೋಗಿ, ಕರಣಿಗಳಿಗೆ ಉದಾಹರಣೆ ನೀಡುವಾಗ , √2, √3, √5, √6, … ಎಂದು
>> ನೀಡುತ್ತೇವೆ.
>>
>> ಇಲ್ಲೂ ಗಮನ ಹರಿಸಿ ವಿದ್ಯಾರ್ಥಿಗಳಿಗೆ ಸೂಕ್ಷ್ಮತೆಯನ್ನು ತಿಳಿಸೋಣ.
>>
>> ಕರಣಿಗಳಿಗೆ ಉದಾಹರಿಸುವಾಗ ನಾವು √4 ನ್ನು ನೀಡಿಲ್ಲ.
>> ಏಕೆಂದು ಸ್ವಲ್ಪ ಯೋಚಿಸಿ ನೋಡಿ…!
>> 4 ಎಂಬುದು ನಮಗೆ ತಿಳಿದಂತೆ ಭಾಗಲಬ್ಧ ಸಂಖ್ಯೆ ಆಗಿದೆ. ಇದಕ್ಕೆ ಈಗ ವರ್ಗಮೂಲವನ್ನು
>> ಹಾಕೋಣ… ಆಗ
>>
>> √4 = 2 ದೊರೆಯುತ್ತದೆ.
>>
>> ಇಲ್ಲಿ ಗಮನಿಸಿದಾಗ ಭಾಗಲಬ್ಧವಾಗಿದ್ದ 4 ಎಂಬ ಸಂಖ್ಯೆಯು, ಅದಕ್ಕೆ ವರ್ಗಮೂಲವನ್ನು ಹಾಕಿದ
>> ನಂತರವೂ ಭಾಗಲಬ್ಧ ಸಂಖ್ಯೆಯೇ ಆಗಿ ಉಳಿದಿದೆ. ಅಂದರೆ ಅಂತ್ಯವನ್ನು (finite) ಹೊಂದಿದ್ದ
>> ಸಂಖ್ಯೆಯು ವರ್ಗಮೂಲದ ಪ್ರಯೋಗದ ನಂತರವೂ ಅಂತ್ಯವಾಗಿಯೇ (finite) ಉಳಿದಿದೆ.
>>
>> √2 = 1.41421356…..  -  ಕರಣಿ
>> √4 = 2 -  ಅಕರಣಿ
>>
>> ಇಷ್ಟು ಸಣ್ಣ ವ್ಯಾಖ್ಯೆಯಲ್ಲಿ ಇಷ್ಟೊಂದು ಅಗಾಧ ಅರ್ಥವಡಗಿದೆ ಎಂದಾಗ, ತಿಳಿಯುತ್ತದಲ್ಲವೇ
>> ನಮ್ಮ ವಿಷಯ ಗಣಿತದ ಮಹತ್ವ.
>>
>>
>>
>>
>> PROUD TO BE A MATHEMATICS TEACHER
>>
>>
>> ಎಸ್. ಹರ್ಷ
>> ಎಂ.ಎಸ್ಸಿ., ಎಂ.ಎಡ್.,ಎಂ.ಫಿಲ್.,
>> ಸಹ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಹೆಡತಲೆ,
>> ನಂಜನಗೂಡು ತಾ., ಮೈಸೂರು
>> ದೂ.ಸಂ. 9972261802
>>
>> Sent from my iPhone
>>
>> --
>> 1. If a teacher wants to join STF, visit
>> http://karnatakaeducation.org.in/KOER/en/index.php/Become_a_STF_groups_member
>> 2. For STF training, visit KOER -
>> http://karnatakaeducation.org.in/KOER/en/index.php
>> 4. For Ubuntu 14.04 installation,    visit
>> http://karnatakaeducation.org.in/KOER/en/index.php/Kalpavriksha
>> 4. For doubts on Ubuntu, public software, visit
>> http://karnatakaeducation.org.in/KOER/en/index.php/Frequently_Asked_Questions
>> 5. Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Why_public_software
>> ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
>> ---
>> You received this message because you are subscribed to the Google Groups
>> "Maths & Science STF" group.
>> To unsubscribe from this group and stop receiving emails from it, send an
>> email to mathssciencestf+unsubscr...@googlegroups.com.
>> To post to this group, send an email to mathssciencestf@googlegroups.com.
>> Visit this group at https://groups.google.com/group/mathssciencestf.
>> For more options, visit https://groups.google.com/d/optout.
>>
> --
> 1. If a teacher wants to join STF, visit
> http://karnatakaeducation.org.in/KOER/en/index.php/Become_a_STF_groups_member
> 2. For STF training, visit KOER -
> http://karnatakaeducation.org.in/KOER/en/index.php
> 4. For Ubuntu 14.04 installation, visit
> http://karnatakaeducation.org.in/KOER/en/index.php/Kalpavriksha
> 4. For doubts on Ubuntu, public software, visit
> http://karnatakaeducation.org.in/KOER/en/index.php/Frequently_Asked_Questions
> 5. Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Why_public_software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
>
> Visit this group at https://groups.google.com/group/mathssciencestf.
> For more options, visit https://groups.google.com/d/optout.
>



-- 
*NAGARAJ BAGUNAVAR *
GOVT HIGH SCHOOL
IBRAHIMPUR
Tq; Navalgund
Dt; Dharwad
*M No; 99862 93052*

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to