Thought provoking.

eswarachari_mv, 
am@ghs_benakanakonda
ranebennur_tq
📱 9880123026

"An investment on knowledge 
       always pays the best interest"

-----Original Message-----
From: "manju pujar" <manju.npuj...@gmail.com>
Sent: ‎8/‎26/‎2016 11:01 AM
To: "mathssciencestf@googlegroups.com" <mathssciencestf@googlegroups.com>
Subject: Re: [ms-stf '64015'] ಕೋಣೆಗೆ ಬಂದಿರುವ ಆನೆ ಕಾಣದೇಕೆ? | ಪ್ರಜಾವಾಣಿ

Nice.. information.. should save our environment...EARTH..


On Aug 26, 2016 9:48 AM, "Chandrashekhar Madiwalar" 
<chandrashekhar7.agas...@gmail.com> wrote:

Thanks for sharing knowledgeable info..


On Aug 26, 2016 6:44 AM, "HAREESHKUMAR K Agasanapura" <harihusk...@gmail.com> 
wrote:

http://m.prajavani.net/article/2016_08_25/433460
ಕೋಣೆಗೆ ಬಂದಿರುವ ಆನೆ ಕಾಣದೇಕೆ?

25 Aug, 2016
ನಾಗೇಶ್ ಹೆಗಡೆ

ನಮ್ಮ ದೇಶದ ಯಾವುದಾದರೂ ಒಬ್ಬ ಪ್ರಖ್ಯಾತ ರಾಕೆಟ್ ವಿಜ್ಞಾನಿಯ ಹೆಸರನ್ನು ಹೇಳಬಲ್ಲಿರಾ? 
ಮಕ್ಕಳಿಗೆ ಈ ಪ್ರಶ್ನೆಯನ್ನು ಕೇಳಿದರೆ ಪಟಪಟನೆ ಹತ್ತಾರು ಸರಿ ಉತ್ತರಗಳು ಬರುತ್ತವೆ. ನಮ್ಮ ದೇಶದ 
ಪ್ರಸಿದ್ಧ ಪರಮಾಣು ವಿಜ್ಞಾನಿಯ ಹೆಸರು ಗೊತ್ತಿದೆಯೆ? ಅದಕ್ಕೂ ಪಟಪಟನೆ ನಾಲ್ಕಾರು ಸರಿ ಉತ್ತರಗಳು 
ಬರುತ್ತವೆ.
ಬಹಳಷ್ಟು ಬಾರಿ ಆ ಪ್ರಶ್ನೆಯ ಉತ್ತರವೇ ಈ ಪ್ರಶ್ನೆಯ ಉತ್ತರವೂ ಆಗಿರುತ್ತದೆ. ಹಾಗಿದ್ದರೆ, ನಮ್ಮ 
ದೇಶದ ಪ್ರಸಿದ್ಧ ಹವಾಮಾನ ವಿಜ್ಞಾನಿಯ ಹೆಸರನ್ನು ಹೇಳಬಲ್ಲಿರಾ?.... ಈಗ ಎಲ್ಲೆಡೆ ಮೌನ 
ಆವರಿಸುತ್ತದೆ. ತಪ್ಪು ಉತ್ತರ ಕೊಡಲಿಕ್ಕೂ ಮಕ್ಕಳಿಗೆ ಒಂದು ಹೆಸರು ಹೊಳೆಯುವುದಿಲ್ಲ.
ನಮ್ಮ ದೇಶದ ಕ್ರೀಡಾರಂಗಕ್ಕೂ ವಿಜ್ಞಾನರಂಗಕ್ಕೂ ತುಂಬ ಹೋಲಿಕೆಗಳಿವೆ. ಒಲಿಂಪಿಕ್ಸ್ ಪದಕ 
ಪಡೆಯುವಲ್ಲಿ ನಮ್ಮ ಸ್ಥಾನಮಾನ ಎಷ್ಟಿದೆಯೊ ಅಷ್ಟೇ ಕಳಪೆಯ ಸ್ಥಾನಮಾನ ವಿಜ್ಞಾನದ ನೊಬೆಲ್ ಪದಕ 
ಪಡೆಯುವಲ್ಲಿಯೂ ಇದೆ.
ಕ್ರೀಡಾರಂಗದಲ್ಲಿ ಕ್ರಿಕೆಟ್, ಟೆನ್ನಿಸ್‌ಗಳಿಗೆ ಇನ್ನಿಲ್ಲದ ಮಾನ್ಯತೆ, ಪ್ರಭಾವಳಿ ಇದೆ. ಆದರೆ 
ತೀರ ಸಾಮಾನ್ಯ ಶಾಲಾ ಮಕ್ಕಳ ಕೈಗೆಟುಕಬಹುದಾದ ಓಟ, ಜಿಗಿದಾಟ (ಜಿಮ್ನಾಸ್ಟಿಕ್)ಗಳಿಗೆ ಮಾನ್ಯತೆ 
ಇಲ್ಲ. ವಿಜ್ಞಾನದಲ್ಲೂ ಅಷ್ಟೆ: ಪರಮಾಣು ವಿಜ್ಞಾನಕ್ಕೆ, ಕ್ಷಿಪಣಿ ತಂತ್ರಜ್ಞಾನಕ್ಕೆ ಸಿಗುವ 
ಮಾನ್ಯತೆ ಹವಾಮಾನ ವಿಜ್ಞಾನಕ್ಕೆ ಇಲ್ಲ. ಹವಾಮಾನ ಅಧ್ಯಯನಕ್ಕೆ ಬೇಕಾದ ಸಲಕರಣೆಗಳನ್ನು ಶಾಲಾ 
ಮಕ್ಕಳೇ ಹೊಂದಿಸಿಕೊಳ್ಳಬಹುದು, ಅಥವಾ ಅಲ್ಪವೆಚ್ಚದಲ್ಲಿ ಖರೀದಿಸಿ ತರಬಹುದು. ಆದರೆ ಅದರ 
ಮಹತ್ವವನ್ನು ಗ್ರಹಿಸಲು ಬೇಕಾದ ಅಆಇಈ ತರಬೇತಿ ಕೂಡ ನಮ್ಮ ಶಿಕ್ಷಕರಿಗೆ ಇಲ್ಲ.
ಹವಾಮಾನ ದಿನದಿನಕ್ಕೆ ಕ್ರೂರವಾಗುತ್ತಿದೆ. ಬರ- ನೆರೆ ಎಂಬಂಥ ಕನಿಷ್ಠ ಗರಿಷ್ಠಗಳ ಅಂಚಿನ 
ಹೊಯ್ದಾಟವೇ ನಿತ್ಯದ ಸುದ್ದಿಯಾಗುತ್ತಿದೆ. ದಾಖಲೆಗಳ ಪ್ರಕಾರ ಕಳೆದ ಜುಲೈ ತಿಂಗಳಲ್ಲಿ ಜಾಗತಿಕ 
ಸರಾಸರಿ ಉಷ್ಣತೆ ಹಿಂದಿನ ಎಲ್ಲ ಜುಲೈ ತಿಂಗಳ ದಾಖಲೆಗಳನ್ನೂ ಮೆಟ್ಟಿ ನಿಂತಿದೆ. ಎಲ್ಲ 
ಜುಲೈಗಳಷ್ಟೇ ಅಲ್ಲ, ನಾಸಾ ವರದಿಯ ಪ್ರಕಾರ, 1880ರಿಂದ ಭೂಮಿಯ ತಾಪಮಾನದ ದಾಖಲೆ ಇಡುವ ಪ್ರಕ್ರಿಯೆ 
ಆರಂಭವಾದಾಗಿನಿಂದ ಭೂತಾಪ ಇಷ್ಟು ಏರಿಕೆ ಆಗಿದ್ದು ಇದೇ ಮೊದಲು. ಈ ಏರಿಕೆ ಹಠಾತ್ತಾಗಿ ಆಗಿದ್ದೇನೂ 
ಇಲ್ಲ.
ಕಳೆದ ಒಂದು ತಲೆಮಾರಿನಿಂದ ಆಗುತ್ತಲೇ ಇದೆ. ಹಿಂದಿನ 14 ವರ್ಷಗಳಲ್ಲಿ ಒಟ್ಟೂ 12 ವರ್ಷ ಅತ್ಯಧಿಕ 
ಉಷ್ಣತೆಯ ವರ್ಷಗಳೇ ಆಗಿದ್ದವು. ಬುಂದೇಲಖಂಡದಲ್ಲಿ ಸತತ ಮೂರು ಬರವರ್ಷಗಳಿಂದಾಗಿ ಶ್ರಮಜೀವಿಗಳು 
ನಿರಾಶ್ರಿತರಾಗಿ ದಿಲ್ಲಿಯ ಮೇಲುಸೇತುವೆಗಳ ಕೆಳಗೆ, ಕೊಳಕು ಕೊಳ್ಳಗಳ ಅಂಚಿಗೆ ಸಂತೆ 
ನೆರೆದಿದ್ದಾರೆ.
ನೀರಿನ ರೈಲಿಗಾಗಿ ಕಾದುನಿಂತ ಮರಾಠಾವಾಡಾದ ಜನರ ಸ್ಥಿತಿಯಂತೂ ಗೊತ್ತೇ ಇದೆ. ಛತ್ತೀಸಗಢದಲ್ಲಿ 
ಅರಣ್ಯಗಳ ಮಧ್ಯೆ ಬರಗಾಲ ಬಂದಿದೆ. ಅಲ್ಲಿ ಜೇನು ಮತ್ತು ಮಹುವಾ ಇಳುವರಿ ಕುಸಿದಿದ್ದರಿಂದ 
ಕೋಟಿಗಟ್ಟಲೆ ಆದಿವಾಸಿಗಳು ತತ್ತರಿಸಿದ್ದಾರೆ. ಇದೀಗ ಉತ್ತರ ಭಾರತದಲ್ಲಿ ಗಂಗೆ, ಯಮುನೆ, ಸೋನ್ 
ನದಿಗಳು ಧ್ವಂಸಧಾರೆಯನ್ನೇ ಹರಿಸುತ್ತಿವೆ.
ಬಿಹಾರದಲ್ಲಿ ಎಂದಿಗಿಂತ ಕಡಿಮೆ ಮಳೆಯಾದರೂ ಏಳು ನದಿಗಳ ನೆರೆ ಹಾವಳಿಯಿಂದ ಜನಸ್ತೋಮ 
ನಲುಗುತ್ತಿದೆ. ಕರ್ನಾಟಕದಲ್ಲಿ 74 ತಾಲ್ಲೂಕುಗಳಲ್ಲಿ ಬರ ಸಿಡಿಲಿನಂತೆ ಎರಗಿದೆ. ಆಲಮಟ್ಟಿ 
ತುಂಬಿದ್ದರೂ 50 ಕಿ.ಮೀ ಆಚೆ ರೈತರ ಸೇಂಗಾ ಬೆಳೆ ಒಣಗುತ್ತಿದೆ. ಚೆನ್ನೈಯಲ್ಲಿ ನೆರೆ ಹಾವಳಿಯ 
ಮಧ್ಯೆ ನಿಂತ ಜಯಲಲಿತಾ ಕಾವೇರಿಯ ನೀರು ಬೇಕೆಂದು ಸರ್ವೋಚ್ಚ ನ್ಯಾಯಾಲಯಕ್ಕೆ ಮೊರೆ 
ಇಡುತ್ತಿದ್ದಾರೆ.
ನಮ್ಮೆಲ್ಲರ ನೆಮ್ಮದಿಯನ್ನು ಹಿಂಡಿ ಹಿಪ್ಪೆ ಮಾಡಿ ಎಸೆಯಬಲ್ಲ ಈ ಹವಾಮಾನ ವಿದ್ಯಮಾನ ನಮ್ಮ 
ಸಾಹಿತಿಗಳಿಗೆ, ಕಲಾವಿದರಿಗೆ, ಸಿನೆಮಾ ಮಂದಿಗೆ, ಚಿಂತಕರಿಗೆ, ಧಾರ್ಮಿಕ ಮುಖಂಡರಿಗೆ, 
ಶಿಕ್ಷಣತಜ್ಞರಿಗೆ, ಯೋಜನಾ ಧುರಂಧರರಿಗೆ ಕಾಣುತ್ತಿಲ್ಲ ಏಕೆ? ವಿಶೇಷವಾಗಿ ನಿನ್ನೆ ಮತ್ತು 
ನಾಳೆಗಳನ್ನು ಗ್ರಹಿಸಿ, ಮಥಿಸಿ ಸಮಾಜಕ್ಕೆ ದಾರಿದೀಪವಾಗಬಲ್ಲ (ರವಿ ಕಾಣದ್ದನ್ನೂ ಕಾಣುವ) 
ಕವಿಗಳು, ಸಾಹಿತಿಗಳು ಯಾಕೆ ಇದನ್ನು ಗ್ರಹಿಸುತ್ತಿಲ್ಲ?
ಈ ಪ್ರಶ್ನೆಯನ್ನು ಕೇಳಿದವರು ಭಾರತದ ಪ್ರಖ್ಯಾತ ಇಂಗ್ಲಿಷ್ ಕಾದಂಬರಿಕಾರ ಅಮಿತಾವ್ ಘೋಷ್. ಅವರು 
ಈಚೆಗಷ್ಟೆ ಬರೆದ ‘ದಿ ಗ್ರೇಟ್ ಡಿರೇಂಜ್‌ಮೆಂಟ್- ಕ್ಲೈಮೇಟ್ ಚೇಂಜ್ ಅಂಡ್ ದಿ ಅನ್‌ಥಿಂಕಬಲ್’ 
ಹೆಸರಿನ ಗ್ರಂಥ ಈಗ ಸಾಕಷ್ಟು ಶ್ಲಾಘನೆಗೆ, ಚರ್ಚೆಗೆ ಗ್ರಾಸವಾಗುತ್ತಿದೆ (ಡಿರೇಂಜ್‌ಮೆಂಟ್ ಅಂದರೆ 
ಅಸ್ತವ್ಯಸ್ತ, ಕ್ರಮಭಂಗ, ಅಲ್ಲೋಲಕಲ್ಲೋಲ).
ಈಗ ಕಾಣುತ್ತಿರುವ ವ್ಯಾಪಕ ಹವಾಗುಣ ಬದಲಾವಣೆ ನಮ್ಮ ಭೂಗೋಲ, ಸಂಸ್ಕೃತಿ, ವಾಣಿಜ್ಯಗಳಿಗಷ್ಟೇ 
ಅಲ್ಲ, ಸ್ವಾತಂತ್ರ್ಯದ ಪರಿಕಲ್ಪನೆಗೇ ಸವಾಲು ಹಾಕುತ್ತಿದೆ; ಇಡೀ ಮನುಕುಲವೇ ಹೇಗೆ ಹೊಸದೊಂದು 
ಪ್ರಪಾತದ ಅಂಚಿನಲ್ಲಿ ತೊನೆದಾಡುತ್ತಿದೆ ಎಂಬುದರ ಒಳನೋಟ ಈ ಕೃತಿಯಲ್ಲಿದೆ. ಆಕ್ಸ್‌ಫರ್ಡ್, 
ಅಲೆಕ್ಸಾಂಡ್ರಿಯಾಗಳಲ್ಲಿ ಓದಿದ ಅಮಿತಾವ್ ಘೋಷ್ ತಮ್ಮ ‘ದ ಹಂಗ್ರಿ ಟೈಡ್’, ‘ಫ್ಲಡ್ ಆಫ್ ಫಾಯರ್’, 
‘ರಿವರ್ ಆಫ್ ಸ್ಮೋಕ್’, ‘ದ ಗ್ಲಾಸ್ ಪ್ಯಾಲೇಸ್’ ಮುಂತಾದ ಕಾದಂಬರಿಗಳಿಗೆ ಅನೇಕ ಅಂತರರಾಷ್ಟ್ರೀಯ 
ಪ್ರಶಸ್ತಿಗಳನ್ನು ಗಳಿಸಿದವರು.
ವಿಜ್ಞಾನದ ಸಾಮಾಜಿಕ ಮುಖಗಳನ್ನು ತಮ್ಮ ಕಾದಂಬರಿಗಳಲ್ಲಿ ಸಾಕಷ್ಟು ಅನಾವರಣ ಮಾಡಿದ ಇವರು (ತಮ್ಮ 
‘ಕಲ್ಕತ್ತಾ ಕ್ರೊಮೊಸೋಮ್’ ವೈಜ್ಞಾನಿಕ ಕಾದಂಬರಿಗೆ ಆರ್ಥರ್ ಸಿ.ಕ್ಲಾರ್ಕ್ ಪ್ರಶಸ್ತಿಯನ್ನು 
ಪಡೆದಿದ್ದಾರೆ) ಈಗಿನ ಬಿಸಿಪ್ರಳಯ, ಅದರಿಂದಾಗುತ್ತಿರುವ ಅಂತರರಾಷ್ಟ್ರೀಯ ಬಿಕ್ಕಟ್ಟು, ಪ್ಯಾರಿಸ್ 
ಒಪ್ಪಂದ ಮುಂತಾದ ವಿಷಯಗಳ ಮೇಲೆ ಪ್ರಬುದ್ಧ ಚಿಂತನೆ ಮಾಡುತ್ತಾರೆ.
ಅವರ ‘ಡಿರೇಂಜ್‌ಮೆಂಟ್’ ಕೃತಿ ಹೊರಬಂದ ನಂತರ ಅನೇಕ ಇಂಗ್ಲಿಷ್ ಪತ್ರಿಕೆಗಳಲ್ಲಿ, ಚಾನೆಲ್‌ಗಳಲ್ಲಿ 
ಅವರ ಸಂದರ್ಶನ ನಡೆಯುತ್ತಿದೆ. ಕೆಲವನ್ನು ಯೂಟ್ಯೂಬ್‌ನಲ್ಲ್ಲೂ ನೋಡಬಹುದು. ವಿಜ್ಞಾನ ಮತ್ತು 
ಪರಿಸರ ಕುರಿತ ‘ಡೌನ್ ಟು ಅರ್ಥ್’ ಪಾಕ್ಷಿಕ ಈಚಿನ ಸಂಚಿಕೆಯಲ್ಲಿ ಅವರ ಕೃತಿಯ ಸಾರಾಂಶ ಮತ್ತು 
ಸಂದರ್ಶನವನ್ನು ಆದ್ಯತೆಯ ವಿಷಯವಾಗಿ ಪ್ರಕಟಿಸಿದೆ. ಮುಂದಿನ ಕೆಲವು ಪರಿಚ್ಛೇದಗಳು ಅವರ 
ದೃಷ್ಟಿಕೋನವನ್ನು ಧ್ವನಿಸುತ್ತವೆ:
ಈಗಿನ ಈ ಸಂಕಷ್ಟಗಳಿಗೆ ಮೂಲ ಕಾರಣ ಎನಿಸಿದ ಕಾರ್ಬನ್ ಹಿಂದೆಲ್ಲ ಅಸಲೀ ಸಂಪತ್ತೆನಿಸಿತ್ತು. ಯಾರು 
ಜಾಸ್ತಿ ಕಾರ್ಬನ್ನಿನ (ಅಂದರೆ ಕಲ್ಲಿದ್ದಲು, ಪೆಟ್ರೋಲು) ಯಜಮಾನಿಕೆ ಪಡೆಯುತ್ತಾರೊ ಅವರೇ 
ಶ್ರೀಮಂತರೆನ್ನಿಸಿದರು. ಅಂಥ ದೇಶವೇ ಧನಿಕ ದೇಶವೆನ್ನಿಸಿತ್ತು. ಹಾಗಾಗಿ ಈಗಿನ ಎಲ್ಲ ಸುಧಾರಿತ 
ದೇಶಗಳ ಆರ್ಥಿಕತೆಯೂ ಕಾರ್ಬನ್ನನ್ನೇ ಅವಲಂಬಿಸಿದೆ. ಭೂಮಿ ಬಿಸಿಯಾಗುತ್ತಿದೆ ಎಂಬ ಕಾರಣಕ್ಕೆ 
ಕಾರ್ಬನ್ ಆರ್ಥಿಕತೆಯನ್ನು ಕೊಡವಿ ಹಾಕುವುದು ಸುಲಭವಲ್ಲ.
ಎರಡನೆಯದಾಗಿ, ಆ ಕಾರ್ಬನ್ ಶ್ರೀಮಂತಿಕೆಯನ್ನು ಉಳಿಸಿಕೊಳ್ಳಬೇಕೆಂದರೆ ಹೆಚ್ಚು ಹೆಚ್ಚು ಜನರನ್ನು 
ಭೋಗದಾಸರನ್ನಾಗಿ ಮಾಡಬೇಕು. ‘ಕಡಿಮೆ ಶ್ರಮ, ಹೆಚ್ಚು ಸುಖ’ದ ಆಮಿಷವನ್ನು ಒಡ್ಡುತ್ತ, ಅದಕ್ಕಾಗಿ 
ಅವರೆಲ್ಲ ಕಾರ್ಬನ್ನನ್ನೇ ಅವಲಂಬಿಸುವಂತೆ ಮಾಡಬೇಕು- ಇದು ಹುನ್ನಾರ. ಅದಕ್ಕೆ ಬೇಕಾದ 
ಸ್ವಾತಂತ್ರ್ಯ 

[The entire original message is not included.]

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to