ಬಹಳ ಚೆನ್ನಾಗಿದೆ
On Jun 18, 2016 7:31 AM, "HAREESHKUMAR K Agasanapura" <harihusk...@gmail.com>
wrote:

> http://www.ejnana.com/2016/06/blog-post_16.html?m=1
>
> *ಹೀಗೊಂದು ಗಣಿತದ ಕತೆ: ಶಿಷ್ಯರ ಬುದ್ಧಿವಂತಿಕೆ*
>
> *ರೋಹಿತ್ ಚಕ್ರತೀರ್ಥ*
>
>
> <https://1.bp.blogspot.com/-B0kTdxobkAw/V1xPT2ZXITI/AAAAAAAAe90/wWyp569U24MYojG73jzuWkxkxFR91ZQQgCLcB/s1600/blackboard_318-117887.jpg>
>
> ಛಲ ಬಿಡದ ತ್ರಿವಿಕ್ರಮನು, ಮತ್ತೆ, ಆ ಹಳೇ ಮರದ ಕೊಂಬೆಗೆ ಹಾರಿಹೋಗಿ ತಲೆಕೆಳಗಾಗಿ
> ನೇತುಬಿದ್ದಿದ್ದ ಬೇತಾಳವನ್ನು ಇಳಿಸಿ ಬೆನ್ನಿಗೆ ಹಾಕಿಕೊಂಡು ಕಾಡಿನ ದಾರಿಯಲ್ಲಿ
> ನಡೆಯತೊಡಗಿದನು. ಆಗ ಬೇತಾಳವು, "ರಾಜಾ, ಮರಳಿ ಯತ್ನವ ಮಾಡು ಎಂಬ ಮಾತಿನಲ್ಲಿ ನೂರಕ್ಕೆ
> ನೂರರಷ್ಟು ನಂಬಿಕೆ ಇಟ್ಟು ದೃಢ ಮನಸ್ಸಿನಿಂದ ಕೆಲಸ ಮಾಡುತ್ತಿರುವ ನಿನ್ನ ಅವಸ್ಥೆಯನ್ನು
> ಕಂಡಾಗ ಮೆಚ್ಚುಗೆಯೂ ಕನಿಕರವೂ ಒಟ್ಟಿಗೇ ಮೂಡುತ್ತವೆ. ಒಂದೇ ಕೆಲಸವನ್ನು ಮತ್ತೆಮತ್ತೆ ಮಾಡುವ
> ಸಂದರ್ಭ ಬಂದಾಗ, ಅದನ್ನು ಸರಳಗೊಳಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆಯಾದರೂ ನೀನು
> ಯೋಚಿಸುವುದು ಬೇಡವೇ? ಅದಕ್ಕೆ ತಕ್ಕ ಹಾಗೆ ಒಂದು ಕತೆ ನನಗೆ ನೆನಪಾಗುತ್ತಿದೆ. ಗಮನವಿಟ್ಟು
> ಕೇಳು" ಎಂದು ತನ್ನ ಕತೆಯ ಬುಟ್ಟಿ ಬಿಚ್ಚಿತು.
>
> ಅದು ಮೂರನೇ ತರಗತಿ. ಕ್ಲಾಸಿನೊಳಗೆ ಬಂದ ಮೇಸ್ಟ್ರಿಗೆ ಅಂದೇಕೋ ಮಹಾಜಾಡ್ಯ ಆವರಿಸಿದಂತಿದೆ.
> ಈ ಮಕ್ಕಳಿಗೆ ಸುಲಭಕ್ಕೆ ಬಿಡಿಸಲಾಗದ ಲೆಕ್ಕ ಕೊಟ್ಟು ಅರ್ಧ-ಮುಕ್ಕಾಲು ಗಂಟೆ
> ಒದ್ದಾಡಿಸಿಬಿಟ್ಟರೆ ತನ್ನ ಪೀರಿಯಡ್ಡು ಮುಗಿಯುತ್ತದೆ ಎಂಬ ಹಂಚಿಕೆ ಹಾಕಿದವರೇ "ಒಂದರಿಂದ
> ನೂರರವರೆಗಿನ ಎಲ್ಲ ಸಂಖ್ಯೆಗಳ ಮೊತ್ತ ಎಷ್ಟು ಹುಡುಕಿ ನೋಡುವಾ" ಎಂದು ಸವಾಲು ಹಾಕಿ
> ಕುರ್ಚಿಯಲ್ಲಿ ಸುಖಾಸೀನರಾಗಿದ್ದಾರೆ. ಮೇಸ್ಟ್ರು ಕಾಲ ಅಂಗುಷ್ಠದಲ್ಲಿ ಹೇಳಿದ್ದನ್ನು
> ಭಕ್ತಿಯಿಂದ ಶಿರಸಾವಹಿಸಿ ಮಾಡುವ ಮಕ್ಕಳು ಕೂಡಲೇ ಹಲಗೆ ಬಳಪ ಎತ್ತಿಕೊಳ್ಳುತ್ತಾರೆ. ತಮ್ಮ
> ಶಕ್ತ್ಯಾನುಸಾರ ಪ್ರಶ್ನೆಯ ಚಕ್ರವ್ಯೂಹವನ್ನು ಭೇದಿಸಲು ಸನ್ನದ್ಧರಾಗುತ್ತಾರೆ.
>
> ಮೊದಲನೆಯದಾಗಿ ಇವರಲ್ಲಿ ನಾರಾಯಣ ಏನು ಮಾಡಿದ ನೋಡುವಾ. ಕ್ಲಾಸಿನ ಹುಡುಗರಲ್ಲೇ ಮಹಾಶಿಸ್ತಿನ
> ಹುಡುಗ, ಪ್ರಾಮಾಣಿಕ ಮತ್ತು ಭೋಳೆ ಎಂದು ಶಿಕ್ಷಕರಿಂದ ಏಕಪ್ರಕಾರವಾಗಿ ಹೊಗಳಿಸಿಕೊಂಡ ಈ
> ಹುಡುಗ ಸ್ಲೇಟು ಎತ್ತಿಕೊಂಡು ತನ್ನ ಮಹಾಕಾವ್ಯಕ್ಕೆ ಶುರುವಿಟ್ಟುಕೊಳ್ಳುತ್ತಾನೆ. ಗಣಿತದಲ್ಲಿ
> ಯಾವುದೇ ಪ್ರಶ್ನೆಯನ್ನು ಪರಿಹರಿಸಬೇಕಾದರೂ ಮೊದಲು ದತ್ತ ಎಂದು ಬರೆದು ಪ್ರಶ್ನೆಯಲ್ಲಿ ಏನು
> ಮಾಹಿತಿ ಕೊಟ್ಟಿದ್ದಾರೋ ಅದನ್ನು ಬರೆದುಕೊಳ್ಳಬೇಕು. ಇಲ್ಲಿ ದತ್ತ ಏನು? ಒಂದರಿಂದ ನೂರು
> ಅಲ್ಲವೇ? ಹಾಗಾಗಿ ಆ ಅಷ್ಟೂ ಸಂಖ್ಯೆಗಳನ್ನು ಬರೆದುಕೊಳ್ಳುವುದು ತನ್ನ ಮೊದಲ ಕೆಲಸ ಎಂದು
> ಬಗೆದು ಗುದ್ದಲಿಪೂಜೆ ಮಾಡಿ ಕೆಲಸ ಶುರು ಮಾಡುತ್ತಾನೆ. ಅಷ್ಟನ್ನು ಬರೆದುಕೊಂಡ ಮೇಲೆ
> ಅವುಗಳನ್ನು ಒಂದೊಂದಾಗಿ ಕೂಡಿಸಬೇಕು. ಇದು ಚಕ್ರವ್ಯೂಹದೊಳಗೆ ಎದೆಯುಬ್ಬಿಸಿ ನುಗ್ಗಿ
> ಶತ್ರುಗಳನ್ನು ಒಬ್ಬೊಬ್ಬರನ್ನಾಗಿ ತರಿದುಹಾಕಿ ಜೀವಂತ ಹೊರಬರಬೇಕಾದ ಸಾಹಸದ ಕೆಲಸ. ಮೋಡ
> ಮುಚ್ಚಿದ ಕತ್ತಲ ದಾರಿ. ಭಗವಂತನ ಮೇಲೆ ಭಾರ ಹಾಕಿ ಒಂದೊಂದಾಗಿ ಹೆಜ್ಜೆ ಇಟ್ಟು
> ಮುಂದುವರಿಯಬೇಕು. ನಡುವೆ ಅಂಕೆಗಳು ಚಿತ್ರಾನ್ನವಾಗಿ ಮೊತ್ತ ಕಲಸಿಹೋದರೆ ಮತ್ತೆ ಮೊದಲಿಂದ
> ಶುರುಮಾಡಬೇಕು. ಅಥವಾ, ತಪ್ಪು ಮೊತ್ತವನ್ನು ಅಲ್ಲಲ್ಲೇ ಕಳೆದು, ಸರಿಯಾದ ಸಂಖ್ಯೆಗಳನ್ನು
> ಸೇರಿಸಿಕೊಂಡು ಮುಂದುವರಿಯಬೇಕು. ನಾರಾಯಣ, ಒಂದು ಕೂಡಿಸು ಎರಡು ಕೂಡಿಸು ಮೂರು ಕೂಡಿಸು ಎಂದು
> ಅಷ್ಟೋತ್ತರ ನಾಮಾವಳಿ ಹೇಳುತ್ತ, ಬಂದದ್ದೆಲ್ಲಾ ಬರಲಿ ಎಂದು ಧೈರ್ಯ ಒಗ್ಗೂಡಿಸಿಕೊಂಡು
> ಸಂಖ್ಯಾಪ್ರವಾಹದಲ್ಲಿ ಈಜತೊಡಗಿದ. ನಾಲ್ಕು ಕೂಡಿಸು ಐದು ಎಂದು ಬರುವ ಹೊತ್ತಿಗೆ ಅವನ ಕೈ
> ಬೆರಳುಗಳು ಮುಗಿದವು. ಆರು ಕೂಡಿಸು ಏಳು ಎನ್ನುವಷ್ಟರಲ್ಲಿ ಕಾಲಿನ ಬೆರಳುಗಳೂ ಮುಗಿದವು!
> ಇನ್ನು ಮುಂದಿನದೆಲ್ಲ ಅಯೋಮಯ. ತನ್ನ ಮನಸ್ಸಿನಲ್ಲಿ ಮೂಡಿಸಿಕೊಂಡ ಬೆರಳುಗಳನ್ನು ಮಡಚುತ್ತ
> ಲೆಕ್ಕ ಮಾಡುತ್ತ ಮುಂದುವರಿಯಬೇಕಾದ ವಿಷಮ ಪರಿಸ್ಥಿತಿ. ಈ ದಾರಿಯಲ್ಲಿ ಪ್ರಾಮಾಣಿಕವಾಗಿ
> ಹೆಜ್ಜೆ ಹಾಕುತ್ತ ಹೋದರೆ ಇವೊತ್ತಲ್ಲಾ ನಾಳೆ ಉತ್ತರ ಸಿಗುವ ಭರವಸೆಯಂತೂ ಇದೆ. ಆ ಆಶಾದೀಪವೇ
> ನಾರಾಯಣನ ಪ್ರಯತ್ನವನ್ನು ಜೀವಂತವಾಗಿಟ್ಟಿದೆ.
>
> ಇವನ ಪಕ್ಕದಲ್ಲಿ ಕೂತಿರುವ ಗೋವಿಂದ ಈ ವಿಷಯಗಳಲ್ಲಿ ಸ್ವಲ್ಪ ಕಿಲಾಡಿ. ನಾರಾಯಣನ ಹಾಗೆ
> ಮೊದಮೊದಲಿಗೆ ಮಂಜು ಕವಿದ ಮಸುಕು ದಾರಿಯಲ್ಲೇ ಈತನ ಪ್ರಯಾಣ ಶುರುವಾದರೂ, ಈ ಹುಡುಗ,
> ಹತ್ತಿರದಲ್ಲೆಲ್ಲಾದರೂ ಅಡ್ಡದಾರಿ ಸಿಕ್ಕುತ್ತದೋ ನೋಡೋಣ ಎಂದು ಅತ್ತಿತ್ತ ತನ್ನ ಹದ್ದಿನ
> ಕಣ್ಣು ಇಟ್ಟೇ ಇರುತ್ತಾನೆ. ಗೋವಿಂದನೂ ನಾರಾಯಣನಂತೆ ೧ + ೨ + ೩ + ೪ ... ಎನ್ನುತ್ತಾ
> ಶುರುಮಾಡಿದ. ೯ + ೧೦ ಎಂಬಲ್ಲಿಗೆ ಬರುವ ಹೊತ್ತಿಗೆ ೫೫ ಎಂದು ಉತ್ತರ ಬಂತು. ಅದನ್ನು ಮೊದಲ
> ಕಂಬ ಸಾಲಿನ ಕೆಳಗೆ ಬರೆದುಕೊಂಡು ಎರಡನೇ ಸಾಲಿಗೆ ಹಾರಿದ. ೧೧ + ೧೨ + ೧೩ ಎಂದು ಮತ್ತೆ
> ಮಂತ್ರ ಶುರು ಮಾಡಿ ಸ್ವಲ್ಪ ಸಮಯ ಕಳೆದಿತ್ತಷ್ಟೇ; ಅವನಿಗೊಂದು ಅನುಮಾನ ಹುಟ್ಟಿತು. ಅರರೆ,
> ಇದು ಈಗಷ್ಟೇ ಹೇಳಿ ಮುಗಿಸಿದ ಮೊದಲ ಸಾಲಿನ ಹಾಗೇ ಉಂಟಲ್ಲ? ೧೧ ಎಂದರೆ ೧೦+೧. ಹಾಗೆಯೇ ೧೨
> ಎಂದರೆ ೧೦+೨. ಮುಂದಿನದ್ದು ೧೦+೩. ಹೀಗೇ ಹೋದರೆ ೨೦ನ್ನು ೧೦+೧೦ ಎಂದು ಒಡೆಯಬಹುದು. ಅಂದರೆ
> ಈ ಕಂಬ ಸಾಲಲ್ಲಿ ೧೦ ಎನ್ನುವ ಸಂಚಿತ ಠೇವಣಿ ಹತ್ತು ಸಲ ಬಂದಿದೆ. ಕೂಡಿಸು ಚಿಹ್ನೆಯ ಬಲ
> ಭಾಗದಲ್ಲಿ ಬಂದಿರುವ ಸಂಖ್ಯೆಗಳೆಲ್ಲ ಈಗಾಗಲೇ ಕೂಡಿ ಬದಿಗಿಟ್ಟಿರುವ ಬಾಲಂಗೋಚಿಗಳೇ. ಅವುಗಳ
> ಮೊತ್ತ ೫೫ ಎನ್ನುವುದು ಸ್ಪಷ್ಟ. ಹಾಗಾದರೆ ಒಟ್ಟು ಮೊತ್ತ ಎಷ್ಟು? ೧೦ ಹತ್ತು ಸಲ
> ಬಂದಿರುವುದರಿಂದ ಹತ್ತ್‌ಹತ್ಲಿ ನೂರು. ಕೂಡಿಸು ೫೫. ಒಟ್ಟು ೧೫೫. ಅದನ್ನು ಎರಡನೇ ಕಂಬ
> ಸಾಲಿನ ಕೆಳಗೆ ಬರೆದ. ಮೂರನೇ ಸಾಲಿಗೆ ಹೋಗುವ ಹೊತ್ತಿಗೆ ಹುಡುಗನಿಗೆ ಆತ್ಮವಿಶ್ವಾಸ
> ಇಮ್ಮಡಿಯಾಗಿತ್ತು. ೨೧ನ್ನು ಮತ್ತೆ ೨೦+೧ ಎಂದು ಒಡೆದ. ಆ ಸಾಲಲ್ಲಿ ೨೦ ಹತ್ತು ಸಲ
> ಬಂದಿತ್ತು. ಅಲ್ಲಿಗೆ ಮೊತ್ತ ೨೦೦ + ೫೫ = ೨೫೫ ಆಯಿತು! ಇಡೀ ಪ್ರಶ್ನೆಯನ್ನೇ ಸುಲಭವಾಗಿ
> ಪರಿಹರಿಸುವ ಅದ್ಭುತವಾದ ಒಳದಾರಿಯೊಂದು ಹುಡುಗನಿಗೆ ಈಗ ಕಾಣಿಸತೊಡಗಿತು. ಪ್ರತೀ ಕಂಬ
> ಸಾಲಲ್ಲೂ ೫೫ ಎಂಬ ಮ್ಯಾಜಿಕ್ ಸಂಖ್ಯೆ ಬಂದೇ ಬರುವುದರಿಂದ ಮತ್ತು ಅಲ್ಲಿ ಒಟ್ಟು ಹತ್ತು ಕಂಬ
> ಸಾಲುಗಳಿರುವುದರಿಂದ, ಐವತ್ತೈದ್ ಹತ್ಲಿ ಎಂದು ಒಂದೇ ಸಲಕ್ಕೆ ಗುಣಿಸಿ ೫೫೦ ಎಂದು ಬರೆಯಬಹದು.
> ಇನ್ನು ೧೦೦, ೨೦೦, ೩೦೦ ಎನ್ನುತ್ತ ಪ್ರತಿ ಸಾಲಲ್ಲೂ ಹೆಚ್ಚುವರಿ ಮೂಟೆಗಳು ಸಿಗುತ್ತಾ
> ಹೋಗುತ್ತವೆ. ಕೊನೆಯ ಸಾಲಲ್ಲಿ ಸಿಗುವುದು ೯೦೦. ಇವೆಲ್ಲವನ್ನೂ ೧೦೦ + ೨೦೦ + ೩೦೦ +....+
> ೯೦೦ ಎಂದು ಬರೆಯಬಹುದು. ಇಲ್ಲೂ, ೧೦೦ ಎಂಬ ಸಾಮಾನ್ಯ ಗುಣಕವನ್ನು ಹೊರತೆಗೆದರೆ ೧೦೦ * (೧ +
> ೨ + ೩ + .. + ೯) ಎನ್ನುವ ಸಾಲು ಸಿಗುತ್ತದೆ. ಒಂದರಿಂದ ಹತ್ತರವರೆಗಿನ ಸಂಖ್ಯೆಗಳ ಮೊತ್ತ
> ೫೫ ಎನ್ನುವುದು ಗೊತ್ತಿದೆ. ಹಾಗಾದರೆ ಒಂಬತ್ತರವರೆಗಿನ ಸಂಖ್ಯೆಗಳ ಮೊತ್ತ ಎಷ್ಟು? ೫೫ಕ್ಕೆ
> ೧೦ ಕಡಿಮೆ. ಅಂದರೆ ೪೫. ಇದಕ್ಕೆ ೧೦೦ನ್ನು ಗುಣಿಸಿರುವುದರಿಂದ, ಉತ್ತರ - ೪೫೦೦. ಈಗ ಇವೆರಡು
> ಸಂಖ್ಯೆಗಳ ಮೊತ್ತ ನೋಡಿಬಿಟ್ಟರೆ ಕೆಲಸ ಖತಂ! ಅರ್ಥಾತ್, ೪೫೦೦ + ೫೫೦ = ೫೦೫೦. ಇದು
> ಮೇಸ್ಟ್ರಿಗೆ ಬೇಕಾದ ಉತ್ತರ! ಗೋವಿಂದನ ಖುಷಿಗೆ ಎಲ್ಲಿದೆ ಪಾರ!
>
>
> <https://1.bp.blogspot.com/-ALCmTQCBGNQ/TNj5ME6rgxI/AAAAAAAAJYM/TPzTKhtg95Yeo_Rem6JIOL0w2tzKUjW8QCKgB/s1600/putani%2Bejnana%2B2.jpg>
>
> ಅವನಾಚೆ ಕೂತಿರುವ ನರಹರಿ ಸ್ವಲ್ಪ ಶಾಣ್ಯಾ. ಈ ಹುಡುಗ ಯಾವ ಕೆಲಸವನ್ನೂ ನೆಟ್ಟಗೆ ಮಾಡೋನಲ್ಲ
> ಎಂದು ಶಿಕ್ಷಕರು ಹೇಳುವಾಗ, ನರಹರಿಯ ತಂದೆಗೆ ಇದೇನು ಹೊಗಳಿಕೆಯೋ ಬಯ್ಗುಳವೋ ಎಂದು
> ಕನ್‌ಫ್ಯೂಸ್ ಆಗಿಬಿಟ್ಟಿತ್ತು! ಅಂತಹ ನರಹರಿ ಏನು ಮಾಡಿದ ಗೊತ್ತಾ? ಸಮಸ್ಯೆಯ ಮೊದಲ ಸಂಖ್ಯೆ
> ೧ನ್ನು ತೆಗೆದುಕೊಂಡ. ಅದನ್ನು ೨ರ ಜೊತೆಗೆ ಕೂಡುವುದಕ್ಕಿಂತ, ಕೊಟ್ಟಕೊನೆಯ ಸಂಖ್ಯೆಯಾದ ೧೦೦ರ
> ಜೊತೆಗೆ ಇಟ್ಟ! ಅವೆರಡರ ಮೊತ್ತ ೧೦೧ ಎಂದು ಬರೆದ. ಈಗ ೨ ಮತ್ತು ೯೯ಗಳನ್ನು ತೆಗೆದುಕೊಂಡು
> ಮತ್ತೆ ಕೂಡಿದ. ಅದೇ ಉತ್ತರ ಬಂತು! ಈಗ ಈ ಕಡೆಯಿಂದ ಮೂರನೆಯದು, ಆ ಕಡೆಯಿಂದ ಮೂರನೆಯದು -
> ತೆಗೆದು ಕೂಡಿದ. ೩+೯೮ ಕೂಡ ತನ್ನ ಮೊತ್ತ ೧೦೧ ಎಂದಿತು. ಕೊಟ್ಟಿರುವ ಒಟ್ಟು ಸಂಖ್ಯೆಗಳು
> ನೂರು. ಅವುಗಳಲ್ಲಿ ಆ ಬದಿ, ಈ ಬದಿಗಳಿಂದ ಹೀಗೆ ಸಂಖ್ಯೆಗಳನ್ನು ಎತ್ತಿಕೊಂಡು ಜೋಡಿಯಾಗಿ
> ಕೂಡುತ್ತ ಬಂದರೆ ಒಟ್ಟು ೫೦ ಜೋಡಿಗಳು ಸಿಗುತ್ತವೆ. ಪ್ರತಿಯೊಂದರ ಮೊತ್ತವೂ ಸೇಮ್‌ಸೇಮ್.
> ಹಾಗಾದರೆ ಇಡೀ ಸರಣಿಯ ಮೊತ್ತ ಎಷ್ಟು? ೫೦ ಗುಣಿಸು ೧೦೧. ಅಂದರೆ ೫೦೫೦. ಅಲ್ಲಿಗೆ ಕೆಲಸ
> ಮುಗೀತು! ನಾರಾಯಣ ಕೊಡಲಿ ಹಿಡಿದು ಮಾಡುವ ಕೆಲಸವನ್ನು, ಗೋವಿಂದ ಕತ್ತಿಯಿಂದ ಪರಿಹರಿಸುವ
> ಸಮಸ್ಯೆಯನ್ನು ಈ ನರಹರಿ ಸೂಜಿಯಿಂದ ಮುಗಿಸಿಬಿಡುವವನು!
>
> ಅಲ್ಲಿಗೆ ಕತೆ ಮುಗಿಯಿತು ಎನ್ನುತ್ತೀರೋ? ಇಲ್ಲಾ ಸ್ವಾಮಿ, ಈ ಮೂವರನ್ನೂ ಮೀರಿಸುವ ಮುರಾರಿ
> ಕೂತಿದ್ದಾನೆ ನೋಡಿ ಅಲ್ಲಿ! ನಾರಾಯಣ ಒಂದರಿಂದ ನೂರರವರೆಗೆ ಬರೆದುಕೊಂಡು ಅಖಂಡ ಪಾದಯಾತ್ರೆ
> ಮಾಡುತ್ತಿರುವಾಗ, ಈ ಹುಡುಗ ಇನ್ನೂ ತನ್ನ ಬಳಪವನ್ನು ಸ್ಲೇಟಿನ ಮೇಲೆ ಊರಿಯೇ ಇಲ್ಲ! ಮೇಸ್ಟ್ರ
> ಹಾಗೆಯೇ ಕಣ್ಮುಚ್ಚಿ ಧ್ಯಾನಸ್ಥನಾಗಿದ್ದಾನೆ. ಇವನು ಒಂದಾದರೂ ಸಾಲು ಪರಿಹಾರವನ್ನು
> ಸ್ಲೇಟಲ್ಲಿ ಬರೆಯುತ್ತಾನೋ ಎಂದು ಕಡೆಗಣ್ಣಲ್ಲಿ ನೋಡುತ್ತಿದ್ದ ನರಹರಿಯ ಆಸೆ-ಅಸೂಯೆಗಳಿಗೆ
> ನೀರೆರಚುವಂತೆ ಈ ಹುಡುಗ ಅರೆಕ್ಷಣದಲ್ಲಿ ಕಣ್ಣು ತೆರೆದು ಸಾಕ್ಷಾತ್ಕಾರವಾದ ಬುದ್ಧನಂತೆ
> "ಉತ್ತರ ೫೦೫೦" ಎಂದುಬಿಟ್ಟ! ತನಗಿಂತಲೂ ಕಡಿಮೆ ಸಾಲುಗಳಲ್ಲಿ ಇವನು ಹೇಗೆ ಉತ್ತರ ಹೇಳಿದ
> ಎಂದು ನರಹರಿಗೆ ಮೈಯೆಲ್ಲಾ ಉರಿಯಿತು. ಭಲೇ ಬುದ್ಧಿವಂತ ಇವನು, ಇವನ ಬುದ್ಧಿ ತನಗೂ
> ಬಂದಿದ್ದರೆ ಎಂದು ಗೋವಿಂದನಿಗೆ ಅಸೂಯೆಯಾಯಿತು. ನಾರಾಯಣ ಮಾತ್ರ ಈ ಅದ್ಭುತ ಕ್ಷಣ ಘಟಿಸಿಹೋದ
> ಪರಿವೆಯಿಲ್ಲದೆ ತನ್ನ ಪಾಡಿಗೆ ದತ್ತ ಬರೆಯುವುದರಲ್ಲಿ ಮಗ್ನನಾಗಿದ್ದ. "ಒಂದರಿಂದ
> ಹತ್ತರವರೆಗಿನ ಸಂಖ್ಯೆಗಳ ಮಧ್ಯಬಿಂದು ಯಾವುದು? ಅಂಥಾದ್ದು ಯಾವುದೂ ಇಲ್ಲ. ದಶಮಾಂಶ ರೂಪಕ್ಕೂ
> ಮಾನ್ಯತೆ ಇದೆ ಅಂತಾದರೆ ೫.೫ ಅಂತ ಹೇಳಬಹುದೇನೋ. ಇದನ್ನೇ ನಾವು ಸರಾಸರಿ ಅಂತ ಕರೆಯುತ್ತೇವೆ.
> ಒಟ್ಟು ಸಂಖ್ಯೆಗಳ ಮೊತ್ತ ನೋಡಬೇಕಾದರೆ, ಸರಾಸರಿಯನ್ನು ಅಲ್ಲಿ ಎಷ್ಟು ಸಂಖ್ಯೆಗಳಿವೆಯೋ
> ಅಷ್ಟರಿಂದ ಗುಣಿಸಿದರಾಯಿತು. ಹಾಗಾಗಿ, ೧ರಿಂದ ೧೦ರವರೆಗಿನ ಸಂಖ್ಯೆಗಳ ಮೊತ್ತ ೫.೫ ಗುಣಿಸು
> ೧೦ - ಅಂದರೆ ೫೫. ಇದನ್ನೇ ಈಗ ಮೇಸ್ಟ್ರು ಕೊಟ್ಟಿರುವ ಲೆಕ್ಕಕ್ಕೆ ವಿಸ್ತರಿಸೋಣ. ೧ರಿಂದ
> ೧೦೦ರವರೆಗಿನ ಸಂಖ್ಯೆಗಳ ಮಧ್ಯ ಯಾವುದು? ೫೦ ಮತ್ತು ೫೧. ಅವುಗಳ ನಡುವಿನ ಸಂಖ್ಯೆ ೫೦.೫
> ಅಲ್ವೇ? ಇದೇ ಈ ಎಲ್ಲ ಸಂಖ್ಯೆಗಳ ಸರಾಸರಿ. ಹಾಗಾದರೆ ಮೊತ್ತ ಎಷ್ಟು? ೫೦.೫ ಗುಣಿಸು ೧೦೦ -
> ಅಂದರೆ ೫೦೫೦!" ಎಂದು ಮುರಾರಿ ತನ್ನನ್ನು ದುರುಗುಟ್ಟಿ ನೋಡುತ್ತಿರುವ ಅಸೂಯಾಪರರಿಗೆ
> ವಿವರಿಸಿದ.
>
> ಮೇಸ್ಟ್ರು ಇನ್ನೇನು ಶಯನಾಸಕ್ತರಾಗಿ ಒಂದು ಸಣ್ಣ ನಿದ್ದೆ ಹೊಡೆಯಬೇಕು ಎನ್ನುವಷ್ಟರಲ್ಲೇ
> ಮುರಾರಿ ಮತ್ತು ನರಹರಿ ಇಬ್ಬರೂ ಜಿಗಿದು ನಿದ್ರಾಭಂಗ ಮಾಡಿದರು. ಸಾರ್, ನಾವು ಉತ್ತರ
> ತೆಗೆದಿದ್ದೇವೆ ಎಂದು ಘೋಷಿಸಿದರು. ಬುದ್ಧಿವಂತರ ಕ್ಲಾಸಿಗೆ ಪಾಠ ಮಾಡುವುದೇ ಒಂದು ಶಿಕ್ಷೆ.
> ಬಿಡುವು ಕೊಡದಂತೆ ತಲೆ ತಿನ್ನುತ್ತಾರೆ ಎಂದು ಬಯ್ದುಕೊಂಡ ಮೇಸ್ಟ್ರು, "ಎಲ್ಲಿ ನಿಮ್ಮ
> ಸ್ಲೇಟು ತೋರಿಸಿ" ಎಂದಾಗ ಮುರಾರಿ "ನನ್ನ ಉತ್ತರ ಇಲ್ಲಿದೆ" ಎಂದು ತನ್ನ ತಲೆಯತ್ತ
> ಬೆರಳುಮಾಡಿದ. ಅವನ ಖಾಲಿ ಸ್ಲೇಟನ್ನು ಕಸಿದುಕೊಂಡು ಮೇಸ್ಟ್ರು ಇಡೀ ಕ್ಲಾಸಿಗೆ ಅದನ್ನು
> ಎತ್ತಿತೋರಿಸಿ "ನೋಡ್ರಯ್ಯ. ಇದು ಮುರಾರಿಗಳು ಲೆಕ್ಕ ಮಾಡುವ ರೀತಿ. ದತ್ತ ಇಲ್ಲ, ಚಿತ್ರ
> ಇಲ್ಲ, ಸಾಧನೆ ಇಲ್ಲ, ಉತ್ತರವಂತೂ ಮೊದಲೇ ಇಲ್ಲ! ಏನು ಕೇಳಿದರೂ ತಲೆಯತ್ತ ಬೆರಳು ತೋರಿಸಿ
> ಇಲ್ಲಿದೆ ಅನ್ನುತ್ತಾರೆ. ಘನ ಪಂಡಿತರಲ್ವೇ, ನಾಳೆಯಿಂದ ಇವರೇ ನಿಮಗೆ ಲೆಕ್ಕ ಪಾಠ ಮಾಡ್ತಾರೆ.
> ಸ್ಲೇಟು-ಪುಸ್ತಕ ತರಬೇಕಾಗಿಲ್ಲ" ಎಂದರು. ನರಹರಿಯ ಸ್ಲೇಟಿನಲ್ಲಿ ಇದ್ದದ್ದು ಹೆಚ್ಚೆಂದರೆ
> ಎರಡು ಸಾಲು. ಅದನ್ನೂ ಕಸಿದುಕೊಂಡು, ಮತ್ತೆ ಇಡೀ ಕ್ಲಾಸಿಗೆ ಎತ್ತಿತೋರಿಸಿ, "ಇದು ನಮ್ಮ
> ನರಹರಿಗಳು ಮಾಡಿದ ಲೆಕ್ಕ. ರಾಮಾಯಣದಲ್ಲಿ ಹನುಮಂತ ಇಲ್ಲಿಂದ ಹಾರಿದ, ಲಂಕೆಗೆ ಹೋಗಿ ಇಳಿದ
> ಅಂತ ಬರುತ್ತಲ್ಲ, ಹಾಗಿದೆ. ನಡುವಿನ ಎಲ್ಲಾ ಸ್ಟೆಪ್ಪುಗಳನ್ನು ಹಸಿವು ತಾಳದೆ ಇವರೇ
> ತಿಂದುಬಿಟ್ಟಿದ್ದಾರೆ" ಎಂದು ಹೇಳಿ ಮಾನವನ್ನು ಹರಾಜು ಕೂಗಿದರು.
>
> ಇಷ್ಟು ಹೇಳಿ ಕತೆಯನ್ನು ಮುಗಿಸಿ ಬೇತಾಳವು "ರಾಜಾ, ಈ ಇಷ್ಟು ಜನರಲ್ಲಿ ಯಾರು ಹೆಚ್ಚು?
> ಯಾರು ಮೆಚ್ಚು? ಇದಕ್ಕೆ ಉತ್ತರ ತಿಳಿದಿದ್ದೂ ಹೇಳದೇ ಹೋದರೆ ನಿನ್ನ ತಲೆ ಸಾವಿರ
> ಹೋಳಾಗುವುದು" ಎಂದಿತು. ಆಗ ವಿಕ್ರಮನು ಮೌನವನ್ನು ಮುರಿದು "ಎಲೈ ಬೇತಾಳನೇ, ಕತೆ ಕೇಳಿದ
> ಸಾಮಾನ್ಯರಿಗೆ ಇವರಲ್ಲಿ ಮುರಾರಿಯೇ ಎಲ್ಲರಿಗಿಂತ ಹೆಚ್ಚಿನ ಬುದ್ಧಿವಂತ ಎಂಬ ಭಾವನೆ ಬರುವುದು
> ನಿಜ. ಕಡಿಮೆ ಸಾಲುಗಳಲ್ಲಿ ಸಮಸ್ಯೆ ಬಿಡಿಸುವವನು, ಅತ್ಯಂತ ಕಡಿಮೆ ಸಮಯದಲ್ಲಿ ಪರಿಹಾರ
> ಕಂಡುಹಿಡಿಯುವವನು ಬುದ್ಧಿವಂತ ಎಂದು ನಮ್ಮ ಸಮಾಜ ನಂಬಿದಂತಿದೆ. ಈ ಭಾವನೆಯನ್ನು ಸದ್ಯಕ್ಕಂತೂ
> ಕಾಯಿದೆ ಮಾಡಿಯೂ ಬದಲಾಯಿಸಲು ಸಾಧ್ಯವಿಲ್ಲ. ಆದರೆ, ಗಣಿತದಲ್ಲಿ ಎಷ್ಟು ಸಾಲುಗಳಲ್ಲಿ ಪರಿಹಾರ
> ಸಿಕ್ಕಿತು, ಎಷ್ಟು ಹೊತ್ತು ತೆಗೆದುಕೊಂಡಿತು ಎಂಬ ಎರಡು ಸಂಗತಿಗಳಿಗೆ ನಿಜಕ್ಕಾದರೆ
> ಅಷ್ಟೊಂದು ಮಹತ್ವವಿಲ್ಲ. ಮುರಾರಿ ಮತ್ತು ನರಹರಿ ಇಬ್ಬರೂ ಬುದ್ಧಿವಂತರೇ. ಯಾಕೆಂದರೆ,
> ಅವರಿಬ್ಬರೂ ಸಮಸ್ಯೆಯನ್ನು ಪರಿಹರಿಸಲು ಹುಡುಕಿಕೊಂಡ ದಾರಿಗಳು, ಅವರಿಗಾದ ಸಾಕ್ಷಾತ್ಕಾರಗಳು
> ಬೇರೆಬೇರೆ. ಅವೆರಡನ್ನೂ ಒಂದೇ ಮಾನದಂಡ ಇಟ್ಟು ಹೋಲಿಸುವುದೇ ಮೂರ್ಖತನ. ಇನ್ನು, ಗೋವಿಂದನ
> ವಿಚಾರಕ್ಕೆ ಬಂದಾಗ, ಅವನು ಕೂಡ ಇವರಿಬ್ಬರಷ್ಟೇ ಬುದ್ಧಿವಂತಿಕೆಯ ಪ್ರದರ್ಶನ ಮಾಡಿದ್ದಾನೆ.
> ಗಣಿತದಲ್ಲಿ, ಸಮಸ್ಯೆಯ ಆಳದಲ್ಲಿ ಅಡಗಿಕೂತಿರುವ ವಿನ್ಯಾಸವನ್ನು ಹೊರಗೆಳೆದು ತೆಗೆಯುವುದು;
> ಅದನ್ನು ಈಗಾಗಲೇ ಪರಿಹರಿಸಿದ ಸಮಸ್ಯೆಯ ಜೊತೆ ಸಮೀಕರಿಸುವುದು - ಇದು ಅತ್ಯಂತ ಮುಖ್ಯವಾದ
> ಕೌಶಲ. ಗೋವಿಂದ ಅಂತಹ ಕೆಲಸ ಮಾಡಿರುವುದರಿಂದ ಅವನ ಸಾಧನೆ ಕಮ್ಮಿಯದಲ್ಲ. ಈ ಮೂವರನ್ನು
> ನೋಡಿದಾಗ ನಮಗೆ ನಾರಾಯಣ ನಿಜಕ್ಕೂ ಪೆದ್ದಾಂಬಟ್ಟ ಎಂಬ ಭಾವನೆ ಬರುವುದು ನಿಜ. ಆದರೆ, ಈ
> ಮೂವರಲ್ಲಿ ಕಾಣದ ಒಂದು ವಿಶೇಷ ಗುಣ ಅವನಲ್ಲಿದೆ. ಅದೇನೆಂದರೆ, ಹಿಡಿದ ಕೆಲಸವನ್ನು ಬಿಡದೆ
> ಮಾಡುವ ಶ್ರದ್ಧೆ ಮತ್ತು ಕೆಲಸದಲ್ಲಿ ಪ್ರಾಮಾಣಿಕತೆ. ಗಣಿತಜ್ಞನಿಗೆ ಬೇಕಾದ ಅತಿಮುಖ್ಯ ಗುಣ
> ಇದು. ಕಾಲೇಜು ಹಂತ ದಾಟಿದ ಮೇಲೆ ನಾವು ಮಾಡುವ ಬಹಳಷ್ಟು ಗಣಿತದ ಕೆಲಸದಲ್ಲಿ ಸಿದ್ಧಸೂತ್ರಗಳು
> ಇರುವುದಿಲ್ಲ. ಅಲ್ಲೆಲ್ಲ ದಾರಿ ಗೊತ್ತಿಲ್ಲದೆ ನಾರಾಯಣನಂತೆ ಕತ್ತೆದಾರಿಯಲ್ಲೇ ನಡೆಯಬೇಕು.
> ಯಾರಿಗೆ ಹೆಚ್ಚು ತಾಳ್ಮೆ ಇದೆಯೋ, ಸಮಸ್ಯೆಯನ್ನು ನಡುನೀರಲ್ಲಿ ಕೈಬಿಡದೆ ದಡ ಮುಟ್ಟುವ
> ವಿಶ್ವಾಸ ಇದೆಯೋ ಅವರು ಗೆಲ್ಲುತ್ತಾರೆ.
>
> ಇಷ್ಟು ಹೇಳಿದ ಮೇಲೆ, ಕತೆಯಲ್ಲಿ ಬಂದುಹೋದ ಈ ಜನರಲ್ಲಿ ಶ್ರೇಷ್ಠ ಯಾರು? ಎಂಬ ನಿನ್ನ ಮುಖ್ಯ
> ಪ್ರಶ್ನೆಗೆ ಬರೋಣ. ವಿದ್ಯಾರ್ಥಿಗಳಿಗೆ ಸಮಸ್ಯೆಯನ್ನು ಸ್ಪಷ್ಟವಾಗಿ ವಿವರಿಸಿ, ನಡುವೆ ಮೂಗು
> ತೂರಿಸದೆ, ಅವರ ಚಿಂತನೆಗೆ ಸಾಕಷ್ಟು ಅವಕಾಶ ಕೊಟ್ಟು ದೂರ ನಿಲ್ಲುವ ಗುರುವೇ ಇಲ್ಲಿ ಶ್ರೇಷ್ಠ
> ವ್ಯಕ್ತಿ. ಅವನು ಹಾಗೆ ಇದ್ದಿದ್ದರಿಂದಲೇ ನಾಲ್ಕು ಜನ ನಾಲ್ಕು ಬಗೆಯಲ್ಲಿ ಹಾದಿ
> ಹುಡುಕಿಕೊಳ್ಳುವುದು ಸಾಧ್ಯವಾಯಿತು ಅಲ್ಲವೆ?" ಎಂದನು.
>
> ಮೌನ ಮುರಿಸಿದ ಖುಷಿಯಲ್ಲಿ ಬೇತಾಳವು ಮತ್ತೆ ರಾಜನ ಹೆಗಲಿಂದ ಜಾರಿಹೋಗಿ ಮರದಲ್ಲಿ
> ನೇತಾಡತೊಡಗಿತು.
>
> *ಮಾರ್ಚ್ ೨೨, ೨೦೧೫ರ ವಿಜಯವಾಣಿಯಲ್ಲಿ ಪ್ರಕಟವಾದ ಲೇಖನ*
>
> Hareeshkumar K
> GHS HUSKURU
> MALAVALLI TQ
> MANDYA DT
> MOB 9880328224
>
> --
> 1. If a teacher wants to join STF, visit
> http://karnatakaeducation.org.in/KOER/en/index.php/Become_a_STF_groups_member
> 2. For STF training, visit KOER -
> http://karnatakaeducation.org.in/KOER/en/index.php
> 4. For Ubuntu 14.04 installation, visit
> http://karnatakaeducation.org.in/KOER/en/index.php/Kalpavriksha
> 4. For doubts on Ubuntu, public software, visit
> http://karnatakaeducation.org.in/KOER/en/index.php/Frequently_Asked_Questions
> 5. Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Why_public_software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
> Visit this group at https://groups.google.com/group/mathssciencestf.
> For more options, visit https://groups.google.com/d/optout.
>

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to